ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ಸಾವು – Kannada News | Tragic Road Accident Near Mantralaya: 8 Devotees from Chikkaballapur Killed in Bolero Tanker Collision
ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ವಿವರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ…