ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್!
ಕೊಪ್ಪಳ, ಏಪ್ರಿಲ್ 12: ನಗರದಲ್ಲಿ ಲವ್ ಜಿಹಾದ್ ಪ್ರಕರಣ (Love Jihad Case) ಸಾಕಷ್ಟು ಸದ್ದು ಮಾಡುತ್ತಿದೆ. ನರ್ಸಿಂಗ್ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನ ಪುಸಲಾಯಿಸಿದ ಹಿನ್ನೆಲೆ ಮುಸ್ತಫಾ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆತನ ಮೂಬೈಲ್ನಲ್ಲಿ ಹಿಂದೂ ಹುಡುಗಿಯರ ಅನೇಕ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದ್ದವು. ಆತನ ವಿರುದ್ಧ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 8-10 ಅಪರಿಚಿತ ಹುಡುಗರ ವಿರುದ್ಧ ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ…