Category Archives: Blog

Your blog category

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ? – Kannada News | Winter Health: Why Lukewarm Water Helps

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು

ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಉಗುರು ಬೆಚ್ಚಗಿನ ನೀರು ಕುಡಿಯುವುದು ಬಹಳ ಒಳ್ಳೆಯದು. ಇನ್ನು ಬೆಚ್ಚಗಿನ ನೀರು ದೇಹವನ್ನು ಒಳಗಿನಿಂದ ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯಿಂದ ಹಿಡಿದು ರೋಗನಿರೋಧಕ ಶಕ್ತಿಯವರೆಗೆ ಎಲ್ಲದಕ್ಕೂ ಒಳ್ಳೆಯದು. ಅಷ್ಟೇ ಅಲ್ಲ, ಈ ಅಭ್ಯಾಸದಿಂದ ಸಾಕಷ್ಟು ಪ್ರಯೋಜನಗಳಿವೆ. ಹಾಗಾದರೆ ಪ್ರತಿನಿತ್ಯ ಎಷ್ಟು ಲೀಟರ್ ನೀರು ಕುಡಿಯುವುದು ಸೂಕ್ತ, ಯಾರಿಗೆ ಒಳ್ಳೆಯದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಗುರುಬೆಚ್ಚಗಿನ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು:

ದೆಹಲಿ ಎಂಸಿಡಿಯ ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ಉಗುರುಬೆಚ್ಚಗಿನ ನೀರು ಕುಡಿಯುವುದರಿಂದ ದೇಹದ ಆಂತರಿಕ ಉಷ್ಣತೆ ಕಡಿಮೆಯಾಗುತ್ತದೆ, ಇದು ಚಳಿಯಾಗುವುದನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ, ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯವಾಗಿರಿಸುವ ಮೂಲಕ ಅನಿಲ, ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಉಗುರುಬೆಚ್ಚಗಿನ ನೀರು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ, ಮೂತ್ರಪಿಂಡಗಳು ಮತ್ತು ಯಕೃತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಚಳಿಗಾಲದಲ್ಲಿ, ಕೀಲುಗಳ ಬಿಗಿತ ಮತ್ತು ಸ್ನಾಯುಗಳ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಇದು ಗಂಟಲು ನೋವನ್ನು ಶಮನಗೊಳಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಕಾಲೋಚಿತ ಕಾಯಿಲೆಗಳು ಬರುವ ಅಪಾಯ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ

ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು?

ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆಯಾದರೂ, ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನೀರು ಬೇಕಾಗುತ್ತದೆ. ಸಾಮಾನ್ಯವಾಗಿ, ಆರೋಗ್ಯವಂತ ವ್ಯಕ್ತಿಯು ದಿನಕ್ಕೆ ಸುಮಾರು 2 ರಿಂದ 3 ಲೀಟರ್ ನೀರು ಕುಡಿಯಬೇಕು. ಇದು ವಯಸ್ಸು, ತೂಕ ಮತ್ತು ದೈನಂದಿನ ಚಟುವಟಿಕೆಯನ್ನು ಅವಲಂಬಿಸಿರುತ್ತದೆ. ಒಂದೇ ಬಾರಿಗೆ ನೀರು ಕುಡಿಯುವ ಬದಲು ದಿನವಿಡೀ ಸಣ್ಣ ಸ್ವಲ್ಪ ಸ್ವಲ್ಪ ನೀರು ಕುಡಿಯುವುದು ಉತ್ತಮ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದು ಬಹಳ ಪ್ರಯೋಜನಕಾರಿಯಾಗಿದೆ. ಇದರ ಜೊತೆಗೆ ಅತಿಯಾಗಿ ಚಹಾ ಮತ್ತು ಕಾಫಿ ಕುಡಿಯುವುದನ್ನು ತಪ್ಪಿಸಿ. ಪ್ರತಿನಿತ್ಯ ಲಘು ವ್ಯಾಯಾಮ ಮತ್ತು ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಮಾಡುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇವರ ಹಣ ಸ್ಥಗಿತ: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ – Kannada News | Gruhalakshami Money Stop If BPL Rastion Card canceled Says Minister Lakshmi Hebbalkar

ಬೆಂಗಳೂರು, (ಜನವರಿ 08): ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ  (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​ ರದ್ದುಗೊಳಿಸಲಾಗಿದ್ದು, ಇದೀಗ ಅಂತವರ ಗೃಹಲಕ್ಷ್ಮೀ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು? – Kannada News | Bigg Boss Kannada 12 Tasks becoming very tough day by day

ಬಿಗ್​​ಬಾಸ್​​ ಕನ್ನಡ 12ರ (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮನೆಯಲ್ಲಿ ಎಂಟು ಮಂದಿ ಇದ್ದಾರೆ. ಫಿನಾಲೆ ವಾರ ಹತ್ತಿರವಾಗುತ್ತಿದ್ದಂತೆ ಟಾಸ್ಕ್​​ಗಳು ಸಹ ಕಠಿಣವಾಗುತ್ತಿವೆ. ಇದೀಗ ಬಹಳ ಕಷ್ಟವಾದ ಟಾಸ್ಕ್ ಒಂದನ್ನು ಬಿಗ್​​ಬಾಸ್, ಸ್ಪರ್ಧಿಗಳಿಗೆ ನೀಡಿದ್ದಾರೆ. ದೊಡ್ಡ ಪೋಲ್ ನೀಡಿ, ಅದನ್ನು ಕಡ್ಡಿಗಳ ಸಹಾಯದಿಂದ ಮೇಲಿನ ವರೆಗೆ ಹತ್ತುವಂತೆ ಸೂಚಿಸಿದ್ದಾರೆ. ರಘು, ಅಶ್ವಿನಿ, ಕಾವ್ಯಾ, ಧನುಶ್ ಅವರುಗಳು ಆಟವಾಡಲು ಮುಂದಾಗಿದ್ದು, ಬಹಳ ಕಠಿಣವಾದ ಈ ಟಾಸ್ಕ್​​ನಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಕರ್ನಾಟಕಕ್ಕೆ ಮುಳುವಾದ ಆರ್​ಸಿಬಿ ಬಾಯ್ಸ್; ಟೂರ್ನಿಯಲ್ಲಿ ಮೊದಲ ಸೋಲು – Kannada News | Karnataka Suffers First Loss in Vijay Hazare Trophy to Madhya Pradesh

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಸತತ 6 ಪಂದ್ಯಗಳನ್ನು ಗೆದ್ದು ಎಲೈಟ್ ಎ ಗುಂಪಿನಲ್ಲಿ ಅಜೇಯ ತಂಡ ಎನಿಸಿಕೊಂಡಿದ್ದ ಕರ್ನಾಟಕ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಟೂರ್ನಿಯ ಎಲೈಟ್ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವನ್ನು ಎದುರಿಸಿದ್ದ ಕರ್ನಾಟಕ (Karnataka vs Madhya Pradesh) ತಂಡ 7 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ಮಧ್ಯಪ್ರದೇಶದ ಬೌಲಿಂಗ್ ಎದುರು ತತ್ತರಿಸಿತು. ಹೀಗಾಗಿ ತಂಡ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಮೊತ್ತ 207 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಮಧ್ಯಪ್ರದೇಶ ಕೇವಲ 3 ವಿಕೆಟ್ ಕಳೆದುಕೊಂಡು 24ನೇ ಓವರ್​ನಲ್ಲಿಯೇ ಗೆಲುವಿನ ದಡ ಮುಟ್ಟಿತು. ಕರ್ನಾಟಕದ ಈ ಸೋಲಿನಲ್ಲಿ ಆರ್​ಸಿಬಿ (RCB) ತಂಡದಲ್ಲಿ ಆಡುವ ಆಟಗಾರರು ಪ್ರಮುಖ ಪಾತ್ರವಹಿಸಿದರು.

ಕರ್ನಾಟಕ ತಂಡಕ್ಕೆ ಮೊದಲ ಸೋಲು

ಮೋದಿ ಮೈದಾನದಲ್ಲಿ ಈ ಹಿಂದೆ ಆಡಿದ್ದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದ್ದ ಕರ್ನಾಟಕಕ್ಕೆ, ಈ ಪಂದ್ಯದಲ್ಲೂ ಸುಲಭ ಜಯ ಧಕ್ಕಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮಧ್ಯಪ್ರದೇಶದ ಬೌಲರ್​ಗಳು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಎಂದಿನಂತೆ ಕರ್ನಾಟಕ ತಂಡಕ್ಕೆ ಆರಂಭಿಕರಿಬ್ಬರು ಮೊದಲ ವಿಕೆಟ್​ಗೆ 77 ರನ್​ಗಳ ಜೊತೆಯಾಟವನ್ನು ಒದಗಿಸಿಕೊಟ್ಟರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ತಂಡದ ಇನ್ನಿಂಗ್ಸ್ ಕುಸಿಯಿತು. ಈ ಟೂರ್ನಿಯಲ್ಲಿ ಅತ್ಯದ್ಭುತ ಫಾರ್ಮ್​ನಲ್ಲಿರುವ ದೇವದತ್ ಪಡಿಕ್ಕಲ್ ಈ ಪಂದ್ಯದಲ್ಲೂ ಉತ್ತಮ ಆರಂಭ ಪಡೆದುಕೊಂಡರು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು.

5 ವಿಕೆಟ್ ಪಡೆದ ಶಿವಾಂಗ್

ಪಡಿಕ್ಕಲ್ 35 ರನ್ ಬಾರಿಸಿ ಔಟಾದ ಬಳಿಕ ತಂಡದ ಇತರೆ ಬ್ಯಾಟ್ಸ್‌ಮನ್​ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿಕೊಂಡರು. ಅನುಭವಿ ಕರುಣ್ ನಾಯರ್ ಕಳಪೆ ಪ್ರದರ್ಶನ ಈ ಪಂದ್ಯದಲ್ಲೂ ಮುಂದುವರೆಯಿತು. ಅವರು ಕೇವಲ 10 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಶ್ರೀಜಿತ್, ಸ್ಮರಣ್ ಹಾಗೂ ಅಭಿನವ್ ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಹೀಗಾಗಿ ತಂಡ ಒತ್ತಡಕ್ಕೊಳಗಾಗಿತು. ತಂಡದ ಪರ ನಾಯಕ ಮಯಾಂಕ್ ಅತ್ಯಧಿಕ 49 ರನ್​ಗಳ ಇನ್ನಿಂಗ್ಸ್ ಆಡಿದರೆ, ವಿದ್ಯಾದರ್ ಪಾಟೀಲ್ 34 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ತಂಡ 48 ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 207 ರನ್​ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿತು. ಮಧ್ಯಪ್ರದೇಶ ಪರ ಬೌಲಿಂಗ್‌ನಲ್ಲಿ ಮಿಂಚಿದ ಶಿವಾಂಗ್ ಕುಮಾರ್ 5 ವಿಕೆಟ್​ಗಳ ಗೊಂಚಲು ಪಡೆದರು.

VHT 2025-26: ಮಿಂಚಿದ ಮಯಾಂಕ್, ಪಡಿಕ್ಕಲ್, ಪ್ರಸಿದ್ಧ್; ಕರ್ನಾಟಕಕ್ಕೆ ಸತತ 6ನೇ ಜಯ

ವೆಂಕಟೇಶ್ ಅಯ್ಯರ್​ ಅಜೇಯ ಅರ್ಧಶತಕ

ಈ ಗುರಿ ಬೆನ್ನಟ್ಟಿದ ಮಧ್ಯಪ್ರದೇಶಕ್ಕೆ ಉತ್ತಮ ಆರಂಭ ಸಿಕ್ಕಿತು. ಮೊದಲ ವಿಕೆಟ್​ಗೆ 78 ರನ್​ಗಳ ಜೊತೆಯಾಟ ನಡೆಯಿತು. ಆರಂಭಿಕರಾದ ಯಶ್ ದುಬೆ 48 ರನ್ ಬಾರಿಸಿದರೆ, ಹಿಮಾಂಶು ಮಂತ್ರಿ 34 ರನ್​​ ಕಲೆಹಾಕಿದರು. ಆ ಬಳಿಕ ಬಂದ ವೆಂಕಟೇಶ್ ಅಯ್ಯರ್ ಅಜೇಯ 65 ರನ್ ಬಾರಿಸಿ ತಂಡದ ಗೆಲುವು ಖಚಿತಪಡಿಸಿದರು. ವೆಂಕಟೇಶ್ ಅಯ್ಯರ್ ಈ ಆವೃತ್ತಿಯ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುತ್ತಿದ್ದು, ಅವರು ಫಾರ್ಮ್​ ಕಂಡುಕೊಂಡಿರುವುದು ತಂಡಕ್ಕೆ ಶುಭ ಸೂಚಕವಾಗಿದೆ. ವೆಂಕಟೇಶ್ ಜೊತೆಗೆ ಆರ್​ಸಿಬಿ ನಾಯಕ ರಜತ್ ಪಾಟಿದರ್ ಕೂಡ ಮಧ್ಯಪ್ರದೇಶ ತಂಡದಲ್ಲಿದ್ದರು. ಆದರೆ ಅವರಿಗೆ ಈ ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡುವ ಅವಕಾಶ ಸಿಗಲಿಲ್ಲ. ಇನ್ನು ಈ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ ಕರ್ನಾಟಕ ತಂಡ ಈ ಗುಂಪಿನಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದು, ಕರ್ನಾಟಕವನ್ನು ಸೋಲಿಸಿದ ಮಧ್ಯಪ್ರದೇಶ 2ನೇ ಸ್ಥಾನವನ್ನು ಪಡೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:03 pm, Thu, 8 January 26

Source link

ಕೊಲ್ಕತ್ತಾದಲ್ಲಿ ಇಡಿ ದಾಳಿ ವೇಳೆ ಹೈಡ್ರಾಮಾ; I-PAC ಕಚೇರಿಗೆ ನುಗ್ಗಿ ಹಸಿರು ಫೈಲ್‌ ಹೊತ್ತೊಯ್ದ ಮಮತಾ ಬ್ಯಾನರ್ಜಿ – Kannada News | ED raids I PAC chief house in Kolkata CM Mamata Banerjee takes green file

ಕೊಲ್ಕತ್ತಾ, ಜನವರಿ 8: ಪಶ್ಚಿಮ ಬಂಗಾಳದ 5 ಕಡೆಗಳಲ್ಲಿ ಇಂದು ಇಡಿ ದಾಳಿ ನಡೆದಿದೆ. ಅದರಲ್ಲೂ ಮುಖ್ಯವಾಗಿ ಜಾರಿ ನಿರ್ದೇಶನಾಲಯ (ED) I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ಮಾಡಿದೆ. ಈ ವರ್ಷದ ವಿಧಾನಸಭಾ ಚುನಾವಣೆ ನಡೆಯಲಿರುವ ಬಂಗಾಳದಲ್ಲಿ ನಡೆದ ಈ ದಾಳಿ ಬಹಳ ಮಹತ್ವ ಪಡೆದಿದೆ. ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಮ್ಮ ಚುನಾವಣಾ ಸಲಹೆಗಾರ ಐಪ್ಯಾಕ್ (I-PAC) ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆಯಿಂದ ಲ್ಯಾಪ್‌ಟಾಪ್, ಫೋನ್ ಮತ್ತು ಬಹು ದಾಖಲೆಗಳನ್ನು ಹೊತ್ತೊಯ್ದಿದ್ದಾರೆ ಎಂದು ಇಡಿ ಆರೋಪಿಸಿದೆ.

ಈ ದಾಳಿಯನ್ನು ಬಿಜೆಪಿಯ ರಾಜಕೀಯ ಪ್ರೇರಿತ ಎಂದು ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದರೂ ಇಡಿ ಈ ಆರೋಪಗಳನ್ನು ನಿರಾಕರಿಸಿದೆ. ಇದು ಯಾವುದೇ ರಾಜಕೀಯ ಪಕ್ಷಗಳನ್ನು ಗುರಿಯಾಗಿಸಿಕೊಂಡು ನಡೆದ ದಾರಿಯಲ್ಲ ಎಂದು ಹೇಳಿದೆ. ನಾವು ಯಾವುದೇ ಪಕ್ಷದ ಕಚೇರಿಯನ್ನು ಶೋಧಿಸಿಲ್ಲ. ಈ ಶೋಧನೆಯು ಯಾವುದೇ ಚುನಾವಣೆಗಳಿಗೆ ಸಂಬಂಧಿಸಿಲ್ಲ ಮತ್ತು ಹಣ ವರ್ಗಾವಣೆಯ ವಿರುದ್ಧ ನಿಯಮಿತ ಕ್ರಮದ ಭಾಗವಾಗಿದೆ ಎಂದು ED ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಎಸ್​ಐಆರ್​ ಕರಡಿನಲ್ಲಿ 58 ಲಕ್ಷ ಹೆಸರುಗಳು ಡಿಲೀಟ್

ಇಂದು ಬೆಳಿಗ್ಗೆ ಇಡಿ ಟಿಎಂಸಿಯ ರಾಜಕೀಯ ಸಲಹಾ ಸಂಸ್ಥೆಯಾದ I-PACನ ಕಚೇರಿಯ ಮೇಲೆ ದಾಳಿ ನಡೆಸಿದೆ. ತನಿಖಾ ಸಂಸ್ಥೆಯೊಳಗಿನ ಮೂಲಗಳ ಪ್ರಕಾರ, ಈ ದಾಳಿಗಾಗಿ ದೆಹಲಿಯಿಂದ ವಿಶೇಷ ತಂಡ ಆಗಮಿಸಿತ್ತು. ED ಮೂಲಗಳ ಪ್ರಕಾರ, ಈ ದಾಳಿಯು ದೆಹಲಿಯಲ್ಲಿ ದಾಖಲಾಗಿರುವ ಹಳೆಯ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಆ ಪ್ರಕರಣದಲ್ಲಿ ಹಲವಾರು ವಹಿವಾಟುಗಳಲ್ಲಿ I-PAC ಹೆಸರು ಹೊರಬಿದ್ದಿದೆ ಎನ್ನಲಾಗಿದೆ.

ಆದರೆ, ಇಡಿ ದಾಳಿಯ ಸಮಯದಲ್ಲಿ ಪ್ರತೀಕ್ ಜೈನ್ ಅವರ ಮನೆಗೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನನ್ನ ಐಟಿ ಕಚೇರಿಯ ಮೇಲೆ ದಾಳಿ ಮಾಡಲಾಗಿದೆ. ಅವರು ನಮ್ಮ ಪಕ್ಷದ ಹಾರ್ಡ್ ಡಿಸ್ಕ್, ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ಎಲ್ಲಾ ಮಾಹಿತಿಯನ್ನು ದೋಚಲು ಪ್ರಯತ್ನಿಸುತ್ತಿದ್ದಾರೆ. ಚುನಾವಣೆಗಳು ಸಮೀಪದಲ್ಲಿರುವುದರಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅವರು ನಮ್ಮ ಪಕ್ಷದ ಎಲ್ಲಾ ಮಾಹಿತಿಯನ್ನು ದೋಚಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ. ಹಾಗೇ, ಪ್ರತೀಕ್ ಜೈನ್ ಅವರ ಮನೆಯಿಂದ ಹಸಿರು ಫೈಲ್ ಅನ್ನು ತೆಗೆದುಕೊಂಡು ಮಮತಾ ಬ್ಯಾನರ್ಜಿ ಅಲ್ಲಿಂದ ಹೊರಟಿದ್ದಾರೆ. ಆ ಫೈಲ್​ನಲ್ಲಿ ಏನಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಇದನ್ನೂ ಓದಿ: ಬಂಗಾಳದಲ್ಲಿ ಬಾಬರಿ ಮಸೀದಿ ವಿವಾದದ ಬೆನ್ನಲ್ಲೇ ಅಯೋಧ್ಯೆ ಶೈಲಿಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ

ಪ್ರತೀಕ್ ಜೈನ್ ಅವರ ನಿವಾಸದಿಂದ ಹೊರಬಂದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. “ಒಂದು ಪಕ್ಷದ ಹಾರ್ಡ್ ಡಿಸ್ಕ್‌ಗಳು ಮತ್ತು ಅಭ್ಯರ್ಥಿಗಳ ಪಟ್ಟಿಗಳನ್ನು ವಶಪಡಿಸಿಕೊಳ್ಳುವುದು ಇಡಿ ಅಥವಾ ಅಮಿತ್ ಶಾ ಅವರ ಕೆಲಸವೇ? ಇದು ದ್ವೇಷದ ರಾಜಕಾರಣ. ಇದಕ್ಕೆ ನಾವು ತಕ್ಕ ಉತ್ತರ ನೀಡುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:49 pm, Thu, 8 January 26

Source link

ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್‌ ಸ್ಟವ್‌ ಕ್ಲೀನ್‌ ಮಾಡಬಹುದು – Kannada News | Clean dirty gas stove easily using these tips

ಅಡುಗೆಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್ (gas stove).‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಇದನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಗಲೀಜು ಆಗುತ್ತಿರುತ್ತೆ. ಹಾಲು ಉಕ್ಕಿ, ಕುಕ್ಕರ್‌ನಿಂದ ಬರುವ ನೀರು, ಎಣ್ಣೆ ಅಂಶ ಇವೆಲ್ಲವೂ ಬಿದ್ದು ಗ್ಯಾಸ್‌ ಸ್ಟವ್‌ ಮತ್ತು ಗ್ಯಾಸ್‌ ಬರ್ನಲ್‌ ಕೊಳೆಯಾಗುತ್ತವೆ. ಹೆಚ್ಚಿನವರು ಈ ಹಠಮಾರಿ ಕಲೆಗಳನ್ನು ತೊಡೆದುಹಾಕಲು ದುಬಾರಿ ರಾಸಾಯನಿಕಯುಕ್ತ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಯಾವುದೇ ಖರ್ಚಿಲ್ಲದೆ ಮನೆಯಲ್ಲಿ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಿಂದ ಬಲು ಸುಲಭವಾಗಿ ಗ್ಯಾಸ್‌ ಸ್ಟೌವ್ ಮೇಲೆ ಅಂಟಿರುವ ಕಲೆಗಳನ್ನು ಹೋಗಲಾಡಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಗ್ಯಾಸ್‌ ಸ್ಟೌವ್ ಸ್ವಚ್ಛಗೊಳಿಸಲು ಈ ಸಲಹೆ ಪಾಲಿಸಿ:

ಬೇಕಿಂಗ್ ಸೋಡಾ ಮತ್ತು ವಿನೆಗರ್: ಗ್ಯಾಸ್ ಸ್ಟೌವ್ ಸ್ವಚ್ಛಗೊಳಿಸಲು ಸುಲಭವಾದ ಮಾರ್ಗವೆಂದರೆ ಬೇಕಿಂಗ್ ಸೋಡಾ ಮತ್ತು ಬಿಳಿ ವಿನೆಗರ್ ಬಳಸುವುದು. ಇದಕ್ಕಾಗಿ ಮೊದಲು, ಗ್ಯಾಸ್ ರೆಗ್ಯುಲೇಟರ್ ಆಫ್ ಮಾಡಿ ಮತ್ತು ಬರ್ನರ್ಗಳನ್ನು ತೆಗೆದುಹಾಕಿ. ಸ್ಟೌವ್ ಮೇಲೆ ಅಡಿಗೆ ಸೋಡಾವನ್ನು ಸಿಂಪಡಿಸಿ. ಅದಕ್ಕೆ ಸ್ವಲ್ಪ ಬಿಳಿ ವಿನೆಗರ್ ಸೇರಿಸಿ. ಈ ಮಿಶ್ರಣವು ತಕ್ಷಣವೇ ಗುಳ್ಳೆಗಳಾಗಿ ಬದಲಾಗುತ್ತದೆ ಮತ್ತು ಫೋಮ್ ಸೃಷ್ಟಿಯಾಗುತ್ತದೆ. ಈ ಫೋಮ್ ಸ್ಟೌವ್ ಮೇಲೆ ಸಂಗ್ರಹವಾಗಿರುವ ಗ್ರೀಸ್ ಮತ್ತು ಎಣ್ಣೆಯ ಕಠಿಣ ಕಲೆಗಳನ್ನು ಮೃದುಗೊಳಿಸುತ್ತದೆ. 10 ನಿಮಿಷಗಳ ನಂತರ, ಹಳೆಯ ಟೂತ್ ಬ್ರಷ್ ಅಥವಾ ಸ್ಪಾಂಜ್‌ನಿಂದ ನಿಧಾನವಾಗಿ ಉಜ್ಜಿ ಮತ್ತು ಒದ್ದೆಯಾದ ಬಟ್ಟೆಯಿಂದ ಒರೆಸಿದರೆ ಗ್ಯಾಸ್‌ ಸ್ಟೌವ್ ಕ್ಲೀನ್‌ ಆಗುತ್ತದೆ.

ನಿಂಬೆ ಮತ್ತು ಉಪ್ಪು: ಗ್ಯಾಸ್‌ ಸ್ಟೌವ್‌ ಸ್ವಚ್ಛಗೊಳಿಸಲು ಇದು ಅದ್ಭುತವಾಗಿ ಕೆಲಸ ಮಾಡುತ್ತದೆ. ನಿಂಬೆಹಣ್ಣನ್ನು ಅರ್ಧದಷ್ಟು ಕತ್ತರಿಸಿ ಆ ಹೋಳುಗಳ ಮೇಲೆ ಉಪ್ಪು ಸೇರಿಸಿ ಸ್ಟೌವ್‌ ಮೇಲೆ ನಿಧಾನವಾಗಿ ಉಜ್ಜಿ.  ನಿಂಬೆಯಲ್ಲಿರುವ ಆಮ್ಲ ಮತ್ತು ಉಪ್ಪಿನ ಅಪಘರ್ಷಕ ಶಕ್ತಿಯು ಗಟ್ಟಿಯಾಗಿ ಅಂಟಿರುವ ಕಲೆಗಳನ್ನು ಸಡಿಲಗೊಳಿಸುತ್ತದೆ. ನಂತರ ಅದನ್ನು ಒಣ ಬಟ್ಟೆಯಿಂದ ಒರೆಸಿ ಕಲೆಗಳು ಸಂಪೂರ್ಣವಾಗಿ ಹೋಗುತ್ತದೆ.

ಇದನ್ನೂ ಓದಿ: ಎಲೆಕೋಸನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನ ಯಾವುದು? ನೀವು ತಿಳಿಯಲೇಬೇಕಾದ ಮಾಹಿತಿಯಿದು

ಬಿಸಿನೀರು ಮತ್ತು ಪಾತ್ರೆ ತೊಳೆಯುವ ದ್ರವ: ಸ್ಟೋವ್‌ನ ಸಣ್ಣ ಭಾಗಗಳಾದ ಗ್ರೇಟ್‌ಗಳು ಮತ್ತು ಬರ್ನರ್ ರಿಂಗ್‌ಗಳನ್ನು ಸ್ವಚ್ಛಗೊಳಿಸಲು ಬಿಸಿನೀರು ತುಂಬಾ ಪರಿಣಾಮಕಾರಿಯಾಗಿದೆ. ಒಂದು ಬಕೆಟ್ ಬಿಸಿ ನೀರಿನಲ್ಲಿ ಕೆಲವು ಹನಿ ಪಾತ್ರೆ ತೊಳೆಯುವ ದ್ರವವನ್ನು ಮಿಶ್ರಣ ಮಾಡಿ. ಬರ್ನರ್ ರಿಂಗ್‌ಗಳು ಮತ್ತು ಗ್ರೇಟ್‌ಗಳಂತಹ ಸಣ್ಣ ಭಾಗಗಳನ್ನು 15 ನಿಮಿಷಗಳ ಕಾಲ ಆ ನೀರಿನಲ್ಲಿ ನೆನೆಸಿ. ನೆನೆಸಿದ ನಂತರ, ಬ್ರಷ್ ಬಳಸಿ ಸ್ಕ್ರಬ್ ಮಾಡಿ ಮತ್ತು ತೊಳೆಯಿರಿ. ಈ ವಿಧಾನವು ಗ್ರೀಸ್ ಕಲೆಗಳು

ಒಲೆಯನ್ನು ಚೆನ್ನಾಗಿ ಸ್ವಚ್ಛಗೊಳಿಸಿದ ನಂತರ, ಒಲೆಯ ಮೇಲೆ ಕೆಲವು ಹನಿ ತೆಂಗಿನ ಎಣ್ಣೆ ಅಥವಾ ಸಾಸಿವೆ ಎಣ್ಣೆಯನ್ನು ಹಚ್ಚಿ ಒಣ ಬಟ್ಟೆಯಿಂದ ನಿಧಾನವಾಗಿ ಒರೆಸಿ. ಈ ಸುಲಭವಾದ ಸಲಹೆಯು ಗ್ಯಾಸ್‌ ಸ್ಟೌವ್‌ಗೆ  ಹೊಸ ಹೊಳಪನ್ನು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ: ಇತ್ತ ಶಾಸಕಿಯ ಶ್ರದ್ಧಾಂಜಲಿ ಪೋಸ್ಟ್ ವೈರಲ್ – Kannada News | Mangaluru: Fake Tribute Post on MLA Bhagirathi Murulya; Police Case Filed

ವೈರಲ್​​ ಪೋಸ್ಟ್, ಶಾಸಕಿ ಭಾಗೀರಥಿ ಮುರುಳ್ಯ

ಮಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ (BJP) ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ (MLA Bhagirathi Murulya) ಅವರ ನಕಲಿ ಶ್ರದ್ಧಾಂಜಲಿ ಪೋಸ್ಟ್ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ನಕಲಿ ಪೋಸ್ಟ್​​ ಹರಿಬಿಟ್ಟಿದ್ದ ಆರೋಪಿ ಸಂದೇಶ್​ ಅಲಿಯಾಸ್ ಸೀತಾರಾಮ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 352, ಬಿಎಸ್​ಎಸ್​​ ಅಡಿ ಪ್ರಕರಣ ದಾಖಲಾಗಿದೆ.

ವೈರಲ್​​ ಪೋಸ್ಟ್​ನಲ್ಲಿ ಏನಿದೆ?

ಬಿಲ್ಲವ ಸಂದೇಶ್​ ಎಂದ ಫೇಸ್​ ಬುಕ್​​ ಖಾತೆಯಲ್ಲಿ ಶ್ರದ್ಧಾಂಜಲಿ ಪೋಸ್ಟ್ ಹಾಕಲಾಗಿದೆ. ‘ದಲಿತ ಸಮುದಾಯ ಶಾಸಕಿ ಭಾಗೀರಥಿ ಮುರುಳ್ಳ ಇರುವ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನೂ ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಬ್ಲೂಜೆಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಕೇಸ್

ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸಂದೇಶ್‌ನನ್ನು ಬಂಧಿಸುವಂತೆ ತೀವ್ರ ಆಗ್ರಹ ಕೇಳಿಬಂದಿತ್ತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ದಕ್ಷಿಣ ಕನ್ನಡ ಎಸ್​​ಪಿಗೆ ದೂರು ನೀಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ!

ಇನ್ನು ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದಿದ್ದು, ಜನಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:43 pm, Thu, 8 January 26

Source link

ಎಐ ಇಂಪ್ಯಾಕ್ಟ್ ಸಮಿಟ್​ಗೆ ಪೂರ್ವಭಾವಿಯಾಗಿ 12 ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಮೋದಿ ಸಭೆ – Kannada News | PM Narendra Modi chairs meeting with Indian AI startups, As India gears up for AI Impact Summit 2026 in February

ಎಐ ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ, ಜನವರಿ 8: ಫೆಬ್ರುವರಿಯಲ್ಲಿ ನಡೆಯಲಿರುವ ಎಐ ಇಂಪ್ಯಾಕ್ಟ್ ಸಮಿಟ್​ಗೆ (AI Impact Summit 2026) ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಎಐ ಸ್ಟಾರ್ಟಪ್​ಗಳ ಸಭೆ ನಡೆಸಿದರು. ಲೋಕಕಲ್ಯಾಣ ಮಾರ್ಗ್​ನಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಿಗಳು ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. 12 ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಕೆಲಸ ಹಾಗೂ ಐಡಿಯಾಗಳನ್ನು ಪ್ರಧಾನಿಯವರ ಹಂಚಿಕೊಂಡಿವೆ.

ಮುಂದಿನ ತಿಂಗಳು ನಡೆಯುವ ಸಮಿಟ್​ನಲ್ಲಿ ‘ಎಐ ಫಾರ್ ಆಲ್: ಗ್ಲೋಬಲ್ ಇಂಪ್ಯಾಕ್ಟ್ ಚಾಲೆಂಜ್’ ಅಧಿವೇಶನದಲ್ಲಿ ಪಾಲ್ಗೊಳ್ಳಲು ಈ 12 ಸ್ಟಾರ್ಟಪ್​ಗಳು ಅರ್ಹತೆ ಪಡೆದಿವೆ. ಅವತಾರ್, ಭಾರತ್​ಜೆನ್, ಫ್ರಾಕ್ಟಲ್, ಗ್ಯಾನ್, ಜೆನ್​ಲೂಪ್, ಜ್ಞಾನಿ, ಇಂಟೆಲಿಹೆಲ್ತ್, ಸರ್ವಂ, ಶೋಧ್ ಎಐ, ಸಾಕೆಟ್ ಎಐ, ಟೆಕ್ ಮಹೀಂದ್ರ ಮತ್ತು ಝೆನ್​ಟೀಕ್ ಆ 12 ಸ್ಟಾರ್ಟಪ್​ಗಳಾಗಿವೆ. ಪ್ರಧಾನಿ ಜೊತೆಗಿನ ಸಭೆಯಲ್ಲಿ ಈ 12 ಸ್ಟಾರ್ಟಪ್​ಗಳ ಸಿಇಒಗಳು, ಮುಖ್ಯಸ್ಥರು ಮತ್ತು ಪ್ರತಿನಿಧಿಗಳು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ರೌಂಡ್​ಟೇಬಲ್ ಮೀಟಿಂಗ್​ನಲ್ಲಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಜಿತಿನ್ ಪ್ರಸಾದ ಅವರೂ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕರ್ನಾಟಕದ ಕಾಫಿಗೆ ಯೂರೋಪ್​ನಲ್ಲಿ ಬಲು ಬೇಡಿಕೆ; 2025ರಲ್ಲಿ 2 ಬಿಲಿಯನ್ ಡಾಲರ್ ಮುಟ್ಟಿದ ಭಾರತದ ಒಟ್ಟಾರೆ ಕಾಫಿ ರಫ್ತು

ಸಮಾಜದಲ್ಲಿ ಪರಿವರ್ತನೆ ತರಲು ಎಐ ಎಷ್ಟು ಮಹತ್ವದ್ದು ಎಂಬುದನ್ನು ಮೋದಿ ಈ ಸಂದರ್ಭದಲ್ಲಿ ಆಂಟ್ರಪ್ರನ್ಯೂರ್​ಗಳಿಗೆ ವಿವರಿಸಿದರು. ಎಐ ಆಂಟ್ರಪ್ರನ್ಯೂರ್​ಗಳು ಮತ್ತು ಸ್ಟಾರ್ಟಪ್​ಗಳು ಭಾರತದ ಭವಿಷ್ಯದ ನಿರ್ಮಾತೃಗಳಾಗಿವೆ ಎಂದ ಅವರು, ಭಾರತದಿಂದ ಅನನ್ಯವಾದಂತಹ ಎಐ ಮಾಡಲ್ ಅನ್ನು ಜಗತ್ತಿಗೆ ಕೊಡಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಎಐ ಸ್ಟಾರ್ಟಪ್​ಗಳ ಮುಖಂಡರು, ಭಾರತದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಇಕೋಸಿಸ್ಟಂ ಬೆಳೆಸಲು ಸರ್ಕಾರ ಹೊಂದಿರುವ ಬದ್ಧತೆಯನ್ನು ಶ್ಲಾಘಿಸಿದ್ದಾರೆ. ಎಐ ಇನ್ನೋವೇಶನ್​ಗಳ ಕೇಂದ್ರಬಿಂದು ಭಾರತದತ್ತ ವಾಲುತ್ತಿದೆ. ಎಐ ಅಭಿವೃದ್ಧಿಗೆ ಬೇಕಾದ ಸಮೃದ್ಧ ವಾತಾವರಣ ಭಾರತದಲ್ಲಿ ಇದೆ. ಜಾಗತಿಕ ಎಐ ನಕ್ಷೆಯಲ್ಲಿ ಭಾರತದ ಸ್ಥಾನ ಗುರುತರವಾಗಿದೆ ಎಂದು ಈ ನವೋದ್ಯಮಿಗಳು ಹೇಳಿದ್ದಾರೆ.

ಇದನ್ನೂ ಓದಿ: 2024-25ರಲ್ಲಿ ಶೇ. 6.5, 2025-26ರಲ್ಲಿ ಶೇ. 7.4; ಈ ವರ್ಷಕ್ಕೆ ಸರ್ಕಾರದ ಆರ್ಥಿಕ ಬೆಳವಣಿಗೆ ಅಂದಾಜು

ಈ 12 ಸ್ಟಾರ್ಟಪ್​ಗಳು ಬೇರೆ ಬೇರೆ ಎಐ ವಿಭಾಗಗಳಲ್ಲಿ ಕಾರ್ಯನಿರತವಾಗಿವೆ. ಭಾರತೀಯ ಭಾಷಾ ಫೌಂಡೇಶನ್ ಮಾಡಲ್​ಗಳು, ಬಹುಭಾಷೆಗಳ ಎಲ್​ಎಲ್​ಎಂಗಳು, ಸ್ಪೀಚ್ ಟು ಟೆಕ್ಸ್ಟ್, ಟೆಕ್ಸ್ಟ್ ಟು ಆಡಿಯೋ, ಟೆಕ್ಸ್ಟ್ ಟು ವಿಡಿಯೋ, ಜನರೇಟಿವ್ ಎಐ ಬಳಸಿ ಮಾಡುವ 3ಡಿ ಕಂಟೆಂಟ್, ಎಂಜಿನಿಯರಿಂಗ್ ಸಿಮುಲೇಶನ್, ಮೆಟೀರಿಯಲ್ ರಿಸರ್ಚ್, ಹೆಲ್ತ್​ಕೇರ್ ಡಯಾಗ್ನಾಸ್ಟಿಕ್ಸ್ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಈ ಎಐ ಸ್ಟಾರ್ಟಪ್​ಗಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ – Kannada News | Karnataka Cabinet approves All B Khata To A Khata Conversion

ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು

Source link

KVS NVS Update: ಜ.10ರಂದು KVS, NVS ಉದ್ಯೋಗ ಲಿಖಿತ ಪರೀಕ್ಷೆ; ಹಾಲ್​ ಟಿಕೆಟ್​ ಈ ರೀತಿ ಡೌನ್ಲೋಡ್ ಮಾಡಿ – Kannada News | KVS NVS Admit Card Released: Download Hall Ticket for 15,762 Posts

ದೇಶಾದ್ಯಂತ ಕೇಂದ್ರ ಸರ್ಕಾರಿ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಕೇಂದ್ರೀಯ ವಿದ್ಯಾಲಯ ಸಂಗತ್ (KVS) ಮತ್ತು ನವೋದಯ ವಿದ್ಯಾಲಯ ಸಮಿತಿ (NVS) ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 15,762 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಗಳು ಈಗಾಗಲೇ ಮುಗಿದಿದ್ದರೂ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಇತ್ತೀಚೆಗೆ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಹಾಲ್ ಟಿಕೆಟ್‌ಗಳನ್ನು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸುವ ಮೂಲಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಲಿಖಿತ ಪರೀಕ್ಷೆಗೆ, ಟೈಯರ್ 1 ಪರೀಕ್ಷೆಗಳನ್ನು ಜನವರಿ 10 ಮತ್ತು 11 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಟೈಯರ್ 1 ರಲ್ಲಿ ಅರ್ಹತೆ ಪಡೆದವರನ್ನು ಟೈಯರ್ 2 ಗೆ ಸೇರಿಸಲಾಗುತ್ತದೆ. ಅದರ ನಂತರ, ಟೈಪಿಂಗ್, ಸ್ಟೆನೋಗ್ರಫಿ ಮತ್ತು ಅನುವಾದದಂತಹ ಹುದ್ದೆಗಳಿಗೆ ಕೌಶಲ್ಯ ಪರೀಕ್ಷೆ ಇರುತ್ತದೆ. ಉಳಿದ ಹುದ್ದೆಗಳಿಗೆ ಸಂದರ್ಶನ ಇರುತ್ತದೆ.

KVS, NVS 2025 ಪ್ರವೇಶ ಪತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ದೇಶಾದ್ಯಂತ ಒಟ್ಟು 1288 ಕೇಂದ್ರೀಯ ವಿದ್ಯಾಲಯಗಳು ಮತ್ತು ಒಟ್ಟು 653 ಜವಾಹರ್ ನವೋದಯ ವಿದ್ಯಾಲಯಗಳಿವೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ಸ್ಥಳದಲ್ಲಿ, ಗ್ರಾಮೀಣ, ನಗರ ಮತ್ತು ವಸತಿ ಕ್ಯಾಂಪಸ್‌ಗಳಲ್ಲಿ ಕರ್ತವ್ಯಕ್ಕೆ ಸೇರಬೇಕಾಗುತ್ತದೆ. ಈ ಅಧಿಸೂಚನೆಯಡಿಯಲ್ಲಿ, ಸಹಾಯಕ ಆಯುಕ್ತರು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು (ಪಿಜಿಟಿಗಳು), ತರಬೇತಿ ಪಡೆದ ಪದವೀಧರ ಶಿಕ್ಷಕರು (ಟಿಜಿಟಿಗಳು), ಪ್ರಾಥಮಿಕ ಶಿಕ್ಷಕರು ಪಿಆರ್‌ಟಿ, ವಿಶೇಷ ಶಿಕ್ಷಕರು (ಪಿಆರ್‌ಟಿ), ಗ್ರಂಥಪಾಲಕರು, ಕೆವಿಎಸ್ ಬೋಧಕೇತರ ಹುದ್ದೆಗಳು, ಎನ್‌ವಿಎಸ್ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link