Headlines

Bengaluru Air Quality: ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru’s Air quality is getting worse day by day

ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ

ಬೆಂಗಳೂರು, ಜನವರಿ 20: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality)  ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ನಿನ್ನೆಗಿಂತ ಸುಧಾರಿಸಿದ AQI

ಬೆಂಗಳೂರಿನ ಗಾಳಿಯ ಗುಣಮಟ್ಟ 156 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ನಗರದಲ್ಲಿ PM2.5 ಮಟ್ಟ 67 ಹಾಗೂ PM10 ಮಟ್ಟ 87ಕ್ಕೆ ಏರಿಕೆಯಾಗಿದೆ. ಈ ಎರಡೂ ಪ್ರಮಾಣಗಳು ಸುರಕ್ಷಿತ ಮಿತಿಯನ್ನು ಮೀರಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಟ್ಟದಲ್ಲಿವೆ. ವಿಶೇಷವಾಗಿ PM2.5 ಸೂಕ್ಷ್ಮ ಕಣಗಳು ಶ್ವಾಸಕೋಶದ ಆಳಕ್ಕೆ ಪ್ರವೇಶಿಸಿ ಉಸಿರಾಟದ ತೊಂದರೆ, ಆಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ವಾಹನಗಳ ಅತಿಯಾದ ಬಳಕೆ, ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಮತ್ತು ಹವಾಮಾನದಲ್ಲಿ ಗಾಳಿಯ ಚಲನೆಯ ಕೊರತೆ ಈ ಪರಿಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮಾಲಿನ್ಯ ಪ್ರಮಾಣ ಇನ್ನಷ್ಟು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –156
  • ಮಂಗಳೂರು-150
  • ಮೈಸೂರು –98
  • ಬೆಳಗಾವಿ – 94
  • ಕಲಬುರ್ಗಿ-56
  • ಶಿವಮೊಗ್ಗ – 147
  • ಬಳ್ಳಾರಿ – 156
  • ಹುಬ್ಬಳ್ಳಿ- 87
  • ಉಡುಪಿ –123
  • ವಿಜಯಪುರ –68

Source link

Leave a Reply

Your email address will not be published. Required fields are marked *