ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವದ ಸಂಸ್ಥೆಯಾದ ನಮ್ಮ ಮೆಟ್ರೋ, ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.
ಯಾವ ಹುದ್ದೆಗೆ ನೇಮಕಾತಿ?
ಮೆಟ್ರೋ ರೈಲು ನಿಗಮದ ಯೋಜನಾ ವಿಭಾಗದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು (Operation Safety – Deputy General Manager) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಈ ವಿಭಾಗದಲ್ಲಿ 01 ಹುದ್ದೆ ಖಾಲಿ ಇದ್ದು, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತರಾಗಿರುವ ಅರ್ಹ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು ಮತ್ತು ಸಮಯ:
ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಎರಡೂ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10. ಇದಲ್ಲದೇ ಸಹಿ ಮಾಡಿದ ಭೌತಿಕ ಅರ್ಜಿ (Hard Copy) ತಲುಪಿಸಲು ಆಗಸ್ಟ್ 13 ಸಂಜೆ 4:00 ಗಂಟೆಯ ವರೆಗೆ ಸಮಯವಿದೆ.
ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಉದ್ಯೋಗ 2026: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಮೊದಲು ಅರ್ಜಿ ಸಲ್ಲಿಸಬೇಕು. ತದನಂತರ ಡೌನ್ಲೋಡ್ ಮಾಡಿದ ಮತ್ತು ಸಹಿ ಮಾಡಿದ ಅರ್ಜಿಯ ಪ್ರತಿಯನ್ನು ಅಗತ್ಯವಿರುವ ಎಲ್ಲಾ ಪೂರಕ ದಾಖಲೆಗಳೊಂದಿಗೆ (Documents) ಬಿಎಂಆರ್ಸಿಎಲ್ ಕಚೇರಿಗೆ ನಿಗದಿತ ಸಮಯದೊಳಗೆ ತಲುಪಿಸಬೇಕಾಗುತ್ತದೆ. ಈ ಹುದ್ದೆಗೆ ಬೇಕಾಗುವ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು ಬಿಎಂಆರ್ಸಿಎಲ್ನ ಅಧಿಕೃತ ವೆಬ್ಸೈಟ್ ಆದ www.bmrc.co.in/Career Section ಗೆ ಭೇಟಿ ನೀಡಿ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