RCB vs GT: ಅತಿ ಹೆಚ್ಚು ಶತಕಗಳು; ಅನಗತ್ಯ ದಾಖಲೆ ಬರೆದ ಆರ್‌ಸಿಬಿ
ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಯುವ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅದ್ಭುತ ಶತಕ ಬಾರಿಸುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು. ಆದರೆ ಸುದರ್ಶನ್ ಶತಕ ಬಾರಿಸಲು ಅನುವು ಮಾಡಿಕೊಟ್ಟ ಆರ್‌ಸಿಬಿ ಐಪಿಎಲ್‌ನಲ್ಲಿ ಬೇಡದ ದಾಖಲೆಯೊಂದನ್ನು ತನ್ನ ಖಾತೆಗೆ ಹಾಕಿಕೊಂಡಿತು. ಸಾಯಿ ಸುದರ್ಶನ್ ಆರ್‌ಸಿಬಿ ವಿರುದ್ಧ 58 ಎಸೆತಗಳಲ್ಲಿ 100 ರನ್ ಗಳಿಸಿದರು. ಅವರ…