Headlines

Bengaluru Air Quality: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! – Kannada News | Bangalore Air Pollution Crisis: Bengaluru’s Air quality is poor, need precautions

ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ!

ಬೆಂಗಳೂರು, ಜನವರಿ 16: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ ಎಂದೆನಿಸಿದರೂ ಇಂದಿನ ಸೂಚ್ಯಂಕ ನೋಡಿದರೆ ಮತ್ತೊಮ್ಮೆ ನಗರದ ಗಾಳಿಯ ಗುಣಮಟ್ಟ ಹದಗೆಟ್ಟಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಬೆಂಗಳೂರಿನ ಗಾಳಿಯ ಗುಣಮಟ್ಟ 170 ಇದ್ದು, ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳಿನಲ್ಲಿ ಒಮ್ಮೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್​, ವೈಟ್​ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ಇಂದು ಬೆಂಗಳೂರಿನ PM2.5 82 ಮತ್ತು PM10 108 ಇದೆ. PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –170
  • ಮಂಗಳೂರು-167
  • ಮೈಸೂರು – 89
  • ಬೆಳಗಾವಿ – 128
  • ಕಲಬುರ್ಗಿ-68
  • ಶಿವಮೊಗ್ಗ – 138
  • ಬಳ್ಳಾರಿ – 168
  • ಹುಬ್ಬಳ್ಳಿ- 93
  • ಉಡುಪಿ –162
  • ವಿಜಯಪುರ –69

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *