WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ಗಳಿಗೆ ಮಣ್ಣು ಮುಕ್ಕಿಸಿದ ಆರ್ಸಿಬಿ
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್ಸಿಬಿ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್ಸಿಬಿ ಪರ ಆಲ್ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್ ಕೊನೆಯ ಓವರ್ನಲ್ಲಿ 2 ಸಿಕ್ಸರ್…