Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು – Kannada News | Congress Leader Sonia Gandhi Admitted to Hospital in Delhi
ನವದೆಹಲಿ, ಜನವರಿ 06: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಕೆಲವು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿತ್ತು. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಕೆಮ್ಮು ಕಡಿಮೆಯಾಗುತ್ತಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಸೋನಿಯಾ ಗಾಂಧಿಗೆ ಡಿಸೆಂಬರ್ನಲ್ಲಿ 79 ವರ್ಷ ತುಂಬಿತ್ತು. ಕೆಲವು ತಿಂಗಳ ಹಿಂದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ದೆಹಲಿಯ ಸರ್ ಗಂಗಾ…