ಸೀಕ್ರೆಟ್ ಮೀಟಿಂಗ್ನಲ್ಲೂ ಮನಬಿಚ್ಚಿ ಮಾತನಾಡದ ಸಿಎಂ ಸಿದ್ದರಾಮಯ್ಯ! ಆತಂಕಕ್ಕೆ ಒಳಗಾದ್ರಾ ಅಹಿಂದ ಸಚಿವರು? – Kannada News | Karnataka Congress Crisis: Siddaramaiah’s Silence Worries AHINDA Ministers; Satish Jarkiholi, Mahadevappa Rush to Delhi
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ Image Credit source: tv9 ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್ನಲ್ಲಿ (Congress) ನಾಯಕತ್ವ ಬದಲಾವಣೆಯ (Leadership Change) ಕೂಗು ಮತ್ತೆ ಜೋರಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, ಈ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನ ಈಗ ಅಹಿಂದ ಸಚಿವರ ನಿದ್ದೆಗೆಡಿಸಿದೆ. ಸತತ ಸಭೆಗಳ ನಂತರವೂ ಸಿಎಂ ಯಾವುದೇ ಸ್ಪಷ್ಟನೆ ನೀಡಿಲ್ಲ. ಅಲ್ಲದೆ, ಸಿಎಂ ಬಣದ ಸಚಿವರ ರಹಸ್ಯ ಸಭೆಯಲ್ಲಿ ಕೂಡ…