Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ – Kannada News | Parrot threatens owner with calling police

ಗಿಳಿ (Parrot) ಬುದ್ದಿವಂತ ಪಕ್ಷಿಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮನುಷ್ಯರಂತೆ ಮಾತನಾಡಬಲ್ಲದು ಕೂಡ. ಹೀಗಾಗಿ ಎಲ್ಲರೂ ಈ ಗಿಳಿಯನ್ನು ಸಾಕಲು ಇಷ್ಟ ಪಡುತ್ತಾರೆ. ಆದರೆ ಇಲ್ಲೊಂದು ಸಾಕು ಗಿಳಿಯೂ ಮನೆ ಒಡತಿಗೆ (owner) ಬೆದರಿಕೆ ಹಾಕಿದೆ. ಟೊಮೊಟೊ ಕೊಡದಿದ್ದರೆ ಪೊಲೀಸರನ್ನು ಕರೆಯುತ್ತೇನೆ ಎಂದು ಹೆದರಿಸಿದೆ. ಗಿಳಿಯ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @aalianadim ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಮನೆಯ ಸಾಕು ಗಿಳಿಯದ್ದಾಗಿದೆ. ಪಂಜರದಲ್ಲಿರುವ ಗಿಳಿಯೂ ಮಹಿಳೆಯ ಬಳಿ ಟೊಮೆಟೊ…

Read More

ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಭಾಗ್ಯ! ಫ್ಲೈಟ್​ನಲ್ಲಿ ಚಿಣ್ಣರ ಸಂಭ್ರಮ ನೋಡಿ – Kannada News | Chikkamagaluru Government School Students Take First Flight Trip, Muttigepura Kids’ Joy Goes Viral

ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರವಾಸ ಕೈಗೊಂಡ ಈ ಮಕ್ಕಳು, ಫ್ಲೈಟ್‌ನಲ್ಲಿ ಪ್ರಯಾಣಿಸುವ ಮೂಲಕ ಜೀವನದಲ್ಲಿ ಮರೆಯಲಾಗದ ಅನುಭವ ಪಡೆದುಕೊಂಡಿದ್ದಾರೆ. ವಿಮಾನದಲ್ಲಿ ಕುಳಿತು ಹಾರಾಟದ ಸಂಭ್ರಮ ಅನುಭವಿಸಿದ ಪುಟ್ಟ ಮಕ್ಕಳ ಮುಖದಲ್ಲಿ ಕಂಡ ಖುಷಿ ನೋಡುವುದೇ ಒಂದು ಹಬ್ಬದಂತಿತ್ತು. ಬೆಂಗಳೂರಿಗೆ ಫ್ಲೈಟ್ ಮೂಲಕ ತೆರಳಿ, ಅಲ್ಲಿಂದ ಬಸ್‌ನಲ್ಲಿ ಹಿಂತಿರುಗುವಂತೆ ಪ್ರವಾಸವನ್ನು ಯೋಜಿಸಲಾಗಿತ್ತು. ಈ ವಿಶಿಷ್ಟ ಪ್ರವಾಸ ಶಿಕ್ಷಕರು, ಪೋಷಕರು, ದಾನಿಗಳು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅವರ ಸಹಕಾರದಿಂದ ಸಾಧ್ಯವಾಗಿದೆ. ಮಕ್ಕಳಿಗೆ ಪುಸ್ತಕದ ಪಾಠಕ್ಕಷ್ಟೇ ಸೀಮಿತವಲ್ಲದೆ,…

Read More

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗಿದೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಹೇಳಿದ್ದರೆ, ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ…

Read More

ಪ್ರತ್ಯೇಕ ಘಟನೆ: ಬಸ್​​ ಅಪಘಾತದಲ್ಲಿ ಹಲವರಿಗೆ ಗಾಯ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ – Kannada News | Bus Accidents: 22 Injured Across Karnataka, Student Critical

ಅಪಘಾತದಲ್ಲಿ ವಿದ್ಯಾರ್ಥಿ ಕೈ ಛಿದ್ರ. ಉತ್ತರ ಕನ್ನಡ, ಜನವರಿ 08: ರಾಜ್ಯದ ವಿವಿಧೆಡೆ ಸಂಭವಿಸಿದ ಬಸ್​​ ಅಪಘಾತದಲ್ಲಿ ಒಟ್ಟು 22 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್​​ ಡಿಕ್ಕಿಯಾಗಿ 20 ಜನ ಗಾಯಗೊಂಡಿದ್ದರೆ, ಸೈಕಲ್​​ನಲ್ಲಿ ತೆರಳುತ್ತಿದ್ದ ವೇಳೆ ಬಸ್​​ ಗುದ್ದಿದ ಪರಿಣಾಮ ಕಲಬುರಗಿಯಲ್ಲಿ ವಿದ್ಯಾರ್ಥಿಯ ಕೈ ಸಂಪೂರ್ಣ ಛಿದ್ರವಾಗಿದೆ. ಬಸ್​​ ಡಿಕ್ಕಿಯಾಗಿ ಹಾವೇರಿಯಲ್ಲೂ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಓವರ್‌ಟೇಕ್ ವೇಳೆ ಮರಕ್ಕೆ ಬಸ್​ ಡಿಕ್ಕಿ ಮರಕ್ಕೆ ಗುದ್ದಿದ ಬಸ್​​ ಓವರ್‌ಟೇಕ್…

