Headlines

ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ? – Kannada News | Karnataka Power Tussle: DK Shivakumar, DK Suresh Meet Mallikarjun Kharge in Delhi; Major Announcement Likely in May

ನವದೆಹಲಿ, ಏಪ್ರಿಲ್ 25: ಕರ್ನಾಟಕ ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ‘ಕೇವಲ ಗಾಳಿ ಸೇವನೆಗೆ ಇಲ್ಲಿಗೆ ಬಂದಿಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿರುವ ಮಾತು, ಅವರ ಭೇಟಿಯ ಹಿಂದಿನ ರಾಜಕೀಯ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಮೇ ಮೊದಲ ವಾರದಲ್ಲಿ ಕೆಲವು ಪ್ರಮುಖ ನಿರ್ಧಾರಗಳು ಹೊರಬರಬಹುದು. ರಾಜ್ಯ ನಾಯಕರನ್ನು ಹೈಕಮಾಂಡ್ ದೆಹಲಿಗೆ ಕರೆದು ಮಾತುಕತೆ ನಡೆಸಬಹುದು ಎಂದು ಡಿಕೆ ಸಹೋದರರು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆ ಭೇಟಿಯ ಪೂರ್ವಭಾವಿಯಾಗಿ ಅವರು…

Read More

Tirumala Darshan: ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ? ಇಲ್ಲಿದೆ ತಿಮ್ಮಪ್ಪನ ಭೇಟಿಗೆ ಮತ್ತೊಂದು ಸುಲಭ ದಾರಿ! – Kannada News | Tirumala Darshan: TTD’s New Srinivasa Divyanugraha Homam for Special Entry

ತಿರುಮಲ ಭಕ್ತರಿಗೆ ಗುಡ್ ನ್ಯೂಸ್Image Credit source: Pinterest ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಬಯಸುವ ಭಕ್ತರಿಗೆ 300 ರೂ.ಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅವು ಖಾಲಿಯಾಗುವುದರಿಂದ ಲಕ್ಷಾಂತರ ಭಕ್ತರು ದರ್ಶನ ಭಾಗ್ಯದಿಂದ ವಂಚಿತರಾಗುತ್ತಿದ್ದರು. ಇಂತಹ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ‘ಶ್ರೀನಿವಾಸ ದಿವ್ಯಾನುಗ್ರಹ ವಿಶೇಷ ಹೋಮ’ ಎಂಬ ಹೊಸ ಪರ್ಯಾಯ ಮಾರ್ಗವನ್ನು ಪರಿಚಯಿಸಿದೆ. ಈ ಹೋಮದಲ್ಲಿ ಪಾಲ್ಗೊಳ್ಳುವ…

Read More

IPL 2026: ಫಿಲ್ ಸಾಲ್ಟ್ ಹೊರಗುಳಿಯಲು ಇದುವೇ ಕಾರಣ..!

IPL 2026: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಪರ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್​ ಸಮಸ್ಯೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಸಾಲ್ಟ್ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಮ್ಯಾಚ್​ನಲ್ಲಿ…

Read More

ನನಗೆ 1 ಕೋಟಿ ರೂಪಾಯಿ ಯಾರೂ ಕೊಟ್ಟಿಲ್ಲ; ಸ್ಪಷ್ಟನೆ ಕೊಟ್ಟ ಜಮಿಲ್ ಜಮಾಲಿ – Kannada News | Rakesh Bedi’s Jameel Jamali Role in Dhurandhar Hits Big; Denies Aditya Dhar Bonus Rumor

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ…

Read More

ಜನಿವಾರ ಜಟಾಪಟಿ: ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ – Kannada News | CET Janivara Row: Karnataka Brahmana Mahasabha Demands Action, writes to CM Siddaramaiah

ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ ಬೆಂಗಳೂರು, ಏಪ್ರಿಲ್ 25: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ (Janivara Row) ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಜನಿವಾರ ತೆಗೆಸಿದ…

Read More

Rajat Patidar: ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ಇವರೇ..! – Kannada News | Rajat patidar post match interview after RCB Vs GT Match IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್​ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 18.5 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್‌ಸಿಬಿ ತಂಡದ ನಾಯಕ ರಜತ್…

Read More

Onion Ban City: ಭಾರತದ ಈ ಪಟ್ಟಣದಲ್ಲಿ ಈರುಳ್ಳಿ ಮಾರಾಟ ಮಾಡುವಂತಿಲ್ಲ, ನಿಷೇಧದ ಹಿಂದಿನ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Katra Onion Ban: Why Vaishno Devi’s Sacred Town Forbids Garlic and Tamasic Foods

ಈರುಳ್ಳಿ ಮಾರಾಟ ಮಾಡುವಂತಿಲ್ಲImage Credit source: gemini ai ಭಾರತ ವೈವಿಧ್ಯತೆಗಳ ನಾಡು. ಇಲ್ಲಿನ ಭಾಷೆ, ಉಡುಗೆ ತೊಡುಗೆ ಮಾತ್ರವಲ್ಲ, ಆಹಾರ ಪದ್ಧತಿಯೂ ಪ್ರತಿ ನೂರು ಕಿಲೋಮೀಟರ್‌ಗೆ ಬದಲಾಗುತ್ತದೆ. ದಕ್ಷಿಣ ಭಾರತದಲ್ಲಿ ಅಕ್ಕಿ ಪ್ರಧಾನವಾದರೆ, ಉತ್ತರದಲ್ಲಿ ಗೋಧಿಯದ್ದೇ ಕಾರುಬಾರು. ಆದರೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತೀಯ ಅಡುಗೆಮನೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಒಂದು ವಸ್ತುವೆಂದರೆ ಅದು ಈರುಳ್ಳಿ. ಸಾರು, ಪಲ್ಯ, ಬಿರಿಯಾನಿ ಏನೇ ಇರಲಿ, ಈರುಳ್ಳಿ ಇಲ್ಲದ ಅಡುಗೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಆದರೆ, ಭಾರತದ ಸುಂದರ ಭೂಭಾಗವೊಂದರಲ್ಲಿ ಈರುಳ್ಳಿಯನ್ನು…

Read More

ತೀವ್ರಗೊಂಡ ಕುಡಿಯುವ ನೀರಿನ ಅಭಾವ: ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚನೆ, ಡಿಸಿಗಳಿಗೂ ಖಡಕ್ ಎಚ್ಚರಿಕೆ – Kannada News | Karnataka Water Crisis: CM Siddaramaiah Warns DCs, Allocates Rs 419 Crore for Drinking Water Supply

ಬೆಂಗಳೂರು, ಏಪ್ರಿಲ್ 25: ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ಜೊತೆಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಉಲ್ಬಣಿಸುತ್ತಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಸಿಎಂ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ 419.50 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಜಿಲ್ಲಾಧಿಕಾರಿಗಳ ವರದಿಯ ಆಧಾರದ ಮೇಲೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು…

Read More

World Malaria Day 2026: ಮಲೇರಿಯಾ ಜ್ವರ ಹೇಗೆ ಹರಡುತ್ತದೆ? ಈ ರೋಗ ಬರದಂತೆ ತಡೆಗಟ್ಟಲು ಏನು ಮಾಡಬೇಕು? – Kannada News | World Malaria Day 2026: How does malaria occur? What is the way to prevent it?

ಮಲೇರಿಯಾ (Malaria) ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಕಾಯಿಲೆಯಾಗಿದೆ. ಸೋಂಕು ಹೊಂದಿದ ಅನಾಫಿಲಿಸ್‌ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಈ ಜ್ವರ ಬರುತ್ತದೆ. ಈ ಕಾಯಿಲೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಮಲೇರಿಯಾದ ಇತರ ಗಂಭೀರ ಪರಿಣಾಮಗಳು ಮೂತ್ರಪಿಂಡದ ವೈಫಲ್ಯ, ಯಕೃತ್ತಿನ ವೈಫಲ್ಯ ಮತ್ತು ಮೆದುಳಿನ ಸೋಂಕು ಉಂಟು ಮಾಡಬಹುದು. ಆದ್ದರಿಂದ ಈ ಗಂಭೀರ ಕಾಯಿಲೆ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 25 ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ…

Read More

Astrological Guidelines: ವಧು-ವರರ ನಕ್ಷತ್ರ ಒಂದೇ ಆಗಿದ್ದರೆ ಮದುವೆಯಾಗಬಾರದೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Same Nakshatra Marriages: Astrological Guidelines and Compatibility

ವಧು-ವರರ ನಕ್ಷತ್ರ ಒಂದೇImage Credit source: Pinterest ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳಲ್ಲಿ ಒಂದೆಂದರೆ, ವಧು-ವರರ ನಕ್ಷತ್ರ ಒಂದೇ ಇದ್ದರೆ ವಿವಾಹ ಮಾಡಬಹುದೇ ಎಂಬುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಕೆಲವು ನಿರ್ದಿಷ್ಟ ನಕ್ಷತ್ರಗಳಲ್ಲಿ ವಧು-ವರರ ಪಾದಗಳು ಭಿನ್ನವಾಗಿದ್ದಂತಹ ಸಂದರ್ಭದಲ್ಲಿ ವಿವಾಹಕ್ಕೆ ಅನುಮತಿ ಇದೆ. ಈ ನಕ್ಷತ್ರಗಳು ರೋಹಿಣಿ, ಆರ್ದ್ರ, ಮಕಾ, ಹಸ್ತ, ವಿಶಾಖ, ಶ್ರವಣ, ಉತ್ತರಾಭಾದ್ರ ಮತ್ತು…

Read More