Headlines

nagaraj11081993

ಬೈಕ್ ರೀಲ್ಸ್ ವಿವಾದ: ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್ – Kannada News | Bigg Boss Rajath asks apology after his reel facing backlash

ಬಿಗ್​​ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್​​ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್​ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್​​ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು…

Read More

Biryani and Watermelon: ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಸೇವನೆ ಮಾರಕವೇ? ಮುಂಬೈ ಘಟನೆಯ ಬೆನ್ನಲ್ಲೇ ತಜ್ಞರು ನೀಡಿದ ಎಚ್ಚರಿಕೆ ಇಲ್ಲಿದೆ! – Kannada News | Biryani and Watermelon Death: Expert Debunks Myth, Points to Food Poisoning Risk

ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಸೇವನೆ ಮಾರಕವೇ?Image Credit source: Pinterest ಇತ್ತೀಚೆಗೆ ಮುಂಬೈನಲ್ಲಿ ನಡೆದ ಒಂದು ದುರದೃಷ್ಟಕರ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಬಿರಿಯಾನಿ ಸೇವಿಸಿದ ನಂತರ ಕಲ್ಲಂಗಡಿ ಹಣ್ಣನ್ನು ತಿಂದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಭೀತಿ ಹುಟ್ಟಿಸಿದೆ. ಈ ಘಟನೆಯ ನಂತರ, “ಬಿರಿಯಾನಿ ಮತ್ತು ಕಲ್ಲಂಗಡಿ ಒಟ್ಟಿಗೆ ತಿಂದರೆ ಸಾವು ಸಂಭವಿಸುತ್ತದೆಯೇ?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಈ ಕುರಿತು ವೈದ್ಯಕೀಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ….

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ ನೇಮಕಾತಿ; 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ – Kannada News | RRB ALP Recruitment 2026: 11,127 Assistant Loco Pilot Posts. Apply Now!

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 11,127 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬೆಂಗಳೂರು, ಮುಂಬೈ, ಚೆನ್ನೈ, ಸಿಕಂದರಾಬಾದ್ ಸೇರಿದಂತೆ ದೇಶದ ಪ್ರಮುಖ ರೈಲ್ವೆ ವಲಯಗಳಲ್ಲಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಲಭಿಸಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ…

Read More

‘ಬಾಹುಬಲಿ 2’ ದಾಖಲೆ ಉಡೀಸ್: ಹೊಸ ಇತಿಹಾಸ ಬರೆಯಲು ಸಜ್ಜಾದ ‘ಧುರಂಧರ್ 2’ – Kannada News | Dhurandhar 2 set to surpass Baahubali 2 Box Office Collection record

ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್ ಇತಿಹಾಸದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾ ಮಾಡಿದ ಸಾಧನೆ ಸಣ್ಣದಲ್ಲ. ಕಳೆದ ಒಂಬತ್ತು ವರ್ಷಗಳಿಂದ ಅಲುಗಾಡದಂತೆ ಉಳಿದಿದ್ದ ‘ಬಾಹುಬಲಿ 2’ (Baahubali 2) ಚಿತ್ರದ ಬೃಹತ್ ದಾಖಲೆಯನ್ನು ಮುರಿಯಲು ‘ಧುರಂಧರ್ 2’ ಚಿತ್ರ ಸಜ್ಜಾಗಿದೆ. ರಿಲೀಸ್ ಆದ ದಿನದಿಂದಲೂ ಭರ್ಜರಿ ಕಲೆಕ್ಷನ್ ಮಾಡುತ್ತಾ ಬಂದಿರುವ ಈ ಸಿನಿಮಾ ವಿಶ್ವಾದ್ಯಂತ ಅಬ್ಬರಿಸಿದೆ. ಚಿತ್ರದ ಒಟ್ಟು ಕಲೆಕ್ಷನ್ 1700 ಕೋಟಿ ರೂಪಾಯಿ ಮೀರಿದೆ. ಈ ಮೂಲಕ ರಣವೀರ್ ಸಿಂಗ್ (Ranveer Singh) ಅವರ…

Read More

ಡಾರ್ಕ್ ಸ್ಕಿನ್ ಮತ್ತು ಒಬೆಸಿಟಿ ಇರುವವರಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಂಡು ಬರುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Doctor Advice: Vitamin D Sun Exposure Tips for Dark Skin Types

ಇತ್ತೀಚಿನ ದಿನಗಳಲ್ಲಿ ವಿಟಮಿನ್ ಡಿ (Vitamin D) ಕೊರತೆ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಇಷ್ಟಾದರೂ ಕೂಡ ಈ ಬಗ್ಗೆ ಜನ ಹೆಚ್ಚಾಗಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದರೆ ಸ್ನಾಯು ಮತ್ತು ರೋಗನಿರೋಧಕ ಶಕ್ತಿಗೆ ಅಗತ್ಯವಾದ ಈ ಪೋಷಕಾಂಶ ದೇಹದಲ್ಲಿ ಸರಿಯಾಗಿ ಸಿಗದಿದ್ದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ಮರೆಯಬಾರದು. ಅದರಲ್ಲಿಯೂ ಆರೋಗ್ಯ ತಜ್ಞರು ಹೇಳುವ ಪ್ರಕಾರ, ವಿಟಮಿನ್ ಡಿಯನ್ನು ಎಲ್ಲರೂ ಒಂದೇ ರೀತಿಯಲ್ಲಿ ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾದರೆ…

Read More

ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ: 10ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ – Kannada News | Mini Bus Carrying Garment Workers Overturns in Gauribidanur, Eight Seriously Injured

ಚಿಕ್ಕಬಳ್ಳಾಪುರ, ಏಪ್ರಿಲ್ 28: ಗೌರಿಬಿದನೂರು ತಾಲೂಕಿನ ವೇದಲವೇಣಿ ಸಮೀಪ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ದೊಡ್ಡಬಳ್ಳಾಪುರದ ಗಾರ್ಮೆಂಟ್ಸ್ ಒಂದಕ್ಕೆ ತೆರಳುತ್ತಿದ್ದ ಈ ಮಿನಿಬಸ್ ಚಾಲಕನ ಅಜಾಗರೂಕತೆಯಿಂದಾಗಿ ಏಕಾಏಕಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಿನಿಬಸ್‌ನ ಗಾಜುಗಳು ಒಡೆದುಹೋಗಿದ್ದು, ಬಸ್‌ನಲ್ಲಿ ಸುಮಾರು 20…

Read More

ಬಂಗಾಳದಲ್ಲಿ ವಿವಾದ ಸೃಷ್ಟಿಸಿದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಜಯ್ ಶರ್ಮಾ ಯಾರು? – Kannada News | Who is Uttar Pradesh’s Singham encounter specialist IPS Ajay Sharma why his deployment in Bengal caused stir

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ (West Bengal Elections) ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಜನಪ್ರಿಯವಾಗಿರುವ ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ ಅವರನ್ನು ದಕ್ಷಿಣ 24 ಪರಗಣ ಜಿಲ್ಲೆಯ ಪೊಲೀಸ್ ವೀಕ್ಷಕರಾಗಿ ನಿಯೋಜಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಏಪ್ರಿಲ್ 29ರಂದು ಬಂಗಾಳದಲ್ಲಿ ನಡೆಯಲಿರುವ ಎರಡನೇ ಹಂತದ ಮತದಾನಕ್ಕೂ ಮೊದಲು ಅಜಯ್ ಶರ್ಮಾ ಅವರನ್ನು ನೇಮಿಸಿರುವುದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ…

Read More

ಚೇತನ್ ಅಹಿಂಸ ಭಾರತೀಯನೇ ಅಲ್ಲ: ನಟಿ ಜಯಮಾಲಾ – Kannada News | Film Chamber president Jayamala lashes out on Chethan Ahimsa

ಡಾ ರಾಜ್​ಕುಮಾರ್ (Dr Rajkumar) ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಒಮ್ಮೆ ಕ್ಷಮಾಪಣೆ ಕೇಳಿ ಮತ್ತೆ ಹಳೆ ವರಸೆ ಮುಂದುವರೆಸಿರುವ ಚೇತನ್ ಅಹಿಂಸ ವಿರುದ್ಧ ಹಲವು ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು, ಅಭಿಮಾನಿ ಸಂಘಗಳ ಸದಸ್ಯರು ಫಿಲಂ ಚೇಂಬರ್ ಎದುರು ಪ್ರತಿಭಟನೆ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರಿಗೆ ದೂರು ಸಹ ನೀಡಿದ್ದಾರೆ. ಇದೀಗ ಜಯಾಮಾಲಾ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಾಕಿಸ್ತಾನಕ್ಕೆ ಜಯಕಾರ…

Read More

ನಗರಸಭೆ ಅಧಿಕಾರಿಗಳ ಸುಳ್ಳು ಹೇಳಿಕೆ ಡಿಸಿ ಎದುರೇ ಬಯಲು: ಕಳ್ಳಾಟ ತಿಳಿಯುತ್ತಿದ್ದಂತೆ TV9 ಕ್ಯಾಮರಾಮ್ಯಾನ್ ಮೇಲೆ ಅಧಿಕಾರಿ ದರ್ಪ – Kannada News | DC Office Drama: Chamarajanagar Residents Expose False Water Report; Official Attacks Cameraman

ಚಾಮರಾಜನಗರ, ಏ. 28: ಜಿಲ್ಲಾಧಿಕಾರಿ ಕಚೇರಿಯಲ್ಲೇ ಇಂದು ಭಾರಿ ಹೈಡ್ರಾಮಾ ನಡೆದಿದೆ. ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳು ನೀಡಿದ ಸುಳ್ಳು ಮಾಹಿತಿಯನ್ನು ನಿವಾಸಿಗಳು ಡಿಸಿ ಎದುರೇ ಸಾಕ್ಷಿ ಸಮೇತ ಬಯಲು ಮಾಡಿದ್ದು, ಈ ವೇಳೆ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಚಾಮರಾಜನಗರದ ವಾರ್ಡ್ ನಂ. 26ರ ನಿವಾಸಿಗಳು ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಶ್ರೀರೂಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರಸಭೆ ಆಯುಕ್ತರು…

Read More

ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ: ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ? – Kannada News | Chikkaballapur Newlywed Roopa Found Dead: Husband Suspected in Suspicious Hanging Incident

ಚಿಕ್ಕಬಳ್ಳಾಪುರ, ಏಪ್ರಿಲ್​​ 28: ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ರೂಪಾ (30) ಮೃತ ಯುವತಿಯಾಗಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿ ರೂಪಾ ಮದುವೆಯಾಗಿತ್ತು. ಪತಿಯ ಅನುಮಾನದ ಭೂತಕ್ಕೆ ರೂಪಾ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪತಿ ವಿರುದ್ಧವೇ ಕೊಲೆ ಆರೋಪ ಇನ್ನು ಅನುಮಾನಾಸ್ಪದ ರೀತಿಯಲ್ಲಿ ಮನೆ ಮಗಳ…

Read More