ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್ ಹೇಳಿದ್ದೇನು? – Kannada News | Supreme Court Comments on Balancing Animal Welfare and Public Safety
ನವದೆಹಲಿ, ಜನವರಿ 07: ‘‘ಬೀದಿ ನಾಯಿ(Stray Dog)ಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ’’ ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಅಪಾಯಕಾರಿ ನಾಯಿಗಳನ್ನು ನಡವಳಿಕೆಯಿಂದ ಮಾತ್ರ ಗುರುತಿಸುವುದು ಅಸಾಧ್ಯವೆಂದಿದ್ದಾರೆ. ರಸ್ತೆಗಳು ಮತ್ತು ಬೀದಿಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿರ್ವಹಿಸುವಲ್ಲಿನ ಸವಾಲನ್ನು ಪೀಠವು ಒತ್ತಿ ಹೇಳಿದೆ….