Category Archives: Blog

Your blog category

ದ್ವಿಪೌರತ್ವ ಪ್ರಕರಣ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ – Kannada News | Allahabad High Court Orders Case Against Congress Leader Rahul Gandhi In Dual Citizenship Case

ಅಲಹಾಬಾದ್, ಏಪ್ರಿಲ್ 17: ದ್ವಿಪೌರತ್ವದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಪ್ರಕರಣ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಹಾಗೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.

ಉತ್ತರ ಪ್ರದೇಶ ಸರ್ಕಾರವು ಈ ಪ್ರಕರಣದ ಬಗ್ಗೆ ಸ್ವತಃ ತನಿಖೆ ನಡೆಸಬೇಕು ಅಥವಾ ಈ ವಿಷಯವನ್ನು ಕೇಂದ್ರೀಯ ಸಂಸ್ಥೆಗೆ ತನಿಖೆಗೆ ವಹಿಸಬೇಕು ಎಂದು ಹೈಕೋರ್ಟ್‌ನ ಲಕ್ನೋ ಪೀಠ ನಿರ್ದೇಶಿಸಿದೆ.

ಜನವರಿ 28ರಂದು ಲಕ್ನೋದ ವಿಶೇಷ ಸಂಸದ ಮತ್ತು ಶಾಸಕ ನ್ಯಾಯಾಲಯವು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಪೌರತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ತನಗೆ ಇಲ್ಲ ಎಂದಿದ್ದ ವಿಶೇಷ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: Video: ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಸಮಸ್ಯೆ ಇಲ್ಲ ಎಂದ ರಾಹುಲ್ ಗಾಂಧಿ

ಈ ಬಗ್ಗೆ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ಈ ವಿಷಯದಲ್ಲಿ ಸರಿಯಾದ ಪರಿಶೀಲನೆಯ ಅಗತ್ಯವಿದೆ ಎಂದು ಹೇಳಿದೆ. ಕಾನೂನಿನ ಪ್ರಕಾರ ಈ ವಿಷಯವನ್ನು ಪರಿಶೀಲಿಸುವಂತೆ ರಾಜ್ಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?:

ಈ ಪ್ರಕರಣವು ರಾಹುಲ್ ಗಾಂಧಿ ಬ್ರಿಟಿಷ್ ಪೌರತ್ವ ಹೊಂದಿರಬಹುದು ಎಂಬ ಆರೋಪಗಳಿಗೆ ಸಂಬಂಧಿಸಿದೆ. ಭಾರತೀಯ ಕಾನೂನಿನಡಿಯಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲ. ಇಂಗ್ಲೆಂಡ್ ಮೂಲದ ಕಂಪನಿಗೆ ಸಂಬಂಧಿಸಿದ ದಾಖಲೆಗಳನ್ನು ಉಲ್ಲೇಖಿಸಿ ದೂರು ನೀಡಲಾಗಿದೆ. ಅಲ್ಲಿ ಅವರನ್ನು ಬ್ರಿಟಿಷ್ ಪ್ರಜೆ ಎಂದು ಉಲ್ಲೇಖಿಸಲಾಗಿದೆ. ಅವರ ಅಧಿಕೃತ ದಾಖಲಾತಿಗಳಲ್ಲಿ ಲಂಡನ್ ವಿಳಾಸವನ್ನು ಕೂಡ ಪಟ್ಟಿ ಮಾಡಲಾಗಿದೆ. ಪೌರತ್ವ, ಪಾಸ್‌ಪೋರ್ಟ್‌ಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಾನೂನುಗಳು ಸೇರಿದಂತೆ ವಿವಿಧ ಕಾನೂನು ನಿಬಂಧನೆಗಳ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ವಿವರವಾದ ತನಿಖೆಗಾಗಿ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿಯ ಪೌರತ್ವ ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕರ್ನಾಟಕದ ನಿವಾಸಿಯಾಗಿರುವ ಅರ್ಜಿದಾರರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಅಧಿಕೃತ ರಹಸ್ಯ ಕಾಯ್ದೆ, ವಿದೇಶಿಯರ ಕಾಯ್ದೆ ಮತ್ತು ಪಾಸ್‌ಪೋರ್ಟ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಿ ಎಫ್‌ಐಆರ್ ದಾಖಲಿಸಿ ವಿವರವಾದ ತನಿಖೆ ನಡೆಸುವಂತೆ ಕೋರಿದ್ದಾರೆ.

ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದು ಸಾಬೀತುಪಡಿಸುವ ದಾಖಲೆಗಳು ಮತ್ತು ಬ್ರಿಟಿಷ್ ಸರ್ಕಾರದ ಕೆಲವು ಇಮೇಲ್‌ಗಳು ತಮ್ಮ ಬಳಿ ಇವೆ. ಈ ಕಾರಣದಿಂದಾಗಿ ಅವರು ಭಾರತದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು. ಅವರು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ – Kannada News | Yogesh Gowda Murder Case fighter Basavaraj koravar talks after Court Life Imprisonment For MLA Vinay Kulkarni

ಧಾರವಾಡ, (ಏಪ್ರಿಲ್ 17): ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್‌ನಲ್ಲಿ ನಡೆದ ಈ ಹತ್ಯೆ ಪ್ರಕರಣ ಸುಮಾರು 10 ವರ್ಷಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಇಂದು (ಏಪ್ರಿಲ್ 17) ಅಪರಾಧಿಗಳಿಗೆ ಶಿಕ್ಷೆಯಾಗಿದೆ.

ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಯೋಗೇಶ್ ಗೌಡ ಹತ್ಯೆ ಪ್ರಕರಣದ ಹೋರಾಟಗಾರ ಬಸವರಾಜ ಕೊರವರ್, ಮಾಧ್ಯಮಗಳ ಜೊತೆ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಕೆಲವೊಂದಿಷ್ಟು ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಇದನ್ನೂ ಓದಿ; ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು?

Source link

‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ – Kannada News | Ram Gopal Varma takes U Turn on Dhurandhar 2 Criticizes Dawood Ibrahim portrayal

ಆರಂಭದಿಂದಲೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾವನ್ನು ಹೊಗಳುತ್ತಲೇ ಬಂದಿದ್ದಾರೆ. ಈ ಚಿತ್ರದ ಡೈರೆಕ್ಟರ್ ಆದಿತ್ಯ ಧರ್ ಕೆಲಸವನ್ನು ಆರ್​ಜಿವಿ ಕೊಂಡಾಡಿದ್ದಾರೆ. ಇದು ಭಾರತೀಯ ಚಿತ್ರರಂಗದ ಗೇಮ್ ಚೇಂಜರ್ ಎಂದು ಹೊಗಳಿದ್ದಾರೆ. ಆದರೆ ಈಗ ಏಕಾಏಕಿ ಯು-ಟರ್ನ್ ಹೊಡೆದಿದ್ದಾರೆ. ‘ಧುರಂಧರ್ 2’ (Dhurandhar 2) ಚಿತ್ರದ ಒಂದು ಪ್ರಮುಖ ಅಂಶದ ಬಗ್ಗೆ ರಾಮ್ ಗೋಪಾಲ್ ವರ್ಮಾ ಅಸಮಾಧಾನ ವ್ಯಕ್ತಪಡಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ.

