
ಬೆಂಗಳೂರು, ಮಾರ್ಚ್ 29: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಬೆಂಗಳೂರಿನ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. 150ಕ್ಕಿಂತ ಜಾಸ್ತಿಯಿದ್ದ AQI ಕಡುಮೆಯಾಗಿದ್ದರೂ, ಇನ್ನೂ ಗುಣಮಟ್ಟ ಅನಾರೋಗ್ಯಕರವಾಗಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 129ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು –129
- ಮಂಗಳೂರು-137
- ಮೈಸೂರು –130
- ಬೆಳಗಾವಿ – 136
- ಕಲಬುರ್ಗಿ-126
- ಶಿವಮೊಗ್ಗ – 101
- ಬಳ್ಳಾರಿ – 124
- ಹುಬ್ಬಳ್ಳಿ- 132
- ಉಡುಪಿ –136
- ವಿಜಯಪುರ –121
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.