ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ – Kannada News | Kavya Shaiva takes revenge against Gilli Nata in Bigg Boss Kannada Season 12

ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಗಿಲ್ಲಿ ನಟ ಅವರು ಮೊದಲಿನಿಂದಲೂ ಆ್ಯಕ್ಟೀವ್ ಆಗಿದ್ದಾರೆ. ಕಾವ್ಯಾ ಶೈವ (Kavya Shaiva) ಜೊತೆ ಅವರಿಗೆ ಸ್ನೇಹ ಇದೆ. ಆದರೂ ಗಿಲ್ಲಿಯಿಂದ ಕಾವ್ಯಾಗೆ ಹಲವು ಬಾರಿ ಕಿರಿಕಿರಿ ಆಗಿದ್ದುಂಟು. ಇಷ್ಟು ದಿನಗಳ ಕೋಪವನ್ನು ಕಾವ್ಯಾ ಅವರು ಈಗ ತೀರಿಸಿಕೊಂಡಿದ್ದಾರೆ. ಗಿಲ್ಲಿಗೆ ಅವರು ಶಿಕ್ಷೆ ನೀಡಿದ್ದಾರೆ. ಕಾವ್ಯಾ ಮಾತ್ರವಲ್ಲದೇ ಮ್ಯೂಟೆಂಟ್ ರಘು ಕೂಡ ಹೀಗೆಯೇ ಮಾಡಿದ್ದಾರೆ. ರಾಶಿಕಾ ಶೆಟ್ಟಿ, ಅಶ್ವಿನಿ ಗೌಡ ಅವರಿಗೂ ಗಿಲ್ಲಿಯೇ ಟಾರ್ಗೆಟ್ ಆಗಿದ್ದಾರೆ. ಅಂದಹಾಗೆ, ಇದೆಲ್ಲವೂ…

Read More

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಉದ್ಯಾನವನದಲ್ಲಿ ಅಡಗಿರುವ ಶ್ವಾನವನ್ನು ಹುಡುಕಿ – Kannada News | Optical Illusion: A challenge for your eyes; Find the dog hiding in this park in just 15 seconds.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಅಥವಾ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿವೆ. ಕಣ್ಣು ಹಾಯಿಸಿದ್ದಲೆಲ್ಲಾ ಮೆದುಳಿಗೆ ವ್ಯಾಯಾಮ ನೀಡುವ ಒಗಟಿನ ಆಟಗಳೇ. ಇದು ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುವುದಲ್ಲದೇ, ಒಗಟು ಬಿಡಿಸುವ ಸಾಮರ್ಥ್ಯ ನಿಮ್ಮಲ್ಲಿ ಇದೆಯೇ ಎಂದು ಪರೀಕ್ಷಿಸುತ್ತದೆ. ಇದೀಗ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವ ಟ್ರಿಕ್ಕಿ ಒಗಟು ಇಲ್ಲಿದೆ. ಈ ಉದ್ಯಾನವನದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ನಾಯಿಯನ್ನು ಪತ್ತೆ ಹಚ್ಚಬೇಕು. ಈ ಕಠಿಣ ಒಗಟನ್ನು…

Read More

ನ್ಯೂಝಿಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್

ಭಾರತ ಮತ್ತು ನ್ಯೂಝಿಲೆಂಡ್ (IND vs NZ) ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ (ಜ.11) ಶುರುವಾಗಲಿದೆ. ರಾಜ್​ಕೋಟ್​ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಗಾಯಗೊಂಡು ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಹೌದು, ಭಾರತ ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ರಿಷಭ್ ಪಂತ್ ಗಾಯಗೊಂಡಿದ್ದಾರೆ. ವಡೋದರಾದಲ್ಲಿ ಶನಿವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಸೈಡ್ ಆರ್ಮ್ ತಜ್ಞರ ಎಸೆತದಿಂದ ಅವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

Home Positivity: ಮನೆಯಲ್ಲಿ ಅಲೋವೆರಾ ಗಿಡ ಇಡುವ ಮುನ್ನ ಈ ವಾಸ್ತು ನಿಯಮ ತಿಳಿಯಿರಿ – Kannada News | Aloe Vera and Vastu: Enhancing Home Positivity and Prosperity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಲೋವೆರಾ ಗಿಡದ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಅಲೋವೆರಾ ಒಂದು ವಿಶಿಷ್ಟವಾದ ಗಿಡವಾಗಿದ್ದು, ಇದನ್ನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇಟ್ಟುಕೊಳ್ಳುವುದು ಶುಭಕರವೇ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ, ಅಲೋವೆರಾವನ್ನು ಸರಿಯಾದ ರೀತಿಯಲ್ಲಿ ಇರಿಸಿದಾಗ, ಅದು ವೃತ್ತಿ ಜೀವನ, ಆರ್ಥಿಕ ಸ್ಥಿತಿ ಮತ್ತು ಆರೋಗ್ಯ – ಈ ಮೂರು ಪ್ರಮುಖ ಅಂಶಗಳ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರುತ್ತದೆ. ಈ ಗಿಡವನ್ನು ಸಾಮಾನ್ಯವಾಗಿ…

Read More

ಸಾಕು ನಾಯಿ ಬೊಗಳಿದ್ದಕ್ಕೆ ಬಾಲಕನಿಗೆ ಚಾಕು ಇರಿದ ದುಷ್ಕರ್ಮಿಗಳು – Kannada News | A Bark That Turned Bloody: Antop Hill Erupts in Violence in Mumbai

ಮುಂಬೈ, ಜನವರಿ 11: ಸಾಕು ನಾಯಿ(Dog) ಬೊಗಳಿದ್ದಕ್ಕೆ ಆರು ಮಂದಿ 15 ವರ್ಷದ ಬಾಲಕನಿಗೆ ಚಾಕು ಇರಿದ ಘಟನೆ ಮುಂಬೈನಲ್ಲಿ ನಡೆದಿದೆ. ಜನವರಿ 8ರಂದು ಈ ಘಟನೆ ನಡೆದಿದೆ. ಮಾತಿನಲ್ಲಿ ಆರಂಭವಾದ ಜಗಳ ಹಿಂಸಾತ್ಮಕ ರೂಪ ತಾಳಿತ್ತು. ಅಂತೋಪ್ ಹಿಲ್ ಪೊಲೀಸರು ನಿತಿನ್ ದಿಕ್ಕಾ, ತುಷಾರ್, ಸವಿತಾ, ಅಮನ್, ಕವಿತಾ ಮತ್ತು ಶರಣಜೀತ್ ಸೇರಿದಂತೆ ಇತರ ಹಲವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ದೂರುದಾರ…

Read More

National Human Trafficking Awareness Day 2026: ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸುವುದೇಕೆ ತಿಳಿಯಿರಿ – Kannada News | Know the history and significance of Human Trafficking Awareness Day

ಮಾನವ ಕಳ್ಳ ಸಾಗಾಣಿಕೆಯ ವಿರುದ್ಧದ ಜಾಗೃತಿ ದಿನImage Credit source: vecteezy ಮಾನವ ಕಳ್ಳಸಾಗಾಣಿಕೆಯು (Human Trafficking) ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಪ್ರತಿ ವರ್ಷ ಪ್ರಪಂಚದಲ್ಲಿನ ಲಕ್ಷಾಂತರ ಅಮಾಯಕ ಜನರು ಈ ಮಾನವ ಕಳ್ಳಸಾಗಾಣಿಕೆಯ ಕೂಪಕ್ಕೆ ಬಲಿಯಾಗಿತ್ತಿದ್ದಾರೆ ಮತ್ತು ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಯಾಗುತ್ತಿದ್ದಾರೆ. ಇದು ಬಹು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಭಿಕ್ಷಾಟನೆ, ವೇಶ್ಯಾವಾಟಿಕೆ, ಲೈಂಗಿಕ ಚಟುವಟಿಕೆ, ಬಲವಂತದ ದುಡಿಮೆ, ಜೀತ, ಅಂಗಾಂಗ ಮಾರಾಟ ಮತ್ತು ಇತರ ಅನೇಕ ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ಮಾನವ…

Read More

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ನಾಲ್ವರು ದಾರುಣ ಸಾವು; ಮೂವರು ಗಂಭೀರ – Kannada News | Karnataka Road Accidents: Four Lives Lost in Multiple Tragic Incidents

ಚಿತ್ರದುರ್ಗ/ಕಲಬುರಗಿ, ಜನವರಿ 11: ಲಾರಿಗೆ ಇನ್ನೋವಾ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದ DySP ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಅವರ ತಾಯಿ ಕಮಲ(65), ಕಾರು ಚಾಲಕ ರಾಕೇಶ್(40) ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಚಿತ್ರದುರ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ತಾಯಿ ಜೊತೆ ತಮಿಳುನಾಡಿಗೆ ಪ್ರವಾಸಕ್ಕೆ ಹೋಗಿದ್ದ DySP ವೈಷ್ಣವಿ ಹಿಂದಿರುಗಿ ಕೊಲ್ಹಾಪುರಕ್ಕೆ ತೆರಳುತ್ತಿದ್ದಾಗ ಅಪಘಾತ…

Read More

ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು…

Read More

2 ಶತಕದೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್ – Kannada News | Ryan Rickleton becomes the first player to score 2 Hundreds in the SA20 History

ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ಹಾಗೂ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ…

Read More

ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ – Kannada News | DyCM D.K. Shivakumar Attends Naringana Kambala in Ullal, Mangaluru

ಮಂಗಳೂರು, ಜನವರಿ 11: ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ಆಯೋಜಿಸಲಾಗಿದ್ದ ಲವ-ಕುಶ ಜೋಡುಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಕೋಣಗಳ ಓಟಕ್ಕೆ ಡಿಕೆಶಿ ಫಿದಾ ಆಗಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಕಂಬಳ ಆಯೋಜಿಸಲಾಗಿತ್ತು. ಇದೇ ವೇಳೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಅದನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬಳಿ ಬೇಡಿಕೆ ಇಡಲಾಯಿತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More