Category Archives: Blog

Your blog category

ಸಾಕು ನಾಯಿ ಬೊಗಳಿದ್ದಕ್ಕೆ ಬಾಲಕನಿಗೆ ಚಾಕು ಇರಿದ ದುಷ್ಕರ್ಮಿಗಳು – Kannada News | A Bark That Turned Bloody: Antop Hill Erupts in Violence in Mumbai

ಮುಂಬೈ, ಜನವರಿ 11: ಸಾಕು ನಾಯಿ(Dog) ಬೊಗಳಿದ್ದಕ್ಕೆ ಆರು ಮಂದಿ 15 ವರ್ಷದ ಬಾಲಕನಿಗೆ ಚಾಕು ಇರಿದ ಘಟನೆ ಮುಂಬೈನಲ್ಲಿ ನಡೆದಿದೆ. ಜನವರಿ 8ರಂದು ಈ ಘಟನೆ ನಡೆದಿದೆ. ಮಾತಿನಲ್ಲಿ ಆರಂಭವಾದ ಜಗಳ ಹಿಂಸಾತ್ಮಕ ರೂಪ ತಾಳಿತ್ತು. ಅಂತೋಪ್ ಹಿಲ್ ಪೊಲೀಸರು ನಿತಿನ್ ದಿಕ್ಕಾ, ತುಷಾರ್, ಸವಿತಾ, ಅಮನ್, ಕವಿತಾ ಮತ್ತು ಶರಣಜೀತ್ ಸೇರಿದಂತೆ ಇತರ ಹಲವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ದೂರುದಾರ ನರೇಶ್ ಉದಯಭನ್ ಬಿಡ್ಲಾನ್ (47), ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ನಲ್ಲಿ ನೈರ್ಮಲ್ಯ ಕೆಲಸಗಾರರಾಗಿದ್ದಾರೆ, ಅವರು ರಾತ್ರಿ 10.30 ರ ಸುಮಾರಿಗೆ ಆಂಟೋಪ್ ಹಿಲ್‌ನ ಪಂಜಾಬಿ ಕ್ಯಾಂಪ್‌ನ ರಾಜ್ ಹೈಟ್ಸ್ ಟವರ್‌ನಲ್ಲಿರುವ ತಮ್ಮ ನಿವಾಸಕ್ಕೆ ತಮ್ಮ ಪತ್ನಿ ವಂದನಾ ಮತ್ತು ಅಳಿಯ ಆರ್ಯನ್ ಕಗಾದ್ರಾ (15) ಅವರೊಂದಿಗೆ ತಮ್ಮ ಸಾಕು ನಾಯಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗಿ ಹಿಂತಿರುಗಿದ್ದರು.

ಲಿಫ್ಟ್‌ಗಾಗಿ ಕಾಯುತ್ತಿದ್ದಾಗ, ನಾಯಿ ಒಂದಷ್ಟು ಜನ ಲಿಫ್ಟ್‌ನಿಂದ ಹೊರಬರುತ್ತಿದ್ದಾಗ ಬೊಗಳಿತು, ಇದು ಮಾತಿನ ಚಕಮಕಿಗೆ ಕಾರಣವಾಯಿತು. ಘಟನೆಯ ನಂತರ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಬಿಡ್ಲಾನ್ ಆರೋಪಿಸಿದ್ದಾರೆ. ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿರುವಾಗ, 25 ವರ್ಷದ ನಿತಿನ್ ಡಿಕ್ಕಾ ಸ್ಥಳಕ್ಕೆ ಆಗಮಿಸಿ ಬಿಡ್ಲಾನ್ ಮೇಲೆ ಮರದ ಕೋಲಿನಿಂದ ಹಲ್ಲೆ ನಡೆಸಿ, ಗುದ್ದಿದ್ದಾನೆ ಮತ್ತು ಒದ್ದಿದ್ದಾನೆ, ಇದರಿಂದ ತಲೆಗೆ ಗಂಭೀರ ಗಾಯಗಳಾಗಿವೆ.

ಮತ್ತಷ್ಟು ಓದಿ: Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ

ಒಂದಷ್ಟು ಜನ ಆರ್ಯನ್‌ನನ್ನು ಹೊಡೆಯುತ್ತಿದ್ದರೆ, ಗುಂಪಿನಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಹುಡುಗನ ಬೆನ್ನಿಗೆ ಮತ್ತು ತೋಳಿಗೆ ಚಾಕುವಿನಿಂದ ಇರಿದಿದ್ದಾರೆ. ಈ ಗಲಾಟೆಯಲ್ಲಿ ಬಿಡ್ಲಾನ್ ಅವರ ಪತ್ನಿ ವಂದನಾ ಅವರ ಮೇಲೂ ಹಲ್ಲೆ ನಡೆಸಲಾಯಿತು.

ಈ ವೇಳೆ ಅವರ ಮಂಗಳಸೂತ್ರ ಹರಿದು ಹೋಗಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಕುಟುಂಬ ಸದಸ್ಯರನ್ನು ಚಿಕಿತ್ಸೆಗಾಗಿ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

National Human Trafficking Awareness Day 2026: ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸುವುದೇಕೆ ತಿಳಿಯಿರಿ – Kannada News | Know the history and significance of Human Trafficking Awareness Day

ಮಾನವ ಕಳ್ಳ ಸಾಗಾಣಿಕೆಯ ವಿರುದ್ಧದ ಜಾಗೃತಿ ದಿನImage Credit source: vecteezy

ಮಾನವ ಕಳ್ಳಸಾಗಾಣಿಕೆಯು (Human Trafficking) ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಪ್ರತಿ ವರ್ಷ ಪ್ರಪಂಚದಲ್ಲಿನ ಲಕ್ಷಾಂತರ ಅಮಾಯಕ ಜನರು ಈ ಮಾನವ ಕಳ್ಳಸಾಗಾಣಿಕೆಯ ಕೂಪಕ್ಕೆ ಬಲಿಯಾಗಿತ್ತಿದ್ದಾರೆ ಮತ್ತು ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಯಾಗುತ್ತಿದ್ದಾರೆ. ಇದು ಬಹು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಭಿಕ್ಷಾಟನೆ, ವೇಶ್ಯಾವಾಟಿಕೆ, ಲೈಂಗಿಕ ಚಟುವಟಿಕೆ, ಬಲವಂತದ ದುಡಿಮೆ, ಜೀತ, ಅಂಗಾಂಗ ಮಾರಾಟ ಮತ್ತು ಇತರ ಅನೇಕ ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ಮಾನವ ಕಳ್ಳಸಾಗಾಣಿಕೆ ಕೃತ್ಯಗಳು ನಡೆಯುತ್ತಿವೆ. ಈ ಕ್ರಿಮಿನಲ್‌ ಕೃತ್ಯಗಳಿಗೆ ಮಕ್ಕಳು, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರು. ಆರ್ಥಿಕವಾಗಿ ಹಿಂದುಳಿದವರು ಬಲಿಯಾಗುತ್ತಿದ್ದು, ಇವರುಗಳ ರಕ್ಷಣೆಗಾಗಿ ಹಾಗೂ ಸಮಾಜದಲ್ಲಿ ಮಾನವ ಕಳ್ಳಸಾಗಣಿಕೆ ಕೃತ್ಯವನ್ನು ತಡೆಗಟ್ಟಲು ಜನರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಪ್ರತಿ ವರ್ಷ ಜನವರಿ 11 ರಂದು ರಾಷ್ಟ್ರೀಯ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಮಾನವ ಕಳ್ಳಸಾಗಣಿಕೆ ವಿರುದ್ಧ ಜಾಗೃತಿ ದಿನದ ಇತಿಹಾಸವೇನು?

ಮಾನವ ಕಳ್ಳಸಾಗಾಣಿಕೆ ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಈ ಸಮಸ್ಯೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು  2007 ರಲ್ಲಿ ಯುನೈಟೆಡ್ ಸ್ಟೇಟ್ಸ್ ಸೆನೆಟ್ ಜನವರಿ 11 ರಂದು ʼರಾಷ್ಟ್ರೀಯ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ದಿನʼವನ್ನು ಆಚರಿಸಲು ಘೋಷಿಸಿತು. ನಂತರ ಈ ಸಾಮಾಜಿಕ ಪಿಡುಗಿನ ಗಂಭೀರ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು 2010 ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ  ಬರಾಕ್ ಒಬಾಮ ಸಂಪೂರ್ಣ ಜನವರಿ ತಿಂಗಳನ್ನು ಮಾನವ ಕಳ್ಳಸಾಗಾಣಿಕೆ ಕುರಿತು ಜಾಗೃತಿ ಮೂಡಿಸಲು ಮೀಸಲಿಟ್ಟರು. ಅಂದಿನಿಂದ ಅಮೆರಿಕ ಸೇರಿದಂತೆ ಪ್ರಪಂಚದ ಇತರೆ ರಾಷ್ಟ್ರಗಳಲ್ಲಿಯೂ ಪ್ರತಿವರ್ಷ ಜನವರಿ 11 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿಯೂ ಕೂಡ ಮಾನವ ಕಳ್ಳ ಸಾಗಾಣೆ ವಿರುದ್ಧ ಜಾಗೃತಿ ಮೂಡಿಸಲು ಕಾನೂನು ಅರಿವು ಕಾರ್ಯಕ್ರಮಗಳು, ಜಾಥಗಳು, ವಿಚಾರ ಸಂಕಿರಣಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ರಾಷ್ಟ್ರೀಯ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ದಿನದ ಮಹತ್ವವೇನು?

  • ಮಾನವ ಕಳ್ಳಸಾಗಾಣಿಕೆಯು ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಈ ಗುಲಾಮಗಿರಿಯಿಂದ ಜಗತ್ತನ್ನು ಮುಕ್ತಗೊಳಿಸಲು ಈ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನವು ಇಂತಹ ಸಮಸ್ಯೆಗಳನ್ನು ಬೆಳಕಿಗೆ ತರುವುದು, ಭದ್ರತೆಯನ್ನು ಸರಿಪಡಿಸುವುದು ಕಳ್ಳಸಾಗಣೆ ಕೃತ್ಯಗಳು ನಡೆಯದಂತೆ ನೋಡಿಕೊಳ್ಳುವುದು, ಶೋಷಣೆಗೆ ಒಳಗಾದವರಿಗೆ ರಕ್ಷಣೆ ಒದಗಿಸುವ ಗುರಿಯನ್ನು ಹೊಂದಿದೆ.
  • ಈ ದಿನದಂದು ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ ಜಾಗೃತಿ ಮೂಡಿಸಲು ಕಾನೂನು ಅರಿವು ಕಾರ್ಯಕ್ರಮಗಳು, ಜಾಥಗಳು, ವಿಚಾರ ಸಂಕಿರಣಗಳನ್ನು ಸಹ ನಡೆಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ನಾಲ್ವರು ದಾರುಣ ಸಾವು; ಮೂವರು ಗಂಭೀರ – Kannada News | Karnataka Road Accidents: Four Lives Lost in Multiple Tragic Incidents

ಚಿತ್ರದುರ್ಗ/ಕಲಬುರಗಿ, ಜನವರಿ 11: ಲಾರಿಗೆ ಇನ್ನೋವಾ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದ DySP ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಅವರ ತಾಯಿ ಕಮಲ(65), ಕಾರು ಚಾಲಕ ರಾಕೇಶ್(40) ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಚಿತ್ರದುರ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ತಾಯಿ ಜೊತೆ ತಮಿಳುನಾಡಿಗೆ ಪ್ರವಾಸಕ್ಕೆ ಹೋಗಿದ್ದ DySP ವೈಷ್ಣವಿ ಹಿಂದಿರುಗಿ ಕೊಲ್ಹಾಪುರಕ್ಕೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ‌, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಟ್​ ಆ್ಯಂಡ್​ ರನ್​ಗೆ ಬೈಕ್ ಸವಾರ ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಬಳಿ ಹಿಟ್​ ಆ್ಯಂಡ್​ ರನ್​ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಮಧುಸೂದನ್(21) ಮೃತಪಟ್ಟಿದ್ದಾರೆ. ಮಧುಸೂದನ್​ ಮಾಗಡಿ ತಾಲೂಕಿನ ವೀರಸಾಗರ ಗ್ರಾಮದ ನಿವಾಸಿಯಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ; ಬಸ್​​ ಅಪಘಾತದಲ್ಲಿ ಹಲವರಿಗೆ ಗಾಯ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಬೈಕ್​​ಗೆ ಬಸ್​​ ಡಿಕ್ಕಿ: ಸವಾರ ಸಾವು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿರಾಳ ಹಿಸ್ಸಾ ಕ್ರಾಸ್ ಬಳಿ ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಲಮೇಲ ಗ್ರಾಮದ ಯುವರಾಜ್ ಭಾಗಣ್ಣ (28) ಮೃತ ದುರ್ದೈವಿಯಾಗಿದ್ದು, ಶಹಾಪುರದಿಂದ ಸಿಂದಗಿ ಕಡೆ ಹೋಗ್ತಿದ್ದ ಕೆಕೆಆರ್‌ಟಿಸ್ ಬಸ್ ಡಿಕ್ಕಿಯಾದ ರಭಸಕ್ಕೆ ತಲೆಯಿಂದ ತೀವ್ರ ರಕ್ತಸ್ರಾವವಾದ ಕಾರಣ ಅವರು ಅಸುನೀಗಿದ್ದಾರೆ ಎನ್ನಲಾಗಿದೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸುವ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

2 ಶತಕದೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್ – Kannada News | Ryan Rickleton becomes the first player to score 2 Hundreds in the SA20 History

ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ಹಾಗೂ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಎಂಐ ಕೇಪ್​ಟೌನ್ ತಂಡವು 20 ಓವರ್​​ಗಳಲ್ಲಿ 234 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಜೋಬರ್ಗ್​ ಸೂಪರ್​ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 198 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಎಂಐ ಕೇಪ್​ಟೌನ್ ತಂಡವು 36 ರನ್​ಗಳ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ರಯಾನ್ ರಿಕೆಲ್ಟನ್ ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಡರ್ಬನ್ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 113 ರನ್​ಗಳ ಇನಿಂಗ್ಸ್ ಆಡಿದ್ದರು. ಈ ಮೂಲಕ ರಯಾನ್ ರಿಕೆಲ್ಟನ್ ಸೌತ್ ಆಫ್ರಿಕಾ ಟಿ20 ಲೀಗ್​ ಸೀಸನ್​ವೊಂದರಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Source link

ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ – Kannada News | DyCM D.K. Shivakumar Attends Naringana Kambala in Ullal, Mangaluru

ಮಂಗಳೂರು, ಜನವರಿ 11: ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ಆಯೋಜಿಸಲಾಗಿದ್ದ ಲವ-ಕುಶ ಜೋಡುಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಕೋಣಗಳ ಓಟಕ್ಕೆ ಡಿಕೆಶಿ ಫಿದಾ ಆಗಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಕಂಬಳ ಆಯೋಜಿಸಲಾಗಿತ್ತು. ಇದೇ ವೇಳೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಅದನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬಳಿ ಬೇಡಿಕೆ ಇಡಲಾಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Temperature drop in Bengaluru, Yellow alert for 4 district of karnataka

ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ (Weather Forecast) ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಭಾರಿ ಚಳಿಗೆ ಬೆಂಗಳೂರು ನಡುಗಿದ್ದು, ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ.

ಚಳಿಗೆ ಬೆಂಗಳೂರಿಗರು ಗಡಗಡ

ಬೆಂಗಳೂರಿನಲ್ಲಿ ಚಳಿಯೊಂದಿಗೆ ತುಂತುರು ಮಳೆಯೂ ಸುರಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ತೀವ್ರ ಶೀತ ವಾತಾವರಣ ಕಂಡುಬಂದಿದೆ. ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಇಳಿಕೆಯಾಗಿದೆ. ಹಗಲಿನ ವೇಳೆಯಲ್ಲಿಯೂ ತಾಪಮಾನ ಕುಸಿತ ಕಂಡುಬಂದಿದ್ದು, ಸದಾ ಮೋಡ ಮುಸಕಿದ ವಾತಾವರಣ ನೆಲೆಸಿದೆ. ಮೈಕೊರೆಯುವ ಚಳಿಯಿಂದ ಉದ್ಯೋಗಿಗಳು ಕೆಲಸಕ್ಕೆ ತೆರಳುವಾಗ ಹಾಗೂ ಲಾಲ್‌ಬಾಗ್‌ನಲ್ಲಿ ವಾಕಿಂಗ್‌ಗೆ ಬರುವವರು ಟೋಪಿ, ಮಫ್ಲರ್ ಧರಿಸಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಜನವರಿ 14ರವರೆಗೂ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಒಣಹವೆ?

ರಾಜ್ಯದಲ್ಲಿ ಅತಿಯಾದ ಶೀತದಲೆಯ ಕಾರಣದಿಂದಾಗಿ ಬೀದರ್, ಕಲಬುರಗಿ, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:22 am, Sun, 11 January 26

Source link

ಗಲಾಟೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಬ್ಯಾನರ್​​ ಹಾವಳಿಗೆ ಬ್ರೇಕ್​: ಗಣಿದಣಿ ಬರ್ತ್​​ಡೇಗೂ ಇಲ್ಲ ಹೋಲ್ಡಿಂಗ್ಸ್! – Kannada News | District Administration Orders Mandatory Local Body Permission for Banners and Hoardings in Ballari

ಬಳ್ಳಾರಿ, ಜನವರಿ 11: ಬ್ಯಾನರ್​​ ವಿಚಾರಕ್ಕೆ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ವೇಳೆ ಓರ್ವ ಕಾಂಗ್ರೆಸ್​​ ಕಾರ್ಯಕರ್ತ ಮೃತಟಪಟ್ಟ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಭಾರೀ ಸದ್ದು ಮಾಡಿದೆ. ಈ ಬೆನ್ನಲ್ಲೇ ಬಳ್ಳಾರಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಂದ್ದು, ಬ್ಯಾನರ್​​ ವಿಚಾರವಾಗಿ ಕಠಿಣ ಕ್ರಮಗಳ ಜಾರಿಗೆ ಮುಂದಾಗಿದೆ. ಬಳ್ಳಾರಿಯ ಗಲಭೆ ಬಳಿಕ ಶಾಂತಿಭಂಗ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬ್ಯಾನರ್​ ಅಳವಡಿಕೆಗೆ ನಿಷೇಧ ಹೇರಲಾಗಿದೆ. ನಿಯಮ ಮೀರಿದ್ರೆ ದಂಡ ಬೀಳಲಿದೆ.

ಬಳ್ಳಾರಿ ನಗರದಲ್ಲಿ ಅನುಮತಿ ಇಲ್ಲದೆ ಬ್ಯಾನರ್, ಹೋಲ್ಡಿಂಗ್ಸ್, ಫ್ಲೆಕ್ಸ್​​​ ಅಥವಾ ಪೋಸ್ಟರ್ ಅಳವಡಿಕೆಗೆ ಜಿಲ್ಲಾಡಳಿತ ನಿಷೇಧ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಇವುಗಳ ಅವಳವಡಿಕೆಗೆ ಸ್ಥಳೀಯ ಆಡಳಿತ ಸಂಸ್ಥೆಯ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ನಿಯಮ ಜಾರಿ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಅಂತಹ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳೋದಾಗಿ ತಿಳಿಸಲಾಗಿದೆ. ಅನಧಿಕೃತ ಜಾಹೀರಾತು ಮತ್ತು ಬ್ಯಾನರ್​ಗಳ ಮೇಲೆ ಪೊಲೀಸ್ ಇಲಾಖೆ ಇನ್ಮುಂದೆ ನಿಗಾ ಇಡಲಿದ್ದು, ಬ್ಯಾನರ್​​ ವಿಚಾರವಾಗಿಯೇ ಗಲಾಟೆ ನಡೆದು ಜಿಲ್ಲೆ ಪ್ರಕ್ಷುಬ್ಧಗೊಂಡಿದ್ದ ಕಾರಣ ಕಠಿಣ ನಿರ್ಧಾರಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.

ಇದನ್ನೂ ಓದಿ:  ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ; ಜ 17ರಂದು ಪ್ರತಿಭಟನೆ ಎಂದ ಜನಾರ್ದನ ರೆಡ್ಡಿ

ಜನಾರ್ದನ ರೆಡ್ಡಿ ಬರ್ತಡೇಗಿಲ್ಲ ಬ್ಯಾನರ್​!

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಇಂದು ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​​ ಡೇ ಸಂದರ್ಭ ಅಥವಾ ಯಾವುದೇ ಕಾರ್ಯಕ್ರಮ ಇದ್ದಾಗ ಈ ಹಿಂದೆ ಬಳ್ಳಾರಿಯಲ್ಲಿ ಬ್ಯಾನರ್​​ಗಳು ರಾರಾಜಿಸುತ್ತಿದ್ದವು. ಆದ್ರೆ ಇದೇ ಮೊದಲ ಬಾರಿಗೆ ಯಾವುದೇ ಬ್ಯಾನರ್​​ ಇಲ್ಲದೆ ಗಣಿದಣಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನಾಯಕನ ಜನ್ಮ ದಿನವನ್ನು ಸರಳವಾಗಿ ಆಚರಿಸಲು ಬೆಂಬಲಿಗರು ಕೂಡ ನಿರ್ಧರಿಸಿದ್ದು, ಅದ್ಧೂರಿ ಆಚರಣೆ ಮತ್ತು ಕೇಕ್​​ ಕಟ್ಟಿಂಗ್​​ ಕೂಡ ಬೇಡ ಎಂದು ಜನಾರ್ದನ ರೆಡ್ಡಿ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೇವಲ ಶುಭಾಶಯಕ್ಕೆ ಜನಾರ್ದನ ರೆಡ್ಡಿ ಬರ್ತ್​​ ಡೇ ಸೀಮಿತವಾಗಿರಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:58 am, Sun, 11 January 26

Source link

ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ! – Kannada News | Gold Treasure Found: Boy Prajwal Honoured for Returning 1KG Found Gold

ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ ಅವರನ್ನು ಸನ್ಮಾನಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮತ್ತು ಅಬಕಾರಿ ಜಿಲ್ಲಾಧಿಕಾರಿ ಶ್ರೀ ದುರ್ಗೇಶ್ ಅವರು ಪ್ರಜ್ವಲ್‌ಗೆ ಶಾಲು ಹಾಕಿ ಗೌರವಿಸಿದ್ದು,  ವಿಷಯವನ್ನು ಸರ್ಕಾರದ ಗಮನಕ್ಕೆ ತಂದ ಗ್ರಾಮ ಪಂಚಾಯತ್ ಸದಸ್ಯೆ ರಜಿಯಾ ಬೇಗಂ ಅವರಿಗೂ ಸನ್ಮಾನ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಮಳೆ ಬರಲಿ ಹಿಮ ಬೀಳಲಿ ಶಾಲೆಗಂತೂ ಹೋಗೆ ಹೋಗ್ತೀನಿ, ವಿದ್ಯಾರ್ಥಿಯ ಭದ್ಧತೆಗೆ ಕಿರ್ಗಿಸ್ತಾನದ ಅಧ್ಯಕ್ಷ ಫಿದಾ – Kannada News | Through Ice and Silence, a Child Walks for Knowledge

ಕಿರ್ಗಿಸ್ತಾನ್, ಜನವರಿ 11: ಕಿರ್ಗಿಸ್ತಾನದ ಶಾಲಾ ವಿದ್ಯಾರ್ಥಿಯೊಬ್ಬ ಹಿಮದಲ್ಲೇ ನಡೆದುಕೊಂಡು ಶಾಲೆಗೆ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆತನ ಎದೆಯ ಎತ್ತರದವರೆಗೆ ಹಿಮ ಬಿದ್ದಿದೆ. ಒಂದು ಚೂರೂ ಬೇಸರ ಮಾಡಿಕೊಳ್ಳದೆ ಆತ ಹಿಮದ ಮೇಲೆಯೇ ನಡೆದುಕೊಂಡು ಶಾಲೆಗೆ ಹೋಗುತ್ತಾನೆ. ಮಳೆ ಬರಲಿ, ಹಿಮ ಬೀಳಲಿ ನಾನಂತೂ ಶಾಲೆಗೆ ಹೋಗೇ ಹೋಗುತ್ತೇನೆ ಎನ್ನುವ ವಿದ್ಯಾರ್ಥಿಯ ದೃಢ ಸಂಕಲ್ಪಕ್ಕೆ ಕಿರ್ಗಿಸ್ತಾನ ಅಧ್ಯಕ್ಷರೇ ಫಿದಾ ಆಗಿದ್ದು, ಬಾಲಕನನ್ನು ಕರೆಸಿಕೊಂಡು ಆತನ ಬಳಿ ಮಾತನಾಡಿದ್ದಾರೆ. ಆತನಿಗೆ ಲ್ಯಾಪ್​ಟಾಪ್ ಹಾಗೂ ಫುಟ್ಬಾಲ್ ಹಾಗೂ ತಮ್ಮದೇ ಮೊಬೈಲ್ ಅನ್ನು ಉಡುಗೊರೆಯಾಗಿ ನೀಡಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link