ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್: ತಲೆಮರೆಸಿಕೊಂಡವನ ಮೇಲಿದೆ 40ಕ್ಕೂ ಹೆಚ್ಚು ಕೇಸ್! – Kannada News | Notorious house burglar arrested in Bengaluru; gold worth 42 lakh recovered
ಬೆಂಗಳೂರು/ಬೆಳಗಾವಿ, ಜನವರಿ 20: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಲಗೂರು ಗ್ರಾಮದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕದ್ದಿದ್ದ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯ ಅಂಚೆಪಾಳ್ಯದಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಶ್ರೀಕಾಂತ್ ಬಂಧಿತ ವ್ಯಕ್ತಿಯಾಗಿದ್ದಾನೆ. 2 ಪ್ರತ್ಯೇಕ ಪ್ರಕರಣಗಳ ಸಂಬಂಧ ಆರೋಪಿಯಿಂದ 42 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ವಶಪಡಿಸಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದುಗಾಗಿ ಪೊಲೀಸರಿಂದ ಹುಡುಕಾಟ ಮುಂದುವರಿದಿದೆ. ಆರೋಪಿಗಳಾದ ಸಿದ್ದು ಮತ್ತು ಶ್ರೀಕಾಂತ್ ಸೇರಿ ಸುಮಾರು 248 ಗ್ರಾಂ. ತೂಕದ…