Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! – Kannada News | Bengaluru AQI Today: Air Quality Improves Across Karnataka Cities Due to Rain

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ!

ಬೆಂಗಳೂರು, ಮೇ 22: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರ ಪರಿಣಾಮವಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (AQI) ಗಣನೀಯವಾಗಿ ಸುಧಾರಿಸಿದ್ದು, ಬಹುತೇಕ ಕಡೆಗಳಲ್ಲಿ ‘ಗ್ರೀನ್ ಜೋನ್’ ದಾಖಲಾಗಿದೆ.

ಮುಖ್ಯಾಂಶಗಳು

  • ಮಳೆಯ ಹಿನ್ನೆಲೆ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ.
  • ರಾಜಧಾನಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಉತ್ತಮ ಮಟ್ಟದಲ್ಲಿದೆ.
  • ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಶುದ್ಧ ಗಾಳಿ ದಾಖಲಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಹೇಗಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿರಂತರ ಮಳೆಯ ಕಾರಣದಿಂದಾಗಿ ಗಾಳಿ ಅತ್ಯಂತ ಶುದ್ಧವಾಗಿದೆ. ಇಂದು ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 33 ರಿಂದ 45 ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದನ್ನು ಹವಾಮಾನ ಇಲಾಖೆ ‘ಅತ್ಯಂತ ಉತ್ತಮ’ ವಲಯ ಎಂದು ವರ್ಗೀಕರಿಸಿದೆ.

ಸಾಮಾನ್ಯವಾಗಿ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಪೀಣ್ಯ ಮತ್ತು ಜಯನಗರದಂತಹ ಕೈಗಾರಿಕಾ ಪ್ರದೇಶಗಳಲ್ಲೂ ಸಹ ಗಾಳಿಯ ಗುಣಮಟ್ಟ ಸುಧಾರಿಸಿದೆ. ಪ್ರಸ್ತುತ ವಾತಾವರಣದಲ್ಲಿ ಹಾನಿಕಾರಕ ಸೂಕ್ಷ್ಮ ಧೂಳಿನ ಕಣಗಳಾದ PM2.5 ಮತ್ತು PM10 ಮಟ್ಟ ತೀರಾ ಕಡಿಮೆಯಿರುವುದರಿಂದ ಸಾರ್ವಜನಿಕರು ಹಾಗೂ ಮಕ್ಕಳು ಯಾವುದೇ ಆರೋಗ್ಯದ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ.

ಕರ್ನಾಟಕದ ಇತರೆ ಪ್ರಮುಖ ನಗರಗಳ AQI

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ವಾಯು ಗುಣಮಟ್ಟ ಅತ್ಯಂತ ಶ್ರೇಷ್ಠ ಮಟ್ಟದಲ್ಲಿದೆ. ಕರಾವಳಿ ಭಾಗದಲ್ಲಿ ಸಮುದ್ರದ ತಂಗಾಳಿ ಮತ್ತು ಮಳೆಯ ಮುನ್ಸೂಚನೆಯಿಂದಾಗಿ ವಾಯು ಗುಣಮಟ್ಟ ಅತ್ಯುತ್ತಮವಾಗಿದ್ದು, ಇಲ್ಲಿ ಸರಾಸರಿ AQI 35ರಷ್ಟಿದೆ. ಚಿಕ್ಕಮಗಳೂರು ಮತ್ತು ಗದಗ ಜಿಲ್ಲೆಗಳಲ್ಲಿ ಗಾಳಿಯ ಶುದ್ಧತೆ ಹೆಚ್ಚಾಗಿದ್ದು, AQI ಕೇವಲ 18 ರಿಂದ 20ರಷ್ಟಿದೆ. ಇದು ಇಡೀ ರಾಜ್ಯದಲ್ಲೇ ಅತ್ಯಂತ ಶುದ್ಧ ಗಾಳಿ ಇರುವ ಪ್ರದೇಶಗಳಾಗಿವೆ.

ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ಬೆಳಗಾವಿಯಲ್ಲಿ ವಾಯು ಗುಣಮಟ್ಟವು 45 ರಿಂದ 55ರಷ್ಟಿದ್ದು, ಉತ್ತರ ಒಳನಾಡಿನ ಕೆಲವು ಕೈಗಾರಿಕಾ ಪ್ರದೇಶಗಳಲ್ಲಿ ಮಾತ್ರ ಗಾಳಿಯ ಮಟ್ಟ ಸಾಧಾರಣವಾಗಿದೆ. ಅಲ್ಲಿನ ಕೆಲವು ಕಡೆಗಳಲ್ಲಿ AQI 75 ರ ಆಸುಪಾಸಿನಲ್ಲಿದೆ. ಆದಾಗ್ಯೂ, ಮಳೆಯ ಪ್ರಭಾವದಿಂದಾಗಿ ಅಲ್ಲಿಯೂ ಮಾಲಿನ್ಯ ನಿಯಂತ್ರಣದಲ್ಲಿದೆ.

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *