All posts by nagaraj11081993

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ಗದಗ, ಮಾರ್ಚ್​ 30: ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Ajinkya Rahane: ಜಸ್ಟ್ 37 ಅಷ್ಟೇ… ನಾನು ಇನ್ನೂ ಸಹ ಯಂಗ್..!

ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆರ್ ತಂಡವು 20 ಓವರ್​ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಪರಿಣಾಮ ಮೊದಲ ಮ್ಯಾಚ್​ನಲ್ಲಿ ಬೃಹತ್ ಮೊತ್ತ ಪೇರಿಸಿದರೂ ಕೆಕೆಆರ್ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ, ನಾವು  220-225 ರನ್​ಗಳ ಗುರಿ ಉತ್ತಮ ಮೊತ್ತ ಎಂದು ನಾನು ಭಾವಿಸಿದ್ದೆವು. ಅದರಂತೆ ನಾವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆವು. ಆದರೆ ಅನಾನುಭವಿ ಬೌಲಿಂಗ್ ದಾಳಿಯಿಂದಾಗಿ ಸೋಲಬೇಕಾಯಿತು.

ಮುಂಬೈ ಇಂಡಿಯನ್ಸ್ ಎಂಬುದು ಬಲಿಷ್ಠ ಬ್ಯಾಟಿಂಗ್ ತಂಡ. ಅವರ ವಿರುದ್ಧ ಆಡುವುದೇ ಕಲಿಕೆಯ ವಿಷಯ. ಏಕೆಂದರೆ ನಮ್ಮ ತಂಡದಲ್ಲಿದದ್ದು ಅನಾನುಭವಿ ಬೌಲರ್​ಗಳು. ವೈಭವ್ ಅರೋರ, ಕಾರ್ತಿಕ್ ತ್ಯಾಗಿ, ಐಪಿಎಲ್‌ಗೆ ಹೊಸಬರಾದ ಬ್ಲೆಸಿಂಗ್ ಮುಝರಬಾನಿ ಎಲ್ಲರೂ ದೊಡ್ಡ ಅನುಭವ ಹೊಂದಿಲ್ಲ.

ಇದರ ಸಂಪೂರ್ಣ ಲಾಭ ಪಡೆದಿರುವ ಮುಂಬೈ ಇಂಡಿಯನ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ಇದರಿಂದಾಗಿ ನಮ್ಮ ಬೌಲರ್‌ಗಳು ಖಂಡಿತವಾಗಿಯೂ ಕಲಿಯುತ್ತಾರೆ. ಈ ಕಲಿಕೆಯೊಂದಿಗೆ ಮುಂದಿನ ಪಂದ್ಯದಲ್ಲಿ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವ ವಿಶ್ವಾಸವಿದೆ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.

ಮೊದಲ ಪಂದ್ಯದಲ್ಲಿ ಚೆನ್ನಾಗಿ ಬ್ಯಾಟಿಂಗ್ ಮಾಡಿರುವುದು ಸಕಾರಾತ್ಮಕ ವಿಷಯ. ಚೆಂಡಿನೊಂದಿಗೆ ಆ ಸಮತೋಲನವನ್ನು ಕಂಡುಕೊಳ್ಳಬೇಕಿದೆ. ಇಲ್ಲಿ ಕ್ಯಾಮರೋನ್ ಗ್ರೀನ್ ಫಿಟ್​ನೆಸ್ ಸಮಸ್ಯೆಯ ಕಾರಣ ಮೊದಲ ಮ್ಯಾಚ್​ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದಾಗ್ಯೂ ಮುಂದಿನ ಮ್ಯಾಚ್​ಗಳಲ್ಲಿ ನಮ್ಮ ಬೌಲರ್​ಗಳಿಂದ ಉತ್ತಮ ಪ್ರದರ್ಶನವನ್ನು ಮೂಡಿಬರಲಿದೆ ಎಂಬ ವಿಶ್ವಾಸವಿದೆ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ 40 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್​ಗಳೊಂದಿಗೆ ಅಜಿಂಕ್ಯ ರಹಾನೆ 67 ರನ್ ಬಾರಿಸಿದ್ದರು. ಈ ಬಗ್ಗೆ ಕೇಳಿದಾಗ, ನಾನು ಇನ್ನೂ ಸಹ ಯಂಗ್ ಆಟಗಾರ. ನನಗೆ ಜಸ್ಟ್ 37 ವರ್ಷವಷ್ಟೇ ಆಗಿದೆ ಎಂದು ನಕ್ಕರು.

ಇದೇ ವೇಳೆ ಸ್ನಾಯು ಸೆಳೆತದ ಕಾರಣ ಮೈದಾನದಿಂದ ಹೊರಗುಳಿದ ಬಗ್ಗೆ ಮಾತನಾಡಿದ ರಹಾನೆ, ಇದೀಗ ಸರಿಯಾಗಿದೆ. ಸ್ನಾಯು ಸೆಳೆತವಿದ್ದ ಕಾರಣ ಫೀಲ್ಡಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಯಾವುದೇ ಸಮಸ್ಯೆಯಿಲ್ಲ. ಈ ಮೂಲಕ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದೇನೆ ಎಂಬುದನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: IPL 2026: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

ಇತ್ತ ಅಜಿಂಕ್ಯ ರಹಾನೆ ಅರ್ಧದಲ್ಲೇ ಮೈದಾನ ತೊರೆದಿದ್ದರಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಉಪನಾಯಕ ರಿಂಕು ಸಿಂಗ್ ಮುನ್ನಡೆಸಿದ್ದರು. ಆದರೆ ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳ ಅಬ್ಬರದಿಂದಾಗಿ ರಿಂಕು ಪ್ಲ್ಯಾನಿಂಗ್​ಗಳು ತಲೆಕೆಳಗಾಗಿದ್ದವು.

 

Source link

ಹೋಟೆಲ್ ಬಿಲ್‌ನಲ್ಲಿ ಗ್ಯಾಸ್ ಶುಲ್ಕ, ಎಲ್‌ಪಿಜಿ ಫೀಸ್ ಹಾಕುವಂತಿಲ್ಲ: ಬೆಂಗಳೂರಿನ ಹೋಟೆಲ್‌ಗಳಿಗೆ ಸಿಸಿಪಿಎ ಖಡಕ್​ ಸೂಚನೆ!

ಬೆಂಗಳೂರು, ಮಾ.30: ಬೆಂಗಳೂರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಇತ್ತೀಚೆಗೆ ಗ್ರಾಹಕರಿಗೆ ವಿಧಿಸಲಾಗುತ್ತಿದ್ದ ‘ಎಲ್‌ಪಿಜಿ ಫೀಸ್’ ಅಥವಾ ‘ಫ್ಯೂಯಲ್ ಸರ್‌ಚಾರ್ಜ್’ (ಇಂಧನ ಚೇತರಿಕೆ ಶುಲ್ಕ) ಗಳಿಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಬ್ರೇಕ್ ಹಾಕಿದೆ. ಅಡುಗೆ ಅನಿಲದ ಬಿಕ್ಕಟ್ಟಿನ ನೆಪವೊಡ್ಡಿ ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಬೆಂಗಳೂರಿನ ಹಲವು ಹೋಟೆಲ್‌ಗಳು ಮೆನು ಬೆಲೆ ಮತ್ತು ತೆರಿಗೆಗಳ ಹೊರತಾಗಿ, ‘ಎಲ್‌ಪಿಜಿ ಚಾರ್ಜ್’ ಹೆಸರಿನಲ್ಲಿ ಪ್ರತ್ಯೇಕ ಶುಲ್ಕವನ್ನು ಬಿಲ್‌ನಲ್ಲಿ ಸೇರಿಸುತ್ತಿದ್ದವು. ಈ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಸಿಸಿಪಿಎ, “ಗ್ಯಾಸ್, ಇಂಧನ ಅಥವಾ ವಿದ್ಯುತ್ ವೆಚ್ಚಗಳು ವ್ಯವಹಾರದ ಕಾರ್ಯಾಚರಣೆಯ ಭಾಗವಾಗಿವೆ. ಇವುಗಳನ್ನು ಬಿಲ್‌ನಲ್ಲಿ ಪ್ರತ್ಯೇಕವಾಗಿ ತೋರಿಸಿ ಗ್ರಾಹಕರಿಂದ ವಸೂಲಿ ಮಾಡುವುದು ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಅಡಿಯಲ್ಲಿ ‘ಅನ್ಯಾಯದ ವ್ಯಾಪಾರ ಪದ್ಧತಿ’ ಎಂದು ಪರಿಗಣಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಹೋಟೆಲ್‌ಗಳ ಸಂಘದ ಜಿ.ಕೆ. ಶೆಟ್ಟಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಬಿಲ್‌ನಲ್ಲಿ ಪ್ರತ್ಯೇಕವಾಗಿ ಎಲ್‌ಪಿಜಿ ಶುಲ್ಕ ವಿಧಿಸುವುದು ಕಾನೂನುಬಾಹಿರ. ಈ ಬಗ್ಗೆ ನಮ್ಮ ಸದಸ್ಯ ಹೋಟೆಲ್‌ಗಳಿಗೆ ಸುತ್ತೋಲೆ ಕಳುಹಿಸುತ್ತೇವೆ. ಅಡುಗೆ ಅನಿಲದ ದರ ಹೆಚ್ಚಳದಿಂದ ನಷ್ಟವಾಗುತ್ತಿದ್ದರೆ, ಹೋಟೆಲ್‌ಗಳು ಮೆನು ಬೆಲೆಯನ್ನು ಶೇ. 5 ರಿಂದ 10 ರಷ್ಟು ಹೆಚ್ಚಿಸಲು ಆಲೋಚಿಸಬಹುದು, ಆದರೆ ಪ್ರತ್ಯೇಕವಾಗಿ ಶುಲ್ಕ ವಿಧಿಸುವುದನ್ನು ನಾವು ಬೆಂಬಲಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು

ಕಾಮತ್ ಹೋಟೆಲ್ಸ್‌ನ ವೀರೇಂದ್ರ ಕಾಮತ್ ಅವರು ಎಲ್‌ಪಿಜಿ ಬಿಕ್ಕಟ್ಟಿನ ತೀವ್ರತೆಯನ್ನು ವಿವರಿಸುತ್ತಾ, “ನಮಗೆ ದಿನಕ್ಕೆ ಐದು ಸಿಲಿಂಡರ್ ಬೇಕಿದ್ದರೆ ಈಗ ಕೇವಲ ಎರಡು ಮಾತ್ರ ಸಿಗುತ್ತಿದೆ. ಇದರಿಂದಾಗಿ ಗ್ಯಾಸ್ ಹೆಚ್ಚು ಬಳಸುವ ದೋಸೆಯಂತಹ ತಿಂಡಿಗಳನ್ನು ದಿನವಿಡೀ ನೀಡಲು ಸಾಧ್ಯವಾಗುತ್ತಿಲ್ಲ. ಅವುಗಳನ್ನು ಕೇವಲ ಬೆಳಿಗ್ಗೆ ಮತ್ತು ಸಂಜೆ ಅವಧಿಗೆ ಸೀಮಿತಗೊಳಿಸಿದ್ದೇವೆ. ನಷ್ಟ ಸರಿದೂಗಿಸಲು ಶೇ. 10 ರಷ್ಟು ಬೆಲೆ ಏರಿಕೆ ಅನಿವಾರ್ಯವಾಗಬಹುದು” ಎಂದಿದ್ದಾರೆ. ಸಣ್ಣ ಹೋಟೆಲ್ ಮಾಲೀಕರು ಈ ನಿಯಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, “ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕ ವಿಧಿಸಿದಾಗ ಪ್ರಶ್ನಿಸದವರು, ನಮ್ಮನ್ನೇ ಏಕೆ ಗುರಿ ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಶಕ್ತಿ ಯೋಜನೆಯಿಂದ ಶಕ್ತಿ ಕಳೆದುಕೊಂಡ ಬಿಎಂಟಿಸಿ! ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿ

ಬೆಂಗಳೂರು, ಮಾರ್ಚ್​ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಶಕ್ತಿ ಯೋಜನೆಯ ಪರಿಣಾಮವಾಗಿ ಗಂಭೀರ ಆರ್ಥಿಕ ಒತ್ತಡವನ್ನು ಎದುರಿಸುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಈ ಯೋಜನೆಗಾಗಿ ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿಯಾಗಿದ್ದು, ವಿಧಾನ ಪರಿಷತ್ತಿನಲ್ಲಿ ಎಂಎಲ್ಸಿ ಹೆಚ್.ಎಸ್ ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ಮಾಹಿತಿ ಬಹಿರಂಗವಾಗಿದೆ.

ಶಕ್ತಿ ಯೋಜನೆ ಆರಂಭವಾದ ನಂತರದಿಂದ ಫೆಬ್ರವರಿ 2026ರವರೆಗೆ ರಾಜ್ಯದಾದ್ಯಂತ ಮಹಿಳೆಯರು ಒಟ್ಟು 680.87 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪ್ರಯಾಣಗಳನ್ನು ಮಾಡಿದ್ದಾರೆ. ಇದರಲ್ಲೂ BMTC ಪಾಲು 217.62 ಕೋಟಿ ರೂಪಾಯಿಯಷ್ಟಿದೆ. ವರ್ಷದಿಂದ ವರ್ಷಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಯೋಜನೆಯ ವೆಚ್ಚವೂ ಏರಿಕೆಯಾಗುತ್ತಿದೆ. ಆದರೆ ಸರ್ಕಾರದಿಂದ ಆಗುತ್ತಿರುವ ಪರಿಹಾರ ಮೊತ್ತವು ಅದರ ಅನುಪಾತದಲ್ಲಿ ಹೆಚ್ಚಳ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಯೋಜನೆಗಾಗಿ ಸರ್ಕಾರದಿಂದ 3,097.27 ಕೋಟಿ ರೂ. ಸಂದಾಯವಾಗಬೇಕಿತ್ತು. ಆದರೆ ಸಧ್ಯಕ್ಕೆ ಕೇವಲ 2,247.35 ಕೋಟಿ ರೂ. ಮಾತ್ರ ಪರಿಹಾರವಾಗಿ ಲಭ್ಯವಾಗಿದ್ದು, ಸುಮಾರು 850 ಕೋಟಿ ರೂ. ಕೊರತೆ ಉಂಟಾಗಿದೆ ಎಂದು ತಿಳಿದುಬಂದಿದೆ.

ನಿರ್ವಹಣಾ ವೆಚ್ಚ ಹೆಚ್ಚಾಗಿ ಪೇಚಾಟ

ಅದಲ್ಲದೆ ಶಕ್ತಿ ಯೋಜನೆ ಜಾರಿಗೂ ಮೊದಲೇ ಬಿಎಂಟಿಸಿ 1,383.86 ಕೋಟಿ ರೂಪಾಯಿಯಷ್ಟು ಕೊರತೆಯಿತ್ತು ಎಂಬುದು ತಿಳಿದುಬಂದಿದೆ. ಇಂಧನ ಕಂಪನಿಗಳಿಗೆ ಬಾಕಿ ಪಾವತಿಗಳು, ಭವಿಷ್ಯ ನಿಧಿ (PF) ಬಾಧ್ಯತೆಗಳು ಮತ್ತು ಪೂರೈಕೆದಾರರಿಗೆ ಕೊಡಬೇಕಾದ ಹಣಗಳು ಸಂಸ್ಥೆಯ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಕಠಿಣಗೊಳಿಸಿವೆ. ನಂತರದ ಅವಧಿಯಲ್ಲಿ ಡೀಸೆಲ್ ಬೆಲೆ ಏರಿಕೆ, ಸಿಬ್ಬಂದಿ ವೇತನ ಪರಿಷ್ಕರಣೆ ಹಾಗೂ ನಿರ್ವಹಣಾ ವೆಚ್ಚಗಳ ಹೆಚ್ಚಳದಿಂದ ಭಾರ ಇನ್ನಷ್ಟು ಹೆಚ್ಚಾಗಿದೆ ಎನ್ನಲಾಗಿದೆ.

ಈ ಸವಾಲುಗಳನ್ನು ಮನಗಂಡ ರಾಜ್ಯ ಸರ್ಕಾರವು ಪ್ರತಿ ತಿಂಗಳೂ ಶಕ್ತಿ ಯೋಜನೆಯಡಿ ಮುಂಗಡ ಹಣ ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದೆ. 2026ರ ಮಾರ್ಚ್ ತನಕ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಬಿಎಂಟಿಸಿ ಆರ್ಥಿಕ ಸ್ಥಿತಿಯನ್ನು ಸ್ಥಿರಗೊಳಿಸಲು ಸರ್ಕಾರವು 589.20 ಕೋಟಿ ರೂ. ಸಾಲವನ್ನು ಪಡೆಯಲು ಅನುಮತಿ ನೀಡಿದ್ದು, ಅದರ ಮರುಪಾವತಿಗೆ ಬಜೆಟ್ ಸಹಾಯವನ್ನು ಒದಗಿಸುತ್ತಿದೆ.

ಇದನ್ನೂ ಓದಿ ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!

ಹೆಚ್ಚುವರಿ ಬಸ್ಸುಗಳ ಖರೀದಿ

ಅಲ್ಲದೆ ಸಾರಿಗೆ ವ್ಯವಸ್ಥೆಯನ್ನು ವಿಸ್ತರಿಸುವ ಮತ್ತು ಆಧುನೀಕರಿಸುವ ಪ್ರಯತ್ನಗಳೂ ನಡೆಯುತ್ತಿವೆ. ಡೀಸೆಲ್ ಹಾಗೂ ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಪಿಎಂ ಇ-ಡ್ರೈವ್ ಸ್ಕೀಮ್ ಯೋಜನೆಯಡಿ 4,500 ಎಲೆಕ್ಟ್ರಿಕ್ ಬಸ್ಸುಗಳ ಖರೀದಿಗೆ ಅನುಮೋದನೆ ನೀಡಲಾಗಿದೆ. ಜೊತೆಗೆ 2026–27ರ ಬಜೆಟ್‌ನಲ್ಲಿ ಹೆಚ್ಚುವರಿ 1,000 ಡೀಸೆಲ್ ಬಸ್ಸುಗಳ ಖರೀದಿ ಘೋಷಿಸಲಾಗಿದೆ.

ಒಟ್ಟಾರೆ, ಶಕ್ತಿ ಯೋಜನೆ ಮಹಿಳೆಯರ ಸಾರ್ವಜನಿಕ ಸಾರಿಗೆ ಬಳಕೆಯನ್ನು ಗಣನೀಯವಾಗಿ ಹೆಚ್ಚಿಸಿದರೂ, ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿರತೆ ಬಗ್ಗೆ ಆತಂಕಗಳು ಹೆಚ್ಚುತ್ತಿವೆ. ಪ್ರಯಾಣಿಕರ ಸಂಖ್ಯೆಯ ಏರಿಕೆ ಮತ್ತು ಕಾರ್ಯಾಚರಣಾ ವೆಚ್ಚಗಳ ಹೆಚ್ಚಳ ನಡುವೆಯೂ ಸಮರ್ಪಕ ಪರಿಹಾರ ದೊರೆಯದಿದ್ದರೆ, ಮುಂದಿನ ದಿನಗಳಲ್ಲಿ ಸಂಸ್ಥೆಯ ಆರ್ಥಿಕ ಸ್ಥಿತಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೇಲೂರು: ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಮಾಡಿದ್ದೇನು ನೋಡಿ!

ಹಾಸನ, ಮಾರ್ಚ್ 30: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಗ್ರಾಮಕ್ಕೆ ನುಗ್ಗಿದ ‘ಪೆನ್ಸಿಲ್ ಕೋರೆ’ ಹೆಸರಿನ ದೈತ್ಯ ಒಂಟಿಸಲಗ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ ಸಿಡಿಸಿದಾಗ ರೊಚ್ಚಿಗೆದ್ದ ಸಲಗ, ಮನೆಯ ಮುಂದಿದ್ದ ಆಟೋ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೃಷಿಕರು ಭಯಪಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್

ಕನ್ನಡ, ಹಿಂದಿ ಸೇರಿದಂತೆ ಭಾರತದ ಬಹುತೇಕ ಚಿತ್ರರಂಗದವರು ವಿದೇಶದಲ್ಲಿ ಶೂಟ್ ಮಾಡುತ್ತಾರೆ. ಅದರಲ್ಲೂ ಬಾಲಿವುಡ್​​ನವರು ವಿದೇಶಿ ಲೊಕೇಶನ್​​ಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಈಗ ಅಚ್ಚರಿ ಎಂಬಂತೆ ರಷ್ಯಾದ ಚಿತ್ರವೊಂದು ಭಾರತದ ಬೀದಿಗಳಲ್ಲಿ ಶೂಟ್ ಆಗಿದೆ. ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಸಂಪೂರ್ಣವಾಗಿ ಭಾರತದ ಸಿನಿಮಾಗಳಿಂದ ಪ್ರೇರಿತವಾಗಿದೆ.

ಭಾರತ ಹಾಗೂ ರಷ್ಯಾ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ‘ಪರ್ಸಿಮನ್ ಆಫ್ ಲವ್’ ಎಂಬುದು ಚಿತ್ರದ ಹೆಸರು. ಪರ್ಸಿಮನ್ ಎಂದರೆ ಆರೆಂಜ್ ರೀತಿಯಲ್ಲೇ ಇರುವ ಒಂದುಹಣ್ಣು. ಭಾರತ ಹಾಗೂ ರಷ್ಯಾ ಒಟ್ಟಾಗಿ ನಿರ್ಮಿಸಿರುವ ಮೊದಲ ಸಿನಿಮಾ ಇದಾಗಿದೆ. ಈ ಸಿನಿಮಾ ಟ್ರೇಲರ್ ಮೂಲಕ ಗಮನ ಸೆಳೆದಿದೆ.

ಮಾರಿಯಸ್ ವೈಸ್‌ಬರ್ಗ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಾಲಿವುಡ್ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ಕಾಮಿಡಿ ಕ್ಲಬ್ ತಾರೆಯರಾದ ಡೆಮಿಸ್ ಕರಿಬಿಡಿಸ್ ಮತ್ತು ಮಿಖಾಯಿಲ್ ಗಲುಸ್ಟಿಯನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಅಡಿಲಾ ರಾಗಿಮೋವಾ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: 11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?

ಒಬ್ಬರು ಪೊಲೀಸ್ ಅಧಿಕಾರಿ ಆದರೆ, ಇನ್ನೊಬ್ಬರು ಅಪರಾಧಿ. ಅವರ ಪೈಪೋಟಿಯು ದೀರ್ಘಕಾಲದಿಂದ ಸಮಾಧಿಯಾಗಿ ಉಳಿದಿರುವ ಸತ್ಯದ ಆವಿಷ್ಕಾರಕ್ಕೆ ಕಾರಣವಾಗುತ್ತದೆ. ಬಾಲ್ಯದಲ್ಲಿ ಬೇರ್ಪಟ್ಟ ಒಡಹುಟ್ಟಿದವರು ಎಂಬ ವಿಷಯ ನಂತರ ಹೊರ ಬರುತ್ತದೆ.

ಇದು ಭಾರತದಲ್ಲಿ ಶೈಟ್ ಆಗಿರುವುದರಿಂದ ಭಾರತದ ಪ್ರಮುಖ ನಗರಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಹಿಂದಿಗೆ ಡಬ್ ಮಾಡುವ ಪ್ಲ್ಯಾನ್ ಕೂಡ ಇದೆಯೇ ಎಂಬುದು ಸದ್ಯದ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rates: ಚಿನ್ನದ ಬೆಲೆ ಗ್ರಾಮ್​ಗೆ 75 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 30: ಕಳೆದ ವಾರ ನಾಲ್ಕು ದಿನ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ ಕಡಿಮೆಗೊಂಡಿದೆ. ಹತ್ತು ಗ್ರಾಮ್ ಚಿನ್ನದ ಬೆಲೆಯಲ್ಲಿ 750 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಇನ್ನು, ಬೆಳ್ಳಿ ಬೆಲೆಯೂ ಯಥಾಸ್ಥಿತಿ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,47,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 30ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,728 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,500 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,046 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,728 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,500 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,500 ರೂ
  • ಚೆನ್ನೈ: 13,600 ರೂ
  • ಮುಂಬೈ: 13,500 ರೂ
  • ದೆಹಲಿ: 13,515 ರೂ
  • ಕೋಲ್ಕತಾ: 13,500 ರೂ
  • ಕೇರಳ: 13,500 ರೂ
  • ಅಹ್ಮದಾಬಾದ್: 13,505 ರೂ
  • ಜೈಪುರ್: 13,515 ರೂ
  • ಲಕ್ನೋ: 13,515 ರೂ
  • ಭುವನೇಶ್ವರ್: 13,500 ರೂ

ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 555 ರಿಂಗಿಟ್ (12,956 ರುಪಾಯಿ)
  • ದುಬೈ: 501.25 ಡಿರಾಮ್ (12,814 ರುಪಾಯಿ)
  • ಅಮೆರಿಕ: 140.50 ಡಾಲರ್ (13,184 ರುಪಾಯಿ)
  • ಸಿಂಗಾಪುರ: 181 ಸಿಂಗಾಪುರ್ ಡಾಲರ್ (13,191 ರುಪಾಯಿ)
  • ಕತಾರ್: 499 ಕತಾರಿ ರಿಯಾಲ್ (12,843 ರೂ)
  • ಸೌದಿ ಅರೇಬಿಯಾ: 510 ಸೌದಿ ರಿಯಾಲ್ (12,754 ರುಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (12,955 ರುಪಾಯಿ)
  • ಕುವೇತ್: 41.23 ಕುವೇತಿ ದಿನಾರ್ (12,608 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

Source link

Video: ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ: ರಾಹುಲ್ ಗಾಂಧಿ

ಅಹಮದಾಬಾದ್, ಮಾರ್ಚ್​ 30: ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದು ಬಿಜೆಪಿ ಗುರಿಯಾಗಿಸಿಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಸ್ತುತ ಆಡಳಿತದಲ್ಲಿ ಈ ಸಮುದಾಯಗಳ ವಿರುದ್ಧ ತಾರತಮ್ಯ ಹೆಚ್ಚುತ್ತಿದೆ ಎಂದು ಭಾನುವಾರ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇಂದಿಗೂ ಸಹ, ದಲಿತರು ಮತ್ತು ಆದಿವಾಸಿಗಳನ್ನು ಕ್ರೂರವಾಗಿ ಥಳಿಸಲಾಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಬೇಕು, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು ಮತ್ತು ಸಿಇಒ ಆಗಬೇಕು ಎಂದು ನಾವು ಬಯಸುತ್ತೇವೆ. ಇದು ನಮ್ಮ ಹೋರಾಟ ಎಂದರು.

ಒಬ್ಬ ವ್ಯಕ್ತಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಅವರ ದೇಹದಾದ್ಯಂತ 19 ಮುರಿತಗಳು ಸಂಭವಿಸಿವೆ. ತಮ್ಮ ಹಕ್ಕುಗಳ ರಕ್ಷಣೆಗಾಗಿ ಧ್ವನಿ ಎತ್ತುವವರು ಹೆಚ್ಚಾಗಿ ಭಾರೀ ಬೆಲೆ ತೆರಬೇಕಾಗುತ್ತಿದೆ ಎಂದು ದೂರಿದರು. ಇವರ ಹೇಳಿಕೆಗೆ ನೆಟ್ಟಿಗರು ಸರಿಯಾಗಿ ಉತ್ತರ ನೀಡಿದ್ದಾರೆ. ಅಧಿಕಾರದಲ್ಲಿದ್ದರು, ಬುಡಕಟ್ಟು ಜನಾಂಗದವರಿಗೆ ಎಷ್ಟು ಪ್ರಾತಿನಿಧ್ಯ ನೀಡಿದ್ದರು? ಅವರ ಪ್ರದೇಶಗಳಲ್ಲಿ ನಕ್ಸಲಿಸಂ ಏಕೆ ಹೆಚ್ಚಾಯಿತು ಎಂದು ಪ್ರಶ್ನಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು

ಬೆಂಗಳೂರು, ಮಾ,30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಭಾರಿ ಶಾಕ್ ಎದುರಾಗಿದೆ. ಪಂದ್ಯದ ಸಂಭ್ರಮದಲ್ಲಿದ್ದ ಪ್ರೇಕ್ಷಕರ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಕಳ್ಳರ ತಂಡವೊಂದು ದೊಡ್ಡ ಮಟ್ಟದ ಕಳ್ಳತನ ಎಸಗಿದೆ. ಈ ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಅಂದರೆ ಎಕ್ಸ್​​​ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕ್ರೀಡಾಂಗಣದ P3 ಸ್ಟ್ಯಾಂಡ್ ಒಂದರಲ್ಲೇ ಸುಮಾರು 50 ರಿಂದ 60 ಮೊಬೈಲ್ ಫೋನ್‌ಗಳು ಕಳ್ಳತನವಾಗಿವೆ ಎಂದು ವರದಿಯಾಗಿದೆ. ಸಂತ್ರಸ್ತ ಮಹಿಳೆಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದು, “ಪಂದ್ಯದ ಮೊದಲ ಇನ್ನಿಂಗ್ಸ್ ವೇಳೆ ನನ್ನ ಪತಿ ನೀರು ತರಲು ಹೋದಾಗ ಅವರ ಫೋನ್ ಕಳುವಾಗಿದೆ. ನಮ್ಮಂತೆ ಹತ್ತಾರು ಜನರು ಅದೇ ಸಮಯದಲ್ಲಿ ತಮ್ಮ ಫೋನ್ ಕಳೆದುಕೊಂಡು ಕಂಗಾಲಾಗಿದ್ದರು” ಎಂದು ತಿಳಿಸಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಈ ಬಗ್ಗೆ ಕ್ರೀಡಾಂಗಣದಲ್ಲಿದ್ದ ಪೊಲೀಸರಿಗೆ ದೂರು ನೀಡಿದರೂ ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ನಂತರ ಪೊಲೀಸ್ ಠಾಣೆಗೆ ತೆರಳಿದಾಗ ಅಲ್ಲಿ ನೂರಾರು ಜನರು ಇದೇ ರೀತಿಯ ದೂರು ನೀಡಲು ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 10 ರಿಂದ 12 ಅಪ್ರಾಪ್ತ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಮಕ್ಕಳು ತಂಡದ ಜರ್ಸಿ ಧರಿಸಿ, ಕಾಂಪ್ಲಿಮೆಂಟರಿ ಟಿಕೆಟ್ ಹಿಡಿದು ಓಡಾಡುತ್ತಿದ್ದರು, ಇದು ದೊಡ್ಡ ಮಟ್ಟದ ಸಂಘಟಿತ ಜಾಲವಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB

ಎರಡನೇ ಇನ್ನಿಂಗ್ಸ್ ಆರಂಭವಾದಾಗ ಪ್ರೇಕ್ಷಕರು ಆಹಾರ ಮತ್ತು ಪಾನೀಯಕ್ಕಾಗಿ ಸೀಟು ಬಿಟ್ಟು ಎದ್ದ ಸಂದರ್ಭವನ್ನು ಕಳ್ಳರು ಸರಿಯಾಗಿ ಬಳಸಿಕೊಂಡಿದ್ದಾರೆ. ಇಷ್ಟು ದೊಡ್ಡ ಮಟ್ಟದ ಭದ್ರತೆ ಇರುವ ಸ್ಟೇಡಿಯಂನಲ್ಲಿ ಇಂತಹ ಘಟನೆ ನಡೆದಿರುವುದು ಬೆಂಗಳೂರು ಪೊಲೀಸರ ಮತ್ತು ಕ್ರೀಡಾಂಗಣದ ಭದ್ರತಾ ವ್ಯವಸ್ಥೆಯ ಲೋಪವನ್ನು ಎತ್ತಿ ತೋರಿಸುತ್ತಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Source link