ಗಂಡ ಹೆಂಡತಿ ಜಗಳಕ್ಕೆ ಅತ್ತೆ ಬಲಿ! ತವರಿನಿಂದ ಪತ್ನಿ ಕರೆದೊಯ್ಯುವಾಗ ಅಡ್ಡ ಬಂದಿದ್ದಕ್ಕೆ ಭೀಕರವಾಗಿ ಕೊಂದ ವ್ಯಕ್ತಿ
ಬೆಂಗಳೂರು, ಏಪ್ರಿಲ್ 13: ನಗರದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದ ಹಲ್ಲೆ ಪ್ರಕರಣವು ಇದೀಗ ಕೊಲೆ (Murder) ಪ್ರಕರಣವಾಗಿ ಮಾರ್ಪಟ್ಟಿದೆ. ಮಣಿಕಿರಣ್ ಎಂಬಾತ ತನ್ನ ಹೆಂಡತಿಯನ್ನು ಬಲವಂತವಾಗಿ ತವರು ಮನೆಯಿಂದ ಕರೆದುಕೊಂಡು ಹೋಗಲು ಮುಂದಾದಾಗ ಮಧ್ಯ ಬಂದ ಮಾಗೇಶ್ವರಿ ಎಂಬಾಕೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಹಿನ್ನೆಲೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಆಕೆ, ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಹೆಂಡತಿ ಬರಲ್ಲ ಅಂದರೂ ಬಲವಂತವಾಗಿ ಕರೆದೊಯ್ಯಲು ಮುಂದಾದ ಪತಿ ಮಣಿಕಿರಣ್ ಹಾಗೂ ಆತನ…