Headlines

Budget 2026: ಚೆನ್ನೈ ಬೆಂಗಳೂರು ಸೇರಿ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: Nirmala Sitharaman Announces 7 High Speed Rail Corridors Including Chennai–Bengaluru

ನವದೆಹಲಿ, ಫೆಬ್ರವರಿ 1: ದೇಶದ ಸಾರಿಗೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ನಲ್ಲಿ (Union Budget 2026) ಘೋಷಣೆ ಮಾಡಿದ್ದಾರೆ. ಚೆನ್ನೈ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು (High-Speed Rail Corridors) ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿರುವುದಾಗಿ ಘೋಷಣೆ ಮಾಡಿದ್ದಾರೆ.

ಈ ಯೋಜನೆಯಡಿ ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಹಾಗೂ ವಾರಾಣಸಿ–ಸಿಲಿಗುರಿ ನಡುವೆ ಹೈಸ್ಪೀಡ್ ರೈಲು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.

ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳ ಮೂಲಕ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದು, ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವುದು ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಿಂದ ಮಹಾನಗರಗಳು ಮತ್ತು ಪ್ರಮುಖ ಆರ್ಥಿಕ ಕೇಂದ್ರಗಳ ನಡುವೆ ಸಂಪರ್ಕ ಮತ್ತಷ್ಟು ಬಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬಜೆಟ್ ಘೋಷಣೆಯ ಬೆನ್ನಲ್ಲೇ ಹೈಸ್ಪೀಡ್ ರೈಲು ಯೋಜನೆಗಳು ದೇಶದ ಸಾರಿಗೆ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡಲಿವೆ ಎಂಬ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ಬಜೆಟ್ ಮುನ್ನವೇ ಸಿಹಿ ಸುದ್ದಿ, ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *