‘ಜನ ನಾಯಗನ್’ ರಿಲೀಸ್ಗೆ ಸಂಕಷ್ಟ? ಇನ್ನೂ ಸಿಕ್ಕಿಲ್ಲ ಸೆನ್ಸಾರ್ ಪತ್ರ – Kannada News | Jana Nayagan Movie Team in Trouble Censor Certificate not issued amid Release Preparation
ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದಾಗ ಅದಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಈ ರೀತಿ ಆಗಬಾರದು ಎಂಬ ಕಾರಣದಿಂದ ನಿರ್ಮಾಪಕರು ಈ ಬಗ್ಗೆ ಹೆಚ್ಚು ಜಾಗೃತಿವಹಿಸುತ್ತಾರೆ. ಸೆನ್ಸಾರ್ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ‘ಜನ ನಾಯಗನ್’ ಸಿನಿಮಾ (Jana Nayagan Movie) ಕೂಡ ಇದೇ ಕೆಲಸ ಮಾಡಿತ್ತು. ಆದರೆ, ಸೆನ್ಸಾರ್ ಮಂಡಳಿಯವರು ಸಿನಿಮಾ ನೋಡಿ ತಿಂಗಳಾದರೂ ಸೆನ್ಸಾರ್ ಪತ್ರ ಸಿಕ್ಕಿಲ್ಲ. ಸಿನಿಮಾ ರಿಲೀಸ್ಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಇದು ತಂಡದ ಚಿಂತೆಗೆ ಕಾರಣ…