ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ! – Kannada News | Bengaluru Adugodi Death Mystery: Techie Pooja Dutta Was Living in Isolation; Secret Notes Found on Walls
ಆಡುಗೋಡಿಯ ನಿವಾಸ ಹಾಗೂ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನ (Bengaluru) ಆಡುಗೋಡಿಯ ಮನೆಯಲ್ಲಿ ಜಾರ್ಖಂಡ್ ಮೂಲದ ಟೆಕ್ಕಿ ಪೂಜಾ ದತ್ತಾ (Pooja Dutta)(34) ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪೂಜಾ ಅವರ ಮೃತದೇಹ ನಗ್ನ ಹಾಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರಿಗೆ ಹಲವು ಆಘಾತಕಾರಿ ಮತ್ತು ಆಸಕ್ತಿದಾಯಕ ಮಾಹಿತಿಗಳು ಲಭ್ಯವಾಗುತ್ತಿವೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್…