ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ.
Your blog category
ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ.
ನವದೆಹಲಿ, ಏಪ್ರಿಲ್ 25: ಕರ್ನಾಟಕ ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ‘ಕೇವಲ ಗಾಳಿ ಸೇವನೆಗೆ ಇಲ್ಲಿಗೆ ಬಂದಿಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿರುವ ಮಾತು, ಅವರ ಭೇಟಿಯ ಹಿಂದಿನ ರಾಜಕೀಯ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಮೇ ಮೊದಲ ವಾರದಲ್ಲಿ ಕೆಲವು ಪ್ರಮುಖ ನಿರ್ಧಾರಗಳು ಹೊರಬರಬಹುದು. ರಾಜ್ಯ ನಾಯಕರನ್ನು ಹೈಕಮಾಂಡ್ ದೆಹಲಿಗೆ ಕರೆದು ಮಾತುಕತೆ ನಡೆಸಬಹುದು ಎಂದು ಡಿಕೆ ಸಹೋದರರು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆ ಭೇಟಿಯ ಪೂರ್ವಭಾವಿಯಾಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ಒಂದು ಕಡೆ ಸರ್ಕಾರಿ ಕೆಲಸಗಳ ನೆಪದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದರೂ, ಅವರ ಮುಖ್ಯ ಉದ್ದೇಶ ಪಕ್ಷದ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿ ತಮ್ಮ ಹಕ್ಕೊತ್ತಾಯವನ್ನು ಗಟ್ಟಿಗೊಳಿಸುವುದಾಗಿದೆ ಎಂದು ಮೂಳಗಳು ತಿಳಿಸಿವೆ.
ಸಂಪುಟ ವಿಸ್ತರಣೆ ಅಥವಾ ಪುನರಚನೆಗಿಂತ ಮೊದಲು ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಆಗಬೇಕು ಎಂಬ ಪ್ರಸ್ತಾಪವನ್ನು ಡಿಕೆ ಬಣ ಮುಂದಿಡುತ್ತಿದೆ. ಇತ್ತ ಸಿಎಂ ಬಣ ಕೂಡ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ ಹೈಕಮಾಂಡ್ ಕರೆದರೆ ಮುಂದಿನ ತಂತ್ರಗಾರಿಕೆ ಏನು ಎಂಬುದರ ಬಗ್ಗೆ ಸಿದ್ಧತೆ ನಡೆಸುತ್ತಿದೆ. ಮೇ ಮೊದಲ ವಾರದ ಬಳಿಕ ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್ ಆಗುವ ಎಲ್ಲ ಸಾಧ್ಯತೆಗಳಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ತಿರುಮಲ ಭಕ್ತರಿಗೆ ಗುಡ್ ನ್ಯೂಸ್Image Credit source: Pinterest
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಬಯಸುವ ಭಕ್ತರಿಗೆ 300 ರೂ.ಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅವು ಖಾಲಿಯಾಗುವುದರಿಂದ ಲಕ್ಷಾಂತರ ಭಕ್ತರು ದರ್ಶನ ಭಾಗ್ಯದಿಂದ ವಂಚಿತರಾಗುತ್ತಿದ್ದರು. ಇಂತಹ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ‘ಶ್ರೀನಿವಾಸ ದಿವ್ಯಾನುಗ್ರಹ ವಿಶೇಷ ಹೋಮ’ ಎಂಬ ಹೊಸ ಪರ್ಯಾಯ ಮಾರ್ಗವನ್ನು ಪರಿಚಯಿಸಿದೆ. ಈ ಹೋಮದಲ್ಲಿ ಪಾಲ್ಗೊಳ್ಳುವ ಮೂಲಕ ಭಕ್ತರು ಸುಲಭವಾಗಿ ದೇವರ ದರ್ಶನ ಪಡೆಯಬಹುದಾಗಿದೆ.
ಈ ವಿಶೇಷ ಸೌಲಭ್ಯದ ಅಡಿಯಲ್ಲಿ, ದಿವ್ಯಾನುಗ್ರಹ ಹೋಮದ ಟಿಕೆಟ್ ಪಡೆದವರಿಗೆ ಟಿಟಿಡಿ ನೇರವಾಗಿ 300 ರೂ. ಮೌಲ್ಯದ ವಿಶೇಷ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತದೆ. ಒಂದು ಹೋಮದ ಟಿಕೆಟ್ ದರ 1600 ರೂ. ಆಗಿದ್ದು, ಇದರಲ್ಲಿ ಇಬ್ಬರು ಭಕ್ತರು ಭಾಗವಹಿಸಬಹುದು. ಹೋಮವು ಅಲಿಪಿರಿಯ ಸಪ್ತಗೋಪ್ರದಕ್ಷಿಣ ಶಾಲೆಯಲ್ಲಿ ಪ್ರತಿದಿನ ನಡೆಯಲಿದ್ದು, ಹೋಮ ಪೂರ್ಣಗೊಂಡ ನಂತರ ಅಂದೇ ಮಧ್ಯಾಹ್ನ 3 ಗಂಟೆಗೆ ಭಕ್ತರಿಗೆ ಶ್ರೀವಾರಿಯ ದರ್ಶನಕ್ಕೆ ಕಳುಹಿಸಿಕೊಡಲಾಗುತ್ತದೆ. ಈ ಮೂಲಕ ದರ್ಶನ ಟಿಕೆಟ್ ಸಿಗದವರು ಈ ಹೋಮದ ಮೂಲಕ ಪವಿತ್ರ ಕಾರ್ಯದಲ್ಲಿ ಭಾಗಿಯಾಗಿ ಸ್ವಾಮಿಯ ಕೃಪೆಗೆ ಪಾತ್ರರಾಗಬಹುದು.
ಇದನ್ನೂ ಓದಿ: ಭಾರತದ ಈ ಪಟ್ಟಣದಲ್ಲಿ ಈರುಳ್ಳಿ ಮಾರಾಟ ಮಾಡುವಂತಿಲ್ಲ, ನಿಷೇಧದ ಹಿಂದಿನ ಕುತೂಹಲಕಾರಿ ಸಂಗತಿ ಇಲ್ಲಿದೆ
ಮೇ ತಿಂಗಳ ಕೋಟಾಕ್ಕೆ ಸಂಬಂಧಿಸಿದ ದಿವ್ಯಾನುಗ್ರಹ ಹೋಮದ ಟಿಕೆಟ್‌ಗಳನ್ನು ಟಿಟಿಡಿ ಏಪ್ರಿಲ್ 25 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿದೆ. ಭಕ್ತರು ಟಿಟಿಡಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಟಿಕೆಟ್‌ಗಳನ್ನು ಕಾಯ್ದಿರಿಸಬಹುದಾಗಿದೆ. ಸಾಮಾನ್ಯ ದರ್ಶನ ಟಿಕೆಟ್‌ಗಳಿಗಾಗಿ ತಿಂಗಳುಗಟ್ಟಲೆ ಕಾಯುವ ಬದಲು, ಈ ಅವಕಾಶವನ್ನು ಬಳಸಿಕೊಳ್ಳುವುದು ಭಕ್ತರಿಗೆ ಹೆಚ್ಚು ಅನುಕೂಲಕರವಾಗಿದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.
ದರ್ಶನದ ಜೊತೆಗೆ ತಿರುಮಲದಲ್ಲಿ ಈಗ ಉತ್ಸವಗಳ ಸಂಭ್ರಮವೂ ಮನೆಮಾಡಿದೆ. ಏಪ್ರಿಲ್ 25 ರಿಂದ ಮೂರು ದಿನಗಳ ಕಾಲ ಶ್ರೀ ಪದ್ಮಾವತಿ ಮತ್ತು ಶ್ರೀನಿವಾಸರ ‘ಪರಿಣಯೋತ್ಸವ’ ವೈಭವದಿಂದ ಜರುಗಲಿದೆ. ಮೊದಲ ದಿನ ಗಜ ವಾಹನ, ಎರಡನೇ ದಿನ ಅಶ್ವ ವಾಹನ ಮತ್ತು ಮೂರನೇ ದಿನ ಗರುಡ ವಾಹನದ ಮೇಲೆ ಮಲಯಪ್ಪ ಸ್ವಾಮಿಯ ಮೆರವಣಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುವುದರಿಂದ, ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಟಿಟಿಡಿ ವತಿಯಿಂದ ವ್ಯಾಪಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
IPL 2026: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್‌ಸಿಬಿ ಪರ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಕಾಣಿಸಿಕೊಂಡಿರಲಿಲ್ಲ.
ಇದಕ್ಕೆ ಮುಖ್ಯ ಕಾರಣ ಫಿಟ್ನೆಸ್ ಸಮಸ್ಯೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಸಾಲ್ಟ್ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಮ್ಯಾಚ್ನಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅವರ ಗಾಯ ಗಂಭೀರವಲ್ಲ ಎಂದು ತಿಳಿದು ಬಂದಿದೆ.
ಅಭ್ಯಾಸದ ವೇಳೆ ಫಿಲ್ ಸಾಲ್ಟ್ ಸಣ್ಣ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಗಾಯ ಗಂಭೀರವಲ್ಲದ ಕಾರಣ, ಅವರು ಮುಂದಿನ ಮ್ಯಾಚ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆರ್‌ಸಿಬಿ ಮೂಲಗಳು ತಿಳಿಸಿವೆ.
ಏಪ್ರಿಲ್ 27 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಸೋಮವಾರ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಸಾಲ್ಟ್ ಸಂಪೂರ್ಣವಾಗಿ ಗುಣಮುಖರಾಗುವ ನಿರೀಕ್ಷೆಯಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ ಸಾಲ್ಟ್ ಆರಂಭಿಕನಾಗಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.
‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬ ಕಲಾವಿದರು ಇದರಿಂದ ಪ್ರಯೋಜನ ಪಡೆಯುತ್ತಿದ್ದಾರೆ. ರಾಕೇಶ್ ಬೇಡಿ ಈ ಎರಡೂ ಚಿತ್ರಗಳಲ್ಲಿ ‘ಜಮೀಲ್ ಜಮಾಲಿ’ ಪಾತ್ರವನ್ನು ನಿರ್ವಹಿಸಿದ್ದಾರೆ. ಇದು ಅವರ ಜನಪ್ರಿಯತೆ ಹೆಚ್ಚಿಸಿದೆ.
ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ಮಾಪಕರು ರಾಕೇಶ್ ಕೆಲಸದಿಂದ ತುಂಬಾ ಪ್ರಭಾವಿತರಾಗಿದ್ದಾರೆ. ತಮ್ಮ ಔದಾರ್ಯವನ್ನು ಪ್ರದರ್ಶಿಸಿ, ಅವರು ರಾಕೇಶ್ ಬೇಡಿ ಅವರಿಗೆ 1 ಕೋಟಿ ರೂಪಾಯಿ ಹೆಚ್ಚು ಹಣ ನೀಡಲಾಗಿದೆ ಎಂದು ವರದಿ ಆಗಿತ್ತು. ಇದಕ್ಕೆ ಉತ್ತರಿಸಿರುವ ಅವರು, ‘ನನ್ನ ಖಾತೆಗಂತೂ ಬಂದಿಲ್ಲ.ಎಲ್ಲಿ ಬಂದಿದೆ ಹೇಳಿ ಹೋಗಿ ತೆಗೆದುಕೊಂಡು ಬರುತ್ತೇನೆ’ ಎಂದು ಉತ್ತರಿಸಿದ್ದಾರೆ.
SHOCKING AND UNBELIEVABLE :-
Rakesh Bedi denies news of receiving Rs 1 crore from #Dhurandhar makers 🤯
Claims ” Mere Account me nahi aaya” !!! pic.twitter.com/u2QaYsCAjJ
— CineHub (@Its_CineHub) April 24, 2026
ಅವರ ‘ಬಚ್ಚಾ ಹೈ ತು ಮೇರಾ’ ಎಂಬ ಸಂಭಾಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅವರ ಅನೇಕ ಮೀಮ್ಸ್‌ಗಳು ಸಹ ವೈರಲ್ ಆಗುತ್ತಿವೆ. ‘ಧುರಂಧರ್: ದಿ ರಿವೆಂಜ್’ ಚಿತ್ರದಲ್ಲಿ ಅವರ ಪಾತ್ರಕ್ಕೆ ದೊಡ್ಡ ಟ್ವಿಸ್ಟ್ ಇತ್ತು. ಚಿತ್ರದಲ್ಲಿ ರಣವೀರ್ ಸಿಂಗ್, ಅರ್ಜುನ್ ರಾಂಪಾಲ್, ಸಂಜಯ್ ದತ್, ಆರ್. ಮಾಧವನ್, ಸಾರಾ ಅರ್ಜುನ್ ನಟಿಸಿದ್ದಾರೆ.
ಇದನ್ನೂ ಓದಿ: ‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು
ರಾಕೇಶ್ ಬೇಡಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಧಾರಾವಾಹಿಗಳು ಮತ್ತು ರಂಗಭೂಮಿಯಲ್ಲೂ ಕೆಲಸ ಮಾಡಿದ್ದಾರೆ. ಆದಿತ್ಯ ಧರ್ ಅವರ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರದಲ್ಲಿ ಅವರು ಸಣ್ಣ ಪಾತ್ರವನ್ನು ನಿರ್ವಹಿಸಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ
ಬೆಂಗಳೂರು, ಏಪ್ರಿಲ್ 25: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ (Janivara Row) ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಲಾಗಿದೆ. ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಲಾಗಿದೆ.
ರಾಜ್ಯದಲ್ಲಿ ಜನಿವಾರದ ಜಟಾಪಟಿ ತೀವ್ರವಾಗಿದ್ದು, ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ.
ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ. 2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದೆ ಎಂಬುದಾಗಿ ಆರೋಪಿಸಲಾಗಿದೆ. ಈ ಘಟನೆ ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದು ಮಹಾಸಭಾ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ
ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅಲ್ಲಿ ಸಹ ಹೋರಾಟ ನಡೆಯುತ್ತಿದೆ ಎಂದು ರಘುನಾಥ್ ತಿಳಿಸಿದ್ದಾರೆ. ಪ್ರಕರಣದ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲು ವಿಳಂಬವಾಗುತ್ತಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಘಟನೆಗೆ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಮಹಾಸಭಾ ಎಚ್ಚರಿಕೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್‌ಸಿಬಿ 18.5 ಓವರ್‌ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್‌ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ತಂಡದ ಸಂಘಟಿತ ಪ್ರದರ್ಶನ ಮತ್ತು ವಿಶೇಷವಾಗಿ ಬೌಲರ್‌ಗಳ ಸಮಯೋಚಿತ ಲಯದ ಬಗ್ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.
ಆರ್‌ಸಿಬಿ ಬೌಲರ್‌ಗಳ ಭರ್ಜರಿ ಪ್ರದರ್ಶನದ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, “ಭುವನೇಶ್ವರ್ ಕುಮಾರ್ ಮತ್ತು ಹೇಝಲ್ವುಡ್ ಪಂದ್ಯದ ಆರಂಭದಲ್ಲಿ ಹಾಕಿದ ಲೈನ್ ಮತ್ತು ಲೆಂತ್ ಅದ್ಭುತವಾಗಿತ್ತು. ಮಧ್ಯಮ ಓವರ್‌ಗಳಲ್ಲಿ ಸುಯಶ್ ಶರ್ಮಾ ರನ್ ವೇಗಕ್ಕೆ ಬ್ರೇಕ್ ಹಾಕಿದರು.
