ಎಂಎಲ್‌ಸಿ ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್ – Kannada News | Derogatory remarks on muslim dont take precipitative action against bjp mlc ravi karnataka hc tells police
ಬೆಂಗಳೂರು, (ಜುಲೈ 27): ನೀಟ್ ಪ್ರತಿಭಟನೆ (NEET Protest) ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ (CT Ravi) ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದಡೆ ಎಫ್ಐಆರ್ ಪ್ರಶ್ನಿಸಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ಜುಲೈ 31ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಬಲವಂತದ ಕ್ರಮ ಬೇಡ…