‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು – Kannada News | No one can deny Iran its nuclear rights, says president Masoud Pezeshkian
ಟೆಹ್ರಾನ್, ಏಪ್ರಿಲ್ 19: ಇರಾನ್‌ನ ಪರಮಾಣು ಕಾರ್ಯಕ್ರಮದ ಸುತ್ತಲಿನ ಅಂತರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. “ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು?” ಎಂದು ಪ್ರಶ್ನಿಸುವ ಮೂಲಕ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಭಾನುವಾರ (ಏಪ್ರಿಲ್ 19) ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ತ್ಯಜಿಸಬೇಕು ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಕಠಿಣವಾಗಿ…