ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು, ಏಪ್ರಿಲ್ 13: ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿದ್ದ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತು ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ರೋಹಿಣಿ ಸಿಂಧೂರಿ…