Read More

ಈ ಕನ್ನಡದ ನಟನಿಗೆ ಸಿಕ್ಕಿತ್ತು ‘ಟಾಕ್ಸಿಕ್’ನಲ್ಲಿ ನಟಿಸುವ ಅವಕಾಶ: ನಿರಾಕರಿಸಿದ್ದೇಕೆ? – Kannada News | Gulshan Devaiah was offered character in Toxic movie but he rejected it

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಅತಿ ಹೆಚ್ಚು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾವನ್ನು ಹಾಲಿವುಡ್​ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು, ಇಂದು (ಜನವರಿ 08) ಬಿಡುಗಡೆ ಆಗಿರುವ ಟೀಸರ್​​ನಿಂದ ಇದು ಖಾತ್ರಿ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾನಲ್ಲಿ ಖ್ಯಾತ ನಟ-ನಟಿಯರ ದಂಡೇ ಇದೆ. ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಅವರುಗಳು ಜೊತೆಗೆ ಕೆಲವು ಹಾಲಿವುಡ್, ಬಾಲಿವುಡ್​​ನ ಜನಪ್ರಿಯ ನಟ-ನಟಿಯರು ಸಹ ಇದ್ದಾರೆ. ಈ ಸಿನಿಮಾನಲ್ಲಿ ನಟಿಸುವ ಅವಕಾಶ ಕರ್ನಾಟಕ ಮೂಲದ ನಟರೊಬ್ಬರಿಗೆ ಸಿಕ್ಕಿತ್ತು…

Read More

Pakistan: ಲಕ್ಷ ರೂ ಸಂಬಳ ಪಡೆಯುತ್ತಿರುವ ಪಾಕಿಸ್ತಾನೀಯರ ಸಂಖ್ಯೆ ಎಷ್ಟು ಗೊತ್ತಾ? – Kannada News | Very few Pakistanis getting monthly salary of over Rs 1 lakh, here what income tax data says

ನವದೆಹಲಿ, ಜನವರಿ 8: ಪಾಕಿಸ್ತಾನದಲ್ಲಿ (Pakistan) ಆದಾಯ ತೆರಿಗೆ ಪಾವತಿದಾರರ ಸಂಖ್ಯೆ ಬಹಳ ಕಡಿಮೆ ಇದೆ. ಒಂದು ಅಂದಾಜು ಪ್ರಕಾರ ಅಲ್ಲಿ ನೊಂದಾಯಿತ ತೆರಿಗೆ ಪಾವತಿದಾರರ ಸಂಖ್ಯೆ ಸುಮಾರು 60 ಲಕ್ಷ ಆಸುಪಾಸು ಇರಬಹುದು. ಅದರಲ್ಲಿ ಅಧಿಕ ಆದಾಯ ತೋರಿಸಿರುವವರ ಸಂಖ್ಯೆ ಬಹಳ ಕಡಿಮೆ. ಭಾರತೀಯ ರುಪಾಯಿ ಲೆಕ್ಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಾಸಿಕ ಆದಾಯ ಹೊಂದಿರುವ ಪಾಕಿಸ್ತಾನೀಯರ ಸಂಖ್ಯೆ 4 ಲಕ್ಷದಿಂದ 10 ಲಕ್ಷದಷ್ಟಿರಬಹುದು ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಸರಾಸರಿ ಸಂಬಳ 39,000 ಪಿಕೆಆರ್ ಇದೆ. ಭಾರತೀಯ…

Read More

ಭಾರತ ನಮ್ಮನ್ನು ಅವಮಾನಿಸಿದೆ… ನಾವು ಶ್ರೀಲಂಕಾದಲ್ಲಿ ಆಡ್ತೀವಿ..!

2026ರ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ತಂಡ ಕಣಕ್ಕಿಳಿಯುವುದೆಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯಕ್ಕಂತು ಉತ್ತರ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಏಕೆಂದರೆ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಬಾಂಗ್ಲಾದೇಶ್ ಹಿಂದೇಟು ಹಾಕಿದೆ. ಬದಲಾಗಿ ನಮ್ಮ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಈ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಇದಾಗ್ಯೂ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ನಿಲುವು ಬದಲಿಸಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್…

Read More

ಕೋಗಿಲು ಅಕ್ರಮ ವಾಸಿಗಳಿಗೆ ಜಮೀರ್ ಗುಡ್ ನ್ಯೂಸ್: ಮೊದಲ ಹಂತದಲ್ಲಿ 26 ಮನೆ ಹಂಚಿಕೆಗೆ ಸಿದ್ಧತೆ – Kannada News | Good News for Kogilu Evictees as Minister Zameer Ahmed says govt Prepares to Allot 26 Houses in First Phase