ಈ ಸಿನಿಮಾದಲ್ಲಿ ದಾವೂದ್ ಇಬ್ರಾಹಿಂ ಪಾತ್ರವನ್ನು ತೋರಿಸಿದ ಬಗ್ಗೆ ರಾಮ್ ಗೋಪಾಲ್ ವರ್ಮಾ ವಿರೋಧ ವ್ಯಕ್ತಪಡಿಸಿದ್ದಾರೆ. ಚಿತ್ರದ ಮೇಕಿಂಗ್ ಮತ್ತು ನಿರ್ದೇಶನದ ಬಗ್ಗೆ ಆರ್​ಜಿವಿ ಅವರಿಗೆ ಈಗಲೂ ಗೌರವವಿದೆ. ಆದರೆ, ಚಿತ್ರದಲ್ಲಿ ಭೂಗತ ಲೋಕದ ಡಾನ್ ದಾವೂದ್ ಇಬ್ರಾಹಿಂ ಪಾತ್ರವನ್ನು ಬಿಂಬಿಸಿರುವ ರೀತಿ ತಮಗೆ ಸರಿ ಅನಿಸಿಲ್ಲ ಎಂದು ಅವರು ಹೇಳಿದ್ದಾರೆ.

‘ಸಿನಿಮಾ ತಂಡದವರಿಗೆ ತಮ್ಮದೇ ಆದ ಮಾಹಿತಿಯ ಮೂಲಗಳಿರಬಹುದು. ಆದರೆ, ಚಿತ್ರದಲ್ಲಿ ತೋರಿಸಲಾದ ದಾವೂದ್ ಇಬ್ರಾಹಿಂನ ವ್ಯಕ್ತಿತ್ವವು ನಾನು ತಿಳಿದಿರುವ ವಾಸ್ತವಕ್ಕೆ ಹತ್ತಿರವಾಗಿಲ್ಲ. ದಾವೂದ್ ಇಬ್ರಾಹಿಂ ಸುಮಾರು 20 ವರ್ಷಗಳ ಹಿಂದೆಯೇ ಕ್ರಿಮಿನಲ್ ಚಟುವಟಿಕೆಗಳಿಂದ ದೂರ ಸರಿದು ನಿಷ್ಕ್ರಿಯನಾಗಿದ್ದಾನೆ. ಆದರೆ ಸಿನಿಮಾದಲ್ಲಿ ಆತನನ್ನು ಸಕ್ರಿಯವಾಗಿ ತೋರಿಸಿರುವುದು ಸರಿಯಲ್ಲ’ ಎಂಬುದು ರಾಮ್ ಗೋಪಾಲ್ ವರ್ಮಾ ಅವರ ವಾದ.

‘ದಾವೂದ್ ಬಗ್ಗೆ ಯಾರು ಕೂಡ ಇಂತದ್ದೇ ಸತ್ಯ ಎಂದು ಹೇಳಲು ಸಾಧ್ಯವಿಲ್ಲ. ಸಿನಿಮಾದಲ್ಲಿ ತೋರಿಸಿರುವುದನ್ನು ಸುಳ್ಳು ಎಂದು ಹೇಳಲು ನನ್ನ ಬಳಿಯೂ ಸಾಕ್ಷಿಯಿಲ್ಲ. ಹಾಗೆಯೇ ಅದನ್ನು ನಿಜ ಎಂದು ಸಾಬೀತುಪಡಿಸಲು ನಿರ್ದೇಶಕರಿಗೂ ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆಗೆ ‘ಧುರಂಧರ್ 2’ ಚಿತ್ರತಂಡ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ‘ಧುರಂಧರ್’ ಪ್ರದರ್ಶನಕ್ಕೆ ಇಲ್ಲ ತಡೆ; ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಭೂಗತ ಲೋಕದ ಕಥೆಗಳನ್ನು ಆಧರಿಸಿ ‘ಸತ್ಯ’ ಮತ್ತು ‘ಕಂಪನಿ’ ರೀತಿಯ ಸಿನಿಮಾಗಳನ್ನು ನೀಡಿರುವ ರಾಮ್ ಗೋಪಾಲ್ ವರ್ಮಾ ಅವರು ದಾವೂದ್ ವಿಷಯದಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಚರ್ಚೆಗೆ ಕಾರಣ ಆಗಿದೆ. ಸದ್ಯ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವರ್ಮಾ ಅವರ ಈ ಹೇಳಿಕೆಗೆ ನಿರ್ದೇಶಕ ಆದಿತ್ಯ ಧರ್ ಯಾವ ರೀತಿ ಪ್ರತಿಕ್ರಿಯಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾರು-ಖಾಸಗಿ ಬಸ್​ ಡಿಕ್ಕಿಯಾಗಿ ಇಡೀ ಕುಟುಂಬ ಸಜೀವ ದಹನ: ಇಲ್ಲಿದೆ ಮೃತ 9 ಜನರ ಡೀಟೇಲ್ಸ್ – Kannada News | Raichur: Car and bus collision in Yadgir; death toll rises to 9

ಮೃತ ಕೃಷ್ಣ ನಾಯಕ್‌ ಕುಟುಂಬ, ಸುಟ್ಟುಕರಕಲಾದ ಕಾರು, ಬಸ್​​Image Credit source: tv9 kannada

ರಾಯಚೂರು, ಏಪ್ರಿಲ್​ 17: ಯಾದಗಿರಿಯಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) ಸದ್ಯ ಸಾವನ್ನಪ್ಪಿದವರ (death) ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್‌ ಸದಸ್ಯ ಕೃಷ್ಣ ನಾಯಕ್‌ (52) ಹಾಗೂ ಅವರ ಕುಟುಂಬದ 7 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಕೃಷ್ಣಾ ನಾಯಕ್ ಅಣ್ಣ ವೆಂಕೋಬಾ ಮಗಳಾದ ಶಶಿಕಲಾ ಹಾಗೂ ಆಕೆಯ ಮಗ ಇದೀಗ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆ ಆಗಿದೆ.

ಮೃತಪಟ್ಟವರು 

ಈ ಭೀಕರ ಅಪಘಾತದಲ್ಲಿ ಸಿರವಾರದ ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣಾ ನಾಯಕ್, ಅವರ ಪತ್ನಿ ಅನಂತಕಲಾ (45), ಪುತ್ರಿ ನಿಸರ್ಗ (30), ಅಳಿಯ ಶರಣಪ್ಪ (36), ಮೊಮ್ಮಕ್ಕಳಾದ ಸಿದ್ಧಾರ್ಥ (3) ಮತ್ತು ಅದ್ವಿಕಾ (5) ಹಾಗೂ ಶ್ರೀನಿಧಿ (1.6 ವರ್ಷ) ಮೃತಪಟ್ಟಿದ್ದಾರೆ. ಇವರ ಜೊತೆಗೆ ಕೃಷ್ಣಾ ನಾಯಕ್ ಅವರ ಅಣ್ಣ ವೆಂಕೋಬಾ ಅವರ ಮಗಳು ಶಶಿಕಲಾ (30) ಮತ್ತು ಆಕೆಯ ಪುತ್ರ ಚಂದನ್ (3) ಕೂಡ ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ನಡೆದಿದ್ದೇನು?

ಸಿರವಾರ ಪಟ್ಟಣ ಪಂಚಾಯತ್ ಸದಸ್ಯರಾದ ಕೃಷ್ಣ ನಾಯಕ್ (52) ಮತ್ತು ಅವರ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಯಾದಗಿರಿಯ ಮಾರ್ಗಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕೃಷ್ಣ ನಾಯಕ್ ಸೇರಿದಂತೆ ಅವರ ಕುಟುಂಬದ ಒಟ್ಟು ಎಂಟು ಸದಸ್ಯರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ

ದುರಂತವೆಂದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಶ್ರೀನಿಧಿ, ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿಯಿಂದ ಕಲಬುರ್ಗಿಗೆ ಕರೆದೊಯ್ಯುವ ಮಾರ್ಗಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಸದ್ಯ ಶಶಿಕಲಾ ಅವರ ಹಿರಿಯ ಮಗ 5 ವರ್ಷದ ವಿರಾಟ್ ಅಪಘಾತದಲ್ಲಿ ಗಾಯಗೊಂಡಿದ್ದು, ಸದ್ಯ ಕಲಬುರ್ಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಫೋನ್ ಇಟ್ಟ ಎರಡೇ ನಿಮಿಷಕ್ಕೆ ಅಪಘಾತ

