Category Archives: Blog

Your blog category

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು? – Kannada News | Koppal hirehalla reservoir Empty And full dry over Summer temperature

ಕೊಪ್ಪಳ, (ಏಪ್ರಿಲ್ 24): ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ (hirehalla reservoir) 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ. ಅಲ್ಲದೇ ಬಿಸಿಲಿನ ಹೊಡೆತಕ್ಕೆ ಬರಡು ಭೂಮಿಯಂತಾಗಿದೆ. ಸದ್ಯ ಜಲಾಶಯದಲ್ಲಿ ಕೇವಲ ಶೇಕಡಾ 20 ರಷ್ಟು ನೀರು ಸಂಗ್ರಹವಿದ್ದು, ಒಂದು ತಿಂಗಳಲ್ಲೇ ಈ ನೀರು ಸಹ ಖಾಲಿಯಾಗಲಿದೆ. ಬಳಿಕ ಜಲಾಶವೇ ಖಾಲಿ ಖಾಲಿಯಾಗಲಿದೆ. ಇದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿಗೆ ಬರ ಎದುರಾಗಲಿದೆ. ಈ ಕುರಿತು ನಮ್ಮ ಪ್ರತಿನಿಧಿ ಶಿವಕುಮಾರ್ ಪತ್ತಾರ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ಇದನ್ನೂ ನೋಡಿ: ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

Source link

ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ! – Kannada News | Mysore Heatwave Health Alert: Hospitals Set Up Special Units for Children and Elderly Care

ಮೈಸೂರು, ಏಪ್ರಿಲ್ 24: ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಕೆ.ಆರ್ ಆಸ್ಪತ್ರೆಯಲ್ಲಿ 20 ಬೆಡ್‌ಗಳು ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ 15 ಬೆಡ್‌ಗಳನ್ನು ಬಿಸಿಲಿನ ಪರಿಣಾಮದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ, ಮಕ್ಕಳ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್ ವ್ಯವಸ್ಥೆ ಮಾಡಲಾಗಿದ್ದು, ರೋಗಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಅಗತ್ಯ ಸಲಹೆಗಳನ್ನು ನೀಡುತ್ತಿದೆ.

 

 

Source link

ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಮುಗಿಬಿದ್ದಿದ್ದ ಜನ ಈಗ ಸೈಲೆಂಟ್: ಕರ್ನಾಟಕದಲ್ಲಿ ಎಲ್‌ಪಿಜಿ ಬೇಡಿಕೆ ದಿಢೀರ್ ಕುಸಿತ! ಕಾರಣವೇನು? – Kannada News | LPG Shortage Fears in Karnataka Ease: Adequate Supply and Reduced Artificial Demand

ಬೆಂಗಳೂರು, ಏ.24: ಅಮೆರಿಕ, ಇಸ್ರೇಲ್, ಇರಾನ್​ ಯುದ್ಧದಿಂದ ದೇಶದಲ್ಲಿ ಗ್ಯಾಸ್​​​ ಸಿಲಿಂಡರ್​​​​ ಕೊರೆತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲೂ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಜನ ಸಾಲು ನಿಂತು ಗ್ಯಾಸ್​​​​ ಪಡೆದುಕೊಳ್ಳಲು ಪರಾಡುತ್ತಿದ್ದರು. ಇದೀಗ ಈ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಭೀತಿಯಿಂದ ಗ್ರಾಹಕರು ಮುಗಿಬಿದ್ದು ಬುಕಿಂಗ್ ಮಾಡುತ್ತಿರುವ ಘಟನೆಗಳು ಈಗ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ದೈನಂದಿನ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೇಡಿಕೆಯು ಗರಿಷ್ಠ ಮಟ್ಟದಲ್ಲಿದ್ದಾಗ ದಿನಕ್ಕೆ 3.75 ಲಕ್ಷ ಇತ್ತು. ಆದರೆ, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂಬ ಭರವಸೆ ಮತ್ತು ಮಾರುಕಟ್ಟೆ ಸ್ಥಿರಗೊಂಡ ನಂತರ ಈ ಬೇಡಿಕೆಯು ಈಗ ದಿನಕ್ಕೆ 3.06 ಲಕ್ಷಕ್ಕೆ ಕುಸಿದಿದೆ. ಅಂದರೆ ದಿನವೊಂದಕ್ಕೆ ಸುಮಾರು 69,000 ಸಿಲಿಂಡರ್‌ಗಳಷ್ಟು ಬೇಡಿಕೆ ಕಡಿಮೆಯಾಗಿದೆ.

ಇತ್ತೀಚೆಗೆ ಕೆವೈಸಿ (e-KYC) ಅಪ್‌ಡೇಟ್ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಕಟ್ ಆಗುತ್ತದೆ ಅಥವಾ ಸಬ್ಸಿಡಿ ನಿಲ್ಲುತ್ತದೆ ಎಂಬ ವದಂತಿಗಳು ಹರಡಿದ್ದವು. ಜೊತೆಗೆ ವಿತರಣೆಯಲ್ಲಿ ವಿಳಂಬವಾಗಬಹುದು ಎಂಬ ಆತಂಕದಿಂದ ಜನರು ತಮಗೆ ಅಗತ್ಯವಿಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಸಿಲಿಂಡರ್‌ಗಳನ್ನು ಬುಕ್ ಮಾಡಲು ಆರಂಭಿಸಿದ್ದರು. ಇದು ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗಲು ಕಾರಣವಾಗಿತ್ತು.

ಇದನ್ನೂ ಓದಿ: ಬಡವರಿಗೆ ಸೇರಬೇಕಿದ್ದ ಅನ್ನಭಾಗ್ಯ ಅಕ್ಕಿ ದಂಧೆಕೋರರ ಪಾಲು: 2,000ಕ್ಕೂ ಹೆಚ್ಚು ಮೂಟೆಗಳು ವಶಕ್ಕೆ

“ರಾಜ್ಯದಲ್ಲಿ ಎಲ್‌ಪಿಜಿ ಸಂಗ್ರಹ ಸಾಕಷ್ಟಿದೆ ಮತ್ತು ಪೂರೈಕೆಯಲ್ಲಿ ಯಾವುದೇ ಅಡಚಣೆ ಇಲ್ಲ. ಗ್ರಾಹಕರು ಅನಗತ್ಯವಾಗಿ ಆತಂಕಕ್ಕೊಳಗಾಗಿ ಹೆಚ್ಚಿನ ಸಿಲಿಂಡರ್‌ಗಳನ್ನು ಬುಕ್ ಮಾಡುವ ಅಗತ್ಯವಿಲ್ಲ” ಎಂದು ತೈಲ ಮಾರುಕಟ್ಟೆ ಕಂಪನಿಗಳು (OMCs) ಗ್ರಾಹಕರಿಗೆ ಮನವಿ ಮಾಡಿದ್ದವು. ಈ ಸ್ಪಷ್ಟನೆಯ ನಂತರ ಈಗ ಬುಕಿಂಗ್ ಪ್ರಕ್ರಿಯೆ ಸಹಜ ಸ್ಥಿತಿಗೆ ಮರಳುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ಕಿಮ್ಸ್‌ನಲ್ಲಿ ರೋಗಿಗಳಿಗೆ ಓಪಿಡಿ ಸಂಕಷ್ಟ: ಚಿಕಿತ್ಸೆಗೂ ಮುನ್ನ ಚೀಟಿಗಾಗಿ ಗಂಟೆಗಟ್ಟಲೆ ಕ್ಯೂ! – Kannada News | Hubballi KIMS Crisis: Patients Wait for Hours in Long Queues for OPD Slips Due to Server Issues

ಓಪಿಡಿ ಚೀಟಿ ಮಾಡಿಸಿಕೊಳ್ಳಲು ಸರದಿಯಲ್ಲಿ ಕಾಯುತ್ತಿರುವ ಜನImage Credit source: tv9

ಹುಬ್ಬಳ್ಳಿ, ಏಪ್ರಿಲ್ 24: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಚಿಕಿತ್ಸೆ ಪಡೆಯುವ ಮೊದಲು ಓಪಿಡಿ (OPD) ಚೀಟಿ ಮಾಡಿಸಿಕೊಳ್ಳುವುದೇ ರೋಗಿಗಳಿಗೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ವರ್ ಸಮಸ್ಯೆಯಿಂದಾಗಿ ರೋಗಿಗಳು ಮತ್ತು ಅವರ ಕುಟುಂಬದವರು ನರಕಯಾತನೆ ಅನುಭವಿಸುವಂತಾಗಿದೆ. ಚೀಟಿ ಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವಂಥ ಪರಿಸ್ಥಿತಿ ಉದ್ಭವಿಸಿದೆ.

ಗಂಟೆಗಟ್ಟಲೆ ಕಾಯುವ ಅನಿವಾರ್ಯತೆ

ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಪ್ರತಿನಿತ್ಯ 2,000ಕ್ಕೂ ಹೆಚ್ಚು ರೋಗಿಗಳು ಕಿಮ್ಸ್‌ಗೆ ಆಗಮಿಸುತ್ತಾರೆ. ಇಲ್ಲಿ ಚಿಕಿತ್ಸೆ ಪಡೆಯಲು ಮೊದಲು ಓಪಿಡಿ ಚೀಟಿ ಪಡೆಯಬೇಕು. ಇದಕ್ಕಾಗಿ ಆಸ್ಪತ್ರೆಯಲ್ಲಿ ಆರು ಕೌಂಟರ್‌ಗಳ ವ್ಯವಸ್ಥೆ ಇದ್ದರೂ, ಪ್ರತಿಯೊಬ್ಬ ರೋಗಿಯೂ ಕನಿಷ್ಠ ಎರಡು ಗಂಟೆಗಳ ಕಾಲ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಮುಂಜಾನೆ 9 ಗಂಟೆಗೆ ಕ್ಯೂ ನಿಂತರೆ, ಚೀಟಿ ಕೈ ಸೇರುವ ಹೊತ್ತಿಗೆ ಮಧ್ಯಾಹ್ನ 12 ಗಂಟೆಯಾಗಿರುತ್ತದೆ. ವೈದ್ಯರು ಊಟಕ್ಕೆ ಹೋಗುವ ಸಮಯವಾಗುವುದರಿಂದ ರೋಗಿಗಳು ಒಂದೇ ದಿನದಲ್ಲಿ ಚಿಕಿತ್ಸೆ ಪಡೆದು ಹಿಂತಿರುಗುವುದು ಅಸಾಧ್ಯವಾಗಿದೆ.

ಸರ್ವರ್ ಸಮಸ್ಯೆಯೇ ವಿಳಂಬಕ್ಕೆ ಕಾರಣ

ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಮಾಹಿತಿ ಸಂಗ್ರಹಿಸಲು ಆನ್‌ಲೈನ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ, ಕಳೆದ ಎರಡು ತಿಂಗಳಿನಿಂದ ಸರ್ವರ್ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಆನ್‌ಲೈನ್‌ನಲ್ಲಿ ಒಬ್ಬರ ಹೆಸರನ್ನು ಎಂಟ್ರಿ ಮಾಡಲು ಸುಮಾರು 5 ರಿಂದ 10 ನಿಮಿಷಗಳು ತಗಲುತ್ತಿವೆ. ಇದರಿಂದಾಗಿ ಸರದಿ ಸಾಲು ಕಿಲೋಮೀಟರ್‌ಗಟ್ಟಲೆ ಬೆಳೆಯುತ್ತಿದೆ. ವೃದ್ಧರು, ಮಹಿಳೆಯರು ಮತ್ತು ಪುಟ್ಟ ಮಕ್ಕಳನ್ನು ಕರೆತಂದ ಪೋಷಕರು ಕ್ಯೂನಲ್ಲಿ ನಿಂತು ನಿಂತು ಸುಸ್ತಾಗಿ ನೆಲದ ಮೇಲೆಯೇ ಕುಳಿತುಕೊಳ್ಳುವ ದೃಶ್ಯಗಳು ಇಲ್ಲಿ ಸಾಮಾನ್ಯವಾಗಿದೆ.

ವೃದ್ಧರ ಪಾಡು ದೇವರಿಗೇ ಪ್ರೀತಿ

ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಕೌಂಟರ್ ಇದ್ದರೂ ಸಹ, ಅಲ್ಲಿ ಎಲ್ಲಾ ವಯೋಮಾನದವರು ಸಾಲಿನಲ್ಲಿ ನಿಲ್ಲುತ್ತಿರುವುದು ವೃದ್ಧರ ಆಕ್ರೋಶಕ್ಕೆ ಕಾರಣವಾಗಿದೆ. ಬಿಲ್ ಪಾವತಿ ಮತ್ತು ವಿವಿಧ ತಪಾಸಣಾ ವರದಿಗಳನ್ನು ಪಡೆಯುವ ಕೌಂಟರ್‌ಗಳಲ್ಲೂ ಇದೇ ಪರಿಸ್ಥಿತಿ ಮುಂದುವರಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಿಮ್ಸ್ ನಿರ್ದೇಶಕ ಡಾ. ಈಶ್ವರ್ ಹೊಸಮನಿ, ‘ಕೆಲವೊಮ್ಮೆ ಸರ್ವರ್ ಡೌನ್ ಆಗುತ್ತಿದೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸರ್ವರ್ ಸುಧಾರಣೆಗೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ: ಪೊಲೀಸ್ ಕಮಿಷನರ್ ಹೇಳಿದ್ದೇನು ನೋಡಿ

ಆದರೆ, ಕೇವಲ ಭರವಸೆ ನೀಡಿದರೆ ಸಾಲದು, ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯುವ ಮೂಲಕ ಮತ್ತು ತಾಂತ್ರಿಕ ದೋಷಗಳನ್ನು ಶೀಘ್ರವಾಗಿ ಸರಿಪಡಿಸುವ ಮೂಲಕ ಬಡ ರೋಗಿಗಳ ಪರದಾಟಕ್ಕೆ ಕಿಮ್ಸ್ ಆಡಳಿತ ಮಂಡಳಿ ಮುಕ್ತಿ ನೀಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಕ್ಷ್ಮೀಪುರ ಬಿಡಿಎ ಲೇಔಟ್​ನಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿಬಿದ್ದ ಜನ – Kannada News | Bengaluru: Decomposed Body Found in Gunny Bag at Lakshmipura BDA Layout Nelamangala; Police Launch Investigation

ನೆಲಮಂಗಲ, ಏಪ್ರಲ್ 24: ನೆಲಮಂಗಲದ ಲಕ್ಷ್ಮೀಪುರ ಬಿಡಿಎ ಲೇಔಟ್‌ನಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಚೀಲಕ್ಕೆ ತುಂಬಿ ಇಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಿನ ಜಾವ ವಾಕಿಂಗ್‌ಗೆ ಬಂದ ಸ್ಥಳೀಯರೊಬ್ಬರು ನಾಯಿಗಳು ಚೀಲವನ್ನು ಎಳೆಯುತ್ತಿದ್ದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ವಾಯುವ್ಯ ವಿಭಾಗದ ಗಂಗಮ್ಮಗುಡಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಸೋಕೋ (ಸೀನ್ ಆಫ್ ಕ್ರೈಂ ಆಫೀಸರ್) ತಂಡ ಕೂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣೆಯಾದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪತ್ತೆಯಾದ ಶವ ಪುರುಷನದ್ದು ಎಂದು ಗುರುತಿಸಲಾಗಿದೆ. ಈ ಪ್ರದೇಶವು ನಿರ್ಜನವಾಗಿದ್ದು, ಖಾಲಿ ಸೈಟ್‌ಗಳಿಂದ ಕೂಡಿದೆ. ಪೊಲೀಸರು ಮೃತರ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಸೋಕೋ ತಂಡದ ಪರಿಶೀಲನೆ ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ನಂತರ ತನಿಖೆ ಮುಂದುವರಿಸಲಾಗುವುದು ಎಂದು ತಿಳಿಸಲಾಗಿದೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಂಎಸ್ ಧೋನಿಗಾಗಿ ಕಾದ ಅಭಿಮಾನಿಗಳಿಗೆ ಸಿಕ್ತು ಮತ್ತೊಂದು ಬ್ಯಾಡ್ ನ್ಯೂಸ್ – Kannada News | MS Dhoni’s IPL Return: CSK Coach Reveals Injury Update, Fans Await Comeback

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸಮನ್ ಹಾಗೂ ಕೀಪರ್ ಎಂಸ್ ಧೋನಿಗೆ ಸ್ನಾಯು ಸೆಳೆತವಿದ್ದು, ಐಪಿಎಲ್ ಆರಂಭ ಆದ ಮೊದಲ ಎರಡು ವಾರ ಅವರು ಲಭ್ಯವಿರುವುದಿಲ್ಲ ಎಂದು ಕೇಳಿ ಅಭಿಮಾನಿಗಳು ಬೇಸರಗೊಂಡರು. ಆದರೆ, ಈಗ ಧೋನಿ ಈಗ ಸತತ ಏಳು ಮ್ಯಾಚ್​​ಗಳನ್ನು ಮಿಸ್ ಮಾಡಿಕೊಂಡಿದ್ದಾರೆ. ಈಗ ಅವರ ಬರುವಿಕೆಗಾಗಿ ಕಾದು ಕುಳಿತ ಫ್ಯಾನ್ಸ್​​ಗೆ ಬೇಸರ ಆಗುವ ಸುದ್ದಿಯೊಂದು ಬಂದಿದೆ.

ಧೋನಿ ಅವರು ಇತ್ತೀಚೆಗೆ ಪ್ರ್ಯಾಕ್ಟಿಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ನೋಡಿದ ಅನೇಕರು ಧೋನಿ ಮುಂಬೈ ವಿರುದ್ಧದ ಪಂದ್ಯಕ್ಕೆ ಫೀಲ್ಡ್​ಗೆ ಇಳಿಯುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಅವರು ಮುಂಬೈ ವಿರುದ್ಧದ ಪಂದ್ಯ ಮಿಸ್ ಮಾಡಿಕೊಂಡಿದ್ದಾರೆ. ಅವರು ಫೀಲ್ಡ್​​ಗೆ ಇಳಿಯದ್ದಕ್ಕೆ ಕಾರಣ ಸಿಕ್ಕಿದೆ.

ಸಿಎಸ್​​ಕೆ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿ ಈ ವಿಷಯ ರಿವೀಲ್ ಮಾಡಿದ್ದಾರೆ. ‘ಧೋನಿ ಉತ್ತಮವಾಗಿ ಚೇತರಿಕೆ ಕಾಣುತ್ತಿದ್ದಾರೆ. ಅವರು ನೂರಕ್ಕೆ ನೂರು ಪರ್ಸೆಂಟ್ ರೆಡಿ ಆದರು ಎಂದು ಅನಿಸುವವರೆಗೂ ಅವರು ಮೈದಾನಕ್ಕೆ ಇಳಿಯುವುದಿಲ್ಲ’ ಎಂದಿದ್ದಾರೆ.

‘ಧೋನಿ ಉತ್ತಮ ರೀತಿಯಲ್ಲಿ ಚೇತರಿಕೆ ಕಾಣುತ್ತಿದ್ದಾರೆ ಎಂಬುದು ನಿಜ. ಅವರು ಸಾಧ್ಯವಾದಷ್ಟು ಬೇಗ ತಂಡಕ್ಕೆ ಮರಳಲು ಶ್ರಮಿಸುತ್ತಿದ್ದಾರೆ. ಅಭಿಮಾನಿಗಳು ಎಂಎಸ್ ಧೋನಿ ಮತ್ತೆ ಮೈದಾನಕ್ಕೆ ಇಳಿಯವುದನ್ನು ನೋಡಲು ಕಾದಿದ್ದಾರೆ. ಮುಂದಿನ ಕೆಲವು ಪಂದ್ಯಗಳಲ್ಲಿ ಅದು ಘಟಿಸಬಹುದು. ಆದರೆ ಅವರು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಸಂಪೂರ್ಣವಾಗಿ ಚೇತರಿಕೆ ಕಾಣಬೇಕಿದೆ’ ಎಂದು ಮೈಕಲ್ ಹಸ್ಸಿ ಹೇಳಿದ್ದಾರೆ.

‘ನೆಟ್ ಪ್ರ್ಯಾಕ್ಟಿಸ್​​​ನಲ್ಲಿ ಧೋನಿ ಬ್ಯಾಟಿಂಗ್ ಉತ್ತಮವಾಗಿ ಮಾಡುತ್ತಿದ್ದಾರೆ ನಿಜ. ಆದರೆ, ರನ್ ತೆಗೆಯಲು ಅವರಿಂದ ಓಡಲು ಸಾಧ್ಯವೇ ಎಂಬುದು ಸದ್ಯದ ಪ್ರಶ್ನೆ’ ಎಂದಿದ್ದಾರೆ.

ಇದನ್ನೂ ಓದಿ: ಧೋನಿ ಇಲ್ಲದೆ ಸಿಎಸ್​ಕೆ ನಿಷ್ಪ್ರಯೋಜಕ: ರುತುರಾಜ್-ಸ್ಯಾಮ್ಸನ್​ಗೆ 36 ಕೋಟಿ ಹಾಕಿದ್ದು ವೇಸ್ಟ್..?

ಧೋನಿ ಸಂಪೂರ್ಣವಾಗಿ ಚೇತರಿಕೆ ಕಾಣೋದು ಯಾವಾಗ ಎನ್ನುವ ಪ್ರಶ್ನೆ ಎದುರಾಗಿದೆ. ಮುಂದಿನ ಪಂದ್ಯದಲ್ಲೇ ಅವರು ಮೈದಾನಕ್ಕೆ ಇಳಿಯಬಹುದು ಅಥವಾ ಇನ್ನೂ ಕೆಲವು ಪಂದ್ಯ ಅವರು ಫೀಲ್ಡ್​​ಗೆ ಇಳಿಯಲು ಸಾಧ್ಯವಾಗದೆ ಇರಬಹುದು. ಮುಂದಿನ ದಿನಗಳಲ್ಲಿ ಈ ಬಗ್ಗೆ ತಿಳಿಯಲಿದೆ. ಲೀಗ್ ಪಂದ್ಯಗಳಲ್ಲಿ ಚೆನ್ನೈಗೆ ಇನ್ನು ಏಳು ಮ್ಯಾಚ್​​ಗಳು ಉಳಿದಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಯಚೂರು: ಬಿಸಿಲ ಝಳಕ್ಕೆ ಪೊಲೀಸ್ ಶ್ವಾನಗಳು ಕಂಗಾಲು: ಏರ್ ಕೂಲರ್​ ವ್ಯವಸ್ಥೆ ಮಾಡಿ ಮಕ್ಕಳಂತೆ ಆರೈಕೆ ಮಾಡ್ತಿರುವ ಸಿಬ್ಬಂದಿ – Kannada News | Raichur Heatwave: Police Dogs Get Air Coolers and Special Diet as Temperatures Hit 45 Degrees Celsius

ರಾಯಚೂರು, ಏಪ್ರಿಲ್ 24: ರಾಯಚೂರು ಜಿಲ್ಲೆಯಲ್ಲಿ ದಾಖಲಾಗುತ್ತಿರುವ ಅತಿ ಹೆಚ್ಚು ತಾಪಮಾನದಿಂದ ಪೊಲೀಸ್ ಶ್ವಾನಗಳ ಆರೋಗ್ಯಕ್ಕೆ ಧಕ್ಕೆಯಾಗದಂತೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಜಿಲ್ಲಾ ಪೊಲೀಸ್ ಇಲಾಖೆಯು ತಮ್ಮ ಶ್ವಾನದಳಕ್ಕೆ ಬಿಸಿಲಿನಿಂದ ರಕ್ಷಣೆ ಒದಗಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. ಶ್ವಾನಗಳಿರುವ ಕೊಠಡಿಗಳಲ್ಲಿ ಏರ್ ಕೂಲರ್‌ಗಳು ಮತ್ತು ಫ್ಯಾನ್‌ಗಳನ್ನು ಅಳವಡಿಸಲಾಗಿದೆ. ಸದ್ಯ ರಾಯಚೂರಿನಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪಿದೆ. ಈ ಉಷ್ಣಾಂಶದಿಂದ ಶ್ವಾನಗಳಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬ ಕಾರಣಕ್ಕೆ ಪ್ರತಿದಿನ ಅವುಗಳಿಗೆ ಎಳನೀರು, ಮೊಸರು, ಮಜ್ಜಿಗೆ ಹಾಗೂ ತಣ್ಣೀರು ನೀಡಲಾಗುತ್ತಿದೆ.

ಜಿಆರ್‌ ಸಿಬ್ಬಂದಿಗಳು ಪುಟಾಣಿ ಮಕ್ಕಳಂತೆ ಶ್ವಾನಗಳ ಆರೈಕೆ ಮಾಡುತ್ತಿದ್ದಾರೆ. ಅವುಗಳ ಆರೋಗ್ಯದಲ್ಲಿ ಯಾವುದೇ ಏರುಪೇರಾಗದಂತೆ ಕ್ಷಣಕ್ಷಣವೂ ನಿಗಾ ವಹಿಸಲಾಗುತ್ತಿದೆ ಎಂದು ರಾಯಚೂರು ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಡವರಿಗೆ ಸೇರಬೇಕಿದ್ದ ಅನ್ನಭಾಗ್ಯ ಅಕ್ಕಿ ದಂಧೆಕೋರರ ಪಾಲು: 2,000ಕ್ಕೂ ಹೆಚ್ಚು ಮೂಟೆಗಳು ವಶಕ್ಕೆ – Kannada News | Massive Annabhagya Rice Seizure in Koppal: Over 2,000 Bags of Illegally Stored Grain Recovered

ಕೊಪ್ಪಳ, ಏಪ್ರಿಲ್​​ 24: ತಾಲೂಕಿನ ಕೂಕನಪಳ್ಳಿ ಹೊರವಲಯದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ದೊಡ್ಡ ಪ್ರಮಾಣದ ದಾಸ್ತಾನನ್ನು ಪತ್ತೆ ಹಚ್ಚಲಾಗಿದೆ. ಮುನಿರಾಬಾದ್ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 2,000ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಟನ್‌ನಷ್ಟು ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂಬುದು ಗೊತ್ತಾಗಿದೆ. ಬಳ್ಳಾರಿ ವಲಯ ಐಜಿಪಿ ಸೂಚನೆ ಮೇರೆಗೆ ಈ ದಾಳಿ ನಡೆಸಲಾಗಿದ್ದು, ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆ ನಡೆಯುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಅಕ್ಕಿಯನ್ನು ಹೊರ ರಾಜ್ಯಗಳಿಗೆ ರಫ್ತು ಮಾಡುವ ಉದ್ದೇಶ ಹೊಂದಿದ್ದರು ಎಂದು ಶಂಕಿಸಲಾಗಿದೆ. ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಆಟವಾಡುತ್ತಾ ಪಾತ್ರೆಯೊಳಗೆ ಸಿಲುಕಿದ್ದ ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು! – Kannada News | Thiruvananthapuram: Toddler Saved from Pot by Brave Kerala Rescuers

ತಿರುವನಂತಪುರಂ, ಏ.24: ಆಟವಾಡುತ್ತಿದ್ದಾಗ ಪಾತ್ರೆಯೊಳಗೆ ಸಿಲುಕಿಕೊಂಡಿದ್ದ ಪುಟ್ಟ ಮಗುವೊಂದನ್ನು ಕೇರಳದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಅತ್ಯಂತ ನಾಜೂಕಾಗಿ ರಕ್ಷಿಸಿದ್ದಾರೆ. ಇವರ ಈ ಸಮಯೋಚಿತ ಕಾರ್ಯಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮನೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಅಡುಗೆ ಮನೆಯಲ್ಲಿದ್ದ ದೊಡ್ಡದಾದ ಅಲ್ಯೂಮಿನಿಯಂ ಪಾತ್ರೆಯೊಳಗೆ ಇಳಿದಿದೆ. ಆದರೆ, ಹೊರಬರಲು ಪ್ರಯತ್ನಿಸಿದಾಗ ಮಗುವಿನ ಸೊಂಟದ ಭಾಗ ಪಾತ್ರೆಯಲ್ಲಿ ಸಿಲುಕಿಕೊಂಡಿದೆ. ಮಗುವಿನ ಅಳು ಕೇಳಿ ಓಡಿ ಬಂದ ಪೋಷಕರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಪೋಷಕರು ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಮಗುವಿಗೆ ಯಾವುದೇ ನೋವಾಗದಂತೆ ಅತ್ಯಂತ ಎಚ್ಚರಿಕೆ ವಹಿಸಿ, ಹೈಡ್ರಾಲಿಕ್ ಕಟ್ಟರ್‌ಗಳನ್ನು ಬಳಸಿ ಅಲ್ಯೂಮಿನಿಯಂ ಪಾತ್ರೆಯನ್ನು ನಿಧಾನವಾಗಿ ಕತ್ತರಿಸುವ ಮೂಲಕ ಮಗುವನ್ನು ಸುರಕ್ಷಿತವಾಗಿ ಹೊರತೆಗೆದರು. ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಕಷ್ಟದ ಸಮಯದಲ್ಲಿ ದೇವರಂತೆ ಬಂದು ನೆರವಾದ ಪೊಲೀಸರ ಈ ಕಾರ್ಯ ‘ಮಾನವೀಯತೆಯ ಸುಂದರ ನೋಟ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು – Kannada News | Sadhu Kokila talks about Dr Rajkumar watch video

ಡಾ ರಾಜ್​ಕುಮಾರ್ (Dr Rajkumar) ಜಯಂತಿ ನಿಮಿತ್ತ ಗೀತ-ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್​ಕುಮಾರ್ ಕುಟುಂಬದ ಸದಸ್ಯರ ಜೊತೆಗೆ ಶಾಸಕ ಗೋಪಾಲಯ್ಯ ಮತ್ತು ಚಿತ್ರರಂಗದ ಕೆಲ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಟ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಣ್ಣಾವ್ರ ಬಗ್ಗೆ ಮಾತನಾಡಿದರು. ನಾವೆಲ್ಲ, ಅಣ್ಣಾವ್ರನ್ನು ಒಮ್ಮೆ ಮುಟ್ಟಲು ಕಾಯುತ್ತಿದ್ದೆವು. ಅವರ ಮಾತು, ಅವರ ನಡೆ-ನುಡಿ, ಅವರ ಮೈಕಟ್ಟು ಎಲ್ಲವೂ ಅದ್ಭುತ. ಅವರ ಮೈಯ್ಯಂತೂ ರೇಷ್ಮೆಯಂತೆ ನುಣುಪಾಗಿ ಇರುತ್ತಿತ್ತು ಎಂದು ಸಾಧು ಕೋಕಿಲ ಹೇಳಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link