Category Archives: Blog

Your blog category

VHT 2025-26: ಸತತ 5ನೇ ಜಯ; ಕರ್ನಾಟಕಕ್ಕೆ ಸುಲಭ ತುತ್ತಾದ ತ್ರಿಪುರ – Kannada News | Vijay Hazare Trophy: Karnataka Beats Tripura by 80 Runs, 5th Straight Win

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಐದನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಯಾಗಿದ್ದವು. ಎಂದಿನಂತೆ ಈ ಪಂದ್ಯದಲ್ಲೂ ತನ್ನ ಸಾಂಘೀಕ ಪ್ರದರ್ಶನ ತೋರಿದ ಕರ್ನಾಟಕ ತಂಡ ತ್ರಿಪುರ ತಂಡವನ್ನು 80 ರನ್​ಗಳಿಂದ ಸೋಲಿಸಿ ಈ ಟೂರ್ನಿಯಲ್ಲಿ ಸತತ ಐದನೇ ಗೆಲುವು ದಾಖಲಿಸಿದೆ. ಅಂದರೆ ಈ ಟೂರ್ನಿಯಲ್ಲಿ ಕರ್ನಾಟಕ ತಂಡ ಆಡಿರುವ ಐದಕ್ಕೆ ಐದು ಪಂದ್ಯಗಳು ಗೆಲುವು ಸಾಧಿಸಿದೆ. ಈ ಮೂಲಕ ಎಲೈಟ್ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 332 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ತ್ರಿಪುರ ತಂಡ 252 ರನ್​ಗಳಿಗೆ ಆಲೌಟ್ ಆಯಿತು.

Source link

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು – Kannada News | Haveri: minister Satish Jarkiholi Narrowly Escapes Pendal Collapse

ಹಾವೇರಿ, ಜನವರಿ 03: ಏಕಾಏಕಿ ಜೋರಾಗಿ ಬೀಸಿದ ಸುಂಟರಗಾಳಿಗೆ ಪೆಂಡಾಲ್​​ ಕುಸಿದಿದ್ದು, ಸಚಿವ ಸತೀಶ್ ಜಾರಕಿಹೊಳಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಹಿನ್ನೆಲೆ ಪೆಂಡಾಲ್ ಹಾಕಲಾಗಿತ್ತು. ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಬೀಸಿದ ಸುಂಟರಗಾಳಿಗೆ ಸತೀಶ್ ಜಾರಕಿಹೊಳಿ ಹಿಂದೆ ಇದ್ದ ಪೆಂಡಾಲ್ ಹಾರಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಜಾರಕಿಹೊಳಿ ಸೇರಿದಂತೆ ಕ್ಷಣ ಕಾಲ ಎಲ್ಲರೂ ವಿಚಲಿತಗೊಂಡರು.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ವೆನೆಜುವೆಲಾ ಅಧ್ಯಕ್ಷ ಮಡುರೊ, ಅವರ ಪತ್ನಿಯನ್ನು ಸೆರೆಹಿಡಿದಿದ್ದೇವೆ; ದಾಳಿಯ ಬಳಿಕ ಟ್ರಂಪ್ ಘೋಷಣೆ – Kannada News | Venezuela President Maduro and wife captured after US airstrikesTrump Confirms

ನವದೆಹಲಿ, ಜನವರಿ 3: ವೆನೆಜುವೆಲಾ ಮೇಲಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯನ್ನು ದೃಢಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಅಮೆರಿಕ ಶನಿವಾರ ರಾತ್ರಿ (ಸ್ಥಳೀಯ ಕಾಲಮಾನದ ಪ್ರಕಾರ) ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ 4 ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಿತು. ಈ ದಾಳಿಯ ಬಳಿಕ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ದೇಶದಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ಟ್ರಂಪ್ ಮಾಹಿತಿ ನೀಡಿದ್ದಾರೆ.

ಅಮೆರಿಕದ ಸಮಯದ ಪ್ರಕಾರ ಶನಿವಾರ ರಾತ್ರಿ ಅಮೆರಿಕವು ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ 4 ನಗರಗಳನ್ನು ಗುರಿಯಾಗಿಸಿಕೊಂಡಿತು. ಇವುಗಳಲ್ಲಿ ಕ್ಯಾರಕಾಸ್, ಮಿರಾಂಡಾ, ಅರಾಗುವಾ ಮತ್ತು ಲಾ ಗೈರಾ ಸೇರಿವೆ. ಈ ರಾಜ್ಯಗಳಲ್ಲಿನ ಮಿಲಿಟರಿ ನೆಲೆಗಳ ವಿರುದ್ಧ ಅಮೆರಿಕ 7 ವೈಮಾನಿಕ ದಾಳಿಗಳನ್ನು ನಡೆಸಿತು. ಮೊದಲ ದಾಳಿ ಸ್ಥಳೀಯ ಸಮಯ ಬೆಳಗಿನ ಜಾವ 2 ಗಂಟೆಗೆ ಸಂಭವಿಸಿತು.

ಇದನ್ನೂ ಓದಿ: ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ದೇಶದಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಸಂಪೂರ್ಣ ಕಾರ್ಯಾಚರಣೆಯನ್ನು ಅಮೆರಿಕದ ಕಾನೂನು ಜಾರಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾಯಿ. ಇದನ್ನು ಅತ್ಯಂತ ಗೌಪ್ಯ ಮತ್ತು ಕಾರ್ಯತಂತ್ರದ ರೀತಿಯಲ್ಲಿ ಕಾರ್ಯಗತಗೊಳಿಸಲಾಯಿತು. ಈ ದಾಳಿಯ ಬಳಿಕ ವೆನೆಜುವೆಲಾದಲ್ಲಿ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 6:03 pm, Sat, 3 January 26

Source link

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ – Kannada News | US military strikes in Venezuela national emergency declared

ನವದೆಹಲಿ, ಜನವರಿ 3: ಇಂದು ಮುಂಜಾನೆ ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ವೆನೆಜುವೆಲಾದ ಮೇಲೆ ದೊಡ್ಡ ಪ್ರಮಾಣದ ದಾಳಿಗಳನ್ನು ಪ್ರಾರಂಭಿಸಿತು. ಇದು ಕ್ಯಾರಕಾಸ್ ಮತ್ತು ಇತರ ನಗರಗಳಲ್ಲಿ ಸ್ಫೋಟಗಳನ್ನು ಉಂಟುಮಾಡಿತು. ಇದರಿಂದ ವೆನೆಜುವೆಲಾದಲ್ಲಿ ರಾಜಕೀಯ ಮತ್ತು ಮಿಲಿಟರಿ ಬಿಕ್ಕಟ್ಟು ಉಂಟಾಯಿತು. ಅಮೆರಿಕದ (US Airstrike) ದಾಳಿಯ ಹಿನ್ನೆಲೆಯಲ್ಲಿ ವೆನೆಜುವೆಲಾ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ 7 ಸ್ಫೋಟಗಳು ಕೇಳಿಬಂದ ನಂತರ ವೆನೆಜುವೆಲಾ ಸರ್ಕಾರವು ಅಮೆರಿಕ ತಮ್ಮ ದೇಶದ ಅನೇಕ ರಾಜ್ಯಗಳಲ್ಲಿನ ನಾಗರಿಕ ಮತ್ತು ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದೆ.

