ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ – Kannada News | PM Modi interacts with students and loco pilots in Vande Bharat Sleeper Train
ಮಾಲ್ಡಾ, ಜನವರಿ 17: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಈ ವಿಶೇಷವಾದ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳು ಮತ್ತು ರೈಲ್ವೆ ಸಿಬ್ಬಂದಿಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಈ ಯೋಜನೆಯಲ್ಲಿ…