Category Archives: Blog

Your blog category

Tumakuru: ಸಂಪ್​​ನಲ್ಲಿ ತಾಯಿ-ಮಕ್ಕಳ ಶವ ಪತ್ತೆ: ನಿಗೂಢ ಸಾವಿಗೆ ಕಾರಣ ಏನು? – Kannada News | Tumakuru Tragedy: Mother and Children Found Dead in a Sump at Singanahalli

ತುಮಕೂರು, ಜನವರಿ 07: ಸಂಪ್​​ನಲ್ಲಿ ತಾಯಿ ಮತ್ತು ಮಕ್ಕಳ ಶವ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಸಿಂಗನಹಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮೀ ಹಾಗೂ ಅವರ ಇಬ್ಬರು ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತ ದುರ್ದೈವಿಗಳಾಗಿದ್ದು, ಮನೆಯಲ್ಲಿ ಡೆತ್​​ನೋಟ್​​ ಕೂಡ ಪತ್ತೆಯಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವಿಜಯಲಕ್ಷ್ಮೀ ಪತಿ ಸಂಪತ್​​​​ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ ಅವರು ಮನೆಗೆ ಬಂದಾಗ ಪತ್ನಿ ಹಾಗೂ ಮಕ್ಕಳು ಕಾಣಿಸುತ್ತಿರಲಿಲ್ಲ. ಹೀಗಾಗಿ ಮನೆ ತುಂಬಾ ಹುಡುಕಾಡಿದ್ದಾರೆ. ​​ಎಲ್ಲಿಯೂ ಸಿಗದಿದ್ದಾಗ ತನ್ನ ತಂದೆ ಹಾಗೂ ತಾಯಿಗೆ ಈ ವಿಚಾರ ತಿಳಿಸಿ ಮನೆಯ ಮುಂದೆ ನಿಂತಿದ್ದಾರೆ. ಈ ವೇಳೆ ಸಂಪ್​​ ತೆರೆದಿರೋದು ಅವರ ಕಣ್ಣಿಗೆ ಬಿದ್ದಿದೆ. ಇಣುಕಿ ನೋಡಿದಾಗ ಒಂದರನಂತರ ಒಂದರಂತೆ ಮೂರು ಶವಗಳು ಕಾಣಿಸಿವೆ. ಕೂಡಲೇ ಈ ಬಗ್ಗೆ ಕ್ಯಾತ್ಸಂದ್ರ ಪೊಲೀಸರಿಗೆ ಸಂಪತ್​​ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಹುಟ್ಟಿಸಿದ ಮಗನ ಬಲಿ ಪಡೆದ ತಂದೆ; ಅಪ್ಪನ ಚಟಕ್ಕೆ ಹೋಯ್ತು ಪುತ್ರನ ಪ್ರಾಣ

ಮೂಲತಃ ಶಿವಗಂಗೆಯವರಾದ ಸಂಪತ್ ಕುಟುಂಬ ಕಳೆದ 30 ವರ್ಷಗಳಿಂದ ಸಿಂಗನಹಳ್ಳಿಯಲ್ಲಿ ವಾಸವಿದ್ದು, ಇತ್ತೀಚಿನ ಕೆಲ ವರ್ಷಗಳಿಂದ ಈ ಮನೆಯನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಸಂಪತ್ ಜೊತೆ ಪತ್ನಿ ವಿಜಯಲಕ್ಷ್ಮೀ, ಇಬ್ಬರು ಮಕ್ಕಳು ಹಾಗೂ ಆತನ ತಂದೆ ಹನುಮಂತರಾಜು ಮತ್ತು ತಾಯಿ ರೇಣುಕಮ್ಮ ಸಹ ವಾಸವಿದ್ದರು. ಸಂಪತ್ ಹಾಗೂ ಆತನ ತಾಯಿ ರೇಣುಕಮ್ಮ ಕೆಲಸಕ್ಕೆ ಹೋದ್ರೆ, ಇತ್ತ ವಿಜಯಲಕ್ಷ್ಮೀ ಮನೆಯಲ್ಲಿದ್ದ ಮಾವನ ಉಪಚಾರ ಮಾಡಿಕೊಂಡು ಮಕ್ಕಳ ಜೊತೆ ಇರುತಿದ್ದರು. ಆದೇ ರೀತಿ ನಿನ್ನೆ ಸಹ ಸಂಪತ್ ಹಾಗೂ ಅವರ ತಾಯಿ ಕೆಲಸಕ್ಕೆ ತೆರಳಿದ್ದಾರೆ. ಈ ನಡುವೆ ಮಾವ ಕೂಡ ಕೆಲಸವಿದೆ ಎಂದು ನೆಲಮಂಗಲಕ್ಕೆ ತೆರಳಿದ್ದಾರೆ. ಆ ಬಳಿಕ ಮನೆಯಲ್ಲಿ ಇಬ್ಬರು ಮಕ್ಕಳ ಜೊತೆ ಇದ್ದ ವಿಜಯಲಕ್ಷ್ಮೀ ನಿಗೂಢವಾಗಿ ಸಾವನಪ್ಪಿದ್ದು, ಶವ ಸಂಪ್​​ನಲ್ಲಿ ಪತ್ತೆಯಾಗಿದೆ.

ಇನ್ನು ಮನೆಯಲ್ಲಿ ಡೆತ್​​ನೋಟ್ ಕೂಡ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹಾಗೂ ನಮ್ಮ ಸಾವಿಗೆ ಯಾರು ಕಾರಣವಲ್ಲ ಎಂದು ಅದರಲ್ಲಿ ವಿಜಯಲಕ್ಷ್ಮೀ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದರೂ ಮಕ್ಕಳಿಬ್ಬರ ಸಾವು ಪೊಲೀಸರಿಗೆ ಗೊಂದಲ ಸೃಷ್ಟಿಸಿದೆ. ಹೀಗಾಗಿ ಮೃತಳ ಸಹೋದರನ ದೂರಿನ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬರ್ತ್​​ಡೇಗೂ ಮೊದಲು ಸ್ಟೈಲಿಶ್ ಆಗಿ ಫೋಟೋಶೂಟ್​ ಮಾಡಿಸಿದ ಯಶ್; ಇಲ್ಲಿವೆ ಚಿತ್ರಗಳು

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ದೊಡ್ಡ ಮಟ್ಟದಲ್ಲಿ ಆದಾಯ ತರುವಂಥ ಕೆಲಸಕ್ಕೆ ಮುಂದಾಗುವರು – Kannada News | January 7 Daily Horoscope: Birth Numbers 7, 8, 9 Predictions and Financial Insights

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಪರ್ಯಾಯ ಮಾರ್ಗ ಆಲೋಚಿಸುವುದು ಬಹಳ ಮುಖ್ಯ ಎಂದೆನಿಸುತ್ತದೆ. ನಿಮಗಿರುವ ಹೆಸರು, ಗೊತ್ತಿರುವ ಕೆಲಸದಲ್ಲಿ ಇರುವಂಥ ಕಾಂಟ್ಯಾಕ್ಟ್, ಪ್ರಭಾವಿಗಳ ಸಂಪರ್ಕ ಈ ಎಲ್ಲವನ್ನೂ ಬಳಸಿಕೊಂಡು, ದೊಡ್ಡ ಮಟ್ಟದಲ್ಲಿ ಆದಾಯ ತರುವಂಥ ಕೆಲಸ- ಕಾರ್ಯಗಳನ್ನು ಮಾಡುವುದಕ್ಕೆ ಮುಂದಾಗಲಿದ್ದೀರಿ. ಗ್ರಂಥಿಗೆ ಮಳಿಗೆ ನಡೆಸುತ್ತಾ ಇರುವವರಿಗೆ ಹೊಸ ಹೊಸ ವಸ್ತುಗಳ ಮಾರಾಟದ ಅವಕಾಶ ತೆರೆದುಕೊಳ್ಳಲಿದೆ. ನಿಮ್ಮಲ್ಲಿ ಕೆಲವರಿಗೆ ಹೂಡಿಕೆಯಲ್ಲಿ ಅದೃಷ್ಟದ ಬೆಂಬಲ ದೊರೆಯಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕೆಲವು ವ್ಯಕ್ತಿಗಳನ್ನು ನೀವಾಗಿಯೇ ದೂರ ಇಡುವ ನಿರ್ಧಾರ ಮಾಡಲಿದ್ದೀರಿ. ನಂಬಿಕೆ, ಪ್ರೀತಿ- ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ ಎಂಬುದು ಆಕ್ಷೇಪದ ಕಾರಣ ಆಗಿರಬಹುದು. ಯಾವುದು ಚಿಕ್ಕ- ಪುಟ್ಟ ಸಂಗತಿಗಳು ಎಂದು ಇಷ್ಟು ಸಮಯ ಭಾವಿಸಿರುತ್ತೀರೋ ಅಂಥವುಗಳಿಗೆ ಸಿಕ್ಕಾಪಟ್ಟೆ ಪ್ರಾಮುಖ್ಯ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಈ ಹಿಂದೆ ನೀವು ತೆಗೆದುಕೊಂಡ ನಿರ್ಧಾರಗಳು ಸರಿಯಾಗಲಿಲ್ಲ ಎಂದು ನಿಮಗೇ ಅನಿಸುತ್ತದೆ. ಜೀರ್ಣಕ್ಕೆ ಸುಲಭವಾಗಿ ಬರುವಂಥ ಆಹಾರ ಪದಾರ್ಥಗಳ ಸೇವನೆಗೆ ನಿಮ್ಮ ಆದ್ಯತೆ ಇರಲಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಎಲ್ಲ ಸಮಯವೂ ಒಂದೇ ರೀತಿಯ ಪ್ರತಿಸ್ಪಂದನೆ ಸರಿಹೋಗುವುದಿಲ್ಲ ಎಂದು ಬಲವಾಗಿ ಅನಿಸಲಿದೆ. ಆರೋಗ್ಯ ವಿಚಾರಕ್ಕೆ ಆದ್ಯತೆ ನೀಡುತ್ತೀರಿ. ಸ್ವ ಉದ್ಯೋಗಿಗಳಿಗೆ ಆದಾಯದಲ್ಲಿ ಗಣನೀಯ ಇಳಿಕೆ ಅನುಭವ ಆಗಲಿದೆ. ಅಥವಾ ಅಂದುಕೊಂಡ ಸಮಯಕ್ಕೆ ಹಣ ಕೈ ಸೇರದ ಕಾರಣದಿಂದ ಬೇಸರ ಆಗಲಿದೆ. ಇತರರ ಆರ್ಥಿಕ ವಿಚಾರಗಳ ಬಗ್ಗೆ ವಿಪರೀತ ಆಸಕ್ತಿ ತೋರಿಸುವುದಕ್ಕೆ ಹೋಗಬೇಡಿ. ಬ್ಯಾಂಕ್ ನಲ್ಲಿ ಪರ್ಸನಲ್ ಲೋನ್ ಅಥವಾ ಗೋಲ್ಡ್ ಲೋನ್ ತೆಗೆದುಕೊಂಡವರು ಅದರ ಮರುಪಾವತಿಗೆ ಆಲೋಚಿಸಿ.

ಲೇಖನ- ಎನ್‌.ಕೆ.ಸ್ವಾತಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತು ಕೇಳಿಬರಬಹುದು – Kannada News | Daily Numerology for January 7: Birth Numbers 4 6 Bhavishya and Future Insights

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ವಸ್ತುನಿಷ್ಠವಾಗಿ ನಡೆದುಕೊಳ್ಳುವುದು ಮುಖ್ಯ. ವ್ಯಕ್ತಿಗತವಾಗಿ ಯಾವುದೇ ಅಭಿಪ್ರಾಯ ಇದ್ದರೆ ಗುಣಕ್ಕೆ ಸಂಬಂಧಿಸಿದಂತೆ ಮತ್ಸರ ಸಾಧಿಸುವುದಕ್ಕೆ ಹೋಗಬೇಡಿ. ಉನ್ನತ ಶಿಕ್ಷಣ ಪಡೆಯುತ್ತಾ ಇರುವವರಿಗೆ ವಿದ್ಯಾರ್ಥಿ ವೇತನ ದೊರೆಯುವ ಬಗ್ಗೆ ಮಾಹಿತಿ ಅಥವಾ ಸುಳಿವು ಸಿಗಲಿದೆ. ಪಾರ್ಟನರ್ ಷಿಪ್ ವ್ಯವಹಾರ ಮಾಡುತ್ತಾ ಇರುವವರು ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಮುಂದಾಗಲಿದ್ದೀರಿ. ನಿಮ್ಮಲ್ಲಿ ಕೆಲವರು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ರೀತಿ- ಪ್ರೇಮದಲ್ಲಿ ಇರುವವರಿಗೆ ಸಂತೋಷವಾದ ದಿನ ಇದಾಗಿರುತ್ತದೆ. ಮಕ್ಕಳ ಶಿಕ್ಷಣದ ಬಗ್ಗೆ ಮುಖ್ಯ ವಿಚಾರಗಳನ್ನು ಸಂಗಾತಿ ಜೊತೆಗೆ ಹಂಚಿಕೊಳ್ಳಲಿದ್ದೀರಿ. ಕಾರು- ಸ್ಕೂಟರ್ ಖರೀದಿ ಮಾಡಬೇಕು ಎಂದುಕೊಳ್ಳುತ್ತಾ ಇರುವವರು ಆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ಬಡ್ತಿ- ವೇತನ ಹೆಚ್ಚಳದ ನಿರೀಕ್ಷೆಯಲ್ಲಿ ಇರುವವರಿಗೆ ಮಿಶ್ರ ಫಲಿತಾಂಶ ಅನುಭವಕ್ಕೆ ಬರಲಿದೆ. ಸಿನಿಮಾ ಕಲಾವಿದರಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಅವಕಾಶಗಳು ದೊರೆಯಲಿವೆ. ದೀರ್ಘ ಕಾಲದ ಆದಾಯದ ದಾರಿ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಅಧ್ಯಾತ್ಮದ ಕಡೆಗೆ ಈ ದಿನ ನಿಮಗೆ ಸೆಳೆತ ಇರಲಿದೆ. ನಿಮ್ಮಲ್ಲಿ ಕೆಲವರು ಧ್ಯಾನ- ಯೋಗ ಶಿಬಿರ ಇಂಥವುಗಳಲ್ಲಿ ಭಾಗೀ ಆಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮಗೆ ಕಿರಿಕಿರಿ ಮಾಡುತ್ತಾ ಇದ್ದ ವ್ಯಕ್ತಿ ಅಥವಾ ಗುಂಪು ಸಮಸ್ಯೆಗೆ ಸಿಲುಕಿಕೊಳ್ಳಲಿದ್ದು, ಇದರಿಂದ ಸಮಾಧಾನ ಮೂಡಲಿದೆ. ಸುಗಂಧ ದ್ರವ್ಯಗಳು, ಬೆಲೆಬಾಳುವ ರತ್ನಗಳ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದ್ದು, ನಿಮ್ಮ ಆತ್ಮವಿಶ್ವಾಸ ಜಾಸ್ತಿ ಆಗುತ್ತದೆ. ಕಫ, ನೆಗಡಿ, ಕೆಮ್ಮು- ಜ್ವರದಂಥ ಸಮಸ್ಯೆಯಿಂದ ದೈಹಿಕವಾಗಿ ಸುಸ್ತು ಹಾಗೂ ನಿರಾಸಕ್ತಿ ಕಾಡಲಿದೆ.

ಲೇಖನ- ಎನ್‌.ಕೆ.ಸ್ವಾತಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ವ್ಯಾಪಾರವೋ ವ್ಯವಹಾರವೋ ದೊಡ್ಡದಾಗಿ ಬೆಳೆಯುವ ಸೂಚನೆ ಸಿಗಲಿದೆ – Kannada News | Numerology Prediction January 7 : Birth Numbers 1 3 Daily Horoscope and Lucky Tips

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನೀವು ಇರುವಂಥ ಸ್ಥಳದಲ್ಲಿ ಸಕಾರಾತ್ಮಕ ವಾತಾವರಣ ಇರಲಿದೆ. ಆಲೋಚನೆಗಳಲ್ಲೂ ಸ್ಪಷ್ಟ ಚಿಂತನೆ, ಸರಿಯಾದ ಮಾರ್ಗದಲ್ಲಿ ನಡೆಯುವುದು ಇತ್ಯಾದಿ ಶುಭ ವಿಚಾರಗಳು ಅನುಭವಕ್ಕೆ ಬರಲಿದೆ. ಲಾಭ ಬರುತ್ತದೆ ಎಂಬ ಕಾರಣಕ್ಕೆ ಈಗಾಗಲೇ ತೆಗೆದುಕೊಂಡಂಥ ನಿರ್ಧಾರವನ್ನು ಬದಲಾಯಿಸುವುದಕ್ಕೆ ಹೋಗಬೇಡಿ. ಸ್ನೇಹಿತರ ಬಳಿ ನೀವೇನಾದರು ಸಹಾಯ ಕೇಳಿದ್ದಲ್ಲಿ ಅದು ದೊರೆಯುವ ಎಲ್ಲ ಸಾಧ್ಯತೆ ಇದೆ. ದೀರ್ಘ ಕಾಲದ ಹೂಡಿಕೆಗೆ ಸಂಬಂಧಿಸಿದಂತೆ ಮಹತ್ತರ ಎನಿಸಿದ ಯೋಜನೆ ರೂಪಿಸಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಯಾವುದಕ್ಕೂ ಇರಲಿ ಅಂತ ಮುಂಜಾಗ್ರತೆಯಿಂದ ನೀವು ಸಂಗ್ರಹಿಸಿಟ್ಟು ಕೊಂಡಿದ್ದ ದಾಖಲೆಗಳು ಈ ದಿನ ನಿಮ್ಮ ಸಹಾಯಕ್ಕೆ ಬರಲಿವೆ. ಆರ್ಥಿಕವಾಗಿ ಕೂಡ ಸಕಾರಾತ್ಮಕ ಬೆಳವಣಿಗೆ ಆಗುವ ಸುಳಿವು ಸಿಗಲಿದೆ. ಊಟ- ತಿಂಡಿ ವಿಚಾರದಲ್ಲಿ ಸ್ವಲ್ಪ ಮಟ್ಟಿಗೆ ಶಿಸ್ತಿನಿಂದ ನಡೆದುಕೊಳ್ಳಿ. ಒಂದು ವೇಳೆ ಈಗಾಗಲೇ ವೈದ್ಯರು ಆಹಾರ ಪಥ್ಯವನ್ನು ಸೂಚಿಸಿದ್ದಲ್ಲಿ ಕಡ್ಡಾಯವಾಗಿ ಪಾಲಿಸಿ. ಆಯುರ್ವೇದ ಅಥವಾ ಜ್ಯೋತಿಷ್ಯ ರೀತಿಯಾಗಿ ಅನುಕೂಲ ತರುವಂಥ ಕೆಲವು ವಸ್ತುಗಳನ್ನು ಮನೆಗೆ ತರುವ ಯೋಗ ಈ ದಿನ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಮರೆವು ಈ ದಿನ ನಿಮಗೆ ಸಮಸ್ಯೆ ತರಬಹುದು. ಮುಖ್ಯವಾದ ಕೆಲಸಗಳನ್ನು ಒಪ್ಪಿಕೊಂಡಿದ್ದಲ್ಲಿ ಅದನ್ನು ನೆನಪಿಸುವ ರೀತಿಯಲ್ಲಿ ಮೊಬೈಲ್ ಫೋನ್ ನಲ್ಲಿ ರಿಮೈಂಡರ್ ಹಾಕಿಟ್ಟುಕೊಂಡು, ಅಥವಾ ಒಂದು ಪುಸ್ತಕದಲ್ಲಿ ಬರೆದಿಡುವುದೋ ಮಾಡಿ. ಸಣ್ಣ ಮಟ್ಟದಲ್ಲಿ ಶುರು ಮಾಡಿದ್ದ ವ್ಯಾಪಾರವೋ ವ್ಯವಹಾರವೋ ದೊಡ್ಡದಾಗಿ ಬೆಳೆಯುವ ಸೂಚನೆಯನ್ನು ನೀಡಲಿದೆ. ಭವಿಷ್ಯದಲ್ಲಿ ನಿಮಗೆ ಸಹಾಯ ಆಗಲಿರುವ ಪ್ರಭಾವಿ ವ್ಯಕ್ತಿಯೊಬ್ಬರ ಪರಿಚಯದಿಂದ ಆತ್ಮವಿಶ್ವಾಸ ಜಾಸ್ತಿ ಆಗಲಿದೆ.

ಲೇಖನ- ಎನ್‌.ಕೆ.ಸ್ವಾತಿ

Source link

Horoscope Today 07 January: ಇಂದು ಈ ರಾಶಿಯವರ ಜಾಣತನಕ್ಕೆ ಭಾರೀ ಮೆಚ್ಚುಗೆ ಸಿಗಲಿದೆ – Kannada News | Horoscope Today in Kannada on 07 January Wednesday; Dina Bhavishya Tithi Panchanga Details here

ಮೇಷ ರಾಶಿ :

ಇಂದಿನ ಮುಖ್ಯ ಕಾರ್ಯವನ್ನು ಮುಂದೂಡುವುದು ಬೇಡ. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವಿರುವಂತೆ ಮಾಡುವಿರಿ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು. ಬಹಳ ಎಚ್ಚರಿಕೆಯಿಂದ ಕಾರ್ಯವನ್ನು ಮಾಡಿ. ಇಂದು ನಿಮ್ಮದೇ ಸ್ವಂತ ಕಾರ್ಯಗಳು ಇರಲಿದ್ದು, ಬೇರೆ ಕೆಲಸಕ್ಕೆ ಮನಸ್ಸು ಕೊಡುವುದು ಕಷ್ಟವಾದೀತು‌. ಒತ್ತಾಯದಿಂದ ಕೆಲಸವನ್ನು ಮಾಡಬೇಕಾದೀತು. ಹಂಚಿಕೆಯ ಬಗ್ಗೆಯೂ ಸರಿಯಾದ ಆಲೋಚನೆ ಮಾಡುವಿರಿ.

ವೃಷಭ ರಾಶಿ:

ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ಹೊಸ ವಿಷಯಗಳತ್ತ ಉತ್ಸಾಹವೇ ಇರಲಿದ್ದು, ಇದು ತಾತ್ಕಾಲಿಕ ಅಷ್ಟೇ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಶ್ರಮದಿಂದ ನ್ಯಾಯಾಲಯಲ್ಲಿ ಗೆಲುವನ್ನು ಸಾಧಿಸುವಿರಿ. ನಿಮ್ಮಲ್ಲಿ ಅನಾರೋಗ್ಯದ ಭಯವು ಇರುವುದು. ಹಿರಿಯರಿಂದ ನಿಮ್ಮ ಜೀವನಕ್ಕೆ ಮಾರ್ಗದರ್ಶನ ಸಿಗಲಿದೆ. ನೌಕರರಿಲ್ಲದೇ ಉದ್ಯಮಕ್ಕೆ ಅಡ್ಡಿಯಾದೀತು. ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ನಿಶ್ಚಿಂತೆಯಿಂದ ಇರಬೇಕೆಂದುಕೊಂಡರೂ ಕೆಲಸಗಳು ಬರುವುದು. ಮಾತಿನ ತಂತ್ರವು ಫಲಿಸುವುದು. ನಿಮ್ಮ ಕಾರ್ಯಗಳಲ್ಲಿ ಸಾವಧಾನತೆ ಇರಲಿದೆ.

ಮಿಥುನ ರಾಶಿ:

ಬಿಂಬದಂತೆ ಪ್ರತಿಬಿಂಬ ಕಾಣಿಸುವುದು. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಒಂದೇ ವಿಚಾರವನ್ನು ಎಲ್ಲರಿಂದಲೂ ಕೇಳಿ ಜಿಗುಪ್ಸೆ ಬಂದೀತು. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ನಿಮ್ಮ ಇಂದಿನ ಕಾರ್ಯದಿಂದ‌ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು. ನಿಮ್ಮವರೇ ನಿಮ್ಮ‌ ಯಶಸ್ಸನ್ನು ಸಹಿಸದೇ ತೊಂದರೆ ಕೊಡುವರು. ಹಣವನ್ನು ಸರಿಯಾಗಿ ಸಂಗ್ರಹಿಸಿ, ಕೂಡಿಡಿ. ಸಾಲದಿಂದ ನೀವು ಬೇಗ ಮುಕ್ತರಾಗುವಿರಿ. ಬೆಂಬಲಕ್ಕೆ‌ ನಿಂತವರನ್ನು ಮರೆಯುವುದು ಬೇಡ. ಕೈಲಾದ ಸಹಕಾರವನ್ನು ಮಾಡಿ. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಅಹಂಕಾರದಂತೆ ತೋರುವುದು. ಅಧಿಕಾರದ ಮಾತುಗಳನ್ನು ಕಡಿಮೆ ಮಾಡಿ.

ಕರ್ಕಾಟಕ ರಾಶಿ:

ಸತತ ಸೋಲಿನಿಂದ ಉತ್ಸಾಹವೂ ಕುಗ್ಗಬಹುದು. ಗೆಳೆಯರ ಸಹಕಾರವು ನಿಮಗೆ ಬೇಕೆನಿಸುವುದು. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನುಗ್ಗಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಟ್ಟು ಪ್ರಗತಿ ಕಾಣಬಹುದು. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ಭೂಮಿಯ ಉತ್ಪನ್ನಗಳಿಂದ ಲಾಭವು ಸಿಗುವುದು. ಆತುರದಲ್ಲಿ ಯಾವ ನಿರ್ಧಾರವನ್ನೂ ಮಾಡದೇ ಯೋಚಿಸಿ ಮುಂದುವರಿಯಬೇಕಾಗುವುದು. ಕುಟುಂಬದಲ್ಲಿ ಬಂದ ಭಿನ್ನಾಭಿಪ್ರಾಯವನ್ನು ನೀವು ಸರಿ ಮಾಡಲು ನೀವು ಸಮರ್ಥರಾಗುವಿರಿ. ಸಮೀಪದ ಬಂಧುಗಳ ವಿಯೋಗವೂ ಆಗಬಹುದು. ನಿಮಗೆ ಇದು ನಂಬಲಾಗದ ವಿಚಾರವೂ, ಸಹಿಸಲು ಅಸಾಧ್ಯವೂ ಆಗಬಹುದು. ಎಲ್ಲವುದನ್ನೂ ತಾನೇ ಮಾಡುವುದು ಎಂಬ ಮನೋಭಾವವಿರುವುದು.

ಸಿಂಹ ರಾಶಿ:

ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು.‌ ಹಣಕಾಸಿನ ವ್ಯವಹಾರದಲ್ಲಿ ಅಪರಿಚಿತರ ಆಗಮನವಾಗಬಹುದು. ಅಧಿಕ ವಿಶ್ವಾಸದಿಂದ ಕಾರ್ಯದ ಹಾನಿಯಾಗಬಹುದು. ಸದ್ಯವಷ್ಟೇ ಸಾಲದಿಂದ ಮುಕ್ತರಾಗಿದ್ದರೂ ಅನಾರೋಗ್ಯದ ಕಾರಣಕ್ಕೆ ಪುನಃ ಸಾಲ ಮಾಡಬೇಕಾಗಿ ಬರಬಹುದು. ನಿಮಗೆ ಯಾರದ್ದಾದರೂ ಮಾತು ಅಧಿಕಾರದಂತೆ ತೋರೀತು.

ಕನ್ಯಾ ರಾಶಿ:

ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ಸಂಗಾತಿಯ ಪ್ರೀತಿಯನ್ನು ಹೋಲಿಸಿಕೊಳ್ಳುವುದು ಬೇಡ. ಹೊಸತನಕ್ಕೆ ನೀವು ಒಗ್ಗುವುದು ಕಷ್ಟವಾದೀತು. ನಿಮ್ಮ ನಿಷ್ಠೆಯನ್ನು ಬದಲಾಯಿಸುವುದು ಬೇಡ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು. ಆಸ್ತಿಯನ್ನು ಅನ್ಯರಿಗೆ ಕೊಡುವ ಚಿಂತನೆಯೂ ನಿಮ್ಮ ಮನಸ್ಸಿಗೆ ಬರಬಹುದು. ಇಂದು ನೀವು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ವೃತ್ತಿಯ ಸ್ಥಳದಲ್ಲಿ ಪ್ರೇಮವು ಅಂಕುರಿಸುವುದು. ಮಕ್ಕಳಿಂದ ನೀವು ಅನಾದರಕ್ಕೆ ಒಳಗಾಗಬಹುದು. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ನೀವು ಅಗತ್ಯ ಸಹಾಯವನ್ನು ಪಡೆಯುತ್ತೀರಿ.

ತುಲಾ ರಾಶಿ:

ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವಿರಿ. ವಾಹನ ಓಡಾಡವು ಸುಖಕರವಲ್ಲ. ತಾಯಿಗೆ ಕೊಡುವ ಗೌರವವು ಕಡಿಮೆ ಆದೀತು. ಮೇಲಧಿಕಾರಿಗಳ ಮಾತಿನಿಂದ ಮನಸ್ಸು ತಲ್ಲಣಿಸಬಹುದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು. ಇಂದು ವಾಸದ ಮನೆಯನ್ನು ಬದಲಿಸುವಿರಿ. ಆಹಾರವನ್ನು ಮಿತಿವಾಗಿಯೂ ಹಾಗೂ ಬದಲಾವಣೆಯನ್ನೂ ಮಾಡಿಕೊಳ್ಳುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ನಿಮ್ಮ ಬಗ್ಗೆ ಸಹೋದ್ಯೋಗಿಗಳು ಆಡಿಕೊಳ್ಳುವರು. ಅನ್ಯರ ಹಂಗಿನಲ್ಲಿ ಇರುವಂತೆ ಭಾಸವಾಗಬಹುದು.

ವೃಶ್ಚಿಕ ರಾಶಿ:

ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾದೀತು. ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಹೊಗಳಿಕೆಯಿಂದ ನಿಮಗೆ ಬೇಕಾದುದನ್ನು ಪಡೆದುಕೊಳ್ಳುವಿರಿ. ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ‌ ಬೇಡ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮದಾದ ಜೀವನಕ್ರಮವು ನಿಮಗೆ ಹಿಡಿಸದೇ ಇರಬಹುದು. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ. ವೃತ್ತಿಯನ್ನು ಸಂತೋಷದಿಂದ ಮಾಡುವುದನ್ನು ಕಲಿಯಬೇಕಾಗಬಹುದು. ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು.

ಧನು ರಾಶಿ:

ನಿಮ್ಮ ಸಂಬಂಧಗಳ ಬಗ್ಗೆ ಇಂದು ಹೆಚ್ಚು ಆಲೋಚಿಸುವಿರಿ.‌ ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ನಿಮ್ಮ ಮನಸ್ಸಿನಲ್ಲಿ ತಳಮಳವಾಗುವುದು. ಅಧಿಕಾರಿಗಳಾಗಿದ್ದರೆ ನೀವೇ ಇಂದು ಆಗಬೇಕಾದ ಕಾರ್ಯಗಳ ಪರಿಶೀಲನೆ ಮಾಡುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು. ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ನಿಮ್ಮ ಕೆಲಸವು ಪೂರ್ಣವಾಗದೇ ಹೇಳಿಸಿಕೊಳ್ಳುವಿರಿ. ಸಿಟ್ಟಿನಿಂದ ನಿಮ್ಮ ಮನೋವಿಕಾರವು ಆಗಬಹುದು.

ಮಕರ ರಾಶಿ:

ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸ್ತ್ರೀಯರಲ್ಲಿ ಸಹಾಯವನ್ನು ಕೇಳಲು ಹಿಂಜರಿಯುವಿರಿ. ನಿಮಗೆ ಇಷ್ಟವಾದದನ್ನು ಪಡೆಯುವ ಕಡೆಗೆ ಗಮನ ಇರಲಿ. ನೀವು ವೃತ್ತಿಯನ್ನು ಮಾಡುತ್ತಲೇ ಉನ್ನತ ಪದವಿಯನ್ನು ಪಡೆಯುವಿರಿ. ಯಶಸ್ಸು ನಿಮ್ಮ ಹಿಂದೆ ತಾನಾಗಿಯೇ ಬರುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಸಾಧ್ಯವಾಗುವ ಕೆಲಸದ‌ ಕಡೆ ನಿಮ್ಮ ಗಮನ ಹೆಚ್ಚಿರಲಿ. ಬಡ್ತಿಗಾಗಿ ಮೇಲಧಿಕಾರಿಗಳ ಜೊತೆ ಮಾತನಾಡುವಿರಿ. ನಿಮ್ಮ ಸಾಮರ್ಥ್ಯವನ್ನು ಇತರರಿಗೆ ನೀವೇ ತಿಳಿಸಬೇಕಾಗುವುದು. ಹಿರಿಯರ ಎದುರು ಅಹಂಕಾರವನ್ನು ತೋರಿಸುವುದು ಬೇಡ.

ಕುಂಭ ರಾಶಿ:

ನಿಮ್ಮ ಸ್ವಭಾವದಿಂದ ನಿಮಗೆ ಕಿರಿಕಿರಿಯಾಗಬಹುದು. ಇನ್ನೊಬ್ಬರ ಮಾತುಗಳನ್ನು ನೀವು ಸಹಿಸುವುದು ಕಷ್ಟವಾದೀತು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ.‌ ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಆರೋಗ್ಯದ ಬಗ್ಗೆ ಆತಂಕ ಬೇಡ. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ. ಪಶ್ಚಾತ್ತಾಪವು ನಿಮ್ಮ ನೋವನ್ನು ಪರಿಹರಿಸೀತು. ನಿಮ್ಮ‌ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು.‌ ಸ್ನೇಹಿತರು ನಿಮ್ಮನ್ನು ಇಷ್ಟಪಡುವರು. ಮಾತು ನೇರವಾಗಿದ್ದರೂ ಇತರರು ಇಷ್ಟಪಡುವಂತೆ ಇರುವುದು.

ಮೀನ ರಾಶಿ:

ಸಾಮಾಜಿಕ ಜಾಲತಾಣದಿಂದ ಸಮಸ್ಯೆಗೆ ಸಿಕ್ಕಿಕೊಳ್ಳುವಿರಿ. ದುಷ್ಟ ಮಾನಸಿಕತೆಯು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಅನಿರೀಕ್ಷಿತ ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ. ಪಾಲುದಾರಿಕೆಯಲ್ಲಿ ನಿಮಗೆ ಆಸಕ್ತಿಯು ಕಡಿಮೆಯಾಗಬಹುದು. ತಿಳಿದವರ ಜೊತೆ ಆಧ್ಯಾತ್ಮಿಕ ವಿಚಾರವನ್ನು ಚರ್ಚಿಸಿ. ಯಾರಾದರೂ ಕರ್ತವ್ಯದ ಬಗ್ಗೆ ನಿಮ್ಮನ್ನು ಎಚ್ಚರಿಸಬಹುದು. ಏರುದನಿಯಲ್ಲಿ ಮಾತನಾಡುವುದು ಬೇಡ. ಆದಾಯದ ಮೂಲವನ್ನು ಸರಿಯಾಗಿ ಇಟ್ಟುಕೊಳ್ಳಿ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ.

ಜನವರಿ 07,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಶ್ರವಣಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ತೃತೀಯಾ / ಚತುರ್ಥೀ ನಿತ್ಯನಕ್ಷತ್ರ : ಆಶ್ಲೇಷಾ ಯೋಗ : ಅತಿಗಂಡ, ಕರಣ : ಬವ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 09 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12-31 – 13:55, ಯಮಗಂಡ ಕಾಲ 08:17 – 09:41, ಗುಳಿಕ ಕಾಲ 11:06 – 12:31

-ಲೋಹಿತ ಹೆಬ್ಬಾರ್-8762924271 (what’s app only)

Source link

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ – Kannada News | Cold Wave and Dense Fog in Chandigarh Sukhna Lake Watch Viral Video

ಚಂಡೀಗಢ, ಜನವರಿ 6: ನವೆಂಬರ್ ಆರಂಭದಿಂದಲೂ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದೀಗ ಚಂಡೀಗಢದ ಸುಕ್ಮಾ ಸರೋವರವು ಭಾರೀ ಹಿಮಪಾತಕ್ಕೆ (Snowfall) ಸಾಕ್ಷಿಯಾಗುತ್ತಿದೆ. ಇದರಿಂದಾಗಿ, ಈ ಸರೋವರವು ಹಿಮದಿಂದ ಆವೃತವಾಗಿರುವಂತೆ ಕಾಣುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್ – Kannada News | Dhruvanth defeats Gilli Nata in Ticket to Top 6 task in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್​​ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್​​ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ (Gilli Nata) ಅವರು ‘ಟಿಕೆಟ್ ಟು ಟಾಪ್ 6’ ಆಟದಿಂದ ಹೊರಗೆ ಉಳಿಯುವಂತಾಗಿದೆ.

ಆರಂಭದಲ್ಲಿ ಒಂದು ಟ್ವಿಸ್ಟ್ ನೀಡಲಾಗಿತ್ತು. ಮನೆಯ ಕ್ಯಾಪ್ಟನ್ ಧನುಷ್ ಅವರು ಒಬ್ಬರನ್ನು ‘ಟಿಕೆಟ್ ಟು ಟಾಪ್ 6’ ಆಟದಿಂದ ಹೊರಗೆ ಇಡಬೇಕು ಎಂದು ಸೂಚಿಸಲಾಯಿತು. ಆಗ ಧನುಷ್ ಅವರು ಧ್ರುವಂತ್ ಹೆಸರನ್ನು ಹೇಳಿದರು. ಆದರೆ ಧ್ರುವಂತ್ ಅವರು ತಮ್ಮನ್ನು ತಾವು ಸಮರ್ಥರು ಎಂದು ಸಾಬೀತು ಮಾಡಿಕೊಳ್ಳಲು ಒಂದು ಅವಕಾಶ ನೀಡಲಾಯಿತು.

ತಮ್ಮ ಎದುರಾಳಿಯನ್ನು ಆಯ್ಕೆ ಮಾಡಿಕೊಂಡು ಟಾಸ್ಕ್ ಗೆಲ್ಲುವಂತೆ ಸವಾಲು ಒಡ್ಡಲಾಯಿತು. ಆಗ ಧ್ರುವಂತ್ ಅವರು ಗಿಲ್ಲಿಯನ್ನು ಎದುರಾಳಿಯಾಗಿ ಆಯ್ಕೆ ಮಾಡಿಕೊಂಡರು. ಇಬ್ಬರ ನಡುವೆ ಟಾಸ್ಕ್ ನಡೆಯಿತು. ತೀವ್ರ ಹಣಾಹಣಿ ಬಳಿಕ ಧ್ರುವಂತ್ ಅವರು ವಿನ್ ಆದರು. ಆಟದಲ್ಲಿ ಸೋತ ಗಿಲ್ಲಿ ನಟ ಅವರು ‘ಟಿಕೆಟ್ ಟು ಟಾಪ್ 6’ ಆಟದಿಂದ ಔಟ್ ಆದರು.

ಗಿಲ್ಲಿ ಅವರಿಗೆ ಇದರಿಂದ ತೀವ್ರ ಹಿನ್ನಡೆ ಆಗಿದೆ. ಹಾಗಾಗಿ ಕಾವ್ಯಾ, ರಘು, ರಾಶಿಕಾ, ರಕ್ಷಿತಾ, ಧನುಷ್ ಅವರಿಗೆ ಶಾಕ್ ಆಗಿದೆ. ಅಲ್ಲದೇ ಗಿಲ್ಲಿಯನ್ನು ಬೆಂಬಲಿಸುವ ಪ್ರೇಕ್ಷಕರಿಗೂ ಬೇಸರ ಆಗಿದೆ. ಮುಂದಿನ ದಿನಗಳಲ್ಲಿ ಗಿಲ್ಲಿ ಅವರ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಯೋಚಿಸಲಾಗುತ್ತಿದೆ. ಫಿನಾಲೆಯ ಟಿಕೆಟ್ ಪಡೆಯಲು ಎಲ್ಲರೂ ಕಷ್ಟಪಟ್ಟು ಆಟ ಆಡುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಧನುಷ್ ಬಿಟ್ಟು ಇಡೀ ಮನೆ ನಾಮಿನೇಟ್; ಗಿಲ್ಲಿಗೆ ದೊಡ್ಡ ಶಾಕ್

ಮೊದಲಿನಿಂದಲೂ ಧ್ರುವಂತ್ ಅವರನ್ನು ಗಿಲ್ಲಿ ನಟ ಸಿಕ್ಕಾಪಟ್ಟೆ ಹೀಯಾಳಿಸುತ್ತಿದ್ದರು. ಅಲ್ಲದೇ ಧ್ರುವಂತ್ ಅವರು ಅಶ್ವಿನಿ ಗೌಡ ಜೊತೆ ಕ್ಲೋಸ್ ಆಗಿರುವ ಕಾರಣಕ್ಕೆ ಅವರನ್ನು ಗಿಲ್ಲಿ ನಟ ಟಾರ್ಗೆಟ್ ಮಾಡಿದ್ದರು. ಆದರೆ ಈಗ ಕೊನೇ ಹಂತದಲ್ಲಿ ಧ್ರುವಂತ್ ಅವರಿಂದಲೇ ಗಿಲ್ಲಿ ನಟ ಸೋಲುವಂತಾಯಿತು. ಹಾಗಾಗಿ ಧ್ರುವಂತ್ ಅವರು ಈ ಗೆಲುವಿನ ಬಳಿಕ ಭರ್ಜರಿಯಾಗಿ ಸಂಭ್ರಮಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL: ಬಾಂಗ್ಲಾದೇಶ ಸೇರಿದಂತೆ ಈ ದೇಶಗಳಲ್ಲಿ ಐಪಿಎಲ್ ಪ್ರಸಾರ ನಿಷೇಧ – Kannada News | IPL Ban: Why Bangladesh Stopped Broadcast and Which Countries Don’t Show It

ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್​ನಿಂದ (IPL) ಕೈಬಿಟ್ಟ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಬಾಂಗ್ಲಾದೇಶ ಸರ್ಕಾರ ಭಾರತದ ವಿರುದ್ಧ ಸಮರ ಸಾರಿವೆ. ಮುಸ್ತಾಫಿಜುರ್ ಅವರನ್ನು ಕೈಬಿಟ್ಟ ನಂತರ ಬಾಂಗ್ಲಾದೇಶ, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡಲು ನಿರಾಕರಿಸಿದೆ. ಬಾಂಗ್ಲಾದೇಶದ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಬೇಕೆಂದು ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಏತನ್ಮಧ್ಯೆ, ಬಾಂಗ್ಲಾದೇಶ ಸರ್ಕಾರವು ಐಪಿಎಲ್ ಪ್ರಸಾರವನ್ನು ನಿಷೇಧಿಸಿದೆ.

ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಪಂದ್ಯಾವಳಿಯನ್ನು 120 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಾರ ಮತ್ತು ನೇರ ಪ್ರಸಾರ ಮಾಡಲಾಗುತ್ತದೆ. ಐಪಿಎಲ್ ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಕ್ರಿಕೆಟ್ ಪಂದ್ಯಾವಳಿಯಾಗಿದೆ. ಆದರೆ ಕೆಲವು ದೇಶಗಳು ಈ ಪಂದ್ಯಾವಳಿಯ ಪ್ರಸಾರವನ್ನು ನಿಷೇಧಿಸಿವೆ. ಬಾಂಗ್ಲಾದೇಶವನ್ನು ಹೊರತುಪಡಿಸಿ ಯಾವ ದೇಶಗಳು ಐಪಿಎಲ್ ಪ್ರಸಾರ ಮಾಡುವುದಿಲ್ಲ ಎಂಬುದನ್ನು ನೋಡುವುದಾದರೆ..

ಪಾಕಿಸ್ತಾನದಲ್ಲೂ ಐಪಿಎಲ್ ನಿಷೇಧ

ಬಾಂಗ್ಲಾದೇಶ ಇತ್ತೀಚೆಗೆ ಐಪಿಎಲ್ ಅನ್ನು ನಿಷೇಧಿಸಿದೆ. ಬಾಂಗ್ಲಾದೇಶಕ್ಕೂ ಮೊದಲು ಪಾಕಿಸ್ತಾನ ಐಪಿಎಲ್ ಪ್ರಸಾರವನ್ನು ನಿಷೇದಿಸಿತ್ತು. ಕಳೆದ ಹಲವಾರು ವರ್ಷಗಳಿಂದ, ಪಾಕಿಸ್ತಾನದಲ್ಲಿ ಟಿವಿ ಚಾನೆಲ್‌ಗಳು ಅಥವಾ ಪ್ಲಾಟ್‌ಫಾರ್ಮ್‌ಗಳಲ್ಲಿ ಐಪಿಎಲ್ ಪ್ರಸಾರ ರದ್ದಾಗಿದೆ. ಪಾಕಿಸ್ತಾನದಲ್ಲಿ ಐಪಿಎಲ್ ವೀಕ್ಷಿಸಲು ವಿಪಿಎನ್‌ಗಳನ್ನು ಬಳಸಲಾಗುತ್ತದೆ. ಆದರೆ ಐಪಿಎಲ್ ಅನ್ನು ಅಧಿಕೃತವಾಗಿ ಪ್ರಸಾರ ಮಾಡುವುದಿಲ್ಲ.

ಮತ್ತೊಂದೆಡೆ, ಆಫ್ರಿಕಾ ಖಂಡ ಮತ್ತು ಮಧ್ಯ ಏಷ್ಯಾ ಅಥವಾ ಸಣ್ಣ ದ್ವೀಪ ರಾಷ್ಟ್ರಗಳಲ್ಲಿ ಕ್ರಿಕೆಟ್ ಜನಪ್ರಿಯವಾಗಿಲ್ಲ. ಹೀಗಾಗಿ ಈ ಸ್ಥಳಗಳಲ್ಲಿಯೂ ಐಪಿಎಲ್ ಪ್ರಸಾರವಾಗುವುದಿಲ್ಲ. ಆದರೆ ಯುಪ್‌ಟಿವಿಯಂತಹ ವೇದಿಕೆಗಳು 70 ಕ್ಕೂ ಹೆಚ್ಚು ದೇಶಗಳಲ್ಲಿ ಸ್ಟ್ರೀಮಿಂಗ್ ಮಾಡುತ್ತಿವೆ. ಇದರಲ್ಲಿ ಕಾಂಟಿನೆಂಟಲ್ ಯುರೋಪ್, ಮಧ್ಯ ದಕ್ಷಿಣ ಅಮೆರಿಕಾ, ಆಗ್ನೇಯ ಏಷ್ಯಾದ ಕೆಲವು ಭಾಗಗಳು, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾದಂತಹ ದೇಶಗಳು ಸೇರಿವೆ. ಆದ್ದರಿಂದ ಐಪಿಎಲ್ ಪ್ರಸಾರವಾಗದ ದೇಶಗಳು ಬಹಳ ಕಡಿಮೆ.

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ

ಬಾಂಗ್ಲಾದೇಶದಲ್ಲಿ ಐಪಿಎಲ್ ಜನಪ್ರಿಯ

ಬಾಂಗ್ಲಾದೇಶದಲ್ಲಿ ಐಪಿಎಲ್ ಅಭಿಮಾನಿಗಳು ತುಂಬಾ ಇದ್ದಾರೆ. ಏಕೆಂದರೆ ಬಾಂಗ್ಲಾದೇಶದ ಅನೇಕ ಆಟಗಾರರು ಐಪಿಎಲ್ ಪಂದ್ಯಾವಳಿಯಲ್ಲಿ ಆಡಿದ್ದಾರೆ. ಕ್ರಿಕೆಟಿಗರಾದ ಅಬ್ದುರ್ ರಜಾಕ್, ಮೊಹಮ್ಮದ್ ಅಶ್ರಫುಲ್, ಮಶ್ರಫೆ ಮೊರ್ತಾಜಾ, ಲಿಟನ್ ದಾಸ್, ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಲ್ಲಿ ಆಡಿದ್ದಾರೆ. ಬಾಂಗ್ಲಾದೇಶದಲ್ಲಿ ಟಿ ಸ್ಪೋರ್ಟ್ಸ್ ಮೂಲಕ ಐಪಿಎಲ್ ಪ್ರಸಾರವಾಗುತ್ತಿತ್ತು. ಆದರೆ ಈಗ ಬಾಂಗ್ಲಾದೇಶ ಸರ್ಕಾರ ಅದನ್ನು ನಿಷೇಧಿಸಿದೆ. ಆದ್ದರಿಂದ, ಬಾಂಗ್ಲಾದೇಶದಲ್ಲಿರುವ ಐಪಿಎಲ್ ಪ್ರಿಯರು ಇನ್ನು ಮುಂದೆ ಈ ಪಂದ್ಯಾವಳಿಯನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು – Kannada News | IT Complaint Filed Against Minister Zameer Over 25 Lakh Cash Payment in Bellari Incident

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಮೃತಪಟ್ಟ ಕಾಂಗ್ರೆಸ್​​​ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ನಗದನ್ನು ಪರಿಹಾರವಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗಿದೆ. ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು ದೂರು ನೀಡಿದ್ದು, ಸಚಿವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಯಾವುದೇ ಆರ್ಥಿಕ ವ್ಯವಹಾರವನ್ನು ಬ್ಯಾಂಕಿಂಗ್ ಮಾರ್ಗದ ಮೂಲಕವೇ ನಡೆಸಬೇಕು ಎಂಬ ನಿಯಮವನ್ನು ಸಚಿವರು ಉಲ್ಲಂಘಿಸಿದ್ದಾರೆ. ಈ ನಗದು ಹಣದ ಮೂಲ ಮತ್ತು ಅದು ಲೆಕ್ಕಪತ್ರಕ್ಕೆ ಸಿಗುವ ಹಣವೇ ಅಥವಾ ಕಪ್ಪು ಹಣವೇ ಎಂಬ ಬಗ್ಗೆ ತನಿಖೆ ನಡೆಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link