ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​ – Kannada News | Siddaramaiah Set to Break Devaraj Urs Record, Becoming Karnataka’s Longest Serving Chief Minister

ಬೆಂಗಳೂರು, ಜನವರಿ 05: ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ…

Read More

ಸರಣಿಗೂ ಮುನ್ನ ಟೀಮ್ ಇಂಡಿಯಾಗೆ 15 ದಿನಗಳ ಕ್ಯಾಂಪ್..! – Kannada News | Indian Test captain Shubman Gill has proposed a 15 day camp before each Test series

ಪ್ರತಿ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡದ ಆಟಗಾರರು 15 ದಿನಗಳ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂತಹದೊಂದು ವಿಶೇಷ ಯೋಜನೆಗೆ ಮನವಿ ಮಾಡಿರುವುದು ಟೀಮ್ ಇಂಡಿಯಾದ ನಾಯಕ ಶುಭ್​​ಮನ್ ಗಿಲ್. ಪ್ರತಿ ಟೆಸ್ಟ್ ಸರಣಿಗೂ ಮುನ್ನ ಕ್ಯಾಂಪ್​ ಆಯೋಜಿಸುವಂತೆ ಗಿಲ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಭಾರತ ಟೆಸ್ಟ್ ತಂಡದ ನಾಯಕನ ಈ ಮನವಿಗೆ ಬಿಸಿಸಿಐ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ವರದಿಯಾಗಿದೆ. ಅದರಂತೆ ಮುಂಬರುವ ಟೆಸ್ಟ್ ಸರಣಿಗಳಿಗೂ ಮುನ್ನ ಟೀಮ್ ಇಂಡಿಯಾ 15 ದಿನಗಳ ಅಭ್ಯಾಸ…

Read More

ಇನ್‌ಸ್ಟಾಗ್ರಾಮ್‌ನಲ್ಲಿ 2,000 ಫಾಲೋವರ್ಸ್‌ ಗಳಿಸಿದ ಮಹಿಳೆ: ಕೇಕ್​​ ಕಟ್​​ ಮಾಡಿ ಸಂಭ್ರಮಿಸಿದ ಬಾಸ್ – Kannada News | Viral Video: Bengaluru Boss Hails Employee’s Instagram Milestone Celebration

ಬೆಂಗಳೂರು, ಜ.5: ಬೆಂಗಳೂರಿನ (Bengaluru) ಕಂಪನಿಯೊಂದರಲ್ಲಿ ನಡೆದ ಹೃದಯಸ್ಪರ್ಶಿ ಕ್ಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​​ ಆಗಿದೆ. ಕಾರ್ಪೊರೇಟ್ ಕಂಪನಿಯ ಬಾಸ್​​​ ಒಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಚಿಕ್ಕ ಯಶಸ್ಸನ್ನು ದೊಡ್ಡದಾಗಿ ಆಚರಿಸಿಕೊಂಡಿರುವ ಕ್ಷಣಕ್ಕೆ ಕಂಪನಿಯೊಂದು ಸಾಕ್ಷಿಯಾಗಿದೆ. ಇನ್‌ಸ್ಟಾಗ್ರಾಮ್​​ನಲ್ಲಿ ಫಾಲೋರ್ವಸ್​​ ಹೆಚ್ಚು ಪಡೆದ ಸಹೋದ್ಯೋಗಿಗಾಗಿ ಈ ವಿಶೇಷ ದಿನವನ್ನು ಉತ್ತಮವಾಗಿ ಆಚರಣೆ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಐಶ್ವರ್ಯ ಎಂಬ ಮಹಿಳೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. 2 ಸಾವಿರ ಫಾಲೋವರ್ಸ್​ಗಳನ್ನು ಪಡೆದುಕೊಂಡದ್ದಕ್ಕಾಗಿ ಕಂಪನಿ ಇದನ್ನು ಸಂಭ್ರಮಿಸಿದೆ. ಐಶ್ವರ್ಯ ಈ ವಿಡಿಯೋದಲ್ಲಿ…

Read More

ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ – Kannada News | Bank employees decide nation wide strike on January 27th, demanding 5 day work week

ನವದೆಹಲಿ, ಜನವರಿ 5: ವಾರದ ಕಾರ್ಯದಿನಗಳನ್ನು ಐದಕ್ಕೆ ಮಿತಿಗೊಳಿಸಬೇಕೆಂದು (5 day work wek) ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ವಿವಿಧ ಒಕ್ಕೂಟಗಳ ವೇದಿಕೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್​ಬಿಯು) ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿರುವುದಾಗಿ ಘೋಷಿಸಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾಒಕ್ಕೂಟ (ಎಐಬಿಒಸಿ) ಈ ನಿರ್ಧಾರವನ್ನು ತಿಳಿಸಿ ಜನವರಿ 4ರಂದು ಸುತ್ತೋಲೆ ಹೊರಡಿಸಿದೆ. ಬ್ಯಾಂಕುಗಳಲ್ಲಿ ಈಗ ಭಾನುವಾರದ ಜೊತೆಗೆ ಎರಡನೇ ಶನಿವಾರ ಮತ್ತು ನಾಲ್ಕನೇ…

Read More

2020 Delhi Riots: ದೆಹಲಿ ಗಲಭೆ ಪ್ರಕರಣ, ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ – Kannada News | Delhi Riots 2020: Supreme Court Rejects Bail Pleas of Umar Khalid and Sharjeel Imam

ನವದೆಹಲಿ, ಜನವರಿ 05: ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ಜಾಮೀನು ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ.  ಡಿಸೆಂಬರ್ 10 ರಂದು, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು…

Read More

ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್ – Kannada News | Joe Root goes level with Ricky Ponting on 41 Test hundreds

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

‘ಜನ ನಾಯಗನ್’ ತಂಡದಿಂದ ಇದೆಂಥಾ ತಪ್ಪು; ಟ್ರೋಲಿಗರಿಗೆ ಆಹಾರವಾದ ನಿರ್ದೇಶಕ – Kannada News | Jana Nayagan: Vijay’s Last Film Faces AI and Remake Row Post Trailer

ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಿ ‘ಜನ ನಾಯಗನ್’ (Jana Nayagan) ಮೂಡಿ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆದರೆ, ಯಾವಾಗ ಚಿತ್ರದ ಟ್ರೇಲರ್ ಬಿಡುಗಡೆ ಆಯಿತೋ ಅಲ್ಲಿಂದ ಸಿನಿಮಾಗೆ ಹಿನ್ನಡೆ ಉಂಟಾಗುತ್ತಿದೆ. ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಇದು ಎಂಬುದು ಟ್ರೇಲರ್ ನೋಡಿದವರಿಗೆ ಸ್ಪಷ್ವವಾಗಿದೆ. ಇದರ ಜೊತೆಗೆ ಎಐ ಚಿತ್ರ ಟ್ರೇಲರ್​​ನಲ್ಲಿ ಬಳಕೆ ಮಾಡಲಾಗಿದೆ. ಇದಕ್ಕೆ ಅನೇಕರು ಕೋಪ ಹೊರಹಾಕಿದ್ದಾರೆ. ‘ಜನ ನಾಯಗನ್’ ಇದು ದಳಪತಿ…

Read More

ಇಡೀ ಇಂದೋರ್​ಗೆ ನೀರು ಪೂರೈಸುತ್ತಿದ್ದ ಟ್ಯಾಂಕಿನಲ್ಲಿತ್ತು ವ್ಯಕ್ತಿಯ ಶವ, 30 ವರ್ಷಗಳ ಹಿಂದೆ ಏನಾಗಿತ್ತು? – Kannada News | Indore’s Bhagirathpura Recalls a Disturbing Water Tank Tragedy After 30 Years

ಇಂದೋರ್, ಜನವರಿ 05: ಇಂದೋರ್​ನಲ್ಲಿ ಚರಂಡಿ ನೀರು( Sewage Water) ಕುಡಿಯುವ ನೀರಿನ ಜತೆ ಮಿಶ್ರಣವಾಗಿ ಹಲವು ಜನರ ಜೀವಕ್ಕೆ ಕುತ್ತು ತಂದಿದೆ. ಆದರೆ ಭಾಗೀರಥಪುರದಲ್ಲಿ ಈ ರೀತಿಯ ದುರಂತ ಹೊಸದೇನಲ್ಲ. ಇಂದೋರ್​ 30 ವರ್ಷಗಳ ಹಿಂದೆ ನಡೆದಿರುವ ಘಟನೆಯನ್ನು ಅಲ್ಲಿನ ಜನತೆ ನೆನಪಿಸಿಕೊಂಡಿದ್ದಾರೆ. ಸುಭಾಷ್ ಚೌಕ್ ಟ್ಯಾಂಕ್‌ನಲ್ಲಿ ಕೊಳೆತ ಶವವೊಂದು ಪತ್ತೆಯಾಗಿತ್ತು. ಸಾವಿರಾರು ಜನರು ಆ ಟ್ಯಾಂಕಿನ ನೀರನ್ನೇ ಕುಡಿದಿದ್ದರು. ಪಶ್ಚಿಮ ಇಂದೋರ್‌ನ ಸಾವಿರಾರು ಮನೆಗಳಿಗೆ ವಾರಗಳವರೆಗೆ ನೀರು ಪೂರೈಸುತ್ತಿದ್ದ ಟ್ಯಾಂಕ್‌ನೊಳಗೆ ಮಾನವ ಅಸ್ಥಿಪಂಜರ ಪತ್ತೆಯಾಗಿತ್ತು….

Read More

US threat: ರಷ್ಯನ್ ತೈಲ ಖರೀದಿ- ಭಾರತದ ಮೇಲೆ ಮತ್ತೆ ಟ್ಯಾರಿಫ್ ಬೆದರಿಕೆ ಹಾಕಿದ ಟ್ರಂಪ್ – Kannada News | US president Donald Trump threatens more tariffs against India on Russian oil matter

ವಾಷಿಂಗ್ಟನ್, ಜನವರಿ 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಮೇಲೆ ಬೆದರಿಕೆ ಹಾಕುವುದನ್ನು ಇನ್ನೂ ನಿಲ್ಲಿಸಿಲ್ಲ. ರಷ್ಯನ್ ತೈಲ ಆಮದನ್ನು ಭಾರತ ಮುಂದುವರಿಸುತ್ತಿರುವುದು ಅಮೆರಿಕ ಅಧ್ಯಕ್ಷರಿಗೆ ಕಿರಿಕಿರಿ ತಂದಂತಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಬೈಟ್​ನಲ್ಲಿ ಅವರು ರಷ್ಯನ್ ತೈಲ ಖರೀದಿ ಸಂಬಂಧ ಭಾರತದ ಮೇಲೆ ಟ್ಯಾರಿಫ್ (US Tariffs) ಅನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಭಾರತದ ಮೇಲೆ ಅಮೆರಿಕ ಈಗಾಗಲೇ ಶೇ. 50ರಷ್ಟು ಆಮದು ಸುಂಕ ಹಾಕುತ್ತಿದೆ. ಇನ್ನೂ…

Read More

ಧಾರವಾಡ ಬಸ್ ಡಿಪೋದಲ್ಲಿ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ! ಸಹೋದರತ್ವ, ಗೌರವದ ಸಂಕೇತ ಎಂದ ಲಾಲ್ ಸಾಬ್ – Kannada News | Muslim Man Builds Hanuman Temple at Dharwad Bus Depot, Symbol of Brotherhood and Mutual Respect

ಹನುಮಾನ್ ಗುಡಿ ಎದುರು ಲಾಲ್ ಸಾಬ್Image Credit source: The New Indian Express ಧಾರವಾಡ, ಜನವರಿ 5: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (NWKSRTC) ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಮುಸ್ಲಿಂ ಕಾನ್‌ಸ್ಟೆಬಲ್ ಒಬ್ಬರು ಧಾರವಾಡದ ಬಸ್ ಡಿಪೋ ಆವರಣದಲ್ಲಿ ಹನುಮಂತನ ಗುಡಿ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾರೆ. ಹನುಮಾನ ಗುಡಿ ನಿರ್ಮಾಣವು ಕಳೆದ ವರ್ಷ ಪೂರ್ಣಗೊಂಡಿದ್ದರೂ ಇತ್ತೀಚೆಗೆ ಬೆಳಕಿಗೆ ಬಂದಿದೆ. ಲಾಲ್ ಸಾಬ್ ರಸಲ್​ಸಾಬ್ ಬೂದಿಹಾಳ (60) ತಮ್ಮ ಸಮುದಾಯದ ಮುಖಂಡರು ಮತ್ತು…

Read More