Category Archives: Blog

Your blog category

WPL 2026: ಗೆಲುವಿನ ಬೆನ್ನಲ್ಲೇ RCB ತಂಡಕ್ಕೆ ಬಿಗ್ ಶಾಕ್

Source link

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು? – Kannada News | RCB are known to play thrillers: Smriti Mandhana

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು. 155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ನಾಟ್ ಸ್ಕೀವರ್ ಬ್ರಂಟ್ ಎಸೆದ ಅಂತಿಮ ಓವರ್​ನಲ್ಲಿ 6,4,6,4 ಬಾರಿಸುವ ಮೂಲಕ ನಡಿನ್ ಡಿ ಕ್ಲರ್ಕ್​ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 3 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ, ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯವೇ ರೋಮಾಂಚಕರಿಯಾಗಿತ್ತು. ಈ ರೋಚಕ ಪಂದ್ಯದಲ್ಲಿ ಗೆದ್ದಿರುವುದು ಖುಷಿ ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂದ್ರೆನೇ ಥ್ರಿಲ್ಲರ್. ಆರ್​ಸಿಬಿ ತಂಡ ರೋಚಕ ಪಂದ್ಯಗಳಿಗೆ ಹೆಸರುವಾಸಿ. ಇದೀಗ ರೋಚಕವಾಗಿ ಪಂದ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಕ್ಕೆ ತುಂಬಾ ಸಂತೋಷವಾಯಿತು.

ಈ ಪಂದ್ಯದ ಗೆಲುವಿನ ಶ್ರೇಯಸ್ಸು ನಡಿನ್ ಡಿ ಕ್ಲರ್ಕ್​ಗೆ ಸಲ್ಲಬೇಕು. ಏಕೆಂದರೆ ಅವರು ಅದ್ಭುತವಾಗಿ ಆಡಿದರು. ಹಾಗೆಯೇ ಉಳಿದ ಆಟಗಾರ್ತಿಯರೂ ಕೂಡ ಈ ಪಂದ್ಯದಲ್ಲಿ ಸಾಕಷ್ಟು ಸಕಾರಾತ್ಮಕವಾಗಿದ್ದರು. ಈ ಪಾಸಿಟಿವ್ ಗೆಲುವು – ಸೋಲುಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಈ ಸಕರಾತ್ಮಕತೆಯ ನಡುವೆ ನಡಿನ್ ಡಿ ಕ್ಲರ್ಕ್ ಪ್ರದರ್ಶನ ಅದ್ಭುತ. ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ನಮಗಾಗಿ ಎಲ್ಲಾ ಜವಾಬ್ದಾರಿ ನಿಭಾಯಿಸಿದರು. ಇದಕ್ಕೂ ಮುನ್ನ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಅವರು ಟೀಮ್ ಇಂಡಿಯಾ ವಿರುದ್ಧ ಆಡಿದ ಇನಿಂಗ್ಸ್ ನಾವು ನೋಡಿದ್ದೇವೆ.  ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೂಡ ಅಂತಹದ್ದೇ ಇನಿಂಗ್ಸ್ ಆಡಿದ್ದಾರೆ.

ಇದನ್ನೂ ಓದಿ: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್​

ಒಟ್ಟಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಪಂದ್ಯದಲ್ಲೇ ಜಯ ಸಾಧಿಸಿರುವುದು ಖುಷಿ ನೀಡಿದೆ. ಈ ಪಾಸಿಟಿವ್ ವೈಬ್ ಮುಂದಿನ ಪಂದ್ಯಗಳಲ್ಲೂ ಮುಂದುವರೆಯುವ ನಿರೀಕ್ಷೆಯಿದೆ ಎಂದು ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದಾರೆ.

Source link

ನಂಜನಗೂಡು: ಯುವಕನ ಬಳಿ ‘ನನ್ನ ಕರ್ಕೊಂಡೋಗಿ ಮದುವೆಯಾಗು’ ಎನ್ನುತ್ತಿದ್ದ ಅಪ್ರಾಪ್ತೆ ನಿಗೂಢ ಸಾವು – Kannada News | Mysuru Minors Tragic Death: Boyfriend or Parents Under Scrutiny in Nanjangud Case

ಮೈಸೂರು, ಜನವರಿ 10: ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತೆ ದಿವ್ಯಾ ಎಂಬಾಕೆ ನಂಜನಗೂಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಬಾಲಕಿಯ ಸಾವು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆಕೆಯ ಸಾವಿಗೆ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಕಾರಣ ಎಂಬ ಗೊಂದಲ ಸೃಷ್ಟಿಯಾಗಿದೆ. ದಿವ್ಯಾ, ಆದಿತ್ಯ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರು ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಸುತ್ತಾಡಿದ್ದು, ಅವರ ಸೆಲ್ಫಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ದಿವ್ಯಾ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಯುವಕನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಒಂದು ಕಡೆ ಆರೋಪ ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ಆಕೆಯ ಪೋಷಕರೇ ಸಾವಿಗೆ ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ.

ದಿವ್ಯಾ ಮತ್ತು ಆದಿತ್ಯ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್‌ ಸಹ ಬಹಿರಂಗವಾಗಿದ್ದು, ಅದರಲ್ಲಿ ದಿವ್ಯಾ ತನ್ನ ಭಯವನ್ನು ವ್ಯಕ್ತಪಡಿಸಿದ್ದು, ಆದಿತ್ಯನನ್ನು ಮದುವೆಯಾಗುವಂತೆ ಕೇಳಿದ್ದಾಳೆ. ದಿವ್ಯಾ ತಂದೆ ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆದಿತ್ಯ ಹೇಳಿದ್ದು, ತಾನು ಯಾವುದೇ ಕಿರುಕುಳ ನೀಡಿಲ್ಲ ಎಂಬುದಕ್ಕೆ ಸಾಕ್ಷಿ ಒದಗಿಸಿದ್ದೇನೆ ಎಂದು ತಿಳಿಸಿದ್ದಾನೆ. ಪೊಲೀಸರ ತನಿಖೆಯಿಂದ ಈ ಸಾವಿನ ಅಸಲಿಯತ್ತು ಹೊರಬರಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ! – Kannada News | Bengaluru Woman Alleges Marriage Fraud, Rs 36 Lakh Cheated and Husband Missing after Child birth

ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್

ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ.

ಹೊಸ ಮನೆ ಕಟ್ಟೋಣ ಎಂದು ಹಣ, ಚಿನ್ನ ಪಡೆದಿದ್ದ ಆರೋಪಿ

ಮದುವೆಯಾದ ಬಳಿಕ ಹೊಸ ಮನೆ ಕಟ್ಟೋಣ, ಹೊಸ ಜೀವನ ಶುರು ಮಾಡೋಣ ಎಂದು ನಂಬಿಸಿ ಮಹಿಳೆಯಿಂದ ಹಣ ಪಡೆದಿದ್ದಾನೆ ಎಂಬ ಆರೋಪವಿದೆ. ಚಿನ್ನಾಭರಣ ಅಡವಿಟ್ಟು, ಸಾಲ ಪಡೆದು ಒಟ್ಟು 36 ಲಕ್ಷ ರೂಪಾಯಿ ನೀಡಿದ್ದೇನೆ ಎಂದು ಮಹಿಳೆ ದೂರಿದ್ದಾರೆ. ಈಗ ಹಣ ಕೇಳಿದರೆ ‘ನೀನು ಯಾರು ಅಂತಲೇ ಗೊತ್ತಿಲ್ಲ’ ಎಂದು ಹೇಳುತ್ತಾನೆ ಎಂದು ಆರೋಪಿಸಿದ್ದಾರೆ.

ನ್ಯಾಯ ಕೇಳಲು ಮೋಹನ್ ರಾಜ್ ಮನೆ ಬಳಿ ಹೋದಾಗ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪವೂ ಕೇಳಿಬಂದಿದೆ. ಈವರೆಗೆ ನಾಲ್ಕು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ನ್ಯಾಯ ಸಿಗುತ್ತಿಲ್ಲ. ಮತ್ತೊಮ್ಮೆ ದೂರು ನೀಡಿದರೆ ‘ನಿನ್ನನ್ನೇ ಒಳಗೆ ಹಾಕ್ತೀವಿ’ ಎಂದು ಪೊಲೀಸರು ಹೆದರಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಪೊಲೀಸರೊಂದಿಗೆ ಆರೋಪಿಗೆ ನಂಟಿದೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಕೊನೆಗೆ ಇದೀಗ ಆರೋಪಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸಂತ್ರಸ್ತೆಯು 2021ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ಮೊದಲ ಮದುವೆಯ ವಿಚಾರ ಸಂಪೂರ್ಣವಾಗಿ ತಿಳಿದಿದ್ದರೂ ಮೋಹನ್ ರಾಜ್ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಮೊದಲ ಪತಿಗೆ ಅನಾರೋಗ್ಯ ಸಮಸ್ಯೆ ಇದ್ದುದರಿಂದ ವಿಚ್ಛೇದನ ಪಡೆದಿದ್ದೆ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ.

ಯುವತಿಯರೊಂದಿಗೆ ಅಕ್ರಮ ಸಂಬಂಧ, ಅಶ್ಲೀಲ ಮೆಸೇಜ್: ಮಹಿಳೆ ಆರೋಪ

ಮೋಹನ್ ರಾಜ್ ಬೇರೆ ಬೇರೆ ಯುವತಿಯರೊಂದಿಗೆ ಸಂಬಂಧ ಹೊಂದಿದ್ದಾನೆ, ಅಸಭ್ಯ ಸಂದೇಶಗಳನ್ನು ಕಳಿಸುತ್ತಿದ್ದಾನೆ. ಮೊಬೈಲ್‌ನಲ್ಲಿ ಫೋಟೋಗಳನ್ನೂ ನೋಡಿದ್ದೇನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮದುವೆಗೆ ಮುಂಚೆಯೂ ನಂತರವೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ತನ್ನ ಹೆಣ್ಣು ಮಗು ಹಾಗೂ ಮೊದಲ ಪತಿಯ ಮಗುವಿನ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ದೂರಿದ್ದಾರೆ. ಸದ್ಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್! ಪಿಂಕ್ ಲೈನ್​ನಲ್ಲಿ ಮೆಟ್ರೋ ಸಂಚಾರ ಟ್ರಯಲ್ ಆರಂಭ – Kannada News | Bengaluru Metro Pink Line Trial Starts: Kalena Agrahara Tavarekere Opens Soon!

ಬೆಂಗಳೂರು, ಜನವರಿ 10: ನಗರವಾಸಿಗಳಿಗೆ ಮೆಟ್ರೋದಿಂದ ಮತ್ತೊಂದು ಶುಭ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಟದ ಟ್ರಯಲ್ ಅನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆರಂಭಿಸಿದೆ. ಒಟ್ಟು 21.26 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಪ್ರಥಮ ಹಂತವಾಗಿ 7.5 ಕಿ.ಮೀ ಎಲಿವೇಟೆಡ್ ವಿಭಾಗದಲ್ಲಿ ಟ್ರಯಲ್ ನಡೆಯುತ್ತಿದೆ. ಈ ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು 6 ಸ್ಟೇಷನ್‌ಗಳಿದ್ದು, ಕಾಳೇನಾ ಅಗ್ರಹಾರದಿಂದ ತಾವರೆಕೆರೆ ನಡುವಿನ ಭಾಗದಲ್ಲಿ ಪರೀಕ್ಷಾ ಓಡಾಟ ಆರಂಭವಾಗಿದೆ. ಏಪ್ರಿಲ್–ಮೇ ತಿಂಗಳಲ್ಲಿ ಮೊದಲ ಹಂತದಲ್ಲಿ ಈ ಮಾರ್ಗವನ್ನು ಸಾರ್ವಜನಿಕರಿಗೆ ತೆರೆಯಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ಉಳಿದ 13.76 ಕಿ.ಮೀ ಅಂಡರ್‌ಗ್ರೌಂಡ್ ಕಾಮಗಾರಿ ಪ್ರಗತಿಯಲ್ಲಿದ್ದು, ಅದು ಪೂರ್ಣಗೊಂಡ ಬಳಿಕ ವರ್ಷದ ಅಂತ್ಯಕ್ಕೆ ಸಂಪೂರ್ಣ ಮಾರ್ಗವನ್ನು ಆರಂಭಿಸುವ ಚಿಂತನೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Source link

ಚಿಕ್ಕಮಗಳೂರು: ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Chikkamagaluru: Birur Residents Demand Action as Leopard Sightings Increase

ಚಿಕ್ಕಮಗಳೂರು, ಜನವರಿ 10: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ. ರಾತ್ರಿ ಸಮಯದಲ್ಲಿ ಪಟ್ಟಣದ ಇಂಡಸ್ಟ್ರಿಯಲ್ ಏರಿಯಾ, ಅಮೃತ್ ಮಹಲ್ ಕಾವಲು ಸುತ್ತಮುತ್ತ ಹಾಗೂ ಮನೆಗಳ ಬಳಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಚಿರತೆ ಹೊಂಚು ಹಾಕಿ ಕುಳಿತಿರುವುದು ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ಸಂಚಾರ ಹೆಚ್ಚಿರುವುದರಿಂದ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಘಟನೆ ಬೀರೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯನ್ನು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್ – Kannada News | Missed opportunities cost Mumbai Indians vs RCB

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು.

155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು 67 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಈ ಹಂತದಲ್ಲಿ ಕಣಕ್ಕಿಳಿದ ನಡಿನ್ ಡಿ ಕ್ಲರ್ಕ್​ ಭರ್ಜರಿ ಬ್ಯಾಟಿಂಗ್​ನೊಂದಿಗೆ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಮಾಡಿದ 3 ತಪ್ಪುಗಳು ಆರ್​ಸಿಬಿ ಪಾಲಿಗೆ ವರವಾಯಿತು ಎಂದರೆ ತಪ್ಪಾಗಲಾರದು.

ಏಕೆಂದರೆ ಈ ಪಂದ್ಯದಲ್ಲಿ ಏಕಾಂಗಿ ಹೋರಾಟ ಮುಂದುವರೆಸಿದ್ದ ನಡಿನ್ ಡಿ ಕ್ಲರ್ಕ್ 19ನೇ ಓವರ್​ನ ಮೊದಲ ಎಸೆತದಲ್ಲೇ ಸುಲಭ ಕ್ಯಾಚ್ ನೀಡಿದ್ದರು. ಆದರೆ ಈ ಸುಲಭ ಕ್ಯಾಚ್ ಹಿಡಿಯುವಲ್ಲಿ ನಾಟ್ ಸ್ಕೀವರ್ ಬ್ರಂಟ್ ವಿಫಲರಾಗಿದ್ದರು.

ಇದಾದ ಬಳಿಕ 19ನೇ ಓವರ್​ನ 4ನೇ ಎಸೆತದಲ್ಲಿ ನಡಿನ್ ಡಿ ಕ್ಲರ್ಕ್ ಲೆಗ್ ಸೈಡ್​ನತ್ತ ಕ್ಯಾಚ್ ನೀಡಿದ್ದರು. ಈ ವೇಳೆ ಬೌಂಡರಿ ಲೈನ್​ನಲ್ಲಿದ್ದ ಅಮೆಲಿಯಾ ಕೆರ್ ಕ್ಯಾಚ್ ಕೈ ಚೆಲ್ಲಿದ್ದರು.

ಅತ್ತ ಕ್ಯಾಚ್ ಡ್ರಾಪ್ ಆದ ಬೆನ್ನಲ್ಲೇ ಅಮನ್​​ಜೋತ್ ಕೌರ್ ಚೆಂಡನ್ನು ವಿಕೆಟ್ ಕೀಪರ್ ಕಮಲಿನಿಯತ್ತ ಎಸೆದರು. ಆದರೆ ಚೆಂಡು ಸರಿಯಾಗಿ ಹಿಡಿಯುವಲ್ಲಿ ವಿಫಲರಾದ ಕಮಲಿನಿ ಸುಲಭ ರನೌಟ್ ಅವಕಾಶವನ್ನು ಕೈ ತಪ್ಪಿಸಿಕೊಂಡರು.

ಹೀಗೆ ಒಂದೇ ಓವರ್​ನಲ್ಲಿ ಮೂರು ಜೀವದಾನ ಪಡೆದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 6,4,6,4 ಬಾರಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 3 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

ಇತ್ತ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಸತತ ಮೂರು ತಪ್ಪುಗಳನ್ನು ಮಾಡುತ್ತಾ ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡಿತು.

 

Source link

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ ಮಾಡಿದ ಸುದೀಪ್ – Kannada News | Who Will Eliminate this week in Bigg Boss? Strong contestants Nominated

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ಜೊತೆ ಆಪ್ತವಾಗಿರೋದು ಗೊತ್ತೇ ಇದೆ. ಇವರ ಆಪ್ತತೆ ಬಗ್ಗೆ ಆಗಾಗ ಪ್ರಶ್ನೆ ಮೂಡುತ್ತದೆ. ಇವರಿಬ್ಬರ ಜೊತೆ ಬೇರೆ ಯಾರೇ ಕ್ಲೋಸ್ ಆದರೂ ಇದನ್ನು ರಕ್ಷಿತಾ ಸಹಿಸೋದಿಲ್ಲ. ಈ ವಿಷಯವನ್ನು ಸುದೀಪ್ ಪ್ರಶ್ನೆ ಮಾಡಿದ್ದಾರೆ. ‘ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ’ ಎಂದು ರಕ್ಷಿತಾಗೆ ಪಾಠ ಮಾಡಲಾಗಿದೆ.

ಇನ್ನು, ಇದು ಈ ವಾರ ನಡೆಯೋದು ಕೊನೆಯ ಕಿಚ್ಚನ ಪಂಚಾಯ್ತಿ. ಏಕೆಂದರೆ ಮುಂದಿನ ವಾರ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ವಾರ ಧನುಷ್ ಅವರನ್ನು ಹೊರತುಪಡಿಸಿ ಉಳಿದವರು ಅಂದರೆ ಕಾವ್ಯಾ, ಗಿಲ್ಲಿ, ರಕ್ಷಿತಾ, ಅಶ್ವಿನಿ ಗೌಡ, ರಘು, ರಾಶಿಕಾ, ಅಶ್ವಿನಿ, ಧ್ರುವಂತ್ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಒಬ್ಬರು ಈ ವಾರವರೇ ಎಲಿಮಿನೇಟ್ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ – Kannada News | Numerology Prediction: Jan 10 Daily Horoscope for Janam Sankhya 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮಲ್ಲಿ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗುವ ಆಲೋಚನೆಗಳು ಮೂಡಲಿವೆ. ಲೌಕಿಕ ಜಗತ್ತಿನ ಜಂಜಾಟಗಳಿಂದ ಸ್ವಲ್ಪ ವಿರಾಮ ಪಡೆಯಲು ಬಯಸುತ್ತೀರಿ. ಪುಸ್ತಕಗಳ ಓದು ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಹಣದ ಹರಿವು ಸಾಧಾರಣವಾಗಿರುತ್ತದೆ, ಆದರೆ ನೀವು ಮಾಡಿದ ಹಳೆಯ ಸಹಾಯ ಬೇರೊಂದು ರೂಪದಲ್ಲಿ ನಿಮಗೆ ಮರಳಿ ಸಿಗಲಿದೆ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ, ನಿಮ್ಮ ಯೋಜನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ. ಆದಾಯ ಹೆಚ್ಚು ಮಾಡಿಕೊಳ್ಳುವ ಮಾರ್ಗೋಪಾಯ ಗೋಚರಿಸಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ದಿನ ಇದಾಗಿರುತ್ತದೆ. ನಿಧಾನವಾಗಿ ನಡೆಯುತ್ತಿದ್ದ ಕೆಲಸಗಳು ಈಗ ವೇಗ ಪಡೆದುಕೊಳ್ಳಲಿವೆ. ನ್ಯಾಯಾಲಯದ ಕೆಲಸಗಳಲ್ಲಿ ನಿಮಗೆ ಜಯ ಸಿಗುವ ಲಕ್ಷಣಗಳಿವೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದ್ದು, ಸ್ಥಿರಾಸ್ತಿಯಿಂದ ಆದಾಯ ಬರಲಿದೆ. ಹಿರಿಯರೊಂದಿಗೆ ನಡೆಸುವ ಮಾತುಕತೆ ಸಮಾಧಾನ ತರಲಿದೆ. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ನಿರ್ದಿಷ್ವಾಗಿ ಮೂಳೆ ಅಥವಾ ಸ್ನಾಯುಗಳ ನೋವು ಕಾಣಿಸಿಕೊಳ್ಳಬಹುದು. ಕೃಷಿ ಜಮೀನು ಖರೀದಿ ಯತ್ನಗಳು ಇದ್ದಲ್ಲಿ ಫಲ ನೀಡಲಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನೀವು ಯಾವುದೇ ಸಾಹಸಕ್ಕೂ ಸೈ ಎನ್ನುತ್ತೀರಿ, ಆದರೆ ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಅಪಾಯಕಾರಿ ಆಗಲಿದೆ. ಭೂಮಿ ಅಥವಾ ಕಟ್ಟಡಕ್ಕೆ ಸಂಬಂಧಿಸಿದ ವಿವಾದಗಳು ಈ ದಿನ ಸುಖಾಂತ್ಯ ಕಾಣಲಿವೆ. ಕ್ರೀಡೆ ಅಥವಾ ರಕ್ಷಣಾ ಇಲಾಖೆಯಲ್ಲಿ ಇರುವವರಿಗೆ ಸ್ಮರಣೀಯ ದಿನವಾಗಿರಲಿದೆ. ರಕ್ತಸಂಬಂಧಿಗಳಿಂದ ಅನಿರೀಕ್ಷಿತ ಸಹಾಯ ಸಿಗಲಿದೆ. ಕೋಪವನ್ನು ಹತೋಟಿಯಲ್ಲಿಟ್ಟರೆ ಮಾತ್ರ ಸಂಜೆಯ ವೇಳೆಗೆ ಶುಭ ಸಮಾಚಾರವನ್ನು ಸಂಭ್ರಮಿಸುವುದಕ್ಕೆ ಸಾಧ್ಯ ಆಗಲಿದೆ.

ಲೇಖನ- ಎನ್‌.ಕೆ.ಸ್ವಾತಿ

Published On – 1:08 am, Sat, 10 January 26

Source link

ಆಸ್ಟ್ರೇಲಿಯಾ ದಾಂಡಿಗನ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ ರುತುರಾಜ್ ಗಾಯಕ್ವಾಡ್ – Kannada News | Ruturaj gaikwad creates history in List A Cricket

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸವನ್ನು ನಿರ್ಮಿಸಿರುವುದು ಭಾರತೀಯ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj gaikwad). ಅದು ಕೂಡ ಆಸ್ಟ್ರೇಲಿಯಾ ದಾಂಡಿಗನ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

Source link