ಮೃತ ಕೃಷ್ಣಾ ನಾಯಕ್ ಸಂಬಂಧಿಕರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಘಟನೆಗೂ ಎರಡು ನಿಮಿಷ ಮುನ್ನ ಬಸವರಾಜ್ ಎನ್ನುವ ಸಂಬಂಧಿ ಜೊತೆ ಕೃಷ್ಣಾ ನಾಯಕ್ ಫೋನ್​​ನಲ್ಲಿ ಮಾತನಾಡಿದ್ದಾರೆ. ಬಸವರಾಜ್-ಗೀತಾ ದಂಪತಿ ಮನೆಯಲ್ಲಿ ಸಮಾರಂಭದ ಕುರಿತು ಮಾತುಕತೆ ಮಾಡಿದ್ದು, ಕಾರ್ಯಕ್ರಮಕ್ಕೆ ಬರುತ್ತೇನೆ, ಬಂದ ಮೇಲೆ ಮಾತನಾಡುತ್ತೇವೆ ಎಂದಿದ್ದಾರೆ. ಹೀಗೆ ಫೋನ್ ಇಟ್ಟ ಎರಡೇ ನಿಮಿಷಕ್ಕೆ ಅಪಘಾತವಾಗಿರುವ ವಿಚಾರ ಗೊತ್ತಾಗಿದೆ ಎಂದು ಕೃಷ್ಣಾರ ಸಂಬಂಧಿ ಗೀತಾ ಅಳಲು ತೋಡಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ – Kannada News | Rajasthan Royals Manager Romi Bhinder Fined Over IPL Dugout Phone Controversy

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್ ಬಳಸುವುದನ್ನು ನೋಡುತ್ತಾ ಕುಳಿತಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಶಿಕ್ಷೆಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

ನಿಯಮ ಉಲ್ಲಂಘಿಸಿದ ರೋಮಿ ಭಿಂದರ್

ಏಪ್ರಿಲ್ 10 ರಂದು ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಸಮಯದಲ್ಲಿ, ರೋಮಿ ಭಿಂದರ್ ಡಗೌಟ್‌ನಲ್ಲಿ ಕುಳಿತು ತಮ್ಮ ಫೋನ್ ಬಳಸುತ್ತಿದ್ದರು. ಐಪಿಎಲ್ ನಿಯಮದ ಪ್ರಕಾರ, ತಂಡದ ಆಟಗಾರರು ಹಾಗೂ ಸದಸ್ಯರಿಗೆ ಡ್ರೆಸ್ಸಿಂಗ್ ಕೋಣೆಗೆ ಫೋನ್‌ಗಳನ್ನು ಕೊಂಡೊಯ್ಯಲು ಅನುಮತಿಸಲಾಗಿದೆ. ಆದರೆ ಡಗೌಟ್‌ನಲ್ಲಿ ಮೊಬೈಲ್​ಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಅದಕ್ಕಾಗಿಯೇ ರೋಮಿ ಭಿಂದರ್ ವಿರುದ್ಧ ತನಿಖೆ ನಡೆಸಬೇಕಾಯಿತು.

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ರೋಮಿ ಭಿಂದರ್ ಫೋನ್ ಬಳಸಿದ್ದು ಏಕೆ?

ರೋಮಿ ಭಿಂದರ್ ಡಗೌಟ್‌ನಲ್ಲಿ ಫೋನ್ ಬಳಸುವುದಕ್ಕೆ ಬಿಸಿಸಿಐನಿಂದ ವಿನಾಯಿತಿ ಪಡೆದಿದ್ದಾರೆ ಎಂಬುದು ತಿಳಿದುಬಂದಿದೆ. ಇದಕ್ಕೆ ಕಾರಣ ಅವರ ಆರೋಗ್ಯ. ವಾಸ್ತವವಾಗಿ, ಭಿಂದರ್ ಐಪಿಎಲ್‌ಗೆ ಮೊದಲು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಆರೋಗ್ಯ ಕಾರಣಗಳಿಂದಾಗಿ, ಅವರು ಆಗಾಗ್ಗೆ ತಮ್ಮ ವೈದ್ಯರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಆದಾಗ್ಯೂ ಭಿಂದರ್ ಫೋನ್ ಬಳಕೆ ಮಾಡಿದ್ದು ಐಪಿಎಲ್ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ಇದರ ಪರಿಣಾಮವಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು? – Kannada News | Yogesh Gowda Murder Case: Vinay Kulkarni MLA Post Suspended for life imprisonment, what next options

ಬೆಂಗಳೂರು, (ಏಪ್ರಿಲ್ 17): 2016ರಲ್ಲಿ ನಡೆದಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (vinay kulkarni)  ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಂದು (ಏಪ್ರಿಲ್ 17) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು. ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಅದರಂತೆ ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

ಯಾವುದೇ ಜನಪ್ರತಿನಿಧಿಗಳ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಅವರ ಶಾಸಕ ಸ್ಥಾನ ರದ್ದಾಗುತ್ತದೆ. ಸದ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆ ವಿನಯ್​ ಕುಲಕರ್ಣಿ ಅವರ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ.   ಕೋರ್ಟ್ ತನ್ನ ತೀರ್ಪಿನ ಪ್ರತಿಯನ್ನು ಸ್ಪೀಕರ್ ಗೆ ಕಳುಹಿಸಲಿದ್ದು, ಆ ಬಳಿಕ ಸ್ಫೀಕರ್ ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಿದ್ದಾರೆ.

ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಕಾನೂನು ಏನು ಹೇಳುತ್ತೆ?

ಕಾನೂನು ಪ್ರಕಾರ ಶಿಕ್ಷೆ ಪ್ರಕಟವಾದ ದಿನದಿಂದಲೇ ಶಾಸಕ ಸ್ಥಾನದಿಂದ ತಕ್ಷಣವೇ ಅನರ್ಹವಾಗುತ್ತೆ. ‘ಜನಪ್ರತಿನಿಧಿ ಕಾಯ್ದೆ 1951’ರ ಸೆಕ್ಷನ್ 8(3) ರ ಪ್ರಕಾರ, ಯಾವುದೇ ಶಾಸಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. 2013ರ ‘ಲಿಲಿ ಥಾಮಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪಿನ ಪ್ರಕಾರ ಮೇಲ್ಮನವಿ ಸಲ್ಲಿಸಲು ನೀಡಲಾಗುತ್ತಿದ್ದ 3 ತಿಂಗಳ ಕಾಲಾವಕಾಶವನ್ನು ರದ್ದುಪಡಿಸಲಾಗಿದೆ. ಹಾಗಾಗಿ, ಶಿಕ್ಷೆಯಾದ ತಕ್ಷಣ ಅನರ್ಹತೆ ಅನ್ವಯವಾಗುತ್ತದೆ.

ಚುನಾವಣೆಗೆ ಸ್ಪರ್ಧಿಸಲು ನಿಷೇಧ

ಇನ್ನು ಜೈಲು ಶಿಕ್ಷೆಯ ಅವಧಿಯನ್ನು ಪೂರೈಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶವಿರುವುದಿಲ್ಲ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಕಾರಣ, ಉನ್ನತ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸದ ಹೊರತು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದು ಅಸಾಧ್ಯ. ಇನ್ನು ಶಾಸಕತ್ವ ಅಧಿಕೃತವಾಗಿ ಅನರ್ಹಗೊಂಡ ತಕ್ಷಣ ಕ್ಷೇತ್ರ ಖಾಲಿಯಾಗಲಿದೆ. ವಿಧಾನಸಭಾ ಸಚಿವಾಲಯದಿಂದ ಕ್ಷೇತ್ರ ‘ಖಾಲಿ’ ಇದೆ ಎಂದು ಘೋಷಣೆಯಾಗಲಿದ್ದು, ಬಳಿಕ ಚುನಾವಣಾ ಆಯೋಗ 6 ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸುವ ಸಾಧ್ಯತೆ ಇದೆ.

ಶಿಕ್ಷೆಗೆ ತಡೆ ನೀಡಿದರೆ ಮಾತ್ರ ವಿನಾಯಿತಿ

ಇನ್ನು ಶಿಕ್ಷೆಗೆ ತಡೆ ನೀಡಿದರೆ ಮಾತ್ರ ಇದೆಲ್ಲದರಿಂದ ವಿನಾಯಿತಿ ಸಿಗಲಿದೆ. ಕೇವಲ ಜೈಲು ಶಿಕ್ಷೆಗೆ ತಡೆ ನೀಡಿದರೆ (Stay on sentence) ಸಾಲದು, ಬದಲಿಗೆ ಉನ್ನತ ನ್ಯಾಯಾಲಯವು ಅವರ ಮೇಲಿನ ಅಪರಾಧ ನಿರ್ಣಯಕ್ಕೆ ತಡೆ (Stay on conviction) ನೀಡಿದರೆ ಮಾತ್ರ ಶಾಸಕ ಸ್ಥಾನ ಮತ್ತು ಚುನಾವಣೆಗೆ ಸ್ಪರ್ಧಿಸುವ ಹಕ್ಕು ಪುನಃ ದೊರೆಯುತ್ತದೆ.  ಇನ್ನು ಜೀವಾವಧಿ ಅಂದರೆ 14 ವರ್ಷ ಸೆರೆವಾಸದ ಬಳಿಕ ಸರ್ಕಾರ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ – Kannada News | Such a headache to listen to Rahul Gandhi speech BJP MP Kangana Ranaut says

ನವದೆಹಲಿ, ಏಪ್ರಿಲ್ 17: ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ಟೀಕಾಪ್ರಹಾರ ನಡೆಸಿದ್ದಾರೆ. “ಅವರ ಮಾತು ಕೇಳುವುದು ತುಂಬಾ ತಲೆನೋವು. ಅವರು ಬಾಲ್ಯದ ಆಘಾತಗಳನ್ನು ಅನುಭವಿಸುತ್ತಿದ್ದಾರೆ. ಅವರಿಗೆ ಅದೊಂದು ತೊಂದರೆಯಿದೆ. ಸಭಾಪತಿಯೂ ಅವರಿಗೆ ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದರೂ ಅವರು ಸಂಸತ್ತಿನ ಅಣಕ ಮಾಡುತ್ತಲೇ ಇದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ. ಅದೇ ಕಾರಣಕ್ಕೆ ಇನ್ನೂ ಮ್ಯಾಜಿಕ್ ಹಿಂದೆ ಬಿದ್ದಿದ್ದಾರೆ” ಎಂದು ಕಂಗನಾ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

LIC Recruitment 2026: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | LIC HFL Junior Assistant Recruitment 2026: 180 Vacancies for Graduates

ದೇಶಾದ್ಯಂತ ಇರುವ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 180 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸಂಬಂಧಿತ ವಿಭಾಗದಲ್ಲಿ ಪದವಿ (Degree) ಪಾಸಾಗಿರಬೇಕು. ಇದರೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಅತ್ಯಗತ್ಯ. ವಯೋಮಿತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಏಪ್ರಿಲ್ 1, 2026ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷಗಳ ನಡುವೆ ಇರಬೇಕು (ಅಂದರೆ ಏಪ್ರಿಲ್ 2, 1996 ಕ್ಕಿಂತ ಮೊದಲು ಮತ್ತು ಏಪ್ರಿಲ್ 1, 2005 ರ ನಂತರ ಜನಿಸಿರಬಾರದು). ಅರ್ಹ ಅಭ್ಯರ್ಥಿಗಳು ಏಪ್ರಿಲ್ 30 ರೊಳಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳು ತಮಗೆ ಇಷ್ಟವಾದ ಯಾವುದಾದರೂ ಒಂದು ನಗರದ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅರ್ಜಿ ಶುಲ್ಕವಾಗಿ ರೂ. 800 ಜೊತೆಗೆ ಜಿಎಸ್‌ಟಿ (GST) ಪಾವತಿಸಬೇಕಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆನ್‌ಲೈನ್ ಪರೀಕ್ಷೆಯು ಕೇವಲ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಇರಲಿದ್ದು, ಜೂನ್ 2026ರ ಮೊದಲ ವಾರದಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಯಿದೆ. ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 38,709 ರಿಂದ ರೂ. 41,509 ವರೆಗೆ ಆಕರ್ಷಕ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಲಿಖಿತ ಪರೀಕ್ಷಾ ವಿಧಾನ ಮತ್ತು ನೆಗೆಟಿವ್ ಮಾರ್ಕಿಂಗ್:

ಲಿಖಿತ ಪರೀಕ್ಷೆಯು ಒಟ್ಟು 200 ಅಂಕಗಳಿಗೆ 200 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಐದು ವಿಭಾಗಗಳಿದ್ದು, ತಲಾ 40 ಅಂಕಗಳಂತೆ ಇಂಗ್ಲಿಷ್ ಭಾಷೆ, ಲಾಜಿಕಲ್ ರೀಸನಿಂಗ್, ಸಾಮಾನ್ಯ ಜಾಗೃತಿ, ಸಂಖ್ಯಾತ್ಮಕ ಸಾಮರ್ಥ್ಯ (Numerical Ability) ಮತ್ತು ಕಂಪ್ಯೂಟರ್ ಕೌಶಲ್ಯದ ಮೇಲೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈ ಪರೀಕ್ಷೆಯಲ್ಲಿ ನಕಾರಾತ್ಮಕ ಅಂಕಗಳ (Negative Marking) ವ್ಯವಸ್ಥೆ ಇರಲಿದ್ದು, ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಒಟ್ಟು 120 ನಿಮಿಷಗಳ ಕಾಲಾವಧಿಯಲ್ಲಿ ಅಭ್ಯರ್ಥಿಗಳು ಪರೀಕ್ಷೆಯನ್ನು ಪೂರ್ಣಗೊಳಿಸಬೇಕಿರುತ್ತದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ – Kannada News | Yogesh Gowda murder case: MLA Vinay Kulkarni and 16 others sentenced to life

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.  ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ  ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು.

ಇನ್ನು ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಮನವಿ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್​ಷೆಯನ್ನು ಘೋಷಣೆ ಮಾಡಿದೆ. ಇದೀಗ ಅವರು 3 ದಿನದಿಂದ ಒಂದೇ ಬಟ್ಟೆಯಲ್ಲಿದ್ದಾರೆ, ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಶಾಸಕ ವಿನಯ್ ಕುಲಕರ್ಣಿ ಪರ ವಕೀಲ ಸುನಿಲ್ ಮನವಿ ಮಾಡಿದ್ದಾರೆ. ಅಪರಾಧಿಗಳಿಗೆ ಬಟ್ಟೆ ಒದಗಿಸಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೈಲು ಕೈಪಿಡಿಯಲ್ಲಿರುವಂತೆ ಬಟ್ಟೆ ಒದಗಿಸಲು ಜಡ್ಜ್‌ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪ್ರತಿ ಸೆಕ್ಷನ್‌ಗೂ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಕೊಲೆ ಅಪರಾಧಿಯ ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಕಾನೂನು ಆಯ್ಕೆಗಳೇನು?

ಇನ್ನು ಪ್ರಕರಣದ ಹಿನ್ನಲೆಗಳೇನು?

2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:12 pm, Fri, 17 April 26

Source link