ನೆಲಮಂಗಲ: ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಜಿಮ್ ಟ್ರೈನರ್ ಬಲಿ? ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಬಾಡಿ ಬಿಲ್ಡರ್!
ನೆಲಮಂಗಲ, ಏಪ್ರಿಲ್ 13: ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಬಾಡಿ ಬಿಲ್ಡರ್ ದಿಲೀಪ್ (28) ಎಂಬುವವರು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಸಾವಿನ ನಿರ್ಧಾರವನ್ನು ತಿಳಿಸಿರುವುದು ಪ್ರಕರಣದ ಬಗ್ಗೆ ಹಲವು ಅನುಮಾನ ಮೂಡಿಸಿದೆ. ಇದರೊಂದಿಗೆ, ಇಬ್ಬರು ಮಕ್ಕಳ ತಾಯಿ ಜತೆ ಸಹವಾಸ ಮಾಡಿದ ತಪ್ಪಿಗೆ ಜಿಮ್ ಟ್ರೈನರ್ ಬಲಿಯಾದಂತಾಗಿದೆ. ಜಿಮ್‌ನಲ್ಲಿ ಪರಿಚಯ, ಸಂಬಂಧ! ನೆಲಮಂಗಲ ತಾಲೂಕಿನ ವಾಜರಹಳ್ಳಿಯ…