Category Archives: Blog

Your blog category

ಕರ್ನಾಟಕ ಕರಾವಳಿ ಆಗಲಿದೆ ಕೇರಳ, ಗೋವಾದಂತೆ ಟೂರಿಸಂ ಹಬ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | DK Shivakumar Vows to Develop Karnataka Coast on Kerala Goa Tourism Model

ಮಂಗಳೂರು, ಜನವರಿ 10: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಡೆಯುತ್ತಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕೇರಳ ಮತ್ತು ಗೋವಾದಂತೆ ಕರಾವಳಿ ಭಾಗದ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವಲ್ಲಿ ಹಿಂದಿನ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ವೈಫಲ್ಯದಿಂದಾಗಿ ಮಂಗಳೂರು ಸೇರಿದಂತೆ ಕರಾವಳಿ ಭಾಗದ ಜನರು ಮುಂಬೈ, ದುಬೈ, ಬೆಂಗಳೂರು ಮತ್ತಿತರ ಕಡೆಗಳಿಗೆ ವಲಸೆ ಹೋಗುತ್ತಿದ್ದಾರೆ. ಸುಮಾರು 300 ಕಿಲೋಮೀಟರ್‌ಗೂ ಅಧಿಕ ಕರಾವಳಿ ತೀರವಿದ್ದರೂ, ಅದನ್ನು ಸರಿಯಾಗಿ ಬಳಸಿಕೊಳ್ಳದಿರುವುದು ಪ್ರಸ್ತುತ ಸಮಸ್ಯೆಗೆ ಕಾರಣ ಎಂದು ಡಿಕೆಶಿ ತಿಳಿಸಿದ್ದಾರೆ.

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಎಲ್ಲರೂ ಆಸಕ್ತಿ ತೋರಿದ್ದಾರೆ. ಹಾಲಿ ಪ್ರವಾಸೋದ್ಯಮ ನೀತಿ ಕರಾವಳಿಗೆ ಸೂಕ್ತವಲ್ಲ. ಹೊಸ ನೀತಿ ರೂಪಿಸಲು ಅಧಿಕಾರಿಗಳು, ಉದ್ಯಮಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಖಾಸಗಿ ಹೂಡಿಕೆ ಮತ್ತು ಪಿಪಿಪಿ ಮಾದರಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೃದಯ ಚೆನ್ನಾಗಿರಬೇಕು ಅಂದ್ರೆ ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ 3 ಆಹಾರಗಳನ್ನು ಸೇವಿಸಬೇಡಿ – Kannada News | Foods That Weaken Your Heart in Winter

ಪ್ರಸ್ತುತ, ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ದೇಹವನ್ನು ಬೆಚ್ಚಗಿಡಲು ನಮ್ಮ ಅಗತ್ಯಗಳು ಬದಲಿಸಿಕೊಳ್ಳುವುದು ಒಳ್ಳೆಯದು. ಅದರಲ್ಲಿಯೂ ಈ ಋತುವಿನಲ್ಲಿ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷವಾಗಿ ಗಮನ ಹರಿಸಬೇಕು. ಏಕೆಂದರೆ ಅನಾರೋಗ್ಯಕರ ಆಹಾರ ಪದ್ಧತಿಗಳು ಹೃದಯದ ಆರೋಗ್ಯದ (Heart Health) ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಜನರು ಚಳಿಗಾಲದಲ್ಲಿ ಹೆಚ್ಚು ಎಣ್ಣೆಯುಕ್ತ ಮತ್ತು ಹೊಟ್ಟೆ ಬಿರಿಯುವಷ್ಟು ಆಹಾರ ಸೇವನೆ ಮಾಡಿದರೆ, ಇದು ಹೃದಯದ ಮೇಲಿನ ಹೊರೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಮತೋಲಿತ ಆಹಾರವ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಆದ್ದರಿಂದ, ಚಳಿಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವ ಮೂಲಕ ಹೃದಯವನ್ನು ಆರೋಗ್ಯಕರವಾಗಿಟ್ಟುಕೊಳ್ಳಬೇಕು. ಅದರ ಜೊತೆಗೆ ಯಾವ ಆಹಾರಗಳು ನಿಮ್ಮ ಹೃದಯವನ್ನು ದುರ್ಬಲಗೊಳಿಸಬಹುದು ಎಂಬುದನ್ನು ತಿಳಿದುಕೊಳ್ಳಿ.

ಈ ಮೂರು ಆಹಾರಗಳು ಚಳಿಗಾಲದಲ್ಲಿ ಹೃದಯವನ್ನು ದುರ್ಬಲಗೊಳಿಸಬಹುದು!

ರಾಜೀವ್ ಗಾಂಧಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಡಾ. ಅಜಿತ್ ಜೈನ್ ಹೇಳುವ ಪ್ರಕಾರ, ಚಳಿಗಾಲದಲ್ಲಿ ಜನರು ಹೆಚ್ಚಾಗಿ ಹುರಿದ ಮತ್ತು ಮಸಾಲೆಯುಕ್ತ ಆಹಾರ, ತುಂಬಾ ಸಿಹಿ ಮತ್ತು ಅತಿಯಾಗಿ ಉಪ್ಪುಸಹಿತ ಆಹಾರ ಮತ್ತು ಕೆಂಪು ಮಾಂಸವನ್ನು ತಿನ್ನುತ್ತಾರೆ. ಈ ಮೂರು ರೀತಿಯ ಆಹಾರಗಳು ಕೂಡ ಹೃದಯವನ್ನು ದುರ್ಬಲಗೊಳಿಸಬಹುದು. ಶೀತ ವಾತಾವರಣದಲ್ಲಿ ದೇಹದ ಚಯಾಪಚಯ ಕ್ರಿಯೆ ನಿಧಾನವಾಗುವುದರಿಂದ ಈ ರೀತಿಯಾಗುತ್ತದೆ. ಜೊತೆಗೆ ನಿಧಾನ ರಕ್ತ ಪರಿಚಲನೆ ಹೃದಯದ ಮೇಲೆ ಹೆಚ್ಚುವರಿ ಒತ್ತಡವನ್ನು ಬೀರುತ್ತದೆ. ಹುರಿದ ಮತ್ತು ಮಸಾಲೆಯುಕ್ತ ಆಹಾರಗಳು ರಕ್ತದೊತ್ತಡವನ್ನು ಹೆಚ್ಚಿಸುತ್ತವೆ ಮತ್ತು ಕೊಲೆಸ್ಟ್ರಾಲ್ ಮಟ್ಟದ ಮೇಲೆ ಪರಿಣಾಮ ಬೀರುತ್ತವೆ. ಹೆಚ್ಚು ಉಪ್ಪು ಸೇವಿಸುವುದರಿಂದ ಹೃದಯದ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ವಸ್ತುಗಳ ನಿರಂತರ ಸೇವನೆಯು ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಚಳಿಗಾಲದಲ್ಲಿ ಈ ವಸ್ತುಗಳನ್ನು ತಪ್ಪಿಸುವುದು ಮತ್ತು ಸಮತೋಲಿತ ಆಹಾರವನ್ನು ಸೇವಿಸುವುದು ಬಹಳ ಒಳ್ಳೆಯದು.

ಇದನ್ನೂ ಓದಿ: ಹೃದಯ ಆರೋಗ್ಯವಾಗಿರಬೇಕು ಅಂದ್ರೆ ಮೊದಲು ಈ ಆಹಾರಗಳ ಸೇವನೆ ಮಾಡಬೇಕು

ಹೃದಯದ ಆರೋಗ್ಯ ಕಾಪಾಡಲು ಯಾವ ರೀತಿಯ ಆಹಾರ ಸೇವಿಸಬೇಕು?

ಚಳಿಗಾಲದಲ್ಲಿ ಸಮತೋಲಿತ ಆಹಾರವನ್ನು ಸೇವಿಸುವುದು ಒಳ್ಳೆಯದು. ಹಣ್ಣು ಮತ್ತು ತರಕಾರಿಗಳನ್ನು ನಿಯಮಿತವಾಗಿ ಸೇವಿಸಿ, ವಿಶೇಷವಾಗಿ ಕಿತ್ತಳೆ ಮತ್ತು ಸೇಬುಗಳಂತಹ ಕಾಲೋಚಿತ ಹಣ್ಣುಗಳು ಮತ್ತು ಕಾಲೋಚಿತ ತರಕಾರಿಗಳ ಸೇವನೆ ಮಾಡಿ. ಹೃದಯವನ್ನು ಆರೋಗ್ಯಕರವಾಗಿಡುವ ಓಟ್ಸ್, ಗಂಜಿ ಮತ್ತು ಧಾನ್ಯಗಳ ಸೇವನೆಯನ್ನು ಹೆಚ್ಚಿಸಿಕೊಳ್ಳಿ. ಮೀನು, ಬೇಳೆ ಮತ್ತು ಬೀಜಗಳು ಪ್ರೋಟೀನ್‌ನ ಉತ್ತಮ ಮೂಲಗಳಾಗಿದ್ದು ಹೃದಯಕ್ಕೆ ಒಳ್ಳೆಯದು. ಇದರ ಜೊತೆಗೆ ಅಗಸೆ ಬೀಜಗಳು ಮತ್ತು ಒಮೆಗಾ -3 ಭರಿತ ಆಹಾರಗಳನ್ನು ಸೇರಿಸಿಕೊಳ್ಳಿ. ಹೃದಯವನ್ನು ಆರೋಗ್ಯವಾಗಿಡಲು, ಸಾಕಷ್ಟು ನೀರು ಮತ್ತು ಇತರ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಸಹ ಅತ್ಯಗತ್ಯ. ಈ ರೀತಿಯಾಗಿ, ಸಮತೋಲಿತ ಮತ್ತು ಪೌಷ್ಟಿಕ ಆಹಾರವು ಚಳಿಗಾಲದಲ್ಲಿ ಹೃದಯವನ್ನು ರಕ್ಷಿಸುತ್ತದೆ. ಇದೆಲ್ಲದರ ಜೊತೆಗೆ ಪ್ರತಿದಿನ ಲಘು ವ್ಯಾಯಾಮ ಮಾಡಿ, ಸಾಕಷ್ಟು ನಿದ್ರೆ ಮಾಡುವುದನ್ನು ಮರೆಯಬೇಡಿ. ಆರೋಗ್ಯ ಕಾಪಾಡಿಕೊಳ್ಳಲು ಧೂಮಪಾನ ಮತ್ತು ಮದ್ಯಪಾನವನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:12 pm, Sat, 10 January 26

Source link

ಹೊಸ ಇತಿಹಾಸ… RCBಯಂತೆ ಈವರೆಗೆ ಯಾವುದೇ ತಂಡ ಗೆದ್ದಿಲ್ಲ..! – Kannada News | RCB Scipted History in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ.

Source link

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಕೈಂಗಿಕ ಕಿರುಕುಳ – Kannada News | Bengaluru Rapido Bike Taxi Rider Arrested for Misconduct with Woman Passenger

ಬೆಂಗಳೂರು, ಜನವರಿ 10: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯೊಬ್ಬರು ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್‌ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ, ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ.

ಯುವತಿ ಆಕ್ಷೇಪಿಸಿದಾಗ, ಆತ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಮತ್ತು ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಯುವತಿ ಕಿರುಚಾಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ, ಪೊಲೀಸರು ಆರೋಪಿ ವಿವೇಕ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಘಟನೆ ಬೈಕ್ ಟ್ಯಾಕ್ಸಿ ಬಳಸುವ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಚಿಂತನೆಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ – Kannada News | Why Concern for Illegal Bangladeshi Migrants but Not Kasaragod Kannadigas? Ashok Questions Congress High Command

ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ

ಬೆಂಗಳೂರು, ಜನವರಿ 10: ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ (Karnataka) ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಪ್ರಶ್ನೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಪ್ರಿಯಾಂಕ ಗಾಂಧಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ -2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕರ್ನಾಟಕ ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ ಎಂದು ಅವರು ಪ್ರಶ್ನಿಸಿದ್ದಾರೆ.

ಅಶೋಕ್ ಎಕ್ಸ್ ಸಂದೇಶ

ಅಕ್ರಮ ವಲಸಿಗರು ಕರ್ನಾಟಕದ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, ‘ಮಾನವೀಯತೆ’ ದೃಷ್ಟಿಯಿಂದ ಮನೆ ಕೊಡಬೇಕು ಎಂದು ರೋಹಿಂಗ್ಯಗಳು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆಸಿ ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ? ಕರ್ನಾಟಕದ ಸ್ವಾಭಿಮಾನ, ಆತ್ಮಗೌರವಕ್ಕೆ ಪದೇ ಪದೇ ಧಕ್ಕೆ ತರುತ್ತಿರುವ ಕಾಂಗ್ರೆಸ್ ಪಕ್ಷದ ಕೇರಳ ಪಟಾಲಂ, ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?

ಕೇರಳದಾದ್ಯಂತ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕಾಸರಗೋಡು ಹಾಗೂ ಮಂಜೇಶ್ವರದ ಕನ್ನಡ ಮಾಧ್ಯಮ ಮಕ್ಕಳ ಮೇಲೆ ಮಲಯಾಳ ಹೇರಿಕೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಆಕ್ಷೇಪಿಸಿದ್ದಾರೆ. ಮಸೂದೆ ಹಿಂಪಡೆಯುವಂತೆ ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಇಬ್ಬರು ಅಲಭ್ಯ… ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India vs New Zealand 1st ODI Match Predicted Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.11) ಶುರುವಾಗಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಆದರೆ ಈ ಆಡುವ ಬಳಗದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರಲಿದೆ.

ಈ ಬದಲಾವಣೆಯೊಂದಿಗೆ ನ್ಯೂಝಿಲೆಂಡ್ ವಿರುದ್ಧ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅತ್ತ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಗಿಲ್ ಹೊರಗುಳಿದಿದ್ದ ಕಾರಣ ಯಶಸ್ವಿ ಜೈಸ್ವಾಲ್ ಕಣಕ್ಕಿಳಿದಿದ್ದರು. ಇದೀಗ ಶುಭ್​ಮನ್ ಅವರ ಆಗಮನದೊಂದಿಗೆ ಜೈಸ್ವಾಲ್ ಮತ್ತೆ ಬೆಂಚ್ ಕಾಯಬೇಕಾಗುತ್ತದೆ.

ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತ. ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಅಯ್ಯರ್ ಬದಲಿಗೆ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿದಿದ್ದರು. ಆದರೆ ಅಯ್ಯರ್ ಆಗಮನದೊಂದಿಗೆ ರುತುರಾಜ್ ಗಾಯಕ್ವಾಡ್ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ.

ಹಾಗೆಯೇ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ವಾಷಿಂಗ್ಟನ್​ ಸುಂದರ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ ಕೂಡ ಭಾರತ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ಸಿಗಬಹುದು.

ಇನ್ನು ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇನ್ನುಳಿದಂತೆ ಬೌಲರ್​ಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್ ಹಾಗೂ ಹರ್ಷಿತ್ ರಾಣಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿದೆ…

  • ರೋಹಿತ್ ಶರ್ಮಾ
  • ಶುಭ್​ಮನ್ ಗಿಲ್ (ನಾಯಕ)
  • ವಿರಾಟ್ ಕೊಹ್ಲಿ
  • ಶ್ರೇಯಸ್ ಅಯ್ಯರ್ (ಉಪನಾಯಕ)
  • ಕೆಎಲ್ ರಾಹುಲ್ (ವಿಕೆಟ್ ಕೀಪರ್)
  • ವಾಷಿಂಗ್ಟನ್ ಸುಂದರ್
  • ರವೀಂದ್ರ ಜಡೇಜಾ
  • ಹರ್ಷಿತ್ ರಾಣಾ
  • ಮೊಹಮ್ಮದ್ ಸಿರಾಜ್
  • ಅರ್ಷದೀಪ್ ಸಿಂಗ್
  • ಕುಲ್ದೀಪ್ ಯಾದವ್

ಇದನ್ನೂ ಓದಿ: ಒಂದೇ ಒಂದು ಎಸೆತದಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಲಾರೆನ್ ಬೆಲ್

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.

Published On – 12:56 pm, Sat, 10 January 26

Source link

Prasar Bharati Recruitment 2025: ಪ್ರಸಾರ ಭಾರತಿಯಲ್ಲಿ 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ – Kannada News | Prasar Bharati Recruitment 2025: 14 Marketing Executive Jobs – Apply Online!

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ವಿವಿಧ ಉದ್ಯೋಗಗಳ ನೇಮಕಾತಿಗೆ ಜಾಹೀರಾತು ಬಿಡುಗಡೆ ಮಾಡಿದೆ. ದೇಶಾದ್ಯಂತ ವಿವಿಧ ಸ್ಥಳಗಳಲ್ಲಿರುವ ಪ್ರಸಾರ ಭಾರತಿ ಕೇಂದ್ರಗಳಲ್ಲಿ ಒಪ್ಪಂದದ ಆಧಾರದ ಮೇಲೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಪ್ರಕಾರ ಸಂಬಂಧಿತ ವಿಭಾಗದಲ್ಲಿ MBA ಅಥವಾ MCA ಅಥವಾ PG ಡಿಪ್ಲೊಮಾ ಇನ್ ಮಾರ್ಕೆಟಿಂಗ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಧಿಸೂಚನೆಯ ಪ್ರಕಾರ ಅವರು ಕೆಲಸದ ಅನುಭವವನ್ನು ಹೊಂದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿ ಜುಲೈ 7, 2026 ರಂತೆ 35 ವರ್ಷಗಳಿಗಿಂತ ಕಡಿಮೆಯಿರಬೇಕು. ಈ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಜನವರಿ 22, 2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಗಡುವಿನ ನಂತರ ಸ್ವೀಕರಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಯಾವುದೇ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂದರೆ, ಮೊದಲು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಕಿರುಪಟ್ಟಿ ಮಾಡಲಾಗುತ್ತದೆ. ಅದರ ನಂತರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ, ಸಂದರ್ಶನವನ್ನು ನಡೆಸಲಾಗುತ್ತದೆ ಮತ್ತು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಈ ಉದ್ಯೋಗಗಳಿಗೆ ಆಯ್ಕೆಯಾದವರು ಚೆನ್ನೈ, ಹೈದರಾಬಾದ್, ಮುಂಬೈ, ಕೋಲ್ಕತ್ತಾದಂತಹ ಮೆಟ್ರೋ ನಗರಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಅವರಿಗೆ ತಿಂಗಳಿಗೆ ರೂ. 35,000 ರಿಂದ ರೂ. 50,000 ರವರೆಗೆ ವೇತನ ನೀಡಲಾಗುತ್ತದೆ. ಇತರ ನಗರಗಳಲ್ಲಿ ನೇಮಕಗೊಂಡವರಿಗೆ ತಿಂಗಳಿಗೆ ರೂ. 35,000 ರಿಂದ ರೂ. 42,000 ರವರೆಗೆ ವೇತನ ನೀಡಲಾಗುತ್ತದೆ. ಆನ್‌ಲೈನ್ ಅರ್ಜಿಗಾಗಿ, ನೀವು ಪ್ರಸಾರ ಭಾರತಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಧಿಸೂಚನೆಗೆ ಸಂಬಂಧಿಸಿದ ಇತರ ನಿಯಮಗಳು ಮತ್ತು ಷರತ್ತುಗಳನ್ನು ವೆಬ್‌ಸೈಟ್‌ನಲ್ಲಿ ಎಚ್ಚರಿಕೆಯಿಂದ ಓದಿ ಅರ್ಜಿ ಸಲ್ಲಿಸುವುದು ಉತ್ತಮ.

ಪ್ರಸಾರ ಭಾರತಿ ಉದ್ಯೋಗ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಇಬ್ಬರು ಅಲಭ್ಯ… ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India vs New Zealand 1st ODI Match Predicted Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.11) ಶುರುವಾಗಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಆದರೆ ಈ ಆಡುವ ಬಳಗದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರಲಿದೆ.

ಈ ಬದಲಾವಣೆಯೊಂದಿಗೆ ನ್ಯೂಝಿಲೆಂಡ್ ವಿರುದ್ಧ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅತ್ತ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಗಿಲ್ ಹೊರಗುಳಿದಿದ್ದ ಕಾರಣ ಯಶಸ್ವಿ ಜೈಸ್ವಾಲ್ ಕಣಕ್ಕಿಳಿದಿದ್ದರು. ಇದೀಗ ಶುಭ್​ಮನ್ ಅವರ ಆಗಮನದೊಂದಿಗೆ ಜೈಸ್ವಾಲ್ ಮತ್ತೆ ಬೆಂಚ್ ಕಾಯಬೇಕಾಗುತ್ತದೆ.

ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತ. ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಅಯ್ಯರ್ ಬದಲಿಗೆ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿದಿದ್ದರು. ಆದರೆ ಅಯ್ಯರ್ ಆಗಮನದೊಂದಿಗೆ ರುತುರಾಜ್ ಗಾಯಕ್ವಾಡ್ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ.

ಹಾಗೆಯೇ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ವಾಷಿಂಗ್ಟನ್​ ಸುಂದರ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ ಕೂಡ ಭಾರತ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ಸಿಗಬಹುದು.

ಇನ್ನು ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇನ್ನುಳಿದಂತೆ ಬೌಲರ್​ಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್ ಹಾಗೂ ಹರ್ಷಿತ್ ರಾಣಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿದೆ…

  • ರೋಹಿತ್ ಶರ್ಮಾ
  • ಶುಭ್​ಮನ್ ಗಿಲ್ (ನಾಯಕ)
  • ವಿರಾಟ್ ಕೊಹ್ಲಿ
  • ಶ್ರೇಯಸ್ ಅಯ್ಯರ್ (ಉಪನಾಯಕ)
  • ಕೆಎಲ್ ರಾಹುಲ್ (ವಿಕೆಟ್ ಕೀಪರ್)
  • ವಾಷಿಂಗ್ಟನ್ ಸುಂದರ್
  • ರವೀಂದ್ರ ಜಡೇಜಾ
  • ಹರ್ಷಿತ್ ರಾಣಾ
  • ಮೊಹಮ್ಮದ್ ಸಿರಾಜ್
  • ಅರ್ಷದೀಪ್ ಸಿಂಗ್
  • ಕುಲ್ದೀಪ್ ಯಾದವ್

ಇದನ್ನೂ ಓದಿ: ಒಂದೇ ಒಂದು ಎಸೆತದಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಲಾರೆನ್ ಬೆಲ್

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.

Source link

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಗದಗ, ಜನವರಿ 10: ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ವಾಯುವಿಹಾರಕ್ಕೆ ಬಂದ ಜನರ ಕಣ್ಣಿಗೆ ಕಳ್ಳ ಬಿದ್ದಿದ್ದು, ತಕ್ಷಣ ರೈತರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರೈತರು ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ರೈತರ ಜಮೀನುಗಳಲ್ಲಿ ಕಡಲೆ ಕಳ್ಳತನ ನಡೆಯುತ್ತಿದ್ದು, ಇದರಿಂದ ರೈತರು ಕಂಗಾಲಾಗಿದ್ದರು ಎನ್ನಲಾಗಿದೆ. ಆಕ್ರೋಶಗೊಂಡ ರೈತರು ಕಳ್ಳನ ತಲೆ ಹಾಗೂ ಕೊರಳಿಗೆ ಕಡಲೆ ಗಿಡಗಳ ಮಾಲೆ ಹಾಕಿ ಪಾಠ ಕಲಿಸಿದ್ದಾರೆ. ಮಾಹಿತಿ ಪಡೆದ ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Source link

‘ಜನ ನಾಯಗನ್’ ವಿವಾದ: ಸಿಬಿಎಫ್​ಸಿ ಮಾಡಿದ್ದೇನು? ವಿವರಿಸಿದ ನಿರ್ಮಾಪಕ – Kannada News | Jana Nayagan controversy Producer Venkat K Narayan shared detailed information

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜನವರಿ 09ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿಯು ಪ್ರಮಾಣ ಪತ್ರ ನೀಡಲು ಹಿಂಜರಿದ ಕಾರಣ ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿತು, ಜನವರಿ 09ರಂದು ಮದ್ರಾಸ್ ಹೈಕೋರ್ಟ್, ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕೆಂದು ಆದೇಶಿಸಿತ್ತು. ಆದರೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್​ನ ಮತ್ತೊಂದು ಪೀಠ ಆದೇಶಕ್ಕೆ ತಡೆ ನೀಡಿತು. ಹೀಗಾಗಿ ಸಿನಿಮಾ ಬಿಡುಗಡೆ ಮತ್ತಷ್ಟು ಮುಂದೆ ಹೋಗಿದೆ. ಸಿನಿಮಾದ ಬಿಡುಗಡೆಯೇ ಅನಿಶ್ಚತತೆಗೆ ಒಳಗಾಗಿದೆ. ಇದೀಗ ಸಿನಿಮಾದ ನಿರ್ಮಾಪಕ ವೆಂಕಟ್ ಕೆ ನಾರಾಯಣ್ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

‘ಜನ ನಾಯಗನ್’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್​ನ ಮಾಲೀಕರಾದ ವೆಂಕಟ್ ನಾರಾಯಣ್ ವಿಡಿಯೋನಲ್ಲಿ ಹಂಚಿಕೊಂಡಿರುವ ಮಾಹಿತಿಯಂತೆ ‘ಜನ ನಾಯಗನ್’ ಸಿನಿಮಾವನ್ನು 18 ಡಿಸೆಂಬರ್ 2025 ರಂದು ಸಿಬಿಎಫ್​​ಸಿಗೆ ಸಲ್ಲಿಕೆ ಮಾಡಲಾಗಿತ್ತು. 22ರ ಡಿಸೆಂಬರ್ ತಿಂಗಳಲ್ಲಿ ಸಿಬಿಎಫ್​​ಸಿಯು ಇಮೇಲ್ ಮಾಡಿ, ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದ್ದು, ಸಿನಿಮಾಕ್ಕೆ ಕೆಲವು ಕಟ್​​ಗಳನ್ನು ಸಹ ಸೂಚಿಸಿತ್ತು. ಅದರಂತೆ ಚಿತ್ರತಂಡವು ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆಗಳನ್ನು ಮಾಡಿ ಡಿಸೆಂಬರ್ 22ಕ್ಕೆ ಮತ್ತೆ ಸಿನಿಮಾವನ್ನು ಸಿಬಿಎಫ್​​ಸಿಗೆ ಸಲ್ಲಿಕೆ ಮಾಡಿತ್ತು.

ವೆಂಕಟ್ ಅವರು ಹೇಳಿರುವಂತೆ, ‘ಸಿಬಿಎಫ್​​ಸಿಯು, ‘ಜನ ನಾಯಗನ್’ ಬಗ್ಗೆ ಬಂದ ಒಂದು ದೂರನ್ನು ಪರಿಗಣಿಸಿ ಸಿನಿಮಾವನ್ನು ರಿವ್ಯೂ ಕಮಿಟಿಗೆ ಕಳಿಸಲು ನಿರ್ಧಾರ ಮಾಡಿತು. ಆದರೆ ನಮಗೆ ಬಿಡುಗಡೆ ದಿನಾಂಕ ಹತ್ತಿರ ಇದ್ದಿದ್ದರಿಂದ ಹಾಗೂ ದೂರುದಾರರು ಯಾರು ಎಂಬ ಮಾಹಿತಿಯೂ ಸಹ ಇಲ್ಲವಾದ ಕಾರಣ, ನಾವು ಮದ್ರಾಸ್ ಹೈಕೋರ್ಟ್​​ನ ಮೆಟ್ಟಿಲೇರಿದೆವು. ಜನವರಿ 06 ಮತ್ತು 7 ರಂದು ವಿಚಾರಣೆ ನಡೆಸಿದ ನ್ಯಾಯಾಲಯವು. ಜನವರಿ 09ರಂದು ‘ಜನ ನಾಯಗನ್’ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕೆಂದು ಆದೇಶ ಹೊರಡಿಸಿತು’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ತಾವು ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ವಿಚಾರವಾಗಿ ಅಚ್ಚರಿಯ ಹೇಳಿಕೆ

‘ಆದರೆ ಸಿಬಿಎಫ್​​ಸಿಯು ಅದೇ ದಿನ ಆದೇಶದ ವಿರುದ್ಧ ಮದ್ರಾಸ್ ಹೈಕೋರ್ಟ್​​ನಲ್ಲಿಯೇ ಮೇಲ್ಮನವಿ ಸಲ್ಲಿಸಿತು. ಈ ಕಾರಣದಿಂದಾಗಿ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಬೇಕು ಎಂದು ಹೊರಡಿಸಲಾಗಿದ್ದ ಆದೇಶದ ಮೇಲೆ ತಡೆ ನೀಡಲಾಯ್ತು. ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಲಾಗಿದೆ. ನಮಗೆ ನ್ಯಾಯ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದ್ದು, ಆದಷ್ಟು ಶೀಘ್ರ ನಾವು ಸಿನಿಮಾವನ್ನು ಜನರ ಎದುರು ತರಲಿದ್ದೇವೆ’ ಎಂದಿದ್ದಾರೆ ವೆಂಕಟ್.

‘ದಳಪತಿ ವಿಜಯ್ ಅವರು ದಶಕಗಳ ಕಾಲ ಚಿತ್ರರಂಗಕ್ಕೆ ನೀಡಿದ ಸೇವೆ, ಮನೊರಂಜನೆಗೆ ಒಂದು ಅದ್ಭುತವಾದ ವಿದಾಯವನ್ನು ಸಿನಿಮಾ ಮೂಲಕ ನೀಡುವುದು ನಮ್ಮ ಉದ್ದೇಶವಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅದಕ್ಕೆ ಅಡ್ಡಿಗಳು ಎದುರಾಗಿದೆ. ಇದು ನಮಗೆ ಕಠಿಣವಾದ ಮತ್ತು ಭಾವುಕವಾದ ಸಮಯ. ಇಂಥಹಾ ಸಮಯದಲ್ಲಿ ನಾವು ಸಿನಿಮಾವನ್ನು ಜನರ ಮುಂದೆ ತರಲು ಶಕ್ತಿ ಮೀರಿ ಯತ್ನಿಸುತ್ತಿದ್ದೇವೆ. ಇಂಥಹಾ ಸಮಯದಲ್ಲಿ ಪ್ರೇಕ್ಷಕರು, ಸಿನಿಮಾ ವಿತರಕರು, ಪ್ರದರ್ಶಕರು ಮತ್ತು ನಮ್ಮ ಸಹ ಬಂಡವಾಳದಾರರು ನಮಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ ವೆಂಕಟ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 12:27 pm, Sat, 10 January 26

Source link