ತುಮಕೂರು, ಜನವರಿ 06: ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪೇಂದ್ರ (Upendra) ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶನ ಮಾಡಿ, ವಿಲನ್ ಪಾತ್ರಗಳಲ್ಲಿ ಮಿಂಚಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಉಪೇಂದ್ರ 35 ವರ್ಷಗಳ ಹಿಂದೆ ನಟಿಸಿದ್ದ ಧಾರಾವಾಹಿಯ ಕ್ಲಿಪ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಆ ಧಾರಾವಾಹಿಯ ಕ್ಲಿಪ್ ಹಾಗೂ ಅದರ ವಿವರ ಈ ಸ್ಟೋರಿಯಲ್ಲಿ ಇದೆ.
ಉಪೇಂದ್ರ ಅವರು 1989ರ ‘ಅನಂತನ ಅವಾಂತರ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದರು. ಈ ಸಮಯದಲ್ಲಿ ಅವರು ಯಾವುದೇ ಅವಕಾಶ ಸಿಕ್ಕರೂ ಮಾಡುತ್ತಿದ್ದರು. 1991ರಲ್ಲಿ ದೂದರ್ಶನದಲ್ಲಿ ಪ್ರಸಾರ ಆಗಿದ್ದ, ‘ನಿರ್ಮಲೆಯ ಸಾಕ್ಷಿ’ ಧಾರಾವಾಹಿಯಲ್ಲಿ ಉಪ್ಪಿ ಕಾಣಿಸಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದೆ. ಉಪೇಂದ್ರ ಅವರು ಆಗ ಇರೋದಕ್ಕೂ, ಈಗ ಇರೋದಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ಉಪೇಂದ್ರ ಅವರಿಗೆ ಹೀರೋ ಆಗಬೇಕು ಎಂಬ ಕನಸು ಇರಲಿಲ್ಲ. ಆದರೆ, ಸಮಯ ಅವರನ್ನು ಹೀರೋ ಆಗಿ ಮಾಡಿತು. ಆರಂಭದಲ್ಲಿ ನಿರ್ದೇಶನ ಮಾಡಬೇಕು ಎಂಬ ತುಡಿತ ಇತ್ತು. ಕಾಶಿನಾಥ್ ಅವರ ಶಿಷ್ಯವರ್ಗದಲ್ಲಿ ಕಾಣಿಸಿಕೊಂಡ ಉಪೇಂದ್ರ ಅವರು, ‘ತರ್ಲೆ ನನ್ ಮಗ’ ಸಿನಿಮಾ ನಿರ್ದೇಶನ ಮಾಡಿದರು. ಈ ಚಿತ್ರ ಯಶಸ್ಸು ಕಂಡಿತು. ಆ ಬಳಿಕ ಬಂದ ‘ಶ್’ ಸಿನಿಮಾ ಸೂಪರ್ ಹಿಟ್ ಆಯಿತು. ‘ಓಮ್’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಹಲವು ದಾಖಲೆ ಬರೆಯಿತು.
1998ರಲ್ಲಿ ಬಂದ ‘ಎ’ ಸಿನಿಮಾದಲ್ಲಿ ಉಪ್ಪಿ ಹೀರೋ ಆದರು. ಹೀರೋ ಆಗಿ ಜನರು ಅವರನ್ನು ಇಷ್ಟಪ್ಟರು. ಇನ್ನು, ವಿಲನ್ ಪಾತ್ರದಲ್ಲಿ ಜನರು ಅವರನ್ನು ಒಪ್ಪಿಕೊಂಡಿದ್ದಾರೆ. ಅನೇಕ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘45’ ಸಿನಿಮಾ ರಿಲೀಸ್ ಆಯಿತು. ಉಪ್ಪಿ ಜೊತೆ ರಾಜ್ ಬಿ ಶೆಟ್ಟಿ ಹಾಗೂ ಶಿವಣ್ಣ ಕೂಡ ಕಾಣಿಸಿಕೊಂಡರು.
ರಕ್ಷಿತಾ ಶೆಟ್ಟಿ ಅವರು ತಮ್ಮದೇ ಆದ ಲೆಕ್ಕಾಚಾರದಲ್ಲಿ ಕಾವ್ಯಾ ಶೈವ ಅವರನ್ನು ಬಿಗ್ ಬಾಸ್ ಮನೆಯಲ್ಲಿ ಹಲವು ಬಾರಿ ನಾಮಿನೇಟ್ ಮಾಡಿದ್ದರು. ಇದು ಇತ್ತೀಚೆಗೆ ಹೆಚ್ಚಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಗಿಲ್ಲಿ ಕೇಳಿದರು. ಕಾವ್ಯಾ ಇಷ್ಟ ಎಂದು ರಕ್ಷಿತಾ ಹೇಳುತ್ತಾರೆ ಮತ್ತು ನಾಮಿನೇಟ್ ಮಾಡುತ್ತಾರೆ. ಈ ದ್ವಂದ್ವ ನೀತಿಯನ್ನು ಗಿಲ್ಲಿ ಪ್ರಶ್ನೆ ಮಾಡಿದರು. ಸ್ಪಂದನಾ ಎಲಿಮಿನೇಟ್ ಆದಾಗ ರಕ್ಷಿತಾ ಏಕೆ ಅತ್ತಿಲ್ಲ ಎಂಬುದನ್ನು ಕೇಳಲಾಯಿತು. ಇದಕ್ಕೆ ರಕ್ಷಿತಾ ಬಳಿ ಉತ್ತರ ಇರಲಿಲ್ಲ.
ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ!
ಬೆಂಗಳೂರು, ಜನವರಿ 06: ಬೆಂಗಳೂರು ನಗರದ ವಾಯು ಗುಣಮಟ್ಟ ಮತ್ತೆ ಆತಂಕದ ಹಂತಕ್ಕೆ ತಲುಪುತ್ತಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) 184 ದಾಖಲಾಗಿದ್ದು, WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿರುವುದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಯಾಗಿದೆ.
ಸೂಕ್ಷ್ಮ ಕಣಗಳಿಂದ ಉಸಿರಾಟದ ಸಮಸ್ಯೆ
PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.
ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 103 ಆಗಿದ್ದು, PM10 144ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ವಾಹನ ದಟ್ಟಣೆ ಕಾರಣವಿರಬಹುದೇ?
ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಳ, ನಿರಂತರ ನಿರ್ಮಾಣ ಕಾಮಗಾರಿಗಳು ಹಾಗೂ ಗಾಳಿಯ ಚಲನೆ ಕಡಿಮೆಯಾಗಿರುವುದು ಮಾಲಿನ್ಯ ಕಣಗಳು ವಾತಾವರಣದಲ್ಲೇ ಸಿಲುಕಿಕೊಳ್ಳಲು ಕಾರಣವಾಗುತ್ತಿವೆ. ಪರಿಣಾಮ, ಹೊರಗೆ ಕಾಣುವ ಸ್ವಚ್ಛ ಆಕಾಶದ ಹಿಂದೆ ಕಣ್ಣಿಗೆ ಕಾಣದ ಅಪಾಯಕರ ಗಾಳಿ ಅಡಗಿಕೊಂಡಿದೆ. ವಿಶೇಷವಾಗಿ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಗಾಳಿಯ ಗುಣಮಟ್ಟ ಇನ್ನಷ್ಟು ಕುಸಿಯುತ್ತಿದ್ದು, ಮಕ್ಕಳು, ಹಿರಿಯ ನಾಗರಿಕರು ಹಾಗೂ ಉಸಿರಾಟ ಸಮಸ್ಯೆ ಇರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ದೀರ್ಘಕಾಲ ಇದೇ ಸ್ಥಿತಿ ಮುಂದುವರಿದರೆ ಆರೋಗ್ಯ ಸಮಸ್ಯೆಗಳು ಹೆಚ್ಚುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ಚಿಕ್ಕಬಳ್ಳಾಪುರ, ಜನವರಿ 06: ಪೊಲೀಸ್ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಪ್ರೇಮಿಯ ನವರಂಗಿ ಆಟಗಳೆಲ್ಲ ಆರಕ್ಷಕರ ಮುಂದೆಯೇ ಬಯಲಾಗಿದ್ದು, ಪ್ರಿಯಕರನ ನಡೆ ಕಂಡು ಯುವತಿ ಬೆಚ್ಚಿಬಿದ್ದಿದ್ದಾಳೆ. ಇವನ ಸಹವಾಸವೇ ಸಾಕು ಎಂದು ಕೈಮುಗಿದಿದ್ದಾಳೆ.
ಘಟನೆ ಏನು?
ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಡಾವಣೆಯ ನಿವಾಸಿ, ಪೇಂಟ್ ಕೆಲಸಗಾರ ಸಂದೀಪ್ ಎನ್ನುವ ವ್ಯಕ್ತಿ ಚಿಕ್ಕಬಳ್ಳಾಪುರ ನಗರದ ಕಂದವಾರ ಬಡಾವಣೆಯ ಶ್ರೀಮಂತ ಕುಟುಂಬದ 18 ವರ್ಷದ ಯುವತಿಗೆ ಗಾಳ ಹಾಕಿದ್ದ. ಆಕೆಯ ಜೊತೆ ಎರಡು ದಿನಗಳ ಹಿಂದೆ ಎಸ್ಕೇಪ್ ಆಗಿದ್ದ ಈತ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ದೇವಸ್ಥಾನವೊಂದರಲ್ಲಿ ಆಕೆಗೆ ತಾಳಿಯನ್ನೂ ಕಟ್ಟಿದ್ದ. ಬಳಿಕ ಈ ಜೋಡಿ ಕಾರಿನಲ್ಲಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾಗ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಯುತಿಯ ಪೋಷಕರು ಇವರ ಕಾರನ್ನು ಅಡ್ಡಗಟ್ಟಿದ್ದರು. ಮಹಿಳಾ ಠಾಣೆಗೆ ಮಗಳು ಮತ್ತು ಆಕೆಯ ಪ್ರಿಯಕರನನ್ನು ನೇರವಾಗಿ ಕರೆದುಕೊಂಡು ಬಂದಿದ್ದರು. ತಾವು ಮದುವೆ ಮಾಡಿಕೊಂಡಿದ್ದು ತಮ್ಮ ಪಾಡಿಗೆ ತಮ್ಮನ್ನು ಬಿಡುವಂತೆ ಈ ವೇಳೆ ಜೋಡಿ ಪೊಲೀಸರನ್ನು ಕೇಳಿಕೊಂಡಿತ್ತು. ಅಷ್ಟರಲ್ಲಿ ಸಂದೀಪ್ನ ಒಂದೊಂದೇ ಪ್ರೇಮ ಪ್ರಕರಣಗಳು ಬಯಲಾಗಿವೆ.
20024ರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ನಾಯನಹಳ್ಳಿ ಗ್ರಾಮದ ಅಪ್ರಾಪ್ರ ಬಾಲಕಿಯನ್ನು ಪ್ರೀತಿಸಿದ್ದ ಸಂದೀಪ್ ಆಕೆಯನ್ನು ಮದುವೆ ಮಾಡಿಕೊಂಡಿದ್ದ. ಪ್ರಶಾಂತ್ ನಗರದಲ್ಲಿ ಮತ್ತೊರ್ವ ಮಹಿಳೆಯಗೆ ವಂಚನೆ ಮಾಡಿದ್ದು, ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಪ್ರಕರಣ ಕೂಡ ದಾಖಲಾಗಿರೋದು ಗೊತ್ತಾಗಿದೆ. ಇವುಗಳ ಜೊತೆಗೆ ಸಾಕ್ಷಿ ಎಂಬಂತೆ ಸಂದೀಪ್ನಿಂದ ಹಿಂದೆ ಮೋಸ ಹೋಗಿರುವ ಅಪ್ರಾಪ್ತೆಯೇ ಠಾಣೆಗೆ ಬಂದು ಆತನ ಇತಿಹಾಸ ಬಿಚ್ಚಿಟ್ಟಿದ್ದಾಳೆ. ಹೀಗಾಗಿ ಪ್ರಿಯಕರ ಕಟ್ಟಿದ್ದ ತಾಳಿಯನ್ನು ಕಿತ್ತು ಬಿಸಾಕಿ ಆತನಿಗೆ ಗುಡ್ ಬೈ ಹೇಳಿ ಯುವತಿ ತಂದೆ-ತಾಯಿ ಜೊತೆ ಮನೆಗೆ ಹೋದ ಪ್ರಸಂಗ ನಡೆದಿದೆ.
ಕ್ಯಾರಕಾಸ್, ಜನವರಿ 06: ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿರುವ ಅಧ್ಯಕ್ಷೀಯ ಭವನದ ಬಳಿ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿವೆ. ಅಧ್ಯಕ್ಷೀಯ ಭವನದ ಮೇಲೆ ಹಾರುತ್ತಿದ್ದ ಡ್ರೋನ್ಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವ ವರದಿಗಳೂ ಬಂದಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಮೆರಿಕ ಪಡೆಗಳು ನಿಕೋಲಸ್ ಮಡುರೊ ಸೆರೆಹಿಡಿದ ಬಳಿಕ ಡೆಲ್ಸಿ ರೊಡ್ರಿಗಸ್ ಮಧ್ಯಂತರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾಗಿ ಸ್ವಲ್ಪ ಹೊತ್ತಲ್ಲೇ ಈ ಘಟನೆ ನಡೆದಿದೆ. ಯುಎಸ್ ಮಿಲಿಟರಿ ದಾಳಿಯಷ್ಟು ತೀವ್ರವಾಗಿರಲಿಲ್ಲ, ಆದರೆ ಅದು ಜನರನ್ನು ಭಯಗೊಳಿಸಿತ್ತು.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ವಿಜಯ ಹಝಾರೆ ಟೂರ್ನಿಯ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪಂದ್ಯದಲ್ಲಿ ಅಯ್ಯರ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.
ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಗಾಯಗೊಂಡಿದ್ದು, ಹೀಗಾಗಿ ಉಳಿದ ಪಂದ್ಯಗಳಿಂದ ಅವರು ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ತಂಡದ ಸಾರಥ್ಯವನ್ನು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ಗೆ ವಹಿಸಲಾಗಿದೆ.
ಅದರಂತೆ ಇಂದು (ಜ.6) ನಡೆಯಲಿರುವ ಹಿಮಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ. ಅಷ್ಟೇ ಅಲ್ಲದೆ ಜನವರಿ 8 ರಂದು ನಡೆಯಲಿರುವ ಪಂಜಾಬ್ ವಿರುದ್ಧದ ಮ್ಯಾಚ್ನಲ್ಲೂ ಅಯ್ಯರ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ.
ಈ ಎರಡು ಮ್ಯಾಚ್ಗಳ ಮೂಲಕ ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಿದ್ದು, ಇದಾದ ಬಳಿಕ ಭಾರತ ತಂಡವನ್ನು ಕೂಡಿಕೊಳ್ಳಲು ನಿರ್ದೇಶಿಸಲಾಗಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದಾಗ್ಯೂ ಗಾಯದ ಕಾರಣ ಹೊರಗುಳಿದಿದ್ದರಿಂದ ಅವರು ದೇಶೀಯ ಪಂದ್ಯವನ್ನಾಡಿ ಫಿಟ್ನೆಸ್ ಸಾಬೀತುಪಡಿಸಲು ಸೂಚಿಸಲಾಗಿದೆ. ಹೀಗಾಗಿ ಜನವರಿ 8 ರ ಬಳಿಕವಷ್ಟೇ ಶ್ರೇಯಸ್ ಅಯ್ಯರ್ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಖಚಿತವಾಗಲಿದೆ.
ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.
ಬಾಂಗ್ಲಾದೇಶ, ಜನವರಿ 06: ಬಾಂಗ್ಲಾದೇಶ(Bangladesh)ದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು, ದಾಳಿಕೋರರು ಕೂಡಲೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಾಜಧಾನಿ ಢಾಕಾಗೆ ಸಮೀಪದಲ್ಲಿರುವ ಈ ಘಟನೆ ಇನ್ನಷ್ಟು ಆಘಾತಕಾರಿಯಾಗಿದೆ.
ಈ ಕೊಲೆ 18 ದಿನಗಳಲ್ಲಿ ನಡೆದ ಆರನೇ ಹಿಂದೂ ವ್ಯಕ್ತಿಯ ಕೊಲೆಯಾಗಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ಸಂಜೆ 6 ಗಂಟೆ ಸುಮಾರಿಗೆ, ಜಶೋರ್ ಜಿಲ್ಲೆಯ ಮಣಿರಾಂಪುರ ಉಪಜಿಲ್ಲಾದ ಕೊಪಾಲಿಯಾ ಬಜಾರ್‌ನಲ್ಲಿ 45 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.
ರಾಣಾ ಪ್ರತಾಪ್ ಐಸ್ ಕಾರ್ಖಾನೆಯನ್ನು ಹೊಂದಿದ್ದರು ಮತ್ತು ನರೈಲ್ ಜಿಲ್ಲೆಯಿಂದ ಪ್ರಕಟವಾಗುವ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರೂ ಆಗಿದ್ದರು.
ಸ್ಥಳೀಯ ನಿವಾಸಿಗಳ ಪ್ರಕಾರ, ಕೆಲವು ಪುರುಷರು ಬೈಕ್ನಲ್ಲಿ ಬಂದು ಅವರನ್ನು ಕಾರ್ಖಾನೆಯಿಂದ ಹೊರಗೆಳೆದು, ಒಂದು ಗಲ್ಲಿಗೆ ಕರೆದೊಯ್ದು ಅವರ ತಲೆಗೆ ಹಲವು ಬಾರಿ ಗುಂಡು ಹಾರಿಸಿದ್ದರು. ಅಷ್ಟೇ ಅಲ್ಲದೆ ಕುತ್ತಿಗೆ ಕೊಯ್ದು ಪರಾರಿಯಾಗಿದ್ದರು. ಪೊಲೀಸರು ದೇಹದಿಂದ ಏಳು ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಾಣಾ ಪ್ರತಾಪ್ ಅವರ ತಲೆಗೆ ಮೂರು ಗುಂಡುಗಳು ತಗುಲಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
ಈ ಘಟನೆಗಳು ಬಾಂಗ್ಲಾದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿವೆ ಮತ್ತು ಹಿಂದೂ ಸಮುದಾಯದಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿವೆ. ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ಅಲ್ಲಿ ನಡೆದ ಅಶಾಂತಿಯ ಬಳಿಕ ಬಾಂಗ್ಲಾದೇಶದಲ್ಲಿ ನಡೆದ 6ನೇ ಘಟನೆ ಇದಾಗಿದೆ.ಹಾದಿ ಅವರ ಮರಣದ ನಂತರ, ಭಾರತ ವಿರೋಧಿ ಪ್ರತಿಭಟನೆಗಳು ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುವಾದಿ ತಿರುವು ಪಡೆದುಕೊಂಡವು.
ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ನೇತೃತ್ವದ ಆಡಳಿತವು ಅಲ್ಪಸಂಖ್ಯಾತರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದ್ವೇಷವನ್ನು ಗಂಭೀರ ವಿಷಯವೆಂದು ಬಣ್ಣಿಸಿದೆ. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ಬಾಂಗ್ಲಾದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಮತ್ತು ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ಖಂಡಿಸಿವೆ.
ಯಶ್ (Yash) ಅವರು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋದು ಗೊತ್ತೇ ಇದೆ. ‘ಟಾಕ್ಸಿಕ್’ ಸಿನಿಮಾ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆಯಲು ಅವರು ರೆಡಿ ಆಗಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಯಶ್ ಅವರ ಬಾಲ್ಯದ ಫೋಟೋ ವೈರಲ್ ಆಗಿದೆ. ಯಶ್ ಜನ್ಮದಿನದ ಸಂದರ್ಭದಲ್ಲಿ ಈ ಫೋಟೋ ವೈರಲ್ ಮಾಡಲಾಗಿದೆ. ಅವರ ಬರ್ತ್ಡೇ ಜನವರಿ 8. ಅದನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ.
ಯಶ್ ಅವರು ಮೈಸೂರಿನವರು. ಅವರ ತಂದೆ ಅರುಣ್ ಕುಮಾರ್ ಕೆಎಸ್ಆರ್ಟಿಸಿ ಡ್ರೈವರ್ ಆಗಿದ್ದರು. ಅವರ ತಾಯಿ ಪುಷ್ಪಾ ಮನೆ ನೋಡಿಕೊಂಡು ಇದ್ದವರು. ಈಗ ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಾಲ್ಯದಲ್ಲಿ ಮನೆಯಲ್ಲಿ ಕಷ್ಟ ಇದ್ದರೂ ಯಶ್ ಅವರ ವರೆಗೆ ಬರದಂತೆ ಕುಟುಂಬ ನೋಡಿಕೊಂಡಿತ್ತು. ಅವರು ಮೊದಲು ಧಾರಾವಾಹಿ ಮಾಡಿದರು. ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು.
ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. ‘ಮೊಗ್ಗಿನ ಮನಸ್ಸು’ ಅವರ ಮೊದಲ ಸಿನಿಮಾ. ಲವ್ ಕಥೆ ಹೊಂದಿದ್ದ ಈ ಚಿತ್ರ ಸೂಪರ್ ಹಿಟ್ ಆಯಿತು. ಆ ಬಳಿಕ ಯಶ್ ಅವರು ವೃತ್ತಿ ಜೀವನದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದರು. ಈಗ ಯಶ್ ಅವರು ಸೂಪರ್ ಸ್ಟಾರ್. ಅವರನ್ನು ತಡೆಯುವವರೇ ಇಲ್ಲ ಎಂದರೂ ತಪ್ಪಾಗಲಾರದು.
‘ಕೆಜಿಎಫ್’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕೆಜಿಎಫ್ 2’ ಚಿತ್ರ ಅವರನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಗಿದೆ. ಇನ್ನು, ‘ಟಾಕ್ಸಿಕ್’ ಸಿನಿಮಾ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಎಲ್ಲರಿಗೂ ಮೂಡಿದೆ. ಈ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಟ್ರೇಲರ್ ಅಥವಾ ಟೀಸರ್ ಯಶ್ ಜನ್ಮದಿನವಾದ ಜನವರಿ 8ರಂದು ರಿಲೀಸ್ ಆಗುವ ಸಾಧ್ಯತೆ ಇದೆ. ಮಾರ್ಚ್ 19ರಂದು ಈ ಸಿನಿಮಾ ವಿಶ್ವಾದ್ಯಂತ ತೆರೆಗೆ ಬರಲಿದೆ. ಈ ಚಿತ್ರಕ್ಕೆ ಸಾಕಷ್ಟು ದೊಡ್ಡ ಬಜೆಟ್ ಹೂಡಿಕೆ ಮಾಡಲಾಗಿದೆ ಎಂಬುದು ವಿಶೇಷ. ಕನ್ನಡದ ಕೆವಿಎನ್ ನಿರ್ಮಾಣ ಸಂಸ್ಥೆ ಇದಕ್ಕೆ ಹಣ ಹಾಕಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಅಶ್ವಿನಿ ಗೌಡ ಅವರಿಗೆ ಹುಟ್ಟಿಕೊಂಡ ವೈರಿಗಳು ಒಬ್ಬಿಬ್ಬರಲ್ಲ. ಅವರು ಆಡುವ ಮಾತುಗಳು ಕೂಡ ಇದಕ್ಕೆ ಕಾರಣ. ಈಗ ಅಶ್ವಿನಿ ಹಾಗೂ ಕಾವ್ಯಾ ಮಧ್ಯೆ ವಾಕ್ಸಮರ ನಡೆದಿದೆ. ಒಬ್ಬರಿಗೊಬ್ಬರು ಏಕವಚನದಲ್ಲಿ ಕರೆದುಕೊಂಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಕಿತ್ತಾಟ ನಡೆದಿದೆ. 100 ದಿನಗಳ ಆಟದಲ್ಲಿ ಮಾಡಿದ ತಪ್ಪನ್ನು ಹೇಳಿದ್ದಕ್ಕೆ ಪರಸ್ಪರ ಇಬ್ಬರೂ ಕೋಪಗೊಂಡರು. ಆ ಬಗ್ಗೆ ಇಲ್ಲಿದೆ ವಿವರ.
ನಾಮಿನೇಷನ್ ವೇಳೆ ಮೊದಲು ಕಾವ್ಯಾ ಅವರು ಅಶ್ವಿನಿ ಗೌಡ ಹೆಸರನ್ನು ತೆಗೆದುಕೊಂಡರು. ಸೀಸನ್ ಆರಂಭದಿಂದ ಇಲ್ಲಿಯವರೆಗೆ ಅಶ್ವಿನಿ ಗೌಡ ಮಾಡಿದ ಕೆಟ್ಟ ಕೆಲಸಗಳ ಪಟ್ಟಿಯನ್ನು ಕಾವ್ಯಾ ತೆಗೆದಿಟ್ಟರು. ‘ಬಿಗ್ ಬಾಸ್ ಒಂದು ವ್ಯಕ್ತಿತ್ವದ ಆಟ. ಈ ರೀತಿಯ ವ್ಯಕ್ತಿತ್ವ ಗೆಲ್ಲೋದು ನಂಗೆ ಇಷ್ಟ ಇಲ್ಲ. ಅಶ್ವಿನಿ ಹೊರಗೆ ಹೆಣ್ಣಿನ ಪರ ಹೋರಾಡಿರಬಹುದು. ಆದರೆ, ಇಲ್ಲಿ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಅಶ್ವಿನಿ ಗೌಡ 2.O ವರ್ಷನ್ ನಾಟಕ’ ಎಂದು ಕಾವ್ಯಾ ಗೌಡ ಆರೋಪಿಸಿದರು.
ಇದಕ್ಕೆ ಅಶ್ವಿನಿ ಗೌಡ ಕೌಂಟರ್ ಕೊಟ್ಟರು. ‘ಕಾವ್ಯಾ ಇಲ್ಲಿಯವರೆಗೆ ಹೇಗೆ ಬಂದಿದ್ದಾರೆ ಎಂಬುದನ್ನು ಇಡೀ ಕರ್ನಾಟಕ ನೋಡಿದೆ’ ಎಂದರು. ಗಿಲ್ಲಿ ಸಹಾಯದಿಂದ ಕಾವ್ಯಾ ಇಲ್ಲಿಯವರೆಗೆ ಬಂದರು ಎಂಬುದು ಈ ವಾಕ್ಯದ ಒಳಾರ್ಥ. ಆದರೆ, ಇದನ್ನು ಕಾವ್ಯಾ ಒಪ್ಪಿಕೊಳ್ಳಲಿಲ್ಲ.
ಆ ಬಳಿಕ ಅಶ್ವಿನಿ ಅವರು ತಮ್ಮ ಸರದಿಯಲ್ಲಿ ಕಾವ್ಯಾ ಅವರನ್ನು ನಾಮಿನೇಟ್ ಮಾಡಿದರು. ಈ ವೇಳೆ ಅಶ್ವಿನಿ ಗೌಡ ಅವರು ಕಾವ್ಯಾ ಬಗ್ಗೆ ಒಂದಷ್ಟು ಆರೋಪಗಳನ್ನು ಮಾಡಿದರು. ಇಬ್ಬರ ಮಧ್ಯೆ ವಾಕ್ಸಮರ ತಾರಕಕ್ಕೆ ಏರಿತು. ನಂತರ ಮಾತು ಏಕವಚನದ ಕಡೆ ತಿರುಗಿತು. ಪರಸ್ಪರ ಅಗೌರವ ನೀಡಿ ಇಬ್ಬರೂ ಮಾತನಾಡಲು ಆರಂಭಿಸಿದರು.
‘ನೀನು ಫ್ರೀ ಪ್ರಾಡಕ್ಟ್’ ಎಂದು ಅಶ್ವಿನಿ ಅವರು ಕಾವ್ಯಾಗೆ ಹೇಳಿದರು. ಆಗ ಕಾವ್ಯಾ ‘ಹೋಗೇಲೆ’ ಎಂದು ಅಶ್ವಿನಿಗೆ ಹೇಳಿದರು. ನೀನು ಹೋಗೆಲೇ ಎಂದು ಅಶ್ವಿನಿ ತಿರುಗೇಟು ಕೊಟ್ಟರು.