ಜನಗಣತಿ ಕಾರ್ಯಕ್ಕೆ ಅಡ್ಡಿ: ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್ಐಆರ್ ದಾಖಲು – Kannada News | Female Census Staff Insulted During Duty, FIR Filed Against Resident
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್ 25: ರಾಷ್ಟ್ರೀಯ ಜನಗಣತಿ–2027ರ (Caste Sensus) ಕಾರ್ಯಾಚರಣೆಯ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಗಣತಿದಾರರಿಗೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಂಬಂಧಪಟ್ಟ ನಿವಾಸಿಯ ವಿರುದ್ಧ ಇದೀಗ ಆರ್ಟಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ನಡೆದಿದ್ದೇನು? ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ…