Category Archives: Blog

Your blog category

ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ – Kannada News | Iran shuts Strait of Hormuz again accuses US of violating ceasefire

ಟೆಹ್ರಾನ್, ಏಪ್ರಿಲ್ 18: ಇರಾನ್ ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದೆ. ನಿರ್ಣಾಯಕ ಜಲಮಾರ್ಗವನ್ನು ಮತ್ತೆ ತೆರೆಯುವ ತನ್ನ ನಿರ್ಧಾರವನ್ನು ಇರಾನ್ ಹಿಂತೆಗೆದುಕೊಂಡಿದೆ. ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣದಿಂದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಆರೋಪಿಸಿದೆ.

ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು ಕೊನೆಗೊಳಿಸುವುದಿಲ್ಲ ಎಂದು ಅಮೆರಿಕ ಹೇಳಿದ ನಂತರ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯ ಮೇಲೆ ನಿರ್ಬಂಧ ಹೇರಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನ ಜಾರಿಯಲ್ಲಿರುವವರೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಾಗಾಟವನ್ನು ನಿರ್ಬಂಧಿಸುವುದಾಗಿ ಇರಾನ್ ಎಚ್ಚರಿಸಿದೆ.

ಇದನ್ನೂ ಓದಿ: ಎಲ್ಲ ದೇಶಗಳ ಕಮರ್ಷಿಯಲ್ ಹಡಗಿಗೂ ಹಾರ್ಮುಜ್ ಜಲಸಂಧಿ ತೆರೆದಿದೆ; ಇರಾನ್ ಮಹತ್ವದ ಘೋಷಣೆ

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ಉಗ್ರಗಾಮಿ ಗುಂಪಿನ ನಡುವೆ ಲೆಬನಾನ್‌ನಲ್ಲಿ 10 ದಿನಗಳ ಕದನ ವಿರಾಮದ ನಂತರ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ಸಂಪೂರ್ಣವಾಗಿ ತೆರೆಯಲಾಗಿದೆ ಎಂದು ಇರಾನ್ ನಿನ್ನೆ ಹೇಳಿತ್ತು. ಆದರೂ ಇರಾನ್​ನ ಹಡಗುಗಳ ಮೇಲಿನ ದಿಗ್ಬಂಧನ ಮುಂದುವರಿಯುತ್ತದೆ ಎಂದು ಟ್ರಂಪ್ ಪುನರುಚ್ಚರಿಸಿದ ನಂತರ ಇರಾನ್ ಅಧಿಕಾರಿಗಳು ಈ ಕ್ರಮವು ಕಳೆದ ವಾರದ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್; ಮಧ್ಯ ಏಷ್ಯಾ, ಹಾರ್ಮುಜ್ ಜಲಸಂಧಿ ಬಗ್ಗೆ ಚರ್ಚೆ

ಹಾರ್ಮುಜ್ ಜಲಸಂಧಿಯು ವಿಶ್ವದ ಪ್ರಮುಖ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ವಿಶೇಷವಾಗಿ ತೈಲ ಸಾಗಣೆಗೆ ಈ ಜಲಮಾರ್ಗ ಅತ್ಯಂತ ಮುಖ್ಯವಾಗಿದೆ. ಇಲ್ಲಿನ ನಿರ್ಬಂಧ ಜಾಗತಿಕ ಮಾರುಕಟ್ಟೆಗಳು ಮತ್ತು ಇಂಧನ ಬೆಲೆಗಳ ಮೇಲೆ ಮತ್ತೆ ಪರಿಣಾಮ ಬೀರಬಹುದು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 3:54 pm, Sat, 18 April 26

Source link

ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ – Kannada News | They Will face consequences; PM Modi Slams Opposition For Not Supporting womens reservation bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿಗೆ (Women’s Reservation Bill) ಸಂಬಂಧಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ವಿರೋಧ ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ತಪ್ಪಿಗೆ ವಿಪಕ್ಷಗಳು ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.

ವಿರೋಧ ಪಕ್ಷದ ಉದ್ದೇಶವನ್ನು ಬಹಿರಂಗಪಡಿಸಲು ಎನ್​ಡಿಎ ಸರ್ಕಾರವು ಪ್ರತಿಯೊಂದು ಹಳ್ಳಿ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಈ ವಿಷಯವನ್ನು ತಲುಪಿಸಲಿದೆ. ವಿಪಕ್ಷಗಳು ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅವರು ಈ ಮೂಲಕ ಎನ್​ಡಿಎ ಸರ್ಕಾರವನ್ನು ಸೋಲಿಸಿಲ್ಲ, ದೇಶದ ಮಹಿಳೆಯರನ್ನು ಸೋಲಿಸಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ

“ವಿರೋಧ ಪಕ್ಷಗಳು ದೇಶದ ಮಹಿಳೆಯರನ್ನು ನಿರಾಸೆಗೊಳಿಸಿದ್ದಾರೆ. ಈ ಸಂದೇಶವನ್ನು ಪ್ರತಿಯೊಬ್ಬ ವ್ಯಕ್ತಿಗೂ, ಪ್ರತಿಯೊಂದು ಹಳ್ಳಿಗೂ ತಲುಪಿಸಬೇಕು. 2029 ರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಯನ್ನು ವಿರೋಧಿಸುವ ಮೂಲಕ ವಿರೋಧ ಪಕ್ಷವು ದೊಡ್ಡ ತಪ್ಪು ಮಾಡಿದೆ. ದೇಶದ ಮಹಿಳೆಯರು ಅವರನ್ನು ಕ್ಷಮಿಸುವುದಿಲ್ಲ. ಇದರ ಪರಿಣಾಮಗಳನ್ನು ವಿಪಕ್ಷಗಳು ಎದುರಿಸಬೇಕಾಗುತ್ತದೆ” ಎಂದು ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಯನ್ನು 54 ಮತಗಳ ಅಂತರದಿಂದ ಸೋಲಿಸಲಾಯಿತು. ಮಸೂದೆಗೆ ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸರ್ಕಾರ ವಿಫಲವಾದ ಒಂದು ದಿನದ ನಂತರ ಪ್ರಧಾನಿಯವರ ಹೇಳಿಕೆಗಳು ಬಂದಿವೆ. ಲೋಕಸಭೆಯಲ್ಲಿ 21 ಗಂಟೆಗಳ ಚರ್ಚೆಯ ನಂತರ 528 ಸಂಸದರು ಮತ ಚಲಾಯಿಸಿದರು. ಈ ಮಸೂದೆಯ ಪರವಾಗಿ 298 ಮತ್ತು ವಿರುದ್ಧ 230 ಮತಗಳನ್ನು ಚಲಾಯಿಸಲಾಯಿತು. ಆದರೆ, ಬಹುಮತಕ್ಕೆ ಅಗತ್ಯವಿರುವ 352 ಮತಗಳಿಗಿಂತ ಕಡಿಮೆ ಮತಗಳು ಚಲಾವಣೆಯಾದ್ದರಿಂದ ಮಸೂದೆ ಸಂಸತ್​​ನಲ್ಲಿ ಅಂಗೀಕಾರವಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:06 pm, Sat, 18 April 26

Source link

ಹಾವೇರಿ: ಎಲ್​ಪಿಜಿ ಸಿಗದೆ ಆಟೋಗೆ ಹಗ್ಗ ಕಟ್ಟಿ 10 ಕಿ.ಮೀ ಕಾರು ಎಳೆತಂದ ಮಾಲೀಕ – Kannada News | Haveri: Owner ties rope to auto and drags car 10 km after not getting LPG

ಹಾವೇರಿ, ಏಪ್ರಿಲ್​ 18: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯ ಜನಸಾಮಾನ್ಯರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಎಲ್‌ಪಿಜಿ ಸಿಲಿಂಡರ್ ಸಿಗದೆ ಹೈರಾಣಾದ ವ್ಯಾಪಾರಿಯೊಬ್ಬರು ಅನಿಲ ತುಂಬಿಸಲು ಸುಮಾರು 10 ಕಿಲೋ ಮೀಟರ್ ದೂರದವರೆಗೆ ಆಟೋಗೆ ಹಗ್ಗ ಕಟ್ಟಿ ಓಮಿನಿ ಕಾರನ್ನು ಎಳೆದುಕೊಂಡು ಬಂದ ಘಟನೆ ಹಾವೇರಿ-ಹಾನಗಲ್ ರಸ್ತೆಯಲ್ಲಿ ಕಂಡುಬಂದಿದೆ. ಗುಡಿ ಕೈಗಾರಿಕೆಯಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ರೊಟ್ಟಿ ಪೂರೈಕೆ ಮಾಡುವ ವ್ಯಾಪಾರಿಯೊಬ್ಬರು ತಮ್ಮ ಜೀವನೋಪಾಯಕ್ಕಾಗಿ ಎಲ್‌ಪಿಜಿ ಅವಲಂಬಿಸಿದ್ದಾರೆ. ಆದರೆ, ಕಳೆದ ಕೆಲವು ದಿನಗಳಿಂದ ಗ್ಯಾಸ್ ಕೊರತೆ ಎದುರಾಗಿದ್ದು, ಬಂಕ್‌ಗಳು ಬಂದ್ ಆಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಹನುಮನ ಭಕ್ತನ ಅದ್ಭುತ ಸಾಹಸ: 105 ಕೆಜಿ ಹೊತ್ತು ದೀಡ್ ನಮಸ್ಕಾರ ಹಾಕಿದ 19ರ ಯುವಕ! – Kannada News | 19 Yr Old Balraj Kuri’s Incredible Feat: 105kg Jowar Sack Deed Namaskara in Bagalkote

ಬಾಗಲಕೋಟೆ, ಏ.18: ಭಕ್ತಿ ಮತ್ತು ಸಂಕಲ್ಪ ಸೇರಿದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಬಾಗಲಕೋಟೆಯ 19 ವರ್ಷದ ಯುವಕನೊಬ್ಬ ಸಾಬೀತುಪಡಿಸಿದ್ದಾನೆ. ಗ್ರಾಮದ ಒಳಿತಿಗಾಗಿ ತನಗಿಂತ ಎರಡೂವರೆ ಪಟ್ಟು ಹೆಚ್ಚು ತೂಕದ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ‘ದೀಡ್ ನಮಸ್ಕಾರ’ ಹಾಕುವ ಮೂಲಕ ಯುವಕ ಅಚ್ಚರಿ ಮೂಡಿಸಿದ್ದಾನೆ. ಇಳಕಲ್ ತಾಲೂಕಿನ ಗೋನಾಳ ಎಸ್‌ಟಿ ಗ್ರಾಮದ ನಿವಾಸಿ ಬಾಲರಾಜ ಹನಮಂತ ಕುರಿ (19) ಈ ಸಾಹಸಗೈದ ಯುವಕ. ಈ ಯುವಕನ ತೂಕ ಕೇವಲ 47 ಕೆಜಿ. ಆದರೆ ಈತ ಬೆನ್ನ ಮೇಲೆ ಹೊತ್ತುಕೊಂಡಿದ್ದ ಜೋಳದ ಚೀಲದ ತೂಕ ಬರೋಬ್ಬರಿ 105 ಕೆಜಿ! ಗ್ರಾಮದ ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ಸಾಹಸ ಪ್ರದರ್ಶನ ನಡೆಯಿತು. ಹನುಮಂತನ ಪರಮ ಭಕ್ತನಾಗಿರುವ ಬಾಲರಾಜ, ನಾಡಿನ ಒಳಿತಿಗಾಗಿ ಈ ಕಠಿಣ ಸಂಕಲ್ಪ ಹೊತ್ತಿದ್ದನು. ಬಾಲರಾಜನ ಈ ಅಪ್ರತಿಮ ಭಕ್ತಿ ಮತ್ತು ಶಕ್ತಿಯ ಪ್ರದರ್ಶನ ಕಂಡು ಜಾತ್ರೆಯಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಸಿಳ್ಳೆ, ಚಪ್ಪಾಳೆ ತಟ್ಟುವ ಮೂಲಕ ಪ್ರೋತ್ಸಾಹಿಸಿದರು. ಸಾಹಸ ಪೂರ್ಣಗೊಳ್ಳುತ್ತಿದ್ದಂತೆ ಗ್ರಾಮಸ್ಥರು ಆತನಿಗೆ ಆರತಿ ಬೆಳಗಿ, ಹಾರ ಹಾಕಿ ಗೌರವಿಸಿದರು. ಅಷ್ಟೇ ಅಲ್ಲದೆ, ಬಾಲರಾಜನನ್ನು ಹೆಗಲ ಮೇಲೆ ಹೊತ್ತು ಊರ ತುಂಬ ಮೆರವಣಿಗೆ ಮಾಡಿ ಸಂಭ್ರಮಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ಹೇಗೆ ತಡೆಗಟ್ಟುವುದು? – Kannada News | Summer Stomach Issues: Causes and Prevention Tips

ಬೇಸಿಗೆ (Summer) ಕಾಲ ಬಂದಾಗ ಹಲವರಿಗೆ ಹೊಟ್ಟೆಗೆ ಸಂಬಂಧಿತ ಸಮಸ್ಯೆಗಳು (Stomach Issues) ಹೆಚ್ಚಾಗುತ್ತವೆ. ಹೊಟ್ಟೆನೋವು, ಗ್ಯಾಸು, ಉಬ್ಬರ, ಅತಿಸಾರ (ಡೈರಿಯಾ), ವಾಂತಿ ಮತ್ತು ಅಜೀರ್ಣದಂತಹ ಲಕ್ಷಣಗಳು ಕಂಡುಬರುವುದು ಬಹಳ ಸಾಮಾನ್ಯವಾಗಿದೆ. ಅದರಲ್ಲಿಯೂ ಮಕ್ಕಳು, ವೃದ್ಧರು ಮತ್ತು ಈಗಾಗಲೇ ಜೀರ್ಣಕಾರಿ ಸಮಸ್ಯೆಗಳನ್ನು ಹೊಂದಿರುವವರು ಹೆಚ್ಚು ಬಾಧಿತರಾಗುತ್ತಾರೆ. ಅಷ್ಟು ಮಾತ್ರವಲ್ಲ, ಹೊರಗಡೆ ಊಟ ಮಾಡುವವರು ಮತ್ತು ನೀರು ಕಡಿಮೆ ಕುಡಿಯುವವರಲ್ಲಿ ಈ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಹಾಗಾದರೆ ಬೇಸಿಗೆಯ ಸಮಯದಲ್ಲಿ ಈ ರೀತಿಯ ಸಮಸ್ಯೆಗಳು ಕಂಡುಬರುವುದಕ್ಕೆ ಕಾರಣವೇನು, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮುಖ್ಯ ಕಾರಣಗಳು ಯಾವುವು?

ಬೇಸಿಗೆಯಲ್ಲಿ ತಾಪಮಾನ ಹೆಚ್ಚಿರುವುದರಿಂದ ದೇಹದಲ್ಲಿ ಬೇಗನೆ ನೀರಿನ ಅಂಶ ಕಡಿಮೆಯಾಗುತ್ತದೆ. ಇದರಿಂದ ಜೀರ್ಣಕ್ರಿಯೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಆಹಾರ ಪದಾರ್ಥಗಳಲ್ಲಿ ಬ್ಯಾಕ್ಟೀರಿಯಾಗಳು ವೇಗವಾಗಿ ವೃದ್ಧಿಯಾಗುವುದರಿಂದ ಫುಡ್ ಪೊಯ್ಸನಿಂಗ್ ಮತ್ತು ಇನ್ಫೆಕ್ಷನ್ ಅಪಾಯ ಹೆಚ್ಚುತ್ತದೆ. ಹಳೆಯ ಅಥವಾ ಬಿಸಿ ಹವಾಮಾನದಲ್ಲಿ ಸರಿಯಾಗಿ ಸಂರಕ್ಷಿಸದ ಆಹಾರ ಸೇವನೆ ಹೊಟ್ಟೆ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರ ಜೊತೆಗೆ, ಹೆಚ್ಚು ಬೆವರುವವರ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನ ಉಂಟಾಗುತ್ತದೆ. ಇದು ಅಜೀರ್ಣ, ಆಸಿಡಿಟಿ ಮತ್ತು ಅತಿಸಾರ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ರೋಗನಿರೋಧಕ ಶಕ್ತಿ ಕಡಿಮೆಯಾದಾಗ ಈ ಸಮಸ್ಯೆಗಳು ಇನ್ನಷ್ಟು ಗಂಭೀರವಾಗಬಹುದು.

ಇದನ್ನೂ ಓದಿ: ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ

ಹೇಗೆ ತಡೆಗಟ್ಟಬೇಕು?

ಈ ಸಮಸ್ಯೆಗಳಿಂದ ದೂರವಿರಲು ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಬೇಕು. ತಾಜಾ ಮತ್ತು ಹಗುರವಾದ ಆಹಾರ ಸೇವಿಸಬೇಕು. ಹಣ್ಣು, ತರಕಾರಿಗಳು ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಆಯ್ಕೆ ಮಾಡುವುದು ಉತ್ತಮ. ಹೊರಗಿನ ಆಹಾರವನ್ನು ಮತ್ತು ಅತಿಯಾಗಿ ಎಣ್ಣೆ ಮತ್ತು ಮಸಾಲೆ ಇರುವ ಆಹಾರ ಸೇವನೆ ಮಾಡುವುದನ್ನು ತಪ್ಪಿಸಬೇಕು. ಇದೆಲ್ಲದರ ಜೊತೆಗೆ ಕೈಗಳ ಸ್ವಚ್ಛತೆ ಕಾಪಾಡುವುದು ಕೂಡ ಬಹಳ ಮುಖ್ಯ. ಪ್ಯಾಕೇಜ್ಡ್ ಪಾನೀಯಗಳು ಮತ್ತು ಕಲುಷಿತ ನೀರಿನಿಂದ ದೂರವಿರಬೇಕು. ಇವುಗಳನ್ನು ಪಾಲಿಸಿದರೆ ಬೇಸಿಗೆಯಲ್ಲಿ ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಹೊಟ್ಟೆನೋವು, ನಿರಂತರ ಅತಿಸಾರ ಅಥವಾ ವಾಂತಿ ಸಮಸ್ಯೆಗಳು ಮುಂದುವರಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಡಿಹೈಡ್ರೇಶನ್ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಒಟ್ಟಿನಲ್ಲಿ, ಸರಿಯಾದ ಆಹಾರ ಪದ್ಧತಿ ಮತ್ತು ಸ್ವಚ್ಛತೆ ಪಾಲಿಸುವುದರಿಂದ ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ; ಇದರಲ್ಲಿದ್ದಾರೆ ಹಾಲಿವುಡ್ ತಂತ್ರಜ್ಞರು – Kannada News | Vijay Deverakonda Teams Up with Shouryuv for New Film; International Crew Onboard

ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಸದ್ಯ ‘ರಣಬಾಲಿ’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಹೀಗಿರುವಾಗಲೇ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ‘ಹಾಯ್ ನಾನ್ನ’ ಖ್ಯಾತಿಯ ನಿರ್ದೇಶಕ ಶೌರ್ಯು ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಬಗ್ಗೆ ಇಂದು (ಏಪ್ರಿಲ್ 18) ಅಧಿಕೃತವಾಗಿ ಘೋಷಣೆ ಆಗಿದೆ. ಈ ಚಿತ್ರದಲ್ಲಿ ಅಂತರರಾಷ್ಟ್ರೀಯ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ.

ವೀರಾ ಬ್ಯಾನರ್ ಮೂಲಕ ವಿಜಯ್ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾ ಅನೌನ್ಸ್ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಸೃಷ್ಟಿ ಮಾಡುವಂತೆ ಮಾಡಿದೆ. ‘VDxShouryuv’ ಎಂದು ಚಿತ್ರಕ್ಕೆ ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ಮುಂದಿನ ದಿನಗಳಲ್ಲಿ ಟೈಟಲ್ ಅನಾವರಣ ಆಗಲಿದೆ.

ವಿಜಯ್ ದೇವರಕೊಂಡ ಅವರು ನಾಲ್ಕು ಶ್ವಾನಗಳನ್ನು ಹಿಡಿದು ಬರುತ್ತಿದ್ದಾರೆ. ಅವರ ಹಿಂದೆ ಏಳು ಜನರು ವಿವಿಧ ರೀತಿಯ ಆಯುಧಗಳನ್ನು ಹಿಡಿದಿದ್ದಾರೆ. ‘ಈಗ ನೀವು ನೋಡುತ್ತಿರುವ ಸಿಟ್ಟು ಒಂದು ಕಾಲದಲ್ಲಿ ಪ್ರೀತಿ ಆಗಿತ್ತು’ ಎಂಬ ಸಾಲು ಗಮನ ಸೆಳೆದಿದೆ.

‘ಹೌಸ್ ಆಫ್ ದಿ ಡ್ರ್ಯಾಗನ್’ ಮತ್ತು ‘ಫಾಲ್ಔಟ್‌’ ನಂತಹ ಹಾಲಿವುಡ್ ಪ್ರಾಜೆಕ್ಟ್​​ಗಳಿಗೆ ಕೆಲಸ ಮಾಡಿದ ಅಲೆಜಾಂಡ್ರೊ ಮಾರ್ಟಿನೆಜ್ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ‘ಗಾಡ್ಸ್ ಆಫ್ ಈಜಿಪ್ಟ್’, ‘ಬ್ಯಾಟ್‌ಮ್ಯಾನ್ ಫಾರೆವರ್’ ಮತ್ತು ‘ಸ್ನೋಪಿಯರ್ಸರ್ ’ ಚಿತ್ರಗಳಲ್ಲಿ ಕೆಲಸ ಮಾಡಿದ ವಿಎಫ್​​ಎಕ್ಸ್ ಮೇಲ್ವಿಚಾರಕ ಎರಿಕ್ ಡಸ್ಟರ್ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

‘ಅನಿಮಲ್’ ಮತ್ತು ‘ಓಂ ಶಾಂತಿ ಓಂ’ ನಂತಹ ಚಿತ್ರಗಳಿಗೆ ಕೆಲಸ ಮಾಡಿದ ಸುರೇಶ್ ಸೆಲ್ವರಾಜನ್ ಈ ಚಿತ್ರದ ನಿರ್ಮಾಣ ವಿನ್ಯಾಸಕರಾಗಿದ್ದಾರೆ. ಅನೇಕ ಸೂಪರ್ ಹಿಟ್ ಹಾಡು ನೀಡಿದ ಹೇಷಮ್ ಅಬ್ದುಲ್ ವಹಾಬ್ ಸಂಗೀತ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

RCB vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs DC Playing XI Royal Challengers Bengaluru vs Delhi Capitals Today IPL 2026 match Confirmed playing 11 details with name in Kannada

2026 ರ ಐಪಿಎಲ್‌ನ (IPL 2026) 26 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಯಲ್ಲಿದ್ದು, ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್‌ ಹಳಿತಪ್ಪಿದ್ದು, ಸತತ ಎರಡು ಪಂದ್ಯಗಳನ್ನು ಸೋತಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿದೆ. ಈ ಪಂದ್ಯವು ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡಕ್ಕೂ ಬಹಳ ಮುಖ್ಯವಾಗಿದೆ. ಆರ್‌ಸಿಬಿ ಮೊದಲ ಸ್ಥಾನ ತಲುಪಲು ಈ ಪಂದ್ಯವನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಹಾದಿಗೆ ಬರಲು ಗೆಲುವು ಅಗತ್ಯ.

ಟಾಸ್ ಗೆದ್ದ ಡೆಲ್ಲಿ

ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಟಗಾರರೇ ಉಭಯ ತಂಡಗಳಲ್ಲಿ ಆಡಲಿದ್ದಾರೆ.

ಮುಖಾಮುಖಿ ದಾಖಲೆ

ಇಲ್ಲಿಯವರೆಗೆ, ಎರಡೂ ತಂಡಗಳು 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 20 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತ್ಯಧಿಕ 215 ರನ್ ಗಳಿಸಿದರೆ, 135 ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ವಿರುದ್ಧ 196 ರನ್‌ಗಳ ಅತ್ಯಧಿಕ ಸ್ಕೋರ್ ದಾಖಲಿಸಿದರೆ, 95 ಅತ್ಯಂತ ಕಡಿಮೆ ಸ್ಕೋರ್ ಆಗಿದೆ.

RCB vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್ 11

ಆರ್​ಸಿಬಿ: ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ರಸಿಖ್ ಸಲಾಂ, ಮತ್ತು ಜೋಶ್ ಹ್ಯಾಜಲ್‌ವುಡ್.

ಡೆಲ್ಲಿ ಕ್ಯಾಪಿಟಲ್ಸ್: ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್ (ನಾಯಕ), ವಿಪ್ರಾಜ್ ನಿಗಮ್, ಆಕಿಬ್ ನಬಿ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಲುಂಗಿ ಎನ್‌ಗಿಡಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:07 pm, Sat, 18 April 26

Source link

ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ – Kannada News | Hunasihal Farmer’s Life at Risk: Protesting Wind Power Company’s Crop Destruction and Harassment

ಕೊಪ್ಪಳ, ಏ.18: ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ವಿಂಡ್ ಪವರ್ ಕಂಪನಿಯ ದೌರ್ಜನ್ಯದ ವಿರುದ್ಧ ರೈತನೊಬ್ಬ ಆಕ್ರೋಶ ವ್ಯಕ್ತಪಡಿಸಿ, ಸುಮಾರು 400 ಮೀಟರ್ ಎತ್ತರದ ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತಿದ್ದಾನೆ. ಮಧ್ಯಾಹ್ನದ ಸುಡುವ ಬಿಸಿಲನ್ನೂ ಲೆಕ್ಕಿಸದೆ ರೈತ ನಡೆಸುತ್ತಿರುವ ಈ ಪ್ರತಿಭಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹುಣಸಿಹಾಳ ಗ್ರಾಮದ ರೈತ ನಾಗರಾಜ್ ಗೊಂದಿ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಶೇಂಗಾ ಬೆಳೆಯನ್ನು ಪವರ್ ಗ್ರೀಡ್ ವಿಂಡ್ ಪವರ್ ಸಿಬ್ಬಂದಿಗಳು ಹಾಳು ಮಾಡಿದ್ದಾರೆ. ಹೈ ಟೆನ್ಷನ್ ವಿದ್ಯುತ್ ವೈರ್ ಕನೆಕ್ಷನ್ ನೀಡುವ ಉದ್ದೇಶದಿಂದ ರೈತನ ಅನುಮತಿ ಇಲ್ಲದೆ ಜಮೀನಿನೊಳಗೆ ಟ್ರ್ಯಾಕ್ಟರ್ ಓಡಿಸಿ ಬೆಳೆಯನ್ನು ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಪರಿಹಾರ ನೀಡುವಂತೆ ಕೇಳಿದ ರೈತನ ಮೇಲೆ ವಿಂಡ್ ಪವರ್ ಸಿಬ್ಬಂದಿಗಳು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ರೈತ ಇಂದು ಬೆಳಿಗ್ಗೆ 9 ಗಂಟೆಯಿಂದಲೇ ವಿದ್ಯುತ್ ಕಂಬ ಏರಿ ಕುಳಿತಿದ್ದಾರೆ.ಪ್ರತಿಭಟನೆ ನಡೆಸುತ್ತಿರುವ ರೈತ ನಾಗರಾಜ್ ಅವರು ಈಗಾಗಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. 38 ಡಿಗ್ರಿ ಸೆಲ್ಸಿಯಸ್ ಇರುವ ಸುಡುವ ಬಿಸಿಲಿನಲ್ಲಿ ಅವರು ಎತ್ತರದ ಕಂಬದ ಮೇಲೆ ಕುಳಿತಿರುವುದು ಅವರ ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.ರೈತ ಕಂಬ ಏರಿ ಹಲವು ಗಂಟೆಗಳಾದರೂ ಇದುವರೆಗೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಾಧಾನಪಡಿಸುವ ಅಥವಾ ಮಾತುಕತೆ ನಡೆಸುವ ಪ್ರಯತ್ನ ಮಾಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ – Kannada News | GBA Final Voter List: 5 Bengaluru City Corporations Release Updated Electoral Roll

ಗ್ರೇಟರ್ ಬೆಂಗಳೂರು ಪ್ರಾಧಿಕಾರImage Credit source: newsfirstprime

ಬೆಂಗಳೂರು, ಏಪ್ರಿಲ್​ 18: ಜಿಬಿಎ ಚುನಾವಣೆ (GBA Election) ಅವಧಿಯನ್ನು ಮುಂದೂಡುವ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಮಧ್ಯೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತಪಟ್ಟಿಯನ್ನು (Voter List) ಬಿಡುಗಡೆ ಮಾಡಿದೆ. ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಜಿಬಿಎ ಒಟ್ಟು 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಅಂತಿಮ ಪಟ್ಟಿಯಲ್ಲಿ 88,95,361 ಮತದಾರರನ್ನು ಗುರುತು ಮಾಡಲಾಗಿದೆ.

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಹೇಳಿದ್ದಿಷ್ಟು 

ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಪ್ರತಿಕ್ರಿಯಿಸಿದ್ದು, ಒಟ್ಟು 88,95,361 ಮತದಾರರ ಪೈಕಿ ಪುರುಷ ಮತದಾರರು 45,69,752, ಮಹಿಳಾ ಮತದಾರರು 43,21,143, ಇತರೆ 1,633 ಮತದಾರರು ಇದ್ದಾರೆ. ಬೆಂಗಳೂರು ದಕ್ಷಿಣ ವಾರ್ಡ್ 51 (ಸುಬ್ರಮಣ್ಯಪುರ)ರಲ್ಲಿ ಅತಿ ಹೆಚ್ಚು ಅಂದರೆ 54,026 ಮತದಾರರಿದ್ದಾರೆ. ಬೆಂಗಳೂರು ಪೂರ್ವ ವಾರ್ಡ್ 16(ಕೊತ್ತೂರು)ನಲ್ಲಿ 10,940 ಅತಿ ಕಡಿಮೆ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಪತ್ರ, ಕಾರಣವೇನು?

ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಕರಡು ಮತದಾರರ ಪಟ್ಟಿಯನ್ನ ಮಾರ್ಚ್ 9ರಂದು ಬಿಡುಗಡೆ ಮಾಡಲಾಗಿತ್ತು. ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗಿತ್ತು. ಆಕ್ಷೇಪಣೆ ಬಂದ ಬಳಿಕ ಎಲ್ಲವನ್ನು ಪರಿಶೀಲನೆ ಮಾಡಿ ಸರಿಪಡಿಸಲಾಗಿದೆ. ಇದೀಗ ಅಂತಿಮ‌ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಅಂತಿಮ ಮತದಾರರ ಪಟ್ಟಿಯಲ್ಲಿ 88,95,361 ಮತದಾರರನ್ನ ಗುರುತು ಮಾಡಲಾಗಿದೆ. ಒಟ್ಟು 369 ವಾರ್ಡ್‌ಗಳಿವೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಹೇಳಿದ್ದಾರೆ.

ಜಿಬಿಎ ಚುನಾವಣೆ ಮುಂದೂಡುವ ವಿಚಾರ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ 

ಜೂನ್ ಅಂತ್ಯದೊಳಗೆ ಜಿಬಿಎ ಚುನಾವಣೆ ಮಾಡಿ ಮುಗಿಸುವಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಈ ಹಿಂದೆಯೇ ಸುಪ್ರೀಂಕೋರ್ಟ್ ನಿರ್ದೇಶಿಸಿತ್ತು. ಆದರೆ ಸದ್ಯ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಸರ್ಕಾರವೇ ಆಯೋಗಕ್ಕೆ ಪತ್ರ ಬರೆದಿದೆ. ಈ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​​ನಲ್ಲಿ ಒಳಬೇಗುದಿ ಹೆಚ್ಚಾಗಿದೆ. ಇನ್ನು ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಅದಕ್ಕೆ ಜಿಬಿಎ ಚುನಾವಣೆ ಮುಂದೂಡಿ ಅಂತ ಚುನಾವಣಾ ಆಯೋಗಕ್ಕೆ ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲಾಗುವುದನ್ನು ತಪ್ಪಿಸಲು ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಟಾಕ್ಸಿಕ್’ ಪಾತ್ರದ ಬಗ್ಗೆ ಮಾತನಾಡಿದ ಕಿಯಾರಾ ಅಡ್ವಾಣಿ: ಹೇಳಿದ್ದೇನು? – Kannada News | Kiara Advani talks about Toxic movie and her character in it

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಸದ್ಯಕ್ಕೆ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಸಿನಿಮಾ ಇದೀಗ ಜೂನ್ 4ಕ್ಕೆ ಬಿಡುಗಡೆ ಮುಂದೂಡಿಕೊಂಡಿದ್ದು, ಸಿನಿಮಾದ ಪ್ರಚಾರ ಇದೀಗ ನಿಧಾನಕ್ಕೆ ಆರಂಭವಾಗಿದೆ. ‘ರಾಮಾಯಣ’ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​ನ ಸಿನಿಮಾಕಾನ್ 2026ನಲ್ಲಿ ಭಾಗಿ ಆಗಿರುವ ಯಶ್ ಅವರಿಗೆ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಬಹಳ ಪ್ರಶ್ನೆಗಳು ಎದುರಾಗಿದ್ದು, ಯಶ್ ಸಹ ‘ಟಾಕ್ಸಿಕ್’ ಬಗ್ಗೆ ಕುತೂಹಲಕಾರಿ ಅಂಶಗಳನ್ನು ಬಿಟ್ಟುಕೊಟ್ಟಿದ್ದಾರೆ. ಇದೀಗ ಪ್ರತಿಷ್ಠಿತ ಬ್ರ್ಯಾಂಡ್ ಕೊಲ್ಯಾಬರೇಷನ್​​ನಲ್ಲಿ ನಟಿ ಕಿಯಾರಾ ಅಡ್ವಾಣಿ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಕಿಯಾರಾ ಅಡ್ವಾಣಿ, ಇತ್ತೀಚೆಗಷ್ಟೆ ಬ್ರ್ಯಾಂಡ್ ಶೂಟ್ ಒಂದರಲ್ಲಿ ಭಾಗವಹಿಸಿದ್ದ ಕಿಯಾರಾ ಅಡ್ವಾಣಿ, ತಮ್ಮ ಸಿನಿಮಾ, ಖಾಸಗಿ ಜೀವನ, ತಾಯ್ತನ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ ತಮ್ಮ ಪಾತ್ರದ ಬಗ್ಗೆಯೂ ಮಾತನಾಡಿದ್ದಾರೆ. ಅವರು ಮಾತುಗಳಿಂದ ‘ಟಾಕ್ಸಿಕ್’ ಸಿನಿಮಾದ ಅವರ ನಾಡಿಯಾ ಪಾತ್ರ ಬಹಳ ಭಿನ್ನವಾದ ಮತ್ತು ಸವಾಲಿನ ಪಾತ್ರ ಹಾಗೂ ಅದು ಮಾಸ್ ಮಸಾಲ ಸಿನಿಮಾದ ನಾಯಕಿಯ ಪಾತ್ರದಂತೆ ಖಂಡಿತ ಇಲ್ಲ ಎಂಬುದು ತಿಳಿಯುತ್ತಿದೆ.

‘ಟಾಕ್ಸಿಕ್’ ಸಿನಿಮಾದ ನಾಡಿಯಾ ಪಾತ್ರ ನಾನು ಈ ವರೆಗೆ ಕೇಳಿರುವ ಭಿನ್ನ ರೀತಿಯ ಪಾತ್ರ. ಬಹಳ ಭಿನ್ನವಾದ ಪೋಷಣೆಯನ್ನು ಆ ಪಾತ್ರ ಒಳಗೊಂಡಿದೆ. ನನ್ನ ಪಾತ್ರಕ್ಕೆ ಅಷ್ಟು ಭಿನ್ನವಾದ ಕ್ಯಾರೆಕ್ಟರ್ ಆರ್ಕ್ ಅನ್ನು ಈ ವರೆಗೆ ನಾನು ನೋಡಿರಲಿಲ್ಲ. ನಿರ್ದೇಶಕಿ ಗೀತು ಮೋಹನ್​​ದಾಸ್ ‘ನಾಡಿಯಾ’ ಪಾತ್ರವನ್ನು ಬರೆದಿರುವ ರೀತಿ ಮತ್ತು ಆ ಪಾತ್ರಕ್ಕೆ ನೀಡಿರುವ ಪ್ರಾಮುಖ್ಯತೆ ಮತ್ತು ಭಿನ್ನತೆ ನನಗೆ ಬಹಳ ಹಿಡಿಸಿತು’ ಎಂದಿದ್ದಾರೆ ಕಿಯಾರಾ ಅಡ್ವಾಣಿ.

ಇದನ್ನೂ ಓದಿ:‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್

‘ನನ್ನ ವೃತ್ತಿ ಜೀವನದಲ್ಲಿ ನಾನು ಸವಾಲುಗಳನ್ನು ತೆಗೆದುಕೊಳ್ಳಲು ರೆಡಿಯಾಗುತ್ತಿರುವಾಗಲೇ ಈ ಪಾತ್ರ ನನಗೆ ಬಂತು. ಇದು ಸರಿಯಾದ ಸಮಯ ಎನಿಸಿ ಈ ಪಾತ್ರವನ್ನು ನಾನು ಒಪ್ಪಿಕೊಂಡೆ. ನಾನು ‘ನಾಡಿಯಾ’ ಅಂಥಹಾ ಸವಾಲಿನ ಪಾತ್ರದಲ್ಲಿ ಬೆರೆತು ಹೋದೆ, ನನ್ನನ್ನು ನಾನು ನಿರ್ದೇಶಕಿಗೆ ಮತ್ತು ಆ ಪಾತ್ರಕ್ಕೆ ಒಪ್ಪಿಸಿಕೊಂಡು ಬಿಟ್ಟೆ. ಪಾತ್ರ ಚೆನ್ನಾಗಿ ಮೂಡಿಬಂದಿದ್ದು, ಸಿನಿಮಾ ಬಿಡುಗಡೆಗೆ ಉತ್ಸುಕಳಾಗಿದ್ದೇನೆ’ ಎಂದಿದ್ದಾರೆ ಕಿಯಾರಾ ಅಡ್ವಾಣಿ.

ಕಿಯಾರಾ ಅಡ್​ವಾಣಿ ‘ನಾಡಿಯಾ’ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಅವರಷ್ಟೆ ಅಲ್ಲದೆ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ಸಹ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಜೂನ್ 4ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link