ಜೈಲಿನೊಳಗೆ ಇದ್ದುಕೊಂಡೇ ವಿಧ್ವಂಸಕ ಕೃತ್ಯ ಎಸಗಲು ಸಂಚು: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ NIA ನ್ಯಾಯಾಲಯ – Kannada News | Bengaluru Prison Terror Plot: NIA Jails T. Naseer and 6 Others for 7 Years
ಬೆಂಗಳೂರು, ಏಪ್ರಿಲ್ 22: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಜೈಲಿನಲ್ಲಿಯೇ ಸಂಚೂರೂಪಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಏಳು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಸೀರ್ ಸೇರಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ…