
ಭಾರತೀಯ ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.