Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ರಾಮನಗರ, ಜೂನ್ 13: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಯೋಜನೆಗೆ ಅನ್ನದಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಯ ಅಂತಿಮ ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆ ಖಂಡಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ರಾಮನಗರದ ಎಪಿಎಂಸಿ ಆವರಣದ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಿಡದಿಯ ಬಿಜಿಎಸ್ ವೃತ್ತದಿಂದ ಬೈರಮಂಗಲ ಗ್ರಾಮದವರೆಗೂ ಬೃಹತ್ ಬೈಕ್ ರ್ಯಾಲಿ ಮತ್ತು ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *