ದೆಹಲಿ ಪ್ರವಾಸದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರನ್ನು ಆಡಳಿತಾತ್ಮಕ ವಿಷಯಗಳ ಸಲುವಾಗಿ ಭೇಟಿಯಾಗಲಿದ್ದಾರೆ. ಇನ್ನೊಂದೆಡೆ ಸಚಿವ ಸ್ಥಾನದ ಆಕಾಂಕ್ಷಿಗಳಾದ ಹಲವು ಹಿರಿಯ ಮತ್ತು ಕಿರಿಯ ಶಾಸಕರು ಕೂಡ ದೆಹಲಿಯಲ್ಲೇ ಬೀಡುಬಿಟ್ಟು ತೀವ್ರ ಲಾಬಿ ನಡೆಸುತ್ತಿದ್ದಾರೆ.ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಈ ಬಾರಿ ಸಂಪುಟದಲ್ಲಿ ಹೊಸ ಹಾಗೂ ಯುವ ಶಾಸಕರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