ಅದರಲ್ಲೂ ಮುಖ್ಯವಾಗಿ ಡೆತ್ ಓವರ್‌ಗಳಲ್ಲಿ ರಾಸಿಖ್ ಸಲಾಮ್, ಭುವಿ ಮತ್ತು ಹೇಝಲ್ವುಡ್ ನಿಖರವಾದ ಯಾರ್ಕರ್ ಎಸೆಯುವ ಮೂಲಕ ಎದುರಾಳಿಗಳನ್ನು 200-205 ರನ್ ಆಸುಪಾಸಿನಲ್ಲಿ ಕಟ್ಟಿಹಾಕಿದರು. ಇದುವೇ ಪಂದ್ಯದ ಟರ್ನಿಂಗ್ ಪಾಯಿಂಟ್. ಹೀಗಾಗಿ ಈ ಗೆಲುವಿನ ಶ್ರೇಯಸ್ಸು ವೇಗಿಗಳಿಗೆ ಸಲ್ಲಬೇಕು ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.
ಇನ್ನು 206 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದರು. ಈ ಭರ್ಜರಿ ಬ್ಯಾಟಿಂಗ್ ಬಗ್ಗೆ ಮಾತನಾಡಿದ ಪಾಟಿದಾರ್, ಜೇಕಬ್ ಬೆಥೆಲ್ ಮತ್ತು ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು. ಆ ನಂತರ ದೇವದತ್ ಪಡಿಕ್ಕಲ್ ಅವರ ಆಟ ಅದ್ಭುತವಾಗಿತ್ತು. ಅವರ ಕ್ವಿಕ್‌ಫೈರ್ ಬ್ಯಾಟಿಂಗ್ ತಂಡಕ್ಕೆ ಅಗತ್ಯವಿತ್ತು. ಇಲ್ಲಿ ಕೊಹ್ಲಿ ಹಾಗೂ ಪಡಿಕ್ಕಲ್ ಪ್ರಚಂಡ ಬ್ಯಾಟಿಂಗ್ ಚೇಸಿಂಗ್ ಅನ್ನು ಸುಲಭವನ್ನಾಗಿಸಿತು ಎಂದು ಪಾಟಿದಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ಗೆಲುವಿನ ಹೊರತಾಗಿಯೂ ತಂಡದ ತಪ್ಪುಗಳನ್ನು ಸುಧಾರಿಸಿಕೊಳ್ಳಬೇಕಿದೆ. ಮಧ್ಯಮ ಓವರ್‌ಗಳಲ್ಲಿ ನಾವು ಬೆನ್ನುಬೆನ್ನಿಗೆ ವಿಕೆಟ್ ಕಳೆದುಕೊಂಡೆವು. ಇದು ಈ ಪಂದ್ಯದ ಪ್ರಮುಖ ಕಲಿಕೆಯಾಗಿದೆ. ಮುಂದಿನ ಪಂದ್ಯಗಳಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ನಾವು ಕೆಲಸ ಮಾಡಬೇಕಿದೆ.
ಮಧ್ಯಮ ಕ್ರಮಾಂಕದಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕೈಚೆಲ್ಲಿರುವುದನ್ನು ಹೊರತುಪಡಿಸಿದರೆ, ನಮ್ಮ ತಂಡವು ಇಂದು ಸಹ ಅತ್ಯುತ್ತಮ ಪ್ರದರ್ಶನ ನೀಡಿದೆ. ಇದೇ ಪ್ರದರ್ಶನವನ್ನು ಮುಂದಿನ ಮ್ಯಾಚ್ಗಳಲ್ಲೂ ಮುಂದುವರೆಸುವ ವಿಶ್ವಾಸವಿದೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.
ಇದನ್ನೂ ಓದಿ: IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ!
ಅಂದಹಾಗೆ ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ. ಇನ್ನು ದ್ವಿತೀಯಾರ್ಧದಲ್ಲಿ ಆರ್‌ಸಿಬಿ ತಂಡ ಮೂರು ಗೆಲುವು ದಾಖಲಿಸಿದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ.
ಈರುಳ್ಳಿ ಮಾರಾಟ ಮಾಡುವಂತಿಲ್ಲImage Credit source: gemini ai
ಭಾರತ ವೈವಿಧ್ಯತೆಗಳ ನಾಡು. ಇಲ್ಲಿನ ಭಾಷೆ, ಉಡುಗೆ ತೊಡುಗೆ ಮಾತ್ರವಲ್ಲ, ಆಹಾರ ಪದ್ಧತಿಯೂ ಪ್ರತಿ ನೂರು ಕಿಲೋಮೀಟರ್‌ಗೆ ಬದಲಾಗುತ್ತದೆ. ದಕ್ಷಿಣ ಭಾರತದಲ್ಲಿ ಅಕ್ಕಿ ಪ್ರಧಾನವಾದರೆ, ಉತ್ತರದಲ್ಲಿ ಗೋಧಿಯದ್ದೇ ಕಾರುಬಾರು. ಆದರೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತೀಯ ಅಡುಗೆಮನೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಒಂದು ವಸ್ತುವೆಂದರೆ ಅದು ಈರುಳ್ಳಿ. ಸಾರು, ಪಲ್ಯ, ಬಿರಿಯಾನಿ ಏನೇ ಇರಲಿ, ಈರುಳ್ಳಿ ಇಲ್ಲದ ಅಡುಗೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟ.
ಆದರೆ, ಭಾರತದ ಸುಂದರ ಭೂಭಾಗವೊಂದರಲ್ಲಿ ಈರುಳ್ಳಿಯನ್ನು ಪತ್ತೆ ಹಚ್ಚುವುದು ಕೂಡ ಅಸಾಧ್ಯ ಎಂಬುದು ನಿಮಗೆ ಗೊತ್ತೇ? ಹೌದು, ಜಮ್ಮು ಮತ್ತು ಕಾಶ್ಮೀರದ ಕತ್ರಾ ಪಟ್ಟಣದಲ್ಲಿ ಈರುಳ್ಳಿಯ ಕೃಷಿ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕತ್ರಾ ಪಟ್ಟಣವು ವಿಶ್ವಪ್ರಸಿದ್ಧ ವೈಷ್ಣೋದೇವಿ ದೇವಸ್ಥಾನದ ಪ್ರವೇಶ ದ್ವಾರವಾಗಿದೆ. ಈ ಪ್ರದೇಶವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಆಧ್ಯಾತ್ಮಿಕ ಶುದ್ಧತೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಈ ಪಟ್ಟಣದ ಗಡಿಯೊಳಗೆ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ನಿಷೇಧಿಸಲಾಗಿದೆ.
ಇಲ್ಲಿನ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಅಥವಾ ರಸ್ತೆ ಬದಿಯ ಧಾಬಾಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಮಿಶ್ರಿತ ಆಹಾರ ಲಭ್ಯವಿಲ್ಲ. ಅಷ್ಟೇ ಏಕೆ, ಸ್ಥಳೀಯ ಮಾರುಕಟ್ಟೆಗಳಲ್ಲಿಯೂ ಇವುಗಳ ಮಾರಾಟಕ್ಕೆ ಅವಕಾಶವಿಲ್ಲ.
ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ
ಹಿಂದೂ ಧರ್ಮದ ಆಹಾರ ಪದ್ಧತಿಯಲ್ಲಿ ಆಹಾರವನ್ನು ಮೂರು ವಿಧವಾಗಿ ವಿಂಗಡಿಸಲಾಗಿದೆ: ಸಾತ್ವಿಕ, ರಾಜಸಿಕ ಮತ್ತು ತಾಮಸಿಕ.
ಈರುಳ್ಳಿ ಇಲ್ಲದಿದ್ದರೆ ಆಹಾರ ರುಚಿಯಾಗಿರುವುದಿಲ್ಲ ಎಂಬುದು ಅನೇಕರ ನಂಬಿಕೆ. ಆದರೆ ಕತ್ರಾದಲ್ಲಿ ಸಿಗುವ ಸಾತ್ವಿಕ ಆಹಾರವು ಈ ಮಾತನ್ನು ಸುಳ್ಳು ಮಾಡುತ್ತದೆ. ಇಲ್ಲಿನ ಆಹಾರವು ಅತ್ಯಂತ ಸ್ವಾದಿಷ್ಟವಾಗಿರುವುದಲ್ಲದೆ, ಆರೋಗ್ಯಕ್ಕೂ ಉತ್ತಮವಾಗಿರುತ್ತದೆ. ಯಾತ್ರಾರ್ಥಿಗಳು ಈರುಳ್ಳಿ ಇಲ್ಲದ ಈ ವಿಶೇಷ ಪಾಕಪದ್ಧತಿಯನ್ನು ಆಶ್ಚರ್ಯದಿಂದ ಸವಿಯುತ್ತಾರೆ. ಸ್ಥಳೀಯರು ಈ ಸಂಪ್ರದಾಯವನ್ನು ಕೇವಲ ಕಾನೂನು ಎಂದು ಪರಿಗಣಿಸದೆ, ತಮ್ಮ ಭಕ್ತಿಯ ಭಾಗವಾಗಿ ಅತ್ಯಂತ ಶ್ರದ್ಧೆಯಿಂದ ಪಾಲಿಸುತ್ತಿದ್ದಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 25: ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ಜೊತೆಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಉಲ್ಬಣಿಸುತ್ತಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಸಿಎಂ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ 419.50 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಜಿಲ್ಲಾಧಿಕಾರಿಗಳ ವರದಿಯ ಆಧಾರದ ಮೇಲೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚಿಸಿದ್ದಾರೆ. ಕಂದಾಯ, ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ 114 ತಾಲೂಕುಗಳ 598 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಸದ್ಯ 137 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ನೀರಿನ ಲಭ್ಯತೆ ಹೆಚ್ಚಿಸಲು ಖಾಸಗಿ ಬೋರ್‌ವೆಲ್ ಮತ್ತು ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲು ಸರ್ಕಾರ ನಿರ್ಧರಿಸಿದೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಸದ್ಯ 321.93 ಟಿಎಂಸಿ ನೀರು ಲಭ್ಯವಿದ್ದು, ಸೋರಿಕೆ ತಡೆದು ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲು ಸೂಚಿಸಲಾಗಿದೆ.
ಪ್ರತಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಕ್ಷಣವೇ ‘ಟಾಸ್ಕ್‌ಫೋರ್ಸ್’ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಆರೋಗ್ಯ ಇಲಾಖೆಯೊಂದಿಗೆ ಸೇರಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಮತ್ತು ಜಿ.ಪಂ. ಸಿಇಒಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.
ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಲೇರಿಯಾ (Malaria) ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಕಾಯಿಲೆಯಾಗಿದೆ. ಸೋಂಕು ಹೊಂದಿದ ಅನಾಫಿಲಿಸ್ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಈ ಜ್ವರ ಬರುತ್ತದೆ. ಈ ಕಾಯಿಲೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಮಲೇರಿಯಾದ ಇತರ ಗಂಭೀರ ಪರಿಣಾಮಗಳು ಮೂತ್ರಪಿಂಡದ ವೈಫಲ್ಯ, ಯಕೃತ್ತಿನ ವೈಫಲ್ಯ ಮತ್ತು ಮೆದುಳಿನ ಸೋಂಕು ಉಂಟು ಮಾಡಬಹುದು. ಆದ್ದರಿಂದ ಈ ಗಂಭೀರ ಕಾಯಿಲೆ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್ 25 ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
ವಿಶ್ವ ಮಲೇರಿಯಾ ದಿನವನ್ನು ಪ್ರತಿ ವರ್ಷ ಏಪ್ರಿಲ್ 25 ರಂದು ಆಚರಿಸಲಾಗುತ್ತದೆ. ಈ ದಿನದ ಉದ್ದೇಶವು ಮಾರಕ ಕಾಯಿಲೆಯಾದ ಮಲೇರಿಯಾ ಬಗ್ಗೆ ಜಾಗೃತಿ ಮೂಡಿಸುವುದು. ಇದನ್ನು ಆಫ್ರಿಕನ್ ದೇಶಗಳಲ್ಲಿ 2000 ರಲ್ಲಿ ಆಫ್ರಿಕಾ ಮಲೇರಿಯಾ ದಿನವೆಂದು ಆಚರಿಸಲು ಪ್ರಾರಂಭಿಸಲಾಯಿತು. ನಂತರ ಇದನ್ನು 2008 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕವಾಗಿ ಆಚರಿಸುವ ನಿರ್ಧಾರವನ್ನು ಕೈಗೊಂಡಿತು. ಅಂದಿನಿಂದ ಪ್ರತಿವರ್ಷ ಜಗತ್ತಿನಾದ್ಯಂತ ವಿಶ್ವ ಮಲೇರಿಯಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯಿಂದ ಮಲೇರಿಯಾ ರೋಗ ಹರಡುತ್ತದೆ. ಈ ಸೊಳ್ಳೆ ಪ್ಲಾಸ್ಮೊಡಿಯಂ ಎಂಬ ಪ್ಯಾರಾಸೈಟ್‌ನಿಂದ ತಾನು ಸೋಂಕಿಗೆ ಒಳಗಾಗಿ ಮನುಷ್ಯರಿಗೂ ಸೋಂಕನ್ನು ಹರಡುತ್ತವೆ. ಒಂದು ಸಲ ಈ ಸೋಂಕಿಗೆ ಒಳಗಾದ ಅನಾಫಿಲಿಸ್ ಸೊಳ್ಳೆ ಮನುಷ್ಯರಿಗೆ ಕಚ್ಚಿದ ಬಳಿಕ ಪ್ಲಾಸ್ಮೋರಿಯಾವು ಮನುಷ್ಯನ ಯಕೃತ್ತಿನಲ್ಲಿ ಸಂತಾನಾಭಿವೃದ್ಧಿ ಮಾಡಿ, ಸೋಂಕು ಉಂಟು ಮಾಡುತ್ತದೆ ಮತ್ತು ಕೆಂಪು ರಕ್ತಕಣಗಳನ್ನು ನಾಶ ಪಡಿಸುತ್ತದೆ.
ಇದನ್ನೂ ಓದಿ: ಲಿವರ್ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು
ಜ್ವರ, ಶೀತ, ತಲೆನೋವು, ಸುಸ್ತು, ಆಯಾಸ, ದೇಹ ನೋವು, ರಕ್ತಹೀನತೆ, ಉಸಿರಾಟದ ತೊಂದರೆ, ಕಡಿಮೆ ರಕ್ತದೊತ್ತಡ, ವಾಂತಿ ಇವೆಲ್ಲವೂ ಮಲೇರಿಯಾದ ಲಕ್ಷಣಗಳು. ಈ ರೀತಿಯ ಚಿಹ್ನೆಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಆರಂಭಿಕ ಚಿಕಿತ್ಸೆಯು ಮಲೇರಿಯಾ ತೀವ್ರವಾಗುವುದನ್ನು ತಡೆಯಬಹುದು ಮತ್ತು ಜೀವಗಳನ್ನು ಉಳಿಸಬಹುದು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