ಕೋಗಿಲು ಅಕ್ರಮ ವಾಸಿಗಳಿಗೆ ಜಮೀರ್ ಗುಡ್ ನ್ಯೂಸ್ ಬೆಂಗಳೂರು, ಜನವರಿ 8: ಕೋಗಿಲು ಲೇಔಟ್ (Kogilu Layout) ಅಕ್ರಮವಾಸಿಗಳಿಗೆ ಮನೆ ಭಾಗ್ಯ ಸಿಗುವ ಕಾಲ ಸನ್ನಿಹಿತವಾಗುತ್ತಿದೆ. ಬಿಜೆಪಿ ನಾಯಕರ ವಿರೋಧದ ನಡುವೆಯೂ ಸರ್ಕಾರ ಅಕ್ರಮವಾಸಿಗಳಿಗೆ ಮನೆ ಹಂಚಲು ನಿರ್ಧರಿಸಿದೆ. ಇಂದೇ 26 ಮನೆಗಳ ಹಂಚಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸುಳಿವು ನೀಡಿರುವ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed), 26 ಮನೆಗಳನ್ನು ಕೊಡಬಹುದು. ಉಳಿದ ಅರ್ಜಿಗಳ ಪರಿಶೀಲನೆಯಾಗುತ್ತಿದೆ ಎಂದಿದ್ದಾರೆ. ಹಾಗೆಯೇ ಅರ್ಜಿ ಹಾಕಿದ ಎಲ್ಲರಿಗೂ…

Read More

‘ಟಾಕ್ಸಿಕ್’ ಟೀಸರ್​ನ ಆ​ ಡೈಲಾಗ್​​ನಲ್ಲೇ ಅಡಗಿದೆ ಚಿತ್ರದ ಕಥೆ – Kannada News | Toxic Movie Teaser: Yash’s Daddy’s Home Dialogue and Hollywood Meaning

‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದೆ. ಈ ಚಿತ್ರದ ಮೇಕಿಂಗ್ ಹೇಗಿರಲಿದೆ ಎಂಬ ಸಣ್ಣ ಝಲಕ್ ಟೀಸರ್​​ನಲ್ಲಿ ತೋರಿಸಲಾಗಿದೆ. ಸಿನಿಮಾದಲ್ಲಿ ಬರೋ ಬೋಲ್ಡ್ ದೃಶ್ಯಗಳನ್ನು ನೋಡಿದರೆ ಇದೊಂದು ‘ಎ’ ಪ್ರಮಾಣಪತ್ರ ಪಡೆಯಲಿರುವ ಚಿತ್ರ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಹೀಗಿರುವಾಗೇ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಬರೋ ಕೊನೆಯ ಡೈಲಾಗ್ ಗಮನ ಸೆಳೆಯುವ ರೀತಿಯಲ್ಲಿದೆ. ಇಡೀ ಚಿತ್ರ ಕಥೆ ಇದರಲ್ಲೇ ಅಡಿಗೆ ಎನ್ನಲಾಗಿದೆ. ‘ಟಾಕ್ಸಿಕ್’ ಚಿತ್ರದ ಓಪನಿಂಗ್ ದೃಶ್ಯ ಆರಂಭ ಆಗೋದು ಸ್ಮಶಾನದ ಮೂಲಕ. ಹೆಣ ಹೂಳುವ…

Read More

ಹೊಸ ಹಾಲಿವುಡ್ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ, ಪೋಸ್ಟರ್ ನೋಡಿ – Kannada News | Priyanka Chopra’s poster from Hollywood movie The Bluff released

ಪ್ರಿಯಾಂಕಾ ಚೋಪ್ರಾ (Priyanka Chopra) ಭಾರತದ ನಟಿಯಾದರೂ ಮಿಂಚುತ್ತಿರುವುದು ಹಾಲಿವುಡ್​​ನಲ್ಲಿ. 2017 ರಲ್ಲಿ ಹಾಲಿವುಡ್​​ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಆರಂಭದಲ್ಲಿ ಅಷ್ಟೇನೂ ಪ್ರಾಮುಖ್ಯತೆ ಇಲ್ಲದ ಕೆಲವು ಪಾತ್ರಗಳಲ್ಲಿ ನಟಿಸಿದರಾದರೂ ವರ್ಷಗಳು ಕಳೆದಂತೆ ತಮ್ಮನ್ನು ತಾವು ಹಾಲಿವುಡ್​​ನಲ್ಲಿ ಗಟ್ಟಿಯಾಗಿ ನೆಲೆಗೊಳಿಸಿಕೊಂಡಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪ್ರಮುಖ ನಾಯಕಿಯ ಪಾತ್ರಗಳು ಅದರಲ್ಲೂ ಆಕ್ಷನ್ ನಾಯಕಿಯ ಪಾತ್ರಗಳೇ ಹೆಚ್ಚಾಗಿ ಸಿಗುತ್ತಿವೆ. ಸಿನಿಮಾಗಳು ಯಶಸ್ವಿಯೂ ಆಗುತ್ತಿವೆ. ಇದೀಗ ಪ್ರಿಯಾಂಕಾ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೊಂದು ಆಕ್ಷನ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು,…

Read More