ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ!
ಬೆಂಗಳೂರು, ಏಪ್ರಿಲ್ 17: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಕಲಬುರ್ಗಿ, ಉಡುಪಿಯಲ್ಲಿ ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 140ಕ್ಕೆ ತಲುಪಿದೆ. ಕಲಬುರ್ಗಿ ಮತ್ತು ಉಡುಪಿಯ AQI 150 ದಾಟಿದ್ದು, ಆತಂಕ ಸೃಷ್ಟಿಸಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು – 140
- ಮಂಗಳೂರು-120
- ಮೈಸೂರು –126
- ಬೆಳಗಾವಿ – 56
- ಕಲಬುರ್ಗಿ-151
- ಶಿವಮೊಗ್ಗ –120
- ಬಳ್ಳಾರಿ – 102
- ಹುಬ್ಬಳ್ಳಿ- 126
- ಉಡುಪಿ –130
- ವಿಜಯಪುರ –93
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