Headlines

ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ – Kannada News | Deepika Padukone shoots for King Movie with Shah Rukh Khan during her 2nd pregnancy

ಬಾಲಿವುಡ್‌ನ ಸ್ಟಾರ್ ಕಪಲ್ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವು ಎರಡನೇ ಬಾರಿಗೆ ಪೋಷಕರಾಗುತ್ತಿರುವ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದರು. ತಮ್ಮ ಮೊದಲ ಮಗಳು ದುವಾ ಅವಳೊಂದಿಗೆ ಇರುವ ಮುದ್ದಾದ ಪೋಸ್ಟ್ ಮೂಲಕ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದರು. ಈ ಸಂಭ್ರಮದ ನಡುವೆಯೂ ದೀಪಿಕಾ ವಿಶ್ರಾಂತಿ ಪಡೆಯದೇ, ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ಜೊತೆ ‘ಕಿಂಗ್’ ಸಿನಿಮಾದ (King Movie) ಚಿತ್ರೀಕರಣದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದಾರೆ ಎನ್ನಲಾಗಿದೆ….

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ – Kannada News | The Kerala Story 2 movie Releasing on OTT on May 8

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ಕೇರಳದಲ್ಲಿ ನಡೆದ ಮತಾಂತರರ ಬಗೆಗಿನ ಸಿನಿಮಾ ಇದೆಂದು ಹೇಳಲಾದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಗೆಲುವು ಕಂಡಿತ್ತು. ಸಾಕಷ್ಟು ವಿರೋಧವೂ ಸಹ ಸಿನಿಮಾಕ್ಕೆ ವ್ಯಕ್ತವಾಗಿತ್ತು. ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆ ಆಯ್ತು. ಈ ಸಿನಿಮಾಕ್ಕೂ ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೂ ಬಾಕ್ಸ್ ಆಫೀಸ್​​ನಲ್ಲಿ ತಕ್ಕ ಮಟ್ಟಿಗೆ ಉತ್ತಮ…

Read More

ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ. ತಮ್ಮ…

Read More

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ – Kannada News | Arvind Kejriwals First Reaction On Raghav Chadha and Other 6 AAP MPs Joinging BJP

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ಒಂದರ ಹಿಂದೊಂದರಂತೆ ಹೊಡೆತಗಳು ಬೀಳುತ್ತಲೇ ಇವೆ. ಪಕ್ಷಕ್ಕೆ ನಿಯತ್ತಾಗಿರುವ ಅನೇಕ ನಾಯಕರು ಇದೀಗ ಆಮ್ ಆದ್ಮಿ ಪಕ್ಷದ (AAP) ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷದೊಳಗೆ ಅತೃಪ್ತರ ಬಣ ದೊಡ್ಡದಾಗುತ್ತಲೇ ಇದೆ. ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್ (Arvind Kejriwal) ವಜಾಗೊಳಿಸಿದ ನಂತರ ಪಕ್ಷದಲ್ಲೇ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ರಾಘವ್ ಚಡ್ಡಾ ಮಹತ್ವದ ನಿರ್ಧಾರ ತೆಗೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು,…

Read More

ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ? – Kannada News | How High Salt Intake Affects Calcium Levels and Bone Health

ಉಪ್ಪು (Salt) ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿದ್ದರೂ, ಅದನ್ನು ಅತಿಯಾಗಿ ಸೇವಿಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ತಿಳಿದ ವಿಚಾರ. ಹಾಗಾಗಿ ಉಪ್ಪನ್ನು ಇತಿಮಿತಿಯಲ್ಲಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಇತ್ತೀಚಿಗೆ ಹೊಸ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು ದೇಹದಲ್ಲಿ ಕ್ಯಾಲ್ಸಿಯಂ (Calcium Deficiency) ಸಮತೋಲನದ ಮೇಲೆ ಉಪ್ಪಿನ ಪ್ರಭಾವ ಹೇಗಿರುತ್ತದೆ ಎಂಬುದು ಹೆಚ್ಚು ಚರ್ಚೆಗೆ ಕಾರಣವಾಗಿದೆ. ಹಾಗಾದರೆ ಉಪ್ಪು ಮತ್ತು ಕ್ಯಾಲ್ಸಿಯಂ ನಡುವೆ ಇರುವ ಸಂಬಂಧವೇನು, ಯಾರಿಗೆ ಹೆಚ್ಚು ಅಪಾಯ…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ…

Read More

ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ? – Kannada News | Know what happens if Credit Card not used for long time, how it affects credit score

ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್​ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ. ‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್…

Read More

D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್ – Kannada News | Lung specialist doctor Manjunath gives minister D Sudhakar health updates, here Is hospital statement

ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು…

Read More

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು – Kannada News | Siddaramaiah Governmnet takes Final destinations about SC internal reservation, here CM press conference

ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ….

Read More

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ – Kannada News | Bagalkot Universitys First Convocation Celebrates Gold Medalists: Farmers Daughters Shine

ಬಾಗಲಕೋಟೆ, ಏಪ್ರಿಲ್​​ 24: ಇಲ್ಲಿನ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರು ಚಿನ್ನದ ಪದಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಭಾಗವಹಿಸಿದ್ದರು. ಎಂಎಸ್ಸಿ ಭೌತಶಾಸ್ತ್ರದಲ್ಲಿ 8.9 ಸಿಜಿಪಿಎ ಗಳಿಸಿರುವ ಸನ್ಮತಿ ಜಿನಪ್ಪ ಕುಪ್ಪಿ ಅವರು ಬಸವೇಶ್ವರ ಬಾಗಲಕೋಟ್ ಕಾಲೇಜಿನಿಂದ ವಿಶ್ವವಿದ್ಯಾಲಯದ ಮೊದಲ ಭೌತಶಾಸ್ತ್ರ ಗೋಲ್ಡ್​​ ಮೆಡಲ್​ ವಿಜೇತರಾಗಿದ್ದಾರೆ. ರೈತ ಕುಟುಂಬದಿಂದ ಬಂದಿರುವ ಸನ್ಮತಿ, ತಮ್ಮ ಈ ಸಾಧನೆಯು ತಮ್ಮ ಹಲವು ವರ್ಷಗಳ…

Read More