ಮುರ್ಷಿದಾಬಾದ್, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಾಹಿನಾ ಮುಮ್ತಾಜ್ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯ ನಂತರ, ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