Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ – Kannada News | A man leaving Bengaluru for Gurgaon after 20 years explained the reason
ಉದ್ಯೋಗಕ್ಕಾಗಿ ಅನೇಕರು ದೂರದ ಊರು, ರಾಜ್ಯದಿಂದ ಬೆಂಗಳೂರಿಗೆ ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಇಲ್ಲೇ ನೆಲೆಸುತ್ತಾರೆ. ಇನ್ನು ಕೆಲವರು ಅನಿವಾರ್ಯ ಕಾರಣಕ್ಕಾಗಿ ಮಾಯನಗರಿ ಬಿಟ್ಟು ತಮ್ಮ ಊರಿಗೆ ತೆರಳುವುದಿದೆ. ಇದೀಗ ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ನೆಲೆಸಿರುವ ವ್ಯಕ್ತಿಯೊಬ್ಬರು ಗುರಗಾಂವ್‌ಗೆ (Gurgaon) ಹೋಗುವ ನಿರ್ಧಾರ ಮಾಡಿದ್ದಾರೆ. ತನ್ನ ತಂದೆ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ಈ ರೆಡ್ಡಿಟ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೆಡ್ಡಿಟ್ ಪೋಸ್ಟ್‌ನಲ್ಲಿ, ಬೆಂಗಳೂರಿನಿಂದ…