
ಬೆಂಗಳೂರು, ಏಪ್ರಿಲ್ 03: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 134ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು –134
- ಮಂಗಳೂರು-122
- ಮೈಸೂರು –111
- ಬೆಳಗಾವಿ – 115
- ಕಲಬುರ್ಗಿ-114
- ಶಿವಮೊಗ್ಗ – 122
- ಬಳ್ಳಾರಿ – 112
- ಹುಬ್ಬಳ್ಳಿ- 116
- ಉಡುಪಿ –118
- ವಿಜಯಪುರ –124
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.