ಕ್ಯಾರಕಾಸ್‌ನಲ್ಲಿ ಸ್ಫೋಟಗಳು ಸಂಭವಿಸುವ ಮೊದಲು ನಡೆಯುತ್ತಿರುವ ಮಿಲಿಟರಿ ಚಟುವಟಿಕೆಯ ಕಾರಣದಿಂದ ಫೆಡರಲ್ ಏವಿಯೇಷನ್ ​​ಅಥಾರಿಟಿ ವೆನೆಜುವೆಲಾದ ವಾಯುಪ್ರದೇಶದಲ್ಲಿ ಅಮೆರಿಕದ ಕಮರ್ಷಿಯಲ್ ವಿಮಾನಗಳನ್ನು ನಿಷೇಧಿಸಿದೆ. ಕ್ಯಾರಕಾಸ್‌ನಲ್ಲಿರುವ ಮಿಲಿಟರಿ ನೆಲೆಯ ಹ್ಯಾಂಗರ್‌ನಿಂದ ಹೊಗೆ ಏರುತ್ತಿರುವುದನ್ನು ಕಾಣಬಹುದು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IND vs NZ: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್; ಸೂಕ್ತ ಕಾರಣ ನೀಡಿದ ಬಿಸಿಸಿಐ – Kannada News | Hardik Pandya Dropped from India ODI Squad vs NZ: BCCI Explains Reason

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಅರ್ಶ್ದೀಪ್ ಸಿಂಗ್ ಮತ್ತು ಯಶಸ್ವಿ ಜೈಸ್ವಾಲ್.

Source link

ತಪ್ಪಿಯೂ ಚಹಾದೊಂದಿಗೆ ಈ ಆಹಾರಗಳನ್ನು ಸೇವನೆ ಮಾಡಬಾರದಂತೆ – Kannada News | The habit of eating these foods with tea can have a negative impact on health

ಚಹಾ (tea) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯರಿಗಂತೂ ಬಿಸಿ ಬಿಸಿ ಚಹಾ ಹಾಟ್‌ ಫೇವರೇಟ್‌. ಅದೆಷ್ಟೋ ಜನಕ್ಕೆ ಒಂದು ಕಪ್‌ ಚಹಾ ಕುಡಿಯದೆ ದಿನವೇ ಆರಂಭವಾಗುವುದಿಲ್ಲ, ಇನ್ನೂ ಕೆಲವರಿಗೆ ದಿನಕ್ಕೆ ನಾಲ್ಕೈದು ಬಾರಿ ಚಹಾ ಕುಡಿಯದಿದ್ದರೇ ತಲೆಯೇ ಓಡುವುದಿಲ್ಲ. ಹೆಚ್ಚಾಗಿ ಟೀ, ಬಿಸ್ಕೆಟ್‌, ಪಕೋಡಾ ಇತ್ಯಾದಿ ತಿನಿಸುಗಳೊಂದಿಗೆ ಸವಿಯಲಾಗುತ್ತದೆ. ಇದು ಬಾಯಿ ರುಚಿ ಹೆಚ್ಚಿಸಬಹುದು. ಆದರೆ ಕೆಲವು ಆಹಾರಗಳನ್ನು ಚಹಾದೊಂದಿಗೆ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಹಾಗಿದ್ದರೆ ಯಾವೆಲ್ಲಾ ಆಹಾರಗಳನ್ನು ಚಹಾದೊಂದಿಗೆ ಸೇವನೆ ಮಾಡಬಾರದು ಎಂಬುವುದನ್ನು ತಿಳಿಯಿರಿ.

ಚಹಾದೊಂದಿಗೆ ಈ ಆಹಾರಗಳನ್ನು ಸೇವನೆ ಮಾಡಬಾರದು:

ಬಿಸ್ಕೆಟ್‌: ಹೆಚ್ಚಿನವರು ಚಹಾದೊಂದಿಗೆ ಬಿಸ್ಕೆಟ್ ಅಥವಾ ರಸ್ಕ್‌ಗಳನ್ನು ತಿನ್ನುತ್ತಾರೆ. ಈ ಸಂಯೋಜನೆಯು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದರಲ್ಲಿ ಸಂಸ್ಕರಿಸಿದ ಹಿಟ್ಟು, ಟ್ರಾನ್ಸ್ ಫ್ಯಾಟ್ ಮತ್ತು ಹೆಚ್ಚಿನ ಸಕ್ಕರೆ ಇದ್ದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಮತ್ತು‌ ಇದು ತೂಕ ಹೆಚ್ಚಳ, ಗ್ಯಾಸ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಳ ಸೇರಿದಂತೆ ಇತ್ಯಾದಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಎಣ್ಣೆಯಲ್ಲಿ ಕರಿದ ತಿಂಡಿ: ಚಹಾದೊಂದಿಗೆ ಸಮೋಸಾ, ಪಕೋಡದಂತಹ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು ತಿನ್ನಲು ಬಲು ರುಚಿಯಾಗಿರಬಹುದು, ಆದರೆ ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದಲ್ಲ. ಇದು ಹೃದಯ ಮತ್ತು ಹೊಟ್ಟೆ ಎರಡಕ್ಕೂ ಹಾನಿಕಾರಕವಾಗಿದೆ. ಈ ತಿಂಡಿಗಳಲ್ಲಿರುವ  ಹೆಚ್ಚುವರಿ ಎಣ್ಣೆ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.

ಸಿಹಿತಿಂಡಿಗಳು: ಕೇಕ್, ಪೇಸ್ಟ್ರಿ ಅಥವಾ ಇತರ ಸಿಹಿತಿಂಡಿಗಳನ್ನು ಚಹಾದೊಂದಿಗೆ ಸೇವಿಸುವುದು ಒಳ್ಳೆಯದಲ್ಲ.  ಇವುಗಳನ್ನು ಚಹಾದೊಂದಿಗೆ ಸೇವನೆ ಮಾಡುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ, ಇದು ಹೊಟ್ಟೆ ಭಾರ ಮತ್ತು ಆಮ್ಲೀಯತೆಯನ್ನು ಉಂಟುಮಾಡುತ್ತದೆ. ಅಲ್ಲದೆ ಚಹಾದೊಂದಿಗೆ ಅತಿಯಾದ ಸಕ್ಕರೆಯುಕ್ತ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿ ಇನ್ಸುಲಿನ್ ಪ್ರತಿರೋಧ ಕ್ರಮೇಣ ಹೆಚ್ಚಾಗುತ್ತದೆ. ಇದು ಬೊಜ್ಜು, ಮಧುಮೇಹ ಮತ್ತು ಆಯಾಸಕ್ಕೆ ಕಾರಣವಾಗಬಹುದು.

ಚಹಾ ಕುಡಿದ ತಕ್ಷಣ ಹಣ್ಣು ತಿನ್ನುವುದು: ಅನೇಕ ಜನರು ಇದನ್ನು ಆರೋಗ್ಯಕರವೆಂದು ಪರಿಗಣಿಸುತ್ತಾರೆ ಆದರೆ ಈ ಅಭ್ಯಾಸವು ಹಾನಿಕಾರಕವಾಗಿದೆ. ಚಹಾದಲ್ಲಿರುವ ಟ್ಯಾನಿನ್ ದೇಹ ಹಣ್ಣಿನಿಂದ ಕಬ್ಬಿಣ ಮತ್ತು ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ, ಇದರಿಂದಾಗಿ ದೇಹವು ಸಂಪೂರ್ಣ ಪೋಷಣೆಯನ್ನು ಪಡೆಯುವುದಿಲ್ಲ. ಚಹಾ ಕುಡಿಯುವ ಅರ್ಧ ಗಂಟೆ ಮೊದಲು ಅಥವಾ ನಂತರ ಹಣ್ಣು ತಿನ್ನಿರಿ.

ಇದನ್ನೂ ಓದಿ: ಆಲಸ್ಯವನ್ನು ಹೋಗಲಾಡಿಸಿ ದಿನವಿಡೀ ಆಕ್ಟಿವ್‌ ಆಗಿರಲು ಅಹಾರಗಳನ್ನು ಸೇವನೆ ಮಾಡಿ

ಚಾಕೊಲೇಟ್: ಚಾಕೊಲೇಟ್ ಮತ್ತು ಚಹಾ ಎರಡರಲ್ಲೂ ಕೆಫೀನ್ ಇರುತ್ತದೆ. ಅವುಗಳನ್ನು ಒಟ್ಟಿಗೆ ಸೇವಿಸುವುದರಿಂದ ಹೃದಯ ಬಡಿತ ಹೆಚ್ಚಾಗುತ್ತದೆ, ಚಡಪಡಿಕೆ ಉಂಟಾಗುತ್ತದೆ ಮತ್ತು ನಿದ್ರೆಯ ಸಮಸ್ಯೆ ಉಂಟಾಗುತ್ತದೆ. ಚಹಾದೊಂದಿಗೆ ಚಾಕೊಲೇಟ್ ತಿನ್ನುವುದರಿಂದ ನಿದ್ರಾ ಹೀನತೆ ಸಮಸ್ಯೆ ಉಂಟಾಗಬಹುದು.

ಚಹಾದೊಂದಿಗೆ ಔಷಧಿಗಳನ್ನು ತೆಗೆದುಕೊಳ್ಳುವುದು: ಕೆಲವರು ಚಹಾದೊಂದಿಗೆ ಔಷಧಿಗಳನ್ನು ನುಂಗುತ್ತಾರೆ, ಇದು ದೊಡ್ಡ ತಪ್ಪು. ಚಹಾದಲ್ಲಿರುವ ಕೆಫೀನ್ ಮತ್ತು ಟ್ಯಾನಿನ್‌ಗಳು ಔಷಧಿಗಳ ಪರಿಣಾಮಕಾರಿತ್ವವನ್ನು ಕಡಿಮೆ ಮಾಡಬಹುದು ಮತ್ತು ಕೆಲವು ಸಂದರ್ಭಗಳಲ್ಲಿ, ಅಡ್ಡಪರಿಣಾಮಗಳನ್ನು ಉಂಟು ಮಾಡಬಹುದು. ಹಾಗಾಗಿ ಔಷಧಿಗಳನ್ನು ಯಾವಾಗಲೂ ನೀರಿನೊಂದಿಗೆ ತೆಗೆದುಕೊಳ್ಳಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ – Kannada News | Woman Killed for Refusing Marriage in Yellapur, Uttara Kannada; Accused Rafeek on the Run

ಕಾರವಾರ, ಜನವರಿ 3: ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಫೀಕ್ ಎಂಬ ಯುವಕ ರಂಜಿತಾಳನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ ವಿಚ್ಛೇದನವಾಗಿದ್ದು, ಆಕೆಗೆ ಒಂದು ಮಗು ಕೂಡ ಇದೆ. ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದು, ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.

ವಿವಾಹ ವಿಚ್ಛೇದನದ ಬಳಿ ಮೂಡಿತ್ತು ಪ್ರೀತಿ

ವಿಚ್ಛೇದನದ ಕೆಲ ತಿಂಗಳ ಬಳಿಕ ರಫೀಕ್ ಮತ್ತು ರಂಜಿತಾಳ ನಡುವೆ ಗೆಳೆತನ ಬೆಳೆದು, ಅದು ಪ್ರೀತಿಗೆ ತಿರುಗಿತ್ತು. ಇಬ್ಬರ ಕುಟುಂಬಗಳ ನಡುವೆ ಸಹ ಒಳ್ಳೆಯ ಬಾಂಧವ್ಯ ಇತ್ತು. ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಊಟ ಮಾಡಿ ಹೋಗುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ.

ಆದರೆ, ಇತ್ತೀಚಿನ ಕೆಲ ತಿಂಗಳಿಂದ ರಫೀಕ್ ಮದುವೆಯಾಗುವಂತೆ ರಂಜಿತಾಳ ಮೇಲೆ ಒತ್ತಡ ಹೇರುತ್ತಿದ್ದ. ಇದಕ್ಕೆ ರಂಜಿತಾ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿ, ‘ನಾನು ಈಗಾಗಲೇ ಮದುವೆಯ ಅನುಭವಿಸಿದ್ದು ಸಾಕು. ನನಗೆ ಮತ್ತೆ ಮದುವೆ ಇಷ್ಟವಿಲ್ಲ. ನಮ್ಮ ಸಂಬಂಧ ಹೀಗೆ ಇರಲಿ, ಆದರೆ ಮದುವೆ ಆಗುವುದಿಲ್ಲ’ ಎಂದು ಹೇಳಿದ್ದಳು.

ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಪರಾರಿ

ಎಂದಿನಂತೆ ರಂಜಿತಾ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ರಫೀಕ್ ರಸ್ತೆ ಮಧ್ಯೆ ಆಕೆಯನ್ನು ಅಡ್ಡಗಟ್ಟಿ, ‘ಮದುವೆಯಾಗುತ್ತೀಯೋ ಇಲ್ಲವೋ’ ಎಂದು ಪ್ರಶ್ನಿಸಿದ್ದಾನೆ. ಈ ವೇಳೆ ರಂಜಿತಾ ಕೋಪದಿಂದ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಕೋಪಗೊಂಡ ರಫೀಕ್ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಇದನ್ನೂ ಓದಿ: ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಗಂಭೀರವಾಗಿ ಗಾಯಗೊಂಡ ರಂಜಿತಾಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪ್ರಕರಣ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ರಫೀಕ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗವಿ ಮಠದ ಅಜ್ಜನ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್! – Kannada News | Gavi Matha Rathotsava: Rs.10 Lakh Mysore Pak Mahadasoha Prepared in Koppal

ಕೊಪ್ಪಳ, ಜನವರಿ 03: ಕೊಪ್ಪಳದ ಗವಿಮಠ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ರಥೋತ್ಸವದ ಮಹಾದಾಸೋಹಕ್ಕಾಗಿ 40-50 ಬಾಣಸಿಗರಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್ ಸಿದ್ಧವಾಗುತ್ತಿದೆ. 60 ಕ್ವಿಂಟಾಲ್ ಸಕ್ಕರೆ ಮತ್ತು 40 ಕ್ವಿಂಟಾಲ್ ಹಿಟ್ಟು ಬಳಸಿ ತಯಾರಾಗುತ್ತಿರುವ ಈ ಮೈಸೂರ್ ಪಾಕ್‌ನ್ನು ತಯಾರಿಸುವಲ್ಲಿ MDM ಕಾಲೇಜ್ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಜನವರಿ 5ರಂದು ನಡೆಯುವ ರಥೋತ್ಸವದಂದು ಭಕ್ತರಿಗೆ ವಿಶೇಷ ಪ್ರಸಾದವಾಗಿ ವಿತರಿಸಲಾಗುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಬಳ್ಳಾರಿ ಗಲಭೆ: ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ – Kannada News | HD Deve Gowda given courage to Janardhan Reddy, Sriramulu Amidst Ballari Violence

ಬೆಂಗಳೂರು, ಜನವರಿ 03: ಬಳ್ಳಾರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿ ಮತ್ತು ಆತಂಕದ ವಾತಾವರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲುಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಿನ್ನೆ ಸಂಜೆ ದೇವೇಗೌಡರು ಇಬ್ಬರು ನಾಯಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NZ: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಇಬ್ಬರು ಔಟ್, ಮೂವರು ಇನ್..! – Kannada News | IND vs NZ ODI Series: India Squad Revealed, Gill Leads, Pant and Siraj Return

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಚ್ಚರಿಯ ಸಂಗತಿಯೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದ ತಿಲಕ್ ವರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಸಾಧಾರಣ ಪ್ರದರ್ಶನ ನೀಡಿರುವ ರಿಷಭ್ ಪಂತ್​ಗೂ ತಂಡದಲ್ಲಿ ಸ್ಥಾನ ಸಿಕ್ಕಿದ್ದು, ಆಲ್​ರೌಂಡರ್ ನಿತೀಶ್ ರೆಡ್ಡಿ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ.

Source link