Category Archives: Blog

Your blog category

ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ – Kannada News | Deepika Padukone shoots for King Movie with Shah Rukh Khan during her 2nd pregnancy

ಬಾಲಿವುಡ್‌ನ ಸ್ಟಾರ್ ಕಪಲ್ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವು ಎರಡನೇ ಬಾರಿಗೆ ಪೋಷಕರಾಗುತ್ತಿರುವ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದರು. ತಮ್ಮ ಮೊದಲ ಮಗಳು ದುವಾ ಅವಳೊಂದಿಗೆ ಇರುವ ಮುದ್ದಾದ ಪೋಸ್ಟ್ ಮೂಲಕ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದರು. ಈ ಸಂಭ್ರಮದ ನಡುವೆಯೂ ದೀಪಿಕಾ ವಿಶ್ರಾಂತಿ ಪಡೆಯದೇ, ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ಜೊತೆ ‘ಕಿಂಗ್’ ಸಿನಿಮಾದ (King Movie) ಚಿತ್ರೀಕರಣದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಏಪ್ರಿಲ್ 19ರಂದು ಎರಡನೇ ಪ್ರೆಗ್ನೆನ್ಸಿಯ ಸುದ್ದಿಯನ್ನು ಘೋಷಿಸಿದ ಬೆನ್ನಲ್ಲೇ, ದೀಪಿಕಾ ಪಡುಕೋಣೆ ಏಪ್ರಿಲ್ 21ರಂದು ‘ಕಿಂಗ್’ ಸಿನಿಮಾದ ಚಿತ್ರೀಕರಣಕ್ಕೆ ಹಾಜರಾಗಿದ್ದಾರೆ. ಮುಂಬೈನ ವಿಲೆ ಪಾರ್ಲೆಯ ಗೋಲ್ಡನ್ ಟೊಬ್ಯಾಕೋ ಸ್ಟುಡಿಯೋದಲ್ಲಿ ನಿರ್ಮಿಸಲಾದ ವಿಶೇಷ ಸೆಟ್‌ನಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ನಡುವಿನ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ವಿಶೇಷವೆಂದರೆ, ಈ ಹಂತದಲ್ಲಿ ದೀಪಿಕಾ ಪಡುಕೋಣೆ ಅವರು ಭರ್ಜರಿ ಆಕ್ಷನ್ ಸೀಕ್ವೆನ್ಸ್‌ನಲ್ಲಿ ಭಾಗಿಯಾಗಿದ್ದಾರೆ. ಬಿಳಿ ಬಣ್ಣದ ಉಡುಪಿನಲ್ಲಿ ಕಂಗೊಳಿಸಿದ ಅವರು, ಸುಮಾರು ಎಂಟು ಮಂದಿ ಫೈಟರ್‌ಗಳ ಜೊತೆ ಫೈಟ್ ಮಾಡುವ ದೃಶ್ಯದಲ್ಲಿ ನಟಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸುದ್ದಿ ತಿಳಿದ ಬಳಿಕ ಅವರ ಅಭಿಮಾನಿಗಳಿಗೆ ‘ಕಿಂಗ್’ ಸಿನಿಮಾ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ.

‘ಪಠಾಣ್’ ಖ್ಯಾತಿಯ ಸಿದ್ಧಾರ್ಥ್ ಆನಂದ್ ಅವರು ‘ಕಿಂಗ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಡಂಕಿ’ ಬಳಿಕ ಇದು ಶಾರುಖ್ ಖಾನ್ ಅವರ ಕಮ್​ಬ್ಯಾಕ್ ಸಿನಿಮಾ ಆಗಿದ್ದು, ಬಹಳ ಅದ್ಧೂರಿಯಾಗಿ ಮೂಡಿಬರುತ್ತಿದೆ. ಮುಂಬರುವ ದಿನಗಳಲ್ಲಿ ಮೀರಾ ರೋಡ್ ಸ್ಟುಡಿಯೋದಲ್ಲಿ ಮರಳುಗಾಡಿನ ಹಿನ್ನೆಲೆಯ ಮತ್ತೊಂದು ಸಾಹಸ ದೃಶ್ಯವನ್ನು ಚಿತ್ರೀಕರಿಸಲು ತಂಡ ಯೋಜಿಸಿದೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

‘ಕಿಂಗ್’ ಸಿನಿಮಾದ ತಾರಾಗಣವೇ ವಿಶೇಷವಾಗಿದೆ. ಮೊದಲ ಬಾರಿಗೆ ಶಾರುಖ್ ಖಾನ್ ಮತ್ತು ಅವರ ಮಗಳು ಸುಹಾನಾ ಖಾನ್ ಈ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಅಭಿಷೇಕ್ ಬಚ್ಚನ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ಇದೆ. ಅನಿಲ್ ಕಪೂರ್ ಮತ್ತು ಜಾಕಿ ಶ್ರಾಫ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ದಿ ಕೇರಳ ಸ್ಟೋರಿ 2’ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ – Kannada News | The Kerala Story 2 movie Releasing on OTT on May 8

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ಕೇರಳದಲ್ಲಿ ನಡೆದ ಮತಾಂತರರ ಬಗೆಗಿನ ಸಿನಿಮಾ ಇದೆಂದು ಹೇಳಲಾದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಗೆಲುವು ಕಂಡಿತ್ತು. ಸಾಕಷ್ಟು ವಿರೋಧವೂ ಸಹ ಸಿನಿಮಾಕ್ಕೆ ವ್ಯಕ್ತವಾಗಿತ್ತು. ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆ ಆಯ್ತು. ಈ ಸಿನಿಮಾಕ್ಕೂ ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೂ ಬಾಕ್ಸ್ ಆಫೀಸ್​​ನಲ್ಲಿ ತಕ್ಕ ಮಟ್ಟಿಗೆ ಉತ್ತಮ ಪ್ರದರ್ಶನವನ್ನೇ ಕಂಡ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ.

ವಿಪುಲ್ ಅಮೃತಲಾಲ್ ಶಾ ನಿರ್ದೇಶಿಸಿ, ನಿರ್ಮಾಣ ಮಾಡಿರುವ ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಜೀ5 ಒಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಸಿನಿಮಾವು ಮೇ 8 ರಂದು ಬಿಡುಗಡೆ ಆಗಲಿದ್ದು, ಹಿಂದಿ ಮಾತ್ರವಲ್ಲದೆ ಇತರೆ ಕೆಲ ಭಾಷೆಗಳಲ್ಲಿಯೂ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ 10 ವಾರಗಳ ನಂತರ ಈ ಸಿನಿಮಾ ಡಿಜಿಟಲ್ ಪರದೆಯ ಮೇಲೆ ಬರುತ್ತಿದೆ. ಫೆಬ್ರವರಿ 27 ರಂದು ಈ ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿತ್ತು.

ಇದನ್ನೂ ಓದಿ:ಒಂದಲ್ಲ, ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ‘ಧುರಂಧರ್ 2’?

ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶನದ ಈ ಚಿತ್ರದಲ್ಲಿ ಐಶ್ವರ್ಯಾ ಓಜಾ, ಉಲ್ಕಾ ಗುಪ್ತಾ ಮತ್ತು ಅದಿತಿ ಭಾಟಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವು ಮೂವರು ಹಿಂದೂ ಯುವತಿಯರು ಮುಸ್ಲಿಂ ಯುವಕರೊಂದಿಗೆ ಪ್ರೇಮ ಸಂಬಂಧ ಬೆಳೆಸಿದ ನಂತರ ಧಾರ್ಮಿಕ ಮತಾಂತರದ ಜಾಲಕ್ಕೆ ಸಿಲುಕುವ ಕಥೆಯನ್ನು ಹೊಂದಿದೆ. ಬಿಡುಗಡೆಗೆ ಮುನ್ನ ಕೇರಳ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ ಅನುಭವಿಸಿದ್ದ ಈ ಚಿತ್ರವು ನಂತರ ಕಾನೂನು ಹೋರಾಟದಲ್ಲಿ ಜಯಗಳಿಸಿ ಬಿಡುಗಡೆಯಾಗಿತ್ತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸುಮಾರು 50 ಕೋಟಿ ರೂಪಾಯಿ ಗಳಿಸಿದೆ ಎಂದು ವರದಿಯಾಗಿದೆ.

2023ರ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಎದುರಾದಷ್ಟು ವಿರೋಧ ಈ ಸಿನಿಮಾಕ್ಕೆ ಎದುರಾಗಲಿಲ್ಲ. ಆದರೆ ನ್ಯಾಯಾಲಯ ತಾತ್ಕಾಲಿಕ ತಡೆಯನ್ನು ನೀಡಿತ್ತು. ಆದರೆ ಬಳಿಕ ಆ ತಡೆಯನ್ನು ತೆಗೆಯಲಾಯ್ತು. ಆದರೆ ಮೊದಲ ಭಾಗದಷ್ಟು ದೊಡ್ಡ ಮಟ್ಟದ ಯಶಸ್ಸನ್ನು ಕಾಣದಿದ್ದರೂ, ಈ ಚಿತ್ರವು ಈಗ ಒಟಿಟಿ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿದೆ. ಸಿನಿಮಾನಲ್ಲಿ ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಅಲ್ಕಾ ಅಮಿನ್, ಐಶ್ವರ್ಯಾ ಓಝಾ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾಕ್ಕೆ ಮನನ್ ಶಾ, ರಾಹುಲ್ ಸುಹಾಸ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:40 pm, Fri, 24 April 26

Source link

ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ.

ತಮ್ಮ ತೋಟದ ಮನೆಯಿಂದ ವಿಜಯಪುರದತ್ತ ಪ್ರಯಾಣ ಮಾಡುತ್ತಿದ್ದ ರಾಜು ಖರಿ ಅವರ ಥಾರ್​​ ಜೀಪ್​​ಗೆ ಮೊದಲು ಟಿಪ್ಪರ್​​ ಡಿಕ್ಕಿ ಹೊಡೆಸಲಾಗಿತ್ತು. ಅಪಗಾತದ ತೀವ್ರತೆಗೆ ಥಾರ್​​ ಜೀಪ್​​ ಮುಂಭಾಗ ಜಖಂ ಆಗಿದ್ದು, ಇದೇ ವೇಳೆ ವಾಹನದ ಬಳಿ ಆಗಮಿಸಿದ್ದ ಹಂತಕರು ಜೀಪ್ ಡೋರ್​​ನ ದೊಡ್ಡ ಕಲ್ಲಿನಿಂದ ಜಜ್ಜಿ ಒಡೆದು, ರಾಜು ತಲೆ ಮತ್ತು ಎದೆ ಭಾಗಕ್ಕೆ 6 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಕಂಟ್ರಿ ಪಿಸ್ತೂಲ್​​ನಿಂದ ಆರೋಪಿಗಳು ಮಾಡಿದ್ದ ಈ ಫೈರಿಂಗ್​​ಗೆ ರಾಜು ಉಸಿರು ಚೆಲ್ಲಿದ್ದರು. ಅದಾದ ಬಳಿಕವೂ ಅವರ ತಲೆಗೆ ಕಲ್ಲಿನಿಂದ ಹೊಡೆದು ಹಂತಕರು ಎಸ್ಕೇಪ್​​ ಆಗಿದ್ದರು. ಈ ಭೀಕರ ಕೊಲೆ ಇಡೀ ಜಿಲ್ಲೆಯನ್ನೇ ನಡುಗಿಸಿ ಬಿಟ್ಟಿತ್ತು. ಹೀಗಾಗಿ ಪ್ರಕರಣ ಸಂಬಂಧ ಎಸ್ಪಿ ಲಕ್ಷ್ಮಣ ನಿಂಬರಗಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಹಂತಕರ ಬೆನ್ನುಬಿದ್ದ ಖಾಕಿ ಪಡೆ ಒಟ್ಟು 6 ಮಂದಿಯನ್ನೀಗ ಬಂಧಿಸಿದೆ. ಅಲಿಯಾಬಾದಿಯ ಪಾಂಗ್ರೂನ್ ದೊಡ್ಡಿಯ ಪ್ರಮುಖ ಆರೋಪಿ ಅಬಾಶ್ಯಾ ಕೊಡ್ಲೆಕರ, ಮಾನೇನದೊಡ್ಡಿಯ ಅಬಾಶ್ಯಾ ಮಾನೆ, ಅಲಿಯಾಬಾದಿನ ವಾಗೀಶ ಪೋಳ, ಅಲಿಯಾಬಾದ ತಾಂಡಾದ ಖಂಡೂಬಾ ತಾಂಡೆ, ಪಾಂಗ್ರೂಬನ್ ದೊಡ್ಡಿಯ ಜಾಲಿಂದರ್ ಹಕ್ಕೆ, ಪಾಂಗ್ರೂನ್ ದೊಡ್ಡಿಯ ಮುರುಗು ಹಕ್ಕೆ ಬಂಧಿತರಾಗಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು; 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ

ಇನ್ನು ಕೊಲೆಗೆ ಆಸ್ತಿ ವಿಚಾರವೇ ಕಾರಣ ಎನ್ನಲಾಗಿದೆ. ಖರಿ ಕುಟುಂಬಕ್ಕೆ ಸೇರಿದ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ರಾಜೂ ಖರಿ ಭಾಗಿಯಾಗಿದ್ದ. ಇದೇ ವಿಚಾರವಾಗಿ ಪ್ರಮುಖ ಆರೋಪಿ ಅಬಾಶ್ಯಾ ಕೋಪಕೊಂಡಿದ್ದ. ಇದೇ ಸಿಟ್ಟಲ್ಲಿ ಆರೋಪಿಗಳು ರಾಜು ಕೊಲೆ ಮಾಡಿರುವ ಬಗ್ಗೆ ಎಸ್ಪಿ ಮಾಹಿತಿ ನೀಡಿದ್ದಾರೆ. ಬಂಧಿತರಿಂದ 2 ಕಂಟ್ರಿ ಪಿಸ್ತೂಲ್ ಗಳು, 7 ಮೊಬೈಲ್, 2 ಮೋಟರ್ ಸೈಕಲ್ ಗಳು, ಟಿಪ್ಪರ್ ಮತ್ತು ಕಾರನ್ನು ವಶಕ್ಕೆ ಪಡೆದಿರೋದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:33 pm, Fri, 24 April 26

Source link

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ – Kannada News | Arvind Kejriwals First Reaction On Raghav Chadha and Other 6 AAP MPs Joinging BJP

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ಒಂದರ ಹಿಂದೊಂದರಂತೆ ಹೊಡೆತಗಳು ಬೀಳುತ್ತಲೇ ಇವೆ. ಪಕ್ಷಕ್ಕೆ ನಿಯತ್ತಾಗಿರುವ ಅನೇಕ ನಾಯಕರು ಇದೀಗ ಆಮ್ ಆದ್ಮಿ ಪಕ್ಷದ (AAP) ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷದೊಳಗೆ ಅತೃಪ್ತರ ಬಣ ದೊಡ್ಡದಾಗುತ್ತಲೇ ಇದೆ. ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್ (Arvind Kejriwal) ವಜಾಗೊಳಿಸಿದ ನಂತರ ಪಕ್ಷದಲ್ಲೇ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ರಾಘವ್ ಚಡ್ಡಾ ಮಹತ್ವದ ನಿರ್ಧಾರ ತೆಗೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ಹಾಗಂತ ಅವರೊಬ್ಬರೇ ಪಕ್ಷ ಬಿಟ್ಟು ಹೋಗುತ್ತಿಲ್ಲ. ಆಪ್​​ನೊಳಗಿನ ಇನ್ನೂ 6 ರಾಜ್ಯಸಭಾ ಸದಸ್ಯರನ್ನು ಕೂಡ ತಮ್ಮೊಂದಿಗೆ ಕರೆದುಕೊಂಡು ಬಿಜೆಪಿಗೆ ಕಾಲಿಟ್ಟಿದ್ದಾರೆ. ಇದು ಅರವಿಂದ್ ಕೇಜ್ರಿವಾಲ್​ಗೆ ದೊಡ್ಡ ಆಘಾತ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.’ಬಿಜೆಪಿ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ ಮಾಡಿದೆ’ ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆಮ್ ಆದ್ಮಿ ಪಕ್ಷದ 10 ರಾಜ್ಯಸಭಾ ಸಂಸದರಲ್ಲಿ 7 ಮಂದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುವುದಾಗಿ ಘೋಷಿಸಿದ ನಂತರ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಭಾರೀ ಹೊಡೆತ; 6 ಸಂಸದರೊಂದಿಗೆ ಆಮ್ ಆದ್ಮಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಘವ್ ಚಡ್ಡಾ

ರಾಘವ್ ಚಡ್ಡಾ ಜೊತೆಗೆ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಆಮ್ ಆದ್ಮಿ ಪಕ್ಷ ಬಿಟ್ಟು ಹೋಗಿದ್ದಾರೆ. ಪಕ್ಷದ ರಾಜ್ಯಸಭಾ ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದಾರೆ ಎಂದು ರಾಘವ್ ಚಡ್ಡಾ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.

“ರಾಜ್ಯಸಭೆಯಲ್ಲಿ 10 ಎಎಪಿ ಸಂಸದರಿದ್ದಾರೆ. ಅವರಲ್ಲಿ 2/3ಕ್ಕಿಂತ ಹೆಚ್ಚು ಜನರು ನಮ್ಮೊಂದಿಗಿದ್ದಾರೆ. ಅವರು ಸಹಿ ಮಾಡಿದ್ದಾರೆ. ಇಂದು ಬೆಳಿಗ್ಗೆ ನಾವು ಸಹಿ ಮಾಡಿದ ಪತ್ರ ಮತ್ತು ದಾಖಲೆಗಳನ್ನು ರಾಜ್ಯಸಭಾ ಅಧ್ಯಕ್ಷರಿಗೆ ಸಲ್ಲಿಸಿದ್ದೇವೆ. ಅವರಲ್ಲಿ ಮೂವರು ನಿಮ್ಮ ಮುಂದೆ ಇದ್ದಾರೆ. ಇವರು ಮಾತ್ರವಲ್ಲದೆ ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ, ವಿಕ್ರಮಜಿತ್ ಸಿಂಗ್ ಸಹ್ನಿ ಮತ್ತು ಸ್ವಾತಿ ಮಲಿವಾಲ್ ಕೂಡ ಬಿಜೆಪಿಗೆ ಸೇರಲಿದ್ದಾರೆ” ಎಂದು ರಾಘವ್ ಚಡ್ಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

“ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸುತ್ತೇವೆ ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ (BJP) ವಿಲೀನಗೊಳ್ಳುತ್ತೇವೆ.” ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ಸ್ವಾತಿ ಮಲಿವಾಲ್, ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ ಮತ್ತು ವಿಕ್ರಮ್‌ಜಿತ್ ಸಿಂಗ್ ಸಾಹ್ನಿ ಕೂಡ ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ? – Kannada News | How High Salt Intake Affects Calcium Levels and Bone Health

ಉಪ್ಪು (Salt) ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿದ್ದರೂ, ಅದನ್ನು ಅತಿಯಾಗಿ ಸೇವಿಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ತಿಳಿದ ವಿಚಾರ. ಹಾಗಾಗಿ ಉಪ್ಪನ್ನು ಇತಿಮಿತಿಯಲ್ಲಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಇತ್ತೀಚಿಗೆ ಹೊಸ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು ದೇಹದಲ್ಲಿ ಕ್ಯಾಲ್ಸಿಯಂ (Calcium Deficiency) ಸಮತೋಲನದ ಮೇಲೆ ಉಪ್ಪಿನ ಪ್ರಭಾವ ಹೇಗಿರುತ್ತದೆ ಎಂಬುದು ಹೆಚ್ಚು ಚರ್ಚೆಗೆ ಕಾರಣವಾಗಿದೆ. ಹಾಗಾದರೆ ಉಪ್ಪು ಮತ್ತು ಕ್ಯಾಲ್ಸಿಯಂ ನಡುವೆ ಇರುವ ಸಂಬಂಧವೇನು, ಯಾರಿಗೆ ಹೆಚ್ಚು ಅಪಾಯ ಮತ್ತು ಇಂತಹ ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಪ್ಪು ಮತ್ತು ಕ್ಯಾಲ್ಸಿಯಂ ನಡುವಿನ ಸಂಬಂಧ

ಕ್ಯಾಲ್ಸಿಯಂ ನಮ್ಮ ಎಲುಬು ಮತ್ತು ಹಲ್ಲುಗಳ ಬಲಕ್ಕೆ ಅತ್ಯಂತ ಅಗತ್ಯವಾದ ಖನಿಜವಾಗಿದೆ. ಜೊತೆಗೆ ನರ ಮತ್ತು ಸ್ನಾಯುಗಳ ಸರಿಯಾದ ಕಾರ್ಯನಿರ್ವಹಣೆಗೆ ಇದು ಪ್ರಮುಖವಾಗಿದೆ. ಆದರೆ ಹೆಚ್ಚು ಉಪ್ಪು ಸೇವಿಸಿದಾಗ ದೇಹದಲ್ಲಿ ಖನಿಜಗಳ ಸಮತೋಲನ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ. ಕೆಲವು ಅಧ್ಯಯನಗಳ ಪ್ರಕಾರ, ಅಧಿಕ ಉಪ್ಪು ಸೇವನೆಯಿಂದ ಮೂತ್ರದ ಮೂಲಕ ಕ್ಯಾಲ್ಸಿಯಂ ಹೊರಹೋಗುವ ಪ್ರಮಾಣ ಹೆಚ್ಚಾಗಬಹುದು. ಅದಲ್ಲದೆ ದೀರ್ಘಕಾಲ ಉಪ್ಪನ್ನು ಹೆಚ್ಚಾಗಿ ಸೇವಿಸಿದರೆ ಎಲುಬುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಎಲುಬುಗಳು ದುರ್ಬಲವಾಗುವ ಅಪಾಯ ಹೆಚ್ಚಾಗಿರುತ್ತದೆ. ವಿಶೇಷವಾಗಿ ಕ್ಯಾಲ್ಸಿಯಂ ಕೊರತೆಯಿರುವವರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳಬಹುದು.

ಇದನ್ನೂ ಓದಿ: ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಯಾರು ಹೆಚ್ಚು ಅಪಾಯದಲ್ಲಿದ್ದಾರೆ?

ಹಿರಿಯರು, ಮಹಿಳೆಯರು ಮತ್ತು ಈಗಾಗಲೇ ಕ್ಯಾಲ್ಸಿಯಂ ಕೊರತೆಯಿಂದ ಬಳಲುತ್ತಿರುವವರು ಹೆಚ್ಚು ಎಚ್ಚರಿಕೆಯಿಂದಿರಬೇಕು. ಹಾರ್ಮೋನ್ ಬದಲಾವಣೆಗಳು, ಆಹಾರ ಪದ್ಧತಿ ಸರಿಯಾಗಿ ಪಾಲನೆ ಮಾಡದಿದ್ದವರು ಮತ್ತು ವ್ಯಾಯಾಮದ ಕೊರತೆಯೂ ಈ ಅಪಾಯವನ್ನು ಹೆಚ್ಚಿಸಬಹುದು.

ಹೇಗೆ ನಿಯಂತ್ರಿಸಬೇಕು?

ಉಪ್ಪಿನ ಸೇವನೆಯನ್ನು ನಿಯಂತ್ರಿತ ಮಟ್ಟದಲ್ಲಿ ಇಡುವುದು ಅತ್ಯಂತ ಮುಖ್ಯ. ಹೆಚ್ಚು ಉಪ್ಪು ಇರುವ ಪ್ರೊಸೆಸ್ಡ್ ಆಹಾರಗಳನ್ನು ಕಡಿಮೆ ಮಾಡಬೇಕು. ಜೊತೆಗೆ ಹಾಲು, ಮೊಸರು, ಹಸಿರು ತರಕಾರಿಗಳು ಮುಂತಾದ ಕ್ಯಾಲ್ಸಿಯಂ ಸಮೃದ್ಧ ಆಹಾರಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಉಪ್ಪನ್ನು ಮಿತ ಪ್ರಮಾಣದಲ್ಲಿ ಬಳಸುವುದು ಮತ್ತು ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸುವುದು ದೇಹದ ಖನಿಜ ಸಮತೋಲನ ಕಾಪಾಡಲು ಸಹಾಯಕ. ಸರಿಯಾದ ಜೀವನಶೈಲಿಯ ಮೂಲಕ ಕ್ಯಾಲ್ಸಿಯಂ ಕೊರತೆಯ ಅಪಾಯವನ್ನು ಕಡಿಮೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿದಂತೆ 56,400 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಕ್ಷಣವೇ ಆರಂಭವಾಗಲಿದೆ. ಈ ಎಲ್ಲಾ ನೇಮಕಾತಿಗಳಲ್ಲಿ ಈಗ ಘೋಷಿಸಲಾದ ಹೊಸ ಒಳ ಮೀಸಲಾತಿ ಪದ್ಧತಿಯನ್ನೇ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?

Source link

ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ? – Kannada News | Know what happens if Credit Card not used for long time, how it affects credit score

ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್​ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ.

‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್ ಸ್ಕೋರ್ ಕಡಿಮೆ ಆಗುವುದಿಲ್ಲ ಎನ್ನುವುದು ಹೌದು. ಆದರೆ, ಕಾರ್ಡ್ ಬಳಕೆ ದೀರ್ಘಾವಧಿಯವರೆಗೆ ಇಲ್ಲದಿದ್ದಾಗ ಕ್ರೆಡಿಟ್ ಹಿಸ್ಟರಿಯ ಅವಧಿ ಕಡಿಮೆ ಆಗುತ್ತದೆ. ಇದರಿಂದ ಕ್ರೆಡಿಟ್ ಕಾರ್ಡ್ ಕಂಪನಿ ನಿಮ್ಮ ಅಕೌಂಟ್ ಮುಚ್ಚಬಹುದು. ಇದು ಒಟ್ಟಾರೆ ಯುಟಿಲೈಸೇಶನ್ ರೇಶಿಯೋ ಹೆಚ್ಚಲು ಕಾರಣವಾಗಬಹುದು. ಆ ಮೂಲಕ ಕ್ರೆಡಿಟ್ ಸ್ಕೋರ್​ಗೆ ಸ್ವಲ್ಪ ಹಿನ್ನಡೆಗೆ ಕಾರಣವಾಗಬಹುದು’ ಎಂದು ಝ್ಯಾಗಲ್ ಕಂಪನಿಯ ಎಕ್ಸಿಕ್ಯೂಟಿವ್ ಛೇರ್ಮನ್ ರಾಜ್ ಪಿ ನಾರಾಯಣಂ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷ ರೂ ಹೂಡಿಕೆಯಿಂದ 5,000 ರೂ ಪಿಂಚಣಿ; ಜನಪ್ರಿಯವಾಗುತ್ತಿದೆ ಎಪಿವೈ ಪೆನ್ಷನ್ ಸ್ಕೀಮ್

ಕ್ರೆಡಿಟ್ ಹಿಸ್ಟರಿ ಅವಧಿ ಕಡಿಮೆ ಇದ್ದರೆ ಏನು ಸಮಸ್ಯೆ?

ಸಾಲ ಪಡೆಯಬೇಕೆನ್ನುವವರು ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರಬೇಕು. ಸ್ಕೋರ್ ಹೆಚ್ಚಿಸಬೇಕೆಂದರೆ ಉತ್ತಮ ಕ್ರೆಡಿಟ್ ಹಿಸ್ಟರಿ ಇರಬೇಕು. ಕ್ರೆಡಿಟ್ ಕಾರ್ಡ್ ಮೂಲಕ ವೆಚ್ಚ ಮಾಡುವುದು, ಸರಿಯಾದ ಸಮಯಕ್ಕೆ ಹಣ ಪಾವತಿಸುವುದು, ಇಎಂಐ ಕಟ್ಟುವುದು ಇವು ಕ್ರೆಡಿಟ್ ಸ್ಕೋರ್ ಅನ್ನು ಹೆಚ್ಚಿಸುತ್ತವೆ.

ಹಣಕಾಸು ಸಂಸ್ಥೆಗಳು ನಿಮ್ಮ ಸಾಲದ ನಿರ್ವಹಣೆ ಹೇಗಿದೆ, ನಿಮಗೆ ಸಾಲ ತೀರಿಸುವ ಜವಾಬ್ದಾರಿ ಮತ್ತು ಶಕ್ತಿ ಇದೆಯಾ ಎಂಬುದನ್ನು ಗಮನಿಸುತ್ತವೆ. ಇಲ್ಲಿ ಕ್ರೆಡಿಟ್ ಸ್ಕೋರ್ ಜೊತೆಗೆ ಕ್ರೆಡಿಟ್ ಹಿಸ್ಟರಿಯೂ ಗಣನೆಗೆ ಬರುತ್ತದೆ.

ಇದನ್ನೂ ಓದಿ: ಮಾಸಿಕ 20,500 ರೂ ಆದಾಯ ತರಬಲ್ಲ ಪೋಸ್ಟ್ ಆಫೀಸ್​ನ ಎಸ್​ಸಿಎಸ್​ಎಸ್ ಸ್ಕೀಮ್

ನೀವು ಕ್ರೆಡಿಟ್ ಕಾರ್ಡ್ ಪಡೆದು ಅದನ್ನು ಬಹಳ ಕಾಲ ಉಪಯೋಗಿಸುವುದನ್ನು ನಿಲ್ಲಿಸಿದ್ದರೆ ಅಕೌಂಟ್ ಮುಚ್ಚಬಹುದು. ಇದರಿಂದ ಕ್ರೆಡಿಟ್ ಹಿಸ್ಟರಿ ಮೊಟಕುಗೊಳ್ಳಬಹುದು. ಇದರ ಬದಲು ಕ್ರೆಡಿಟ್ ಕಾರ್ಡ್ ಅನ್ನು ಯಾವಾಗಲಾದರೊಮ್ಮೆಯಾದರೂ ಉಪಯೋಗಿಸಿ, ಬಿಲ್ ಅನ್ನು ಸಕಾಲಕ್ಕೆ ಪಾವತಿಸುತ್ತಿದ್ದರೆ ಕ್ರೆಡಿಟ್ ಹಿಸ್ಟರಿ ಬೆಳೆಯುತ್ತಿರುತ್ತದೆ. ನಿಮಗೆ ಮುಂದೆ ಸಾಲಗಳು ಸಿಗುವುದು ಸುಲಭವಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್ – Kannada News | Lung specialist doctor Manjunath gives minister D Sudhakar health updates, here Is hospital statement

ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚಿನ್ನದುರೈ ಎಂ ಡಿ ಅವರು ಪ್ರಕಟಣೆ ಹೊರಡಿಸಿದ್ದು, ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಚಿವರ ಅರೋಗ್ಯದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿವೆ. ಇದು ಅವರ ಅಭಿಮಾನಿಗಳಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು?

ಕಿಮ್ಸ್ ಆಸ್ಪತ್ರೆಯ ಶ್ವಾಸಕೋಶ ಕಸಿ ವೈದ್ಯ ಹೇಳಿದ್ದೇನು?

ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಕಿಮ್ಸ್ ಆಸ್ಪತ್ರೆ ಶ್ವಾಸಕೋಶ ಕಸಿ ವೈದ್ಯ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸಚಿವ ಡಿ ಸುಧಾಕರ್ಗೆ ಚಿಕಿತ್ಸೆ ನೀಡಲಾಗುತ್ತಿದೆ.ತಜ್ಞ ವೈದ್ಯಕೀಯ ತಂಡದಿಂದ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ವೆಂಟಿಲೇಟರ್ ಮತ್ತು ಎಕ್ಮೋ ನೆರವಿನಿಂದ ಉಸಿರಾಟವಾಡುತ್ತಿದ್ದಾರೆ. ಇನ್ಫೆಕ್ಷನ್ ಆಗಿರುವ ಶ್ವಾಸಕೋಶ ಸರಿಪಡಿಸಲು ಪ್ರಯತ್ನ ಪ್ರಯತ್ನ ನಡೆದಿದೆ. ಸಾಧ್ಯವಾಗದಿದ್ದಾಗ ಶ್ವಾಸಕೋಶ ಕಸಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಆಸ್ಪತ್ರೆಯಿಂದ ಹೆಲ್ತ್​ ಬುಲೆಟಿನ್

ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿರುವುದರಿಂದ ಕಿಮ್ಸ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಚಿನ್ನದೊರೈ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸುಧಾಕರ್ ಅವರಿಗೆ ಕಿಮ್ಸ್ ನ‌ ICU ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಚಿವ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವ ಅವರು ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಚಿನ್ನದೊರೈ ಹೆಲ್ತ್ ಬುಲೆಟಿನ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಆಪರೇಷನ್ ಬಳಿಕ ಶ್ವಾಸಕೋಶ ಸೋಂಕು

ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಇದು ಇದ್ದಕ್ಕಿದ್ದಂತೆ ಉಲ್ಬಣವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು – Kannada News | Siddaramaiah Governmnet takes Final destinations about SC internal reservation, here CM press conference

ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಹೇಳಿದ್ದಾರೆ ನೋಡಿ.

ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?

Source link

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ – Kannada News | Bagalkot Universitys First Convocation Celebrates Gold Medalists: Farmers Daughters Shine

ಬಾಗಲಕೋಟೆ, ಏಪ್ರಿಲ್​​ 24: ಇಲ್ಲಿನ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರು ಚಿನ್ನದ ಪದಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಭಾಗವಹಿಸಿದ್ದರು. ಎಂಎಸ್ಸಿ ಭೌತಶಾಸ್ತ್ರದಲ್ಲಿ 8.9 ಸಿಜಿಪಿಎ ಗಳಿಸಿರುವ ಸನ್ಮತಿ ಜಿನಪ್ಪ ಕುಪ್ಪಿ ಅವರು ಬಸವೇಶ್ವರ ಬಾಗಲಕೋಟ್ ಕಾಲೇಜಿನಿಂದ ವಿಶ್ವವಿದ್ಯಾಲಯದ ಮೊದಲ ಭೌತಶಾಸ್ತ್ರ ಗೋಲ್ಡ್​​ ಮೆಡಲ್​ ವಿಜೇತರಾಗಿದ್ದಾರೆ. ರೈತ ಕುಟುಂಬದಿಂದ ಬಂದಿರುವ ಸನ್ಮತಿ, ತಮ್ಮ ಈ ಸಾಧನೆಯು ತಮ್ಮ ಹಲವು ವರ್ಷಗಳ ಕಷ್ಟದ ಫಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಸನ್ಮತಿ ಪ್ರಸ್ತುತ ಬಿಎಲ್ಡಿ ಕಾಲೇಜಿನಲ್ಲಿ ಬೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಪಿಎಚ್‌ಡಿ ಮತ್ತು ಸಂಶೋಧನಾ ಕ್ಷೇತ್ರವನ್ನು ಪ್ರವೇಶಿಸುವ ಆಕಾಂಕ್ಷೆ ಹೊಂದಿದ್ದಾರೆ. ಕಳೆದ ವರ್ಷ ಕೆಸೆಟ್ ಪರೀಕ್ಷೆಯನ್ನು ಕೂಡ ಅವರು ಉತ್ತೀರ್ಣರಾಗಿದ್ದಾರೆ. ಇದೇ ರೀತಿ, ಇತಿಹಾಸ ವಿಷಯದಲ್ಲಿ ಚಿನ್ನದ ಪದಕ ಗಳಿಸಿದ ಪ್ರಿಯಾಂಕ ಅಟ್ಪತ್ ಕೂಡ ತಮ್ಮ ಸಾಧನೆಯ ಬಗ್ಗೆ ಅಪಾರ ಸಂತಸಗೊಂಡಿದ್ದಾರೆ. ಇತ್ತೀಚೆಗೆ ಕೆಸೆಟ್ ಪರೀಕ್ಷೆಯನ್ನು ಉತ್ತೀರ್ಣರಾಗಿರುವ ಪ್ರಿಯಾಂಕ, ಸಹಾಯಕ ಪ್ರಾಧ್ಯಾಪಕರಾಗುವ ಗುರಿ ಹೊಂದಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರೂ ತಮ್ಮ ಪೋಷಕರ ಸಂಪೂರ್ಣ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ್ದು, ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link